ಮಧ್ಯಪ್ರಾಚ್ಯದಲ್ಲಿ ಶಾಂತಿ ಮರುಸ್ಥಾಪನೆಗೆ ಚೀನಾ – ಪಾಕಿಸ್ತಾನದ 5 ಅಂಶಗಳ ಮಹತ್ವದ ಪ್ರಸ್ತಾವನೆ

Date:

ಚೀನಾ ಮತ್ತು ಪಾಕಿಸ್ತಾನದ ಈ 5 ಅಂಶಗಳ ಪ್ರಸ್ತಾವನೆಯು ಕೇವಲ ತಾತ್ಕಾಲಿಕ ಯುದ್ಧ ನಿಲುಗಡೆಗಷ್ಟೇ ಸೀಮಿತವಾಗಿರದೆ, ಬಿಕ್ಕಟ್ಟಿನ ಮೂಲ ಕಾರಣಗಳನ್ನು ಶಾಂತಿಯುತವಾಗಿ ಬಗೆಹರಿಸುವ ಸಮಗ್ರ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಇಸ್ಲಾಮಾಬಾದ್‌ನಲ್ಲಿ ನೇರ ಅಥವಾ ಪರೋಕ್ಷ ಶಾಂತಿ ಮಾತುಕತೆಗಳು ನಡೆಯುವ ಸಾಧ್ಯತೆಗಳು ದಟ್ಟವಾಗಿವೆ

- Advertisement -

ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಚೀನಾ ಹಾಗೂ ಪಾಕಿಸ್ತಾನ ಜಂಟಿಯಾಗಿ ಮಹತ್ವದ ‘5 ಅಂಶಗಳ ಶಾಂತಿ ಪ್ರಸ್ತಾವನೆ’ಯನ್ನು ಮುಂದಿಟ್ಟಿವೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್‌ ನಡುವಿನ ಸಂಘರ್ಷವು ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಉಭಯ ದೇಶಗಳ ಈ ರಾಜತಾಂತ್ರಿಕ ನಡೆ ಜಾಗತಿಕ ಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಮಾರ್ಚ್ 31ರಂದು ಬೀಜಿಂಗ್‌ಗೆ ಭೇಟಿ ನೀಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಈ ಮಾತುಕತೆಯ ಫಲಶೃತಿಯಾಗಿ ಉಭಯ ನಾಯಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಯುದ್ಧಪೀಡಿತ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ತುರ್ತು ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಫೆಬ್ರವರಿ 28ರಂದು ಇರಾನ್ ಮೇಲೆ ನಡೆದ ಅಮೆರಿಕ-ಇಸ್ರೇಲ್ ದಾಳಿಗಳ ನಂತರ ಉಲ್ಬಣಿಸಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಪಾಕಿಸ್ತಾನವು ಅಮೆರಿಕ ಮತ್ತು ಇರಾನ್ ನಡುವೆ ಪ್ರಮುಖ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಚೀನಾ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಬೀಜಿಂಗ್ ಭೇಟಿಗೂ ಮುನ್ನ ಪಾಕಿಸ್ತಾನದ ವಿದೇಶಾಂಗ ಸಚಿವರು ಸೌದಿ ಅರೇಬಿಯಾ, ಈಜಿಪ್ಟ್ ಮತ್ತು ಟರ್ಕಿಯ ವಿದೇಶಾಂಗ ಸಚಿವರೊಂದಿಗೂ ಸಮಾಲೋಚನೆ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ರೂಪುಗೊಂಡಿರುವ ಚೀನಾ-ಪಾಕಿಸ್ತಾನದ ಜಂಟಿ ಪ್ರಸ್ತಾವನೆಯು ಕೇವಲ ಎರಡು ದೇಶಗಳ ನಿಲುವಲ್ಲ, ಬದಲಾಗಿ ಇಡೀ ಏಷ್ಯಾ ಮತ್ತು ಅರಬ್ ಜಗತ್ತಿನ ಕಳವಳದ ದನಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

