ನಿಯಮ ಗಾಳಿಗೆ ತೂರಿದ ಬಿಎಲ್‌ಒಗಳು; ಮನೆ ಭೇಟಿ ಬದಲು, ಕಲ್ಯಾಣ ಮಂಟಪಗಳಲ್ಲೇ ‘ಎಸ್‌ಐಆರ್‌’ ಜಾತ್ರೆ

Date:

ಬಿಎಲ್‌ಒಗಳಿಂದ ಆಗುತ್ತಿರುವ ಈ ಎಗ್ಗಿಲ್ಲದ ಅಕ್ರಮಗಳು ಮತ್ತು ನಿಯಮ ಉಲ್ಲಂಘನೆಗಳ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಅವರು ನೀಡಿರುವ ಪ್ರತಿಕ್ರಿಯೆ ಅತ್ಯಂತ ನಿರಾಶಾದಾಯಕವಾಗಿದೆ. ಕೇವಲ ಜಾರಿಕೊಳ್ಳುವಿಕೆ ಹೇಳಿಕೆ ನೀಡುತ್ತಿರುವುದು ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ದೂರು ಬಂದರೆ ಜಿಲ್ಲಾ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ.

- Advertisement -

ರಾಜ್ಯದಲ್ಲಿ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ಪ್ರಕ್ರಿಯೆಯು ಆರಂಭವಾಗಿ ಕೆಲವೇ ದಿನಗಳಾಗಿದ್ದರೂ, ಅದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುವ ವ್ಯವಸ್ಥಿತ ಹಗರಣವಾಗಿ ಮಾರ್ಪಟ್ಟಿದೆ. ಮನೆ ಮನೆಗೆ ತೆರಳಿ ಪಾರದರ್ಶಕವಾಗಿ ಕೆಲಸ ಮಾಡಬೇಕಿದ್ದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ನಿಯಮಗಳನ್ನು ಗಾಳಿಗೆ ತೂರಿ ರಾಜಕೀಯ ಪಕ್ಷಗಳ ಕೈಗೊಂಬೆಯಾಗಿ ವ್ಯಾಪಕ ಕರ್ತವ್ಯಲೋಪವೆಸಗುತ್ತಿದ್ದಾರೆ. ಬಿಎಲ್‌ಒಗಳ ಈ ಹೊಣೆಗೇಡಿ ಕೃತ್ಯ ಹಾಗೂ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸುತ್ತಿವೆ. ಕಾಂಗ್ರೆಸ್‌ನಿಂದ ಅಧಿಕಾರ ದುರ್ಬಳಕೆ ಎಂದು ಮೈತ್ರಿ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ರಮವು ಆರಂಭಿಕ ಹಂತದಲ್ಲಿಯೇ ಬಿಎಲ್‌ಒಗಳ ತೀವ್ರ ನಿರ್ಲಕ್ಷ್ಯ, ಬೇಜವಾಬ್ದಾರಿ ಹಾಗೂ ರಾಜಕೀಯ ಪಕ್ಷಪಾತದಿಂದಾಗಿ ಸಂಪೂರ್ಣ ಹಾದಿ ತಪ್ಪಿದೆ ಎಂಬ ಆತಂಕ ಮನೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಾಸ್ತವವಾಗಿ, ಬಿಎಲ್‌ಒಗಳು ಪ್ರತಿಯೊಂದು ಮನೆಗೆ ಖುದ್ದಾಗಿ ಭೇಟಿ ನೀಡಿ, ಮತದಾರರ ಮಾಹಿತಿಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ, ನಮೂನೆಗಳನ್ನು ವಿತರಿಸಿ, ಸಂಗ್ರಹಿಸುವುದು ಚುನಾವಣಾ ಆಯೋಗದ ನಿಯಮವಾಗಿದೆ. ಆದರೆ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ಬಿಎಲ್‌ಒಗಳ ಕಳಪೆ ಹಾಗೂ ಪಕ್ಷಪಾತಿ ಕಾರ್ಯವೈಖರಿಯ ಕರಾಳ ಸತ್ಯವನ್ನು ಬಿಚ್ಚಿಡುತ್ತಿವೆ. ಮನೆಗಳಿಗೆ ತೆರಳುವ ಬದಲು ಸಾರ್ವಜನಿಕ ಸ್ಥಳಗಳಲ್ಲಿ, ಗುಂಪು ಸೇರಿಸಿ ದಾಖಲೆಗಳನ್ನು ಸಂಗ್ರಹಿಸುವ ಮೂಲಕ ಬಿಎಲ್‌ಒಗಳು ಸಂಪೂರ್ಣ ಪ್ರಕ್ರಿಯೆಯನ್ನು ಅಣಕವಾಡಿದ್ದು, ಸಾರ್ವಜನಿಕರಲ್ಲಿ ಭಾರೀ ಗೊಂದಲ ಮೂಡಿಸಿದ್ದಾರೆ. ಇದು ಕೇವಲ ಕರ್ತವ್ಯ ಲೋಪವಲ್ಲ, ಬದಲಾಗಿ ನಿರ್ದಿಷ್ಟ ಪಕ್ಷಗಳಿಗೆ ಅನುಕೂಲ ಮಾಡಿಕೊಡುವ ಹಾಗೂ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಪಟ್ಟಿಯಿಂದ ಕೈಬಿಡುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಸಿದ್ದಾರೆ.

