ಕೆರೆಯಂತಾದ ಚವನಬಾವಿ ಸರ್ಕಾರಿ ಶಾಲೆ: ಸಾಂಕ್ರಾಮಿಕ ರೋಗಗಳ ಭೀತಿ

Date:

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ, ಈ ಸಮಸ್ಯೆಗಳು ವಿದ್ಯಾರ್ಥಿಗಳ ಕಲಿಕಾ ವಾತಾವರಣದ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಶಿಕ್ಷಣದ ಗುಣಮಟ್ಟ ಕುಸಿಯುವ ಆತಂಕ ಎದುರಾಗಿದೆ. 

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಚವನಬಾವಿ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣ ಕಳೆದ 5 ವರ್ಷಗಳಿಂದ ಮಳೆ ನೀರು ನಿಂತು ಕೆರೆಯಂತಾಗಿದ್ದು, ಶಾಲಾ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕಾದ ಶಾಲಾ ವಾತಾವರಣವೇ ಇಂದು ಸಮಸ್ಯೆಗಳ ಕೂಪವಾಗಿ ಪರಿಣಮಿಸಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

- Advertisement -

ಶಾಲೆಯ ಆವರಣದಲ್ಲಿ ನೀರು ನಿಂತಿರುವ ಕಾರಣ ಮಕ್ಕಳು ಪ್ರತಿದಿನ ತರಗತಿಗಳಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಶಾಲಾ ಆವರಣ ಸಂಪೂರ್ಣವಾಗಿ ನೀರಿನಿಂದ ಆವರಿಸಲ್ಪಡುತ್ತದೆ. ಪರಿಣಾಮವಾಗಿ ಮಕ್ಕಳು ಕೆಸರಿನಲ್ಲೇ ನಡೆದು ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಕೆಲವು ಪೋಷಕರು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈದಿನ.ಕಾಮ್ ಜೊತೆ ಗ್ರಾಮಸ್ಥ ವಿರೇಶ್ ಛಲವಾದಿ ಮಾತನಾಡಿ, “ಕಳೆದ ಹತ್ತು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದರೂ ಇದುವರೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ. ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ವಿಷಯ ತರಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಶಾಲೆಯ ಶಿಕ್ಷಕರು ಕೂಡ ಈ ಸಮಸ್ಯೆ ಪರಿಹರಿಸುವಂತೆ ಗ್ರಾಮಾಭಿವೃದ್ಧಿ ಅಧಿಕಾರಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದಾರೆ. ಆದರೆ ಮನವಿಗಳು ಕಚೇರಿಯ ಕಡತಗಳಲ್ಲೇ ಉಳಿದಿದ್ದು, ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿ ಬಾರಿಯೂ ಭರವಸೆ ನೀಡಲಾಗುತ್ತಿದೆಯೇ ಹೊರತು, ಇವರ ಆಶ್ವಾಸನೆಗಳು ಕಾರ್ಯರೂಪಕ್ಕೆ ಬಂದಿರುವ ಉದಾಹರಣೆ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿಂತ ನೀರಿನಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಶಾಲಾ ಆವರಣದಲ್ಲಿ ದುರ್ವಾಸನೆ ಹರಡುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಶಿಕ್ಷಣ ಪಡೆಯಬೇಕಾದ ಮಕ್ಕಳು ಆರೋಗ್ಯ ಸಮಸ್ಯೆಗಳ ನಡುವೆಯೇ ಶಾಲೆಗೆ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕುಸಿಯುತ್ತಿರುವ ಸಂದರ್ಭದಲ್ಲಿ ಶಾಲಾ ಮೂಲಸೌಕರ್ಯಗಳ ಕೊರತೆ ಹಾಗೂ ಇಂತಹ ನಿರ್ಲಕ್ಷ್ಯದಿಂದ ದಾಖಲಾತಿ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಸುರಕ್ಷಿತ ಹಾಗೂ ಸ್ವಚ್ಛ ವಾತಾವರಣ ಇಲ್ಲದ ಕಾರಣ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಭವಿಷ್ಯಕ್ಕೆ ಸವಾಲಾಗಿ ಪರಿಣಮಿಸಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಶಾಲೆಯ ಪ್ರಭಾವಿ ಮುಖ್ಯ ಶಿಕ್ಷಕರಾದ ಲೋಹಿತ ನಾಲತವಾಡ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲೆಯಲ್ಲಿ ಒಟ್ಟು 359 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವಷ್ಟು ಶಿಕ್ಷಕರ ಕೊರತೆ ಎದುರಾಗಿದ್ದು, ಪ್ರಸ್ತುತ ಶಾಲೆಯಲ್ಲಿ 8 ಮಂದಿ ಸರ್ಕಾರಿ ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು, ಪಾಠ ಬೋಧನೆ ಹಾಗೂ ಇತರ ಶೈಕ್ಷಣಿಕ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಕನಿಷ್ಠ ಮೂರು ಮಂದಿ ಅತಿಥಿ ಶಿಕ್ಷಕರ ಅವಶ್ಯಕತೆ ಇದೆ. ಶಿಕ್ಷಕರ ನೇಮಕಾತಿ ನಡೆದರೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಕಲ್ಪಿಸಲು ಹಾಗೂ ಶಾಲೆಯ ಶೈಕ್ಷಣಿಕ ಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಗ್ರಾಮಸ್ಥರು, ಪೋಷಕರು ಹಾಗೂ ಶಾಲಾ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ, ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ನಿರ್ಮಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಹಿತದೃಷ್ಟಿಯಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದು ಅತ್ಯವಶ್ಯಕವಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಸೋಮನಾಳ ಗ್ರಾಮ ಪಂಚಾಯಿತಿಯ ಪಿಡಿಒ, “ಚವನಬಾವಿ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೀರು ನಿಂತಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿರಲಿಲ್ಲ. ಇದೀಗ ವಿಷಯ ತಿಳಿದುಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ತಕ್ಷಣವೇ ಪಂಚಾಯಿತಿ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಲಾಗುವುದು. ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ, ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಆರೋಗ್ಯ ಮತ್ತು ಶಾಲೆಯ ಶೈಕ್ಷಣಿಕ ವಾತಾವರಣಕ್ಕೆ ಯಾವುದೇ ತೊಂದರೆಯಾಗದಂತೆ ಶೀಘ್ರದಲ್ಲಿ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು” ಎಂದು ತಿಳಿಸಿದರು.

ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳ ಸಮಸ್ಯೆಗಳತ್ತ ತಕ್ಷಣ ಗಮನಹರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಬೇಕಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಇನ್ನಾದರೂ ಅಧಿಕಾರಿಗಳು ಈ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ ಶಾಲೆಗಳ ಗುಣಮಟ್ಟವನ್ನು ಕಾಪಾಡುವರೇ ಎಂಬುದನ್ನು ಕಾದು ನೋಡಬೇಕಿದೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...