5 ಅಂಶಗಳ ಶಾಂತಿ ಪ್ರಸ್ತಾವನೆ

1. ತಕ್ಷಣದ ಕದನ ವಿರಾಮ ಮತ್ತು ಮಾನವೀಯ ನೆರವು: ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಕದನ ವಿರಾಮ ಘೋಷಿಸಬೇಕು. ಸಂಘರ್ಷವು ಪ್ರಾದೇಶಿಕವಾಗಿ ಇತರ ನೆರೆಹೊರೆಯ ದೇಶಗಳಿಗೆ ವ್ಯಾಪಿಸದಂತೆ ತಡೆಯಲು ಗರಿಷ್ಠ ಹಾಗೂ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ಯುದ್ಧದಿಂದ ತತ್ತರಿಸಿರುವ ಎಲ್ಲಾ ಸಂತ್ರಸ್ತ ಪ್ರದೇಶಗಳಿಗೂ ಯಾವುದೇ ಅಡೆತಡೆಯಿಲ್ಲದೆ, ಸುರಕ್ಷಿತವಾಗಿ ಮಾನವೀಯ ನೆರವು, ಔಷಧ ಮತ್ತು ಆಹಾರ ಪೂರೈಕೆಯಾಗಲು ಅವಕಾಶ ಮಾಡಿಕೊಡಬೇಕು ಎಂದು ಪ್ರಸ್ತಾವನೆಯಲ್ಲಿ ಕಟ್ಟುನಿಟ್ಟಾಗಿ ಒತ್ತಾಯಿಸಲಾಗಿದೆ.

2. ತ್ವರಿತ ಶಾಂತಿ ಮಾತುಕತೆಗಳ ಆರಂಭ: ಶಸ್ತ್ರಾಸ್ತ್ರಗಳು ಮತ್ತು ವಿವಾದಗಳ ಇತ್ಯರ್ಥಕ್ಕೆ ಯುದ್ಧ ಎಂದಿಗೂ ಶಾಶ್ವತ ಪರಿಹಾರವಲ್ಲ; ಬದಲಾಗಿ ಮುಕ್ತ ಸಂವಾದ ಮತ್ತು ರಾಜತಾಂತ್ರಿಕತೆ ಮಾತ್ರ ಏಕೈಕ ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇರಾನ್ ಸೇರಿದಂತೆ ಎಲ್ಲಾ ಕೊಲ್ಲಿ ರಾಷ್ಟ್ರಗಳ ಸಾರ್ವಭೌಮತೆ, ಪ್ರಾದೇಶಿಕ ಸಮಗ್ರತೆ, ರಾಷ್ಟ್ರೀಯ ಸ್ವಾತಂತ್ರ್ಯ ಮತ್ತು ಭದ್ರತೆಯನ್ನು ಗೌರವಿಸಬೇಕು ಹಾಗೂ ಕಾಪಾಡಬೇಕು. ಬಲಪ್ರಯೋಗ ಅಥವಾ ಸೇನಾ ಬೆದರಿಕೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಶಾಂತಿಯುತ ಮಾತುಕತೆಗೆ ಮುಂದಾಗುವಂತೆ ಎಲ್ಲಾ ಸಂಬಂಧಿತ ಪಕ್ಷಗಳನ್ನು ಈ ಪ್ರಸ್ತಾವನೆ ಆಗ್ರಹಿಸಿದೆ.

3. ನಾಗರಿಕ ಮತ್ತು ಮಿಲಿಟರಿಯೇತರ ಗುರಿಗಳ ರಕ್ಷಣೆ: ಸೇನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಪ್ರತಿಯೊಂದು ದೇಶವೂ ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಮುಗ್ಧ ನಾಗರಿಕರ ಮೇಲೆ, ಇಂಧನ ಘಟಕಗಳು, ಸಮುದ್ರದ ನೀರು ಶುದ್ಧೀಕರಣ ಘಟಕಗಳು, ಆಸ್ಪತ್ರೆಗಳು ಮತ್ತು ವಿದ್ಯುತ್ ಸ್ಥಾವರಗಳಂತಹ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಕೂಡಲೇ ನಿಲ್ಲಿಸಬೇಕು. ಯಾವುದೇ ಕಾರಣಕ್ಕೂ ಶಾಂತಿಯುತ ಪರಮಾಣು ನೆಲೆಗಳನ್ನು ಗುರಿಯಾಗಿಸಬಾರದು ಎಂದು ಎಚ್ಚರಿಸಲಾಗಿದೆ.