ರಾಜ್ಯದ ಹಲವು ಕಡೆ ಅಧಿಕಾರಿಗಳು ಮನೆ ಮನೆಗೆ ತೆರಳುವ ಬದಲು, ಕಲ್ಯಾಣ ಮಂಟಪವೊಂದರಲ್ಲಿ ಜನರನ್ನು ಒಟ್ಟು ಸೇರಿಸಿ ‘ಎಸ್‌ಐಆರ್‌ ಶಿಬಿರ’ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿರುವ ಜೆಡಿಎಸ್, ತನ್ನದೇ ನಾಯಕರ ಪರೋಕ್ಷ ಕುಮ್ಮಕ್ಕಿನಿಂದ ನಡೆಯುತ್ತಿರುವ ಇಂತಹ ಅಕ್ರಮಗಳನ್ನು ಮುಚ್ಚಿಹಾಕುವ ನಾಟಕವಾಡುತ್ತಿದೆ. ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಮಾತನಾಡುವ ನೈತಿಕತೆಯನ್ನೇ ಕಳೆದುಕೊಂಡಿರುವ ಜೆಡಿಎಸ್, ಒಳಗೊಳಗೆ ಬಿಎಲ್‌ಒಗಳೊಂದಿಗೆ ಶಾಮೀಲಾಗಿ ಅಕ್ರಮ ಎಸಗುತ್ತಿದೆ. ಅಧಿಕಾರಿಗಳ ಈ ಅಕ್ರಮದ ವಿರುದ್ಧ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇನ್ನೊಂದೆಡೆ, ಬಿಜೆಪಿಯ ಹತಾಶೆ ಮತ್ತು ಅಧಿಕಾರ ದುರ್ಬಳಕೆಯ ಅಸಹ್ಯಕರ ಮುಖವಾಡ ಬಯಲಾಗಿದೆ. ಬಿಎಲ್‌ಒ ಒಬ್ಬರು ಮನೆಗೆ ಭೇಟಿ ನೀಡುವಾಗ ಅವರೊಂದಿಗೆ ಬಿಜೆಪಿಯಿಂದ ನೇಮಕಗೊಂಡ ಬೂತ್ ಲೆವೆಲ್ ಏಜೆಂಟ್ (ಬಿಎಲ್‌ಎ) ಕೂಡ ತೆರಳಿ, ಬಿಎಲ್‌ಒ ನಮೂನೆ ವಿತರಿಸುವಾಗಲೇ ಬಿಜೆಪಿಯ ಕರಪತ್ರಗಳನ್ನು ಹಂಚುತ್ತಿರುವುದು ಪ್ರಜಾಪ್ರಭುತ್ವಕ್ಕೆ ಬಗೆದ ಬಹುದೊಡ್ಡ ದ್ರೋಹವಾಗಿದೆ. ಎಸ್‌ಐಆರ್‌ ಪ್ರಕ್ರಿಯೆಯ ವೇಳೆ ಚುನಾವಣಾ ಪ್ರಚಾರ ಹೇಗೆ ಸಾಧ್ಯ ಎಂದು ಸಾರ್ವಜನಿಕರು ನೇರವಾಗಿ ಪ್ರಶ್ನಿಸುತ್ತಿದ್ದರೂ ಅಧಿಕಾರಿಗಳು ಜಾಣಕಿವುಡು ಪ್ರದರ್ಶಿಸುತ್ತಿದ್ದಾರೆ. ಸರ್ಕಾರಿ ಯಂತ್ರಾಂಗವನ್ನು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳನ್ನು ತಮ್ಮ ಪಕ್ಷದ ಪ್ರಚಾರಕರಂತೆ ಹಾಗೂ ಏಜೆಂಟರಂತೆ ಬಳಸಿಕೊಳ್ಳುತ್ತಿರುವ ಬಿಜೆಪಿಯ ಈ ಹೀನ ಕೃತ್ಯಗಳಿಗೆ ಖಂಡನೆ ವ್ಯಕ್ತವಾಗಿದೆ. ಇದು ನೇರವಾಗಿ ಚುನಾವಣಾ ನೀತಿ ಸಂಹಿತೆ ಹಾಗೂ ಪ್ರಜಾಪ್ರಭುತ್ವದ ಆಶಯಗಳ ಉಲ್ಲಂಘನೆಯಾಗಿದೆ.

