ಕುಳಿತು ಕೆಲಸ ಮಾಡುವ & ಚಾಲಕರಲ್ಲಿ ಹೃದಯಾಘಾತ ಸಾಧ್ಯತೆ ಹೆಚ್ಚು: ಜೀವನಶೈಲಿ ಬದಲಾವಣೆಗೆ ವರದಿ ಸಲಹೆ

Date:

Advertisements
ಆಧುನಿಕ ಜೀವನಶೈಲಿಯ ಪರಿಣಾಮಗಳನ್ನು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ನೇತೃತ್ವದ ಸಮಿತಿ ಎತ್ತಿ ತೋರಿಸಿದೆ. ಒತ್ತಡದ ಕೆಲಸ, ನಿದ್ರಾಹೀನತೆ, ಅನಿಯಮಿತ ಊಟ ಹಾಗೂ ತಪ್ಪು ಆಹಾರ ಪದ್ಧತಿಗಳು ಹೃದಯ ಸಂಬಂಧಿ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಾಗಿವೆ.

ರಾಜ್ಯಾದ್ಯಂತ ತೀವ್ರ ತಲ್ಲಣ ಸೃಷ್ಟಿಸಿದ್ದ ಹಾಸನ ಜಿಲ್ಲೆಯಲ್ಲಿನ ಹಠಾತ್ ಹೃದಯಾಘಾತದಿಂದ ಸಂಭವಿಸಿದ ಸಾವುಗಳನ್ನು ಕುರಿತು ತಜ್ಞರ ಸಮಿತಿ ನಡೆಸಿರುವ ಅಧ್ಯಯನದ ವರದಿ ಬಿಡುಗಡೆಯಾಗಿದೆ.

ಹೃದಯಾಘಾತಗಳು ಸರಣಿಯಾಗಿ ವರದಿಯಾದ ಮೇಲೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿ, ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ಮೇ ಮತ್ತು ಜೂನ್ ತಿಂಗಳಲ್ಲಿ ವರದಿಯಾದ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿರುವ ಡಾ.ಕೆ.ಎಸ್. ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ಗುರುವಾರ (ಜು.10) ಆರೋಗ್ಯ ಇಲಾಖೆಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ವರದಿ ಸಲ್ಲಿಸಿ, ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ.

Advertisements

ಹಾಸನ ಜಿಲ್ಲೆಯಲ್ಲಿ ಸಂಭವಿಸಿದ 24 ಸಾವುಗಳನ್ನು ತಜ್ಞರ ಸಮಿತಿ ಮುಖ್ಯವಾಗಿ ಅಧ್ಯಯನಕ್ಕೆ ಒಳಪಡಿಸಿದೆ. ಹಾಗೆಯೇ ಹೃದಯ ಸಂಬಂಧಿ ಪ್ರಕರಣಗಳು ಹಾಗೂ ಸಾವುಗಳ ಕುರಿತು ಅಧ್ಯಯನ ಮಾಹಿತಿಯನ್ನು ಬಹಿರಂಗಗೊಳಿಸಿದೆ.

ಚಾಲಕರಲ್ಲಿ ಹೆಚ್ಚಿದ ಹೃದಯಾಘಾತ

ಹಾಸನದಲ್ಲಿ 2024ಕ್ಕೆ ಹೋಲಿಸಿದರೆ 2025ರಲ್ಲಿ ಹೃದಯಾಘಾತಕ್ಕೆ ಒಳಗಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿಲ್ಲ ಎಂಬುದು ಅಧ್ಯಯನದಿಂದ ಕಂಡು ಬಂದಿದೆ. ಅಲ್ಲದೇ ವಾಯುಮಾಲಿನ್ಯ ಮತ್ತು ಸದಾ ಕುಳಿತುಕೊಂಡಿರುವುದರಿಂದ ಆಟೋ, ಕ್ಯಾಬ್ ಚಾಲಕರಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಹೇಳಿದೆ.

24 ಸಾವುಗಳಲ್ಲಿ 14 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, 10 ಮಂದಿ 45 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಒಟ್ಟು 24 ಸಾವುಗಳಲ್ಲಿ, 4 ಸಾವುಗಳು ಹೃದಯ ಸಂಬಂಧಿ ಸಮಸ್ಯೆಯಿಂದ ಸಂಭವಿಸಿಲ್ಲ. ಅವುಗಳಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ, ರಸ್ತೆ ಅಪಘಾತ, ತೀವ್ರ ಜಠರಗರುಳಿನ ಸೋಂಕು ಮತ್ತು ವಿದ್ಯುತ್ ಆಘಾತದಿಂದ ಒಂದು ಸಾವು ಸಂಭವಿಸಿದೆ.