4. ಹಡಗು ಮಾರ್ಗಗಳ ಭದ್ರತೆ, ಹಾರ್ಮುಜ್ ಜಲಸಂಧಿ ರಕ್ಷಣೆ: ಜಾಗತಿಕ ಇಂಧನ ಪೂರೈಕೆ ಮತ್ತು ಅಂತಾರಾಷ್ಟ್ರೀಯ ಸರಕು ಸಾಗಣೆಯಲ್ಲಿ ಹಾರ್ಮುಜ್ ಜಲಸಂಧಿಯು ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತದೆ. ಪ್ರಸ್ತುತ ಈ ಜಲಸಂಧಿಯಲ್ಲಿ ಸಿಲುಕಿರುವ ವಾಣಿಜ್ಯ ಹಡಗುಗಳು ಮತ್ತು ಅದರ ಸಿಬ್ಬಂದಿಯ ಜೀವ ಬೆದರಿಕೆಯನ್ನು ಹೋಗಲಾಡಿಸಿ, ಅವರಿಗೆ ಸೂಕ್ತ ಭದ್ರತೆಯನ್ನು ಖಚಿತಪಡಿಸಬೇಕು. ವಾಣಿಜ್ಯ ಮತ್ತು ನಾಗರಿಕ ಹಡಗುಗಳ ಸುರಕ್ಷಿತ ಹಾಗೂ ಮುಕ್ತ ಸಂಚಾರಕ್ಕೆ ತಕ್ಷಣವೇ ಅನುವು ಮಾಡಿಕೊಡಬೇಕು. ಜಾಗತಿಕ ಆರ್ಥಿಕತೆಗೆ ಪೆಟ್ಟುಬೀಳದಂತೆ ಆದಷ್ಟು ಬೇಗ ಸಹಜ ಸಾಗಾಟ ವ್ಯವಸ್ಥೆಯನ್ನು ಪುನರಾರಂಭಿಸಬೇಕು.

5. ವಿಶ್ವಸಂಸ್ಥೆಯ ಸನ್ನದಿನ (UN Charter)ಪ್ರಾಮುಖ್ಯತೆ ಎತ್ತಿಹಿಡಿಯುವುದು: ಜಾಗತಿಕ ಬಿಕ್ಕಟ್ಟುಗಳ ನಿರ್ವಹಣೆಯಲ್ಲಿ ನಿಜವಾದ ಬಹುಪಕ್ಷೀಯತೆಯನ್ನು  ಆಚರಣೆಗೆ ತರಬೇಕು. ವಿಶ್ವಸಂಸ್ಥೆಯ ಸನ್ನದಿನ(ಜಗತ್ತಿನ ಎಲ್ಲಾ ದೇಶಗಳು ಒಂದಾಗಿ ಶಾಂತಿಯನ್ನು ಕಾಪಾಡಲು ಮತ್ತು ಯುದ್ಧಗಳನ್ನು ತಡೆಯಲು ಮಾಡಿಕೊಂಡಿರುವ ಮುಖ್ಯ ಒಪ್ಪಂದ) ಮೂಲ ಉದ್ದೇಶಗಳು ಮತ್ತು ಅಂತಾರಾಷ್ಟ್ರೀಯ ಕಾನೂನಿನ ಆಧಾರದ ಮೇಲೆ ಶಾಶ್ವತ ಶಾಂತಿಯನ್ನು ಸಾಧಿಸಲು, ಭದ್ರತಾ ಮಂಡಳಿಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಮಗ್ರ ಶಾಂತಿ ಚೌಕಟ್ಟನ್ನು ಸ್ಥಾಪಿಸುವ ಯಾವುದೇ ಒಪ್ಪಂದಕ್ಕೆ ಉಭಯ ದೇಶಗಳು ಬೆಂಬಲ ನೀಡಲಿವೆ ಎಂದು ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ಅಸ್ಸಾಂ ಅಖಾಡ | ‘ಸುಗಂಧ ರಾಜ’ನಿಗೆ ಅಗ್ನಿಪರೀಕ್ಷೆ; AIUDFನಿಂದ ಕೈ ಜಾರುತ್ತಿರುವ ಮುಸ್ಲಿಂ ಮತದಾರರು