ಇದನ್ನು ಓದಿದ್ದೀರಾ? ಶ್ವೇತಭವನವೇ ಟ್ರಂಪ್‌ನ ಬಂಡವಾಳ ಕಚೇರಿ: ಅಧ್ಯಕ್ಷನಾದ ಒಂದೇ ವರ್ಷದಲ್ಲಿ ₹21 ಸಾವಿರ ಕೋಟಿ ಆದಾಯ

ರಾಜ್ಯದಲ್ಲಿ ಮುಂಬರುವ ಚುನಾವಣೆಗಳಲ್ಲಿ ಸೋಲಿನ ಭೀತಿಯಿಂದ ಕಂಗೆಟ್ಟಿರುವ ಬಿಜೆಪಿ, ಬಿಎಲ್‌ಒಗಳ ಜೊತೆ ಸೇರಿ ಹಿಂಬಾಗಿಲಿನಿಂದ ವಾಮಮಾರ್ಗದ ಮೂಲಕ ಗೆಲ್ಲುವ ನೀಚ ಸಂಚು ರೂಪಿಸಿದೆ. ಪಾರದರ್ಶಕವಾಗಿ ನಡೆಯಬೇಕಿದ್ದ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಒಲವಿರುವ ಪ್ರದೇಶಗಳಲ್ಲಿ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುವುದು, ಮತದಾರರ ಹೆಸರುಗಳನ್ನು ಕೈಬಿಡುವುದು ಮತ್ತು ಬಿಜೆಪಿಯ ನಕಲಿ ಮತದಾರರನ್ನು ಸೇರಿಸುವ ಹುನ್ನಾರ ಇದರ ಹಿಂದಿದೆ ಎಂಬ ಆರೋಪ ಕೇಳಿಬಂದಿದೆ.

ಬಿಎಲ್‌ಒಗಳಿಂದ ಆಗುತ್ತಿರುವ ಈ ಎಗ್ಗಿಲ್ಲದ ಅಕ್ರಮಗಳು ಮತ್ತು ನಿಯಮ ಉಲ್ಲಂಘನೆಗಳ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಅವರು ನೀಡಿರುವ ಪ್ರತಿಕ್ರಿಯೆ ಅತ್ಯಂತ ನಿರಾಶಾದಾಯಕವಾಗಿದೆ. ಕೇವಲ ಜಾರಿಕೊಳ್ಳುವಿಕೆ ಹೇಳಿಕೆ ನೀಡುತ್ತಿರುವುದು ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ದೂರು ಬಂದರೆ ಜಿಲ್ಲಾ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಬದಲು, ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಜರುಗಿಸಬೇಕಿತ್ತು. ಆಯೋಗದ ಈ ಮೌನವು ಪರೋಕ್ಷವಾಗಿ ಬಿಜೆಪಿ ಮತ್ತು ಜೆಡಿಎಸ್‌ನ ಅಕ್ರಮಗಳಿಗೆ ಬೆಂಬಲ ನೀಡಿದಂತಿದೆ. ಪ್ರಜಾಪ್ರಭುತ್ವದ ರಕ್ಷಕನಾಗಬೇಕಿದ್ದ ಆಯೋಗವೇ ಈ ರೀತಿ ನಿರ್ಲಕ್ಷ್ಯ ತೋರಿದರೆ ಜನಸಾಮಾನ್ಯರು ಯಾರಿಗೆ ದೂರು ನೀಡಬೇಕು ಎಂಬುದು ಯಕ್ಷಪ್ರಶ್ನೆಯಾಗಿದೆ.