ಉಳಿದ 20 ಸಾವುಗಳಲ್ಲಿ 10 ಸಾವುಗಳು ದೃಢಪಟ್ಟ ಹೃದಯ ಸಂಬಂಧಿ ಸಾವುಗಳಾಗಿವೆ. 3 ಮಂದಿಗೆ ಈಗಾಗಲೇ ಹೃದಯ ಕಾಯಿಲೆ ಇದೆ. ಒಬ್ಬರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಒಬ್ಬರು ಆಂಜಿಯೋಪ್ಲ್ಯಾಸ್ಟಿ ನಂತರ ಒಬ್ಬರು ಡೈಲೇಟೆಡ್ ಕಾರ್ಡಿಯೊಮಯೋಪತಿ (ಹೃದಯ ವೈಫಲ್ಯ) ಹೊಂದಿದ್ದರು. 7 ಹೃದಯ ಸಂಬಂಧಿ ಸಾವುಗಳಲ್ಲಿ 4 ಮರಣೋತ್ತರ ಪರೀಕ್ಷೆಗಳಿಂದ ದೃಢಪಟ್ಟಿವೆ ಮತ್ತು 3 ಇಸಿಜಿ ಆಧಾರಿತವಾಗಿವೆ. ಇನ್ನುಳಿದ 10 ಸಾವುಗಳು ‘ಸಂಭವನೀಯ ಹೃದಯ ಸಂಬಂಧಿ ಸಾವುಗಳು’ ಎಂದು ಪರಿಗಣಿಸಲಾಗಿದೆ.

ಮೃತರಾದವರಲ್ಲಿ 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ಅಪಾಯಕಾರಿ ಅಂಶಗಳನ್ನು ಹೊಂದಿದ್ದಾರೆ. ಇವುಗಳಲ್ಲಿ ಮಧುಮೇಹ , ಸ್ಥೂಲಕಾಯತೆ, ಮದ್ಯಪಾನ, ಧೂಮಪಾನ, ಅಧಿಕ ರಕ್ತದೊತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

hhh

ಒತ್ತಡದಲ್ಲಿ ಕೆಲಸ

19, 21, 23, 32, 37, 38, ಹಾಗೂ 43 ವರ್ಷ ವಯಸ್ಸಿನ ಯುವ ವ್ಯಕ್ತಿಗಳಲ್ಲಿ ಹಠಾತ್ ಸಾವುಗಳು ಸಂಭವಿಸಿರುವುದು ಕಳವಳಕಾರಿಯಾಗಿದೆ. ಇದನ್ನು ನಿರ್ಲಕ್ಷಿಸಲಾಗುವುದಿಲ್ಲ. ಇವರಲ್ಲಿ 6 ಜನ ಆಟೋ ಮತ್ತು ಕ್ಯಾಬ್ ಚಾಲಕರಿದ್ದು ಸರಿಯಾದ ಸಮಯದಲ್ಲಿ ಊಟ ಮಾಡದೆ ಇರುವುದು, ಸರಿಯಾಗಿ ನಿದ್ರೆ ಮಾಡದೇ ಇರುವುದು, ಒತ್ತಡದಲ್ಲಿ ಕೆಲಸ ಮಾಡುವುದು ಹಠಾತ್ ಸಾವಿಗೆ ಕಾರಣವಾಗಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ನೀಡಲಾಗಿದೆ.

ಅನೇಕ ಸಂದರ್ಭಗಳಲ್ಲಿ ಮೃತಪಟ್ಟವರನ್ನು ಸಾವಿಗೂ ಮುನ್ನ ಯಾವುದೇ ಆರೋಗ್ಯ ಸೌಲಭ್ಯಕ್ಕೆ ಕರೆತರಲಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಆಸ್ಪತ್ರೆಗಳಲ್ಲಿ ‘ಮೃತಪಟ್ಟವರು’ ಎಂದು ಘೋಷಿಸಿದವರಲ್ಲಿಯೂ ಸಹ, ಔಪಚಾರಿಕ ಮರಣೋತ್ತರ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಿಲ್ಲ. ಮರಣೋತ್ತರ ದತ್ತಾಂಶದ ಕೊರತೆ, ಅಗತ್ಯ ಕ್ಲಿನಿಕಲ್ ತನಿಖೆಗಳ ಅಲಭ್ಯತೆ (ಇಸಿಜಿಗಳು, ಕಾರ್ಡಿಯಾಕ್ ಎನ್‌ಜೈಮ್‌ಗಳು) ಮತ್ತು ಕುಟುಂಬ ಸದಸ್ಯರಿಂದ ಸೀಮಿತ ಸಹಕಾರವು ಸಾವಿನ ನಿರ್ದಿಷ್ಟ ಕಾರಣವನ್ನು ತಿಳಿಯಲು ಕಷ್ಟಕರವಾಗಿದೆ ಎಂದು ವರದಿ ಹೇಳಿದೆ.