ಇದುವರೆಗೆ ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ಅಂತರ ಕಾಯ್ದುಕೊಂಡಿದ್ದ ಹಾಗೂ ಕೇವಲ ತಟಸ್ಥ ಹೇಳಿಕೆಗಳಿಗೆ ಸೀಮಿತವಾಗಿದ್ದ ಚೀನಾ, ಇದೀಗ ಪಾಕಿಸ್ತಾನದೊಂದಿಗೆ ಸೇರಿ ನೇರ ರಾಜತಾಂತ್ರಿಕ ಮಧ್ಯಸ್ಥಿಕೆಗೆ ಇಳಿದಿರುವುದು ಬಹುದೊಡ್ಡ ಬೆಳವಣಿಗೆಯಾಗಿದೆ. ಇರಾನ್‌ನ ಅತಿದೊಡ್ಡ ತೈಲ ಖರೀದಿದಾರನಾಗಿರುವ ಚೀನಾಕ್ಕೆ, ಹಾರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್‌ನ ಸ್ಥಿರತೆ ಆರ್ಥಿಕವಾಗಿ ಅತ್ಯಂತ ಮಹತ್ವದ್ದಾಗಿದೆ. “ಈ ಬಿಕ್ಕಟ್ಟಿನ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಪಾಕಿಸ್ತಾನದ ವಿಶಿಷ್ಟ ಮತ್ತು ಪ್ರಮುಖ ಪಾತ್ರವನ್ನು ಚೀನಾ ಸದಾ ಬೆಂಬಲಿಸುತ್ತದೆ” ಎಂದು ಸಚಿವ ವಾಂಗ್ ಯಿ ಸ್ಪಷ್ಟಪಡಿಸಿದ್ದಾರೆ.

ಚೀನಾ ಮತ್ತು ಪಾಕಿಸ್ತಾನದ ಈ 5 ಅಂಶಗಳ ಪ್ರಸ್ತಾವನೆಯು ಕೇವಲ ತಾತ್ಕಾಲಿಕ ಯುದ್ಧ ನಿಲುಗಡೆಗಷ್ಟೇ ಸೀಮಿತವಾಗಿರದೆ, ಬಿಕ್ಕಟ್ಟಿನ ಮೂಲ ಕಾರಣಗಳನ್ನು ಶಾಂತಿಯುತವಾಗಿ ಬಗೆಹರಿಸುವ ಸಮಗ್ರ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಇಸ್ಲಾಮಾಬಾದ್‌ನಲ್ಲಿ ನೇರ ಅಥವಾ ಪರೋಕ್ಷ ಶಾಂತಿ ಮಾತುಕತೆಗಳು ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಆದಾಗ್ಯೂ, ಯುದ್ಧಭೂಮಿಯಲ್ಲಿ ಮುಖಾಮುಖಿಯಾಗಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ ಈ ಶಾಂತಿ ಸೂತ್ರಕ್ಕೆ ಯಾವ ರೀತಿ ಸ್ಪಂದಿಸಲಿವೆ ಎಂಬುದರ ಮೇಲೆಯೇ ಇಡೀ ಮಧ್ಯಪ್ರಾಚ್ಯದ ಭವಿಷ್ಯ, ಭದ್ರತೆ ಮತ್ತು ಜಾಗತಿಕ ಆರ್ಥಿಕತೆಯ ಮುಂದಿನ ದಿಕ್ಕು ನಿರ್ಧಾರವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...