1.12 ಕೋಟಿ ನಮೂನೆಗಳನ್ನು ವಿತರಿಸಲಾಗಿದೆ -ಆಯೋಗ

ಈ ಎಲ್ಲ ಅವ್ಯವಸ್ಥೆ, ಹಗರಣಗಳ ನಡುವೆಯೂ 1.12 ಕೋಟಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಆಯೋಗ ಬೆನ್ನು ತಟ್ಟಿಕೊಳ್ಳುತ್ತಿದೆ. ಕಲಬುರಗಿಯಲ್ಲಿ 7.88 ಲಕ್ಷ, ದಾವಣಗೆರೆಯಲ್ಲಿ 6.50 ಲಕ್ಷ, ಕೊಪ್ಪಳದಲ್ಲಿ 6.19 ಲಕ್ಷ, ಬೆಳಗಾವಿಯಲ್ಲಿ 5.26 ಲಕ್ಷ, ತುಮಕೂರಿನಲ್ಲಿ 5.15 ಲಕ್ಷ ಹಾಗೂ ಚಿತ್ರದುರ್ಗದಲ್ಲಿ 4.99 ಲಕ್ಷ ನಮೂನೆ ವಿತರಿಸಲಾಗಿದೆ ಎಂದು ಸಿಇಒ ಬಿಡುಗಡೆ ಮಾಡಿರುವ ದತ್ತಾಂಶಗಳು ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಅಂಕಿಅಂಶಗಳು ಎಷ್ಟೇ ದೊಡ್ಡದಿದ್ದರೂ, ಕಲ್ಯಾಣ ಮಂಟಪಗಳಲ್ಲಿ ಗುಂಪು ಸೇರಿಸಿ ದಾಖಲೆ ಸಂಗ್ರಹಿಸುವ ಹಾಗೂ ರಾಜಕೀಯ ಕರಪತ್ರ ಹಂಚಲು ಅವಕಾಶ ಮಾಡಿಕೊಡುವಂತಹ ಬಿಎಲ್‌ಒಗಳ ಈ ಅಡ್ಡದಾರಿಗಳು, ವಿತರಿಸಲಾದ ಈ ಲಕ್ಷಾಂತರ ನಮೂನೆಗಳ ನೈಜತೆಯನ್ನೇ ಪ್ರಶ್ನಿಸುವಂತೆ ಮಾಡಿದೆಯಲ್ಲದೆ, ಬೃಹತ್ ಸಂಖ್ಯೆಯ ನಕಲಿ ಮತದಾರರ ಸೇರ್ಪಡೆಯ ಷಡ್ಯಂತ್ರ ಅಡಗಿದೆ.

ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆಯನ್ನೇ ಹಾಳುಗೆಡವಿರುವ ಈ ಅಕ್ರಮ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯಬೇಕಿದೆ. ಕಲ್ಯಾಣ ಮಂಟಪಗಳಲ್ಲಿ ಅಕ್ರಮ ಶಿಬಿರ ನಡೆಸಿದ ಹಾಗೂ ರಾಜಕೀಯ ಕರಪತ್ರ ಹಂಚಿದ ಭ್ರಷ್ಟ ಬಿಎಲ್‌ಒಗಳನ್ನು ತಕ್ಷಣವೇ ಅಮಾನತುಗೊಳಿಸಿ, ಅವರ ವಿರುದ್ಧ ಕಠಿಣ ಕ್ರಿಮಿನಲ್ ಪ್ರಕರಣ ದಾಖಲಿಸಿ ಪ್ರಜಾಪ್ರಭುತ್ವದ ಆಶಯವನ್ನು ಕಾಪಾಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...