ತಜ್ಞರ ಸಮಿತಿಯ ಸಲಹೆ ಏನು?

ಹೃದಯಾಘಾತ ನಿಯಂತ್ರಣಕ್ಕೆ ಹಾಸನ ತನಿಖಾ ವರದಿ ಆಧರಿಸಿ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲವೊಂದು ಸಲಹೆ ಕೊಟ್ಟಿದೆ. ಆಟೋ ಮತ್ತು ಕ್ಯಾಬ್ ಚಾಲಕರಿಗೆ ಹೃದಯ ತಪಾಸಣೆ ಆಯೋಜನೆ ಮಾಡಬೇಕು. 15 ವರ್ಷ ಮಕ್ಕಳಿಗೆ ಹೃದಯರಕ್ತನಾಳದ ತಪಾಸಣೆ ಮಾಡಬೇಕು. ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ಇಸಿಜಿ ಅಳವಡಿಸಬೇಕು. ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಬೇಕು.

ಡಾ.ಕೆ.ಎಸ್. ರವೀಂದ್ರನಾಥ್

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಅವರು ಈ ದಿನ.ಕಾಂ ಜೊತೆ ಮಾತನಾಡಿ, “ಆಧುನಿಕ ಜೀವನಶೈಲಿಯ ಪರಿಣಾಮಗಳನ್ನು ನಮ್ಮ ವರದಿ ಎತ್ತಿ ತೋರಿಸಿದೆ. ಒತ್ತಡದ ಕೆಲಸ, ನಿದ್ರಾಹೀನತೆ, ಅನಿಯಮಿತ ಊಟ, ಮತ್ತು ತಪ್ಪು ಆಹಾರ ಪದ್ಧತಿಗಳು ಹೃದಯ ಸಂಬಂಧಿ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಾಗಿವೆ. ಧೂಮಪಾನ, ಮದ್ಯಪಾನ, ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಸ್ಥೂಲಕಾಯತೆಗಳು ಹೃದಯಾಘಾತಗಳ ಅಪಾಯವನ್ನು ಮತ್ತಷ್ಟು ಹೆಚ್ಚಿಸಿವೆ” ಎಂದರು.

“ಬೆಂಗಳೂರಿನ ಜಯದೇವ, ಮೈಸೂರು ಹಾಗೂ ಕಲಬುರಗಿ ಕೇಂದ್ರದಲ್ಲಿ ವರದಿಯಾದ ಹೃದ್ರೋಗ ಸಂಬಂಧಿ ಪ್ರಕರಣಗಳನ್ನು ಮುಂದಿಟ್ಟುಕೊಂಡು ಹೇಳುವುದಾದರೆ ಕಳೆದ 6 ತಿಂಗಳಲ್ಲಿ ಹೃದಯ ಸಂಬಂಧಿ ಸಾವು ರಾಜ್ಯದಲ್ಲಿ ಏರಿಕೆಯಾಗಿಲ್ಲ. ಕಿರಿಯ ವಯಸ್ಸಿನಲ್ಲಿ ಹಠಾತ್ ಸಾವುಗಳು ಸಂಭವಿಸುತ್ತಿರುವುದು ಹೃದಯ ಸಂಬಂಧಿ ಕಾಯಿಲೆ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ” ಎಂದು ಹೇಳಿದರು.

ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ಕ್ರಮ: ದಿನೇಶ್‌ ಗುಂಡೂರಾವ್ 

ಶಾಲೆ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜಿಮ್‌ಗಳಲ್ಲಿನ ದೈಹಿಕ ತರಬೇತುದಾರರಂತಹ ನಿರ್ದಿಷ್ಟ ಗುಂಪುಗಳಿಗೆ ಸಿಪಿಆರ್ ತರಬೇತಿ ನೀಡಲಾಗುವುದು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ (CHC) ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

"ಆಟೋ ಮತ್ತು ಕ್ಯಾಬ್ ಚಾಲಕರಿಗೆ ತಪಾಸಣೆ ಮಾಡಿಸಲು ನಿರ್ಧರಿಸಲಾಗುವುದು. ಇದು ಹಾಸನ ಜಿಲ್ಲೆಯ ಒಂದು ಪ್ರತ್ಯೇಕ ಸಮಸ್ಯೆ ಏನಲ್ಲ. ಇಂದಿನ ಜೀವನ ಶೈಲಿ, ಸರಿಯಾದ ಸಮಯದಲ್ಲಿ ಊಟ ಮಾಡದೆ, ಸರಿಯಾಗಿ ನಿದ್ರೆ ಮಾಡದೇ ಇರುವುದು, ಒತ್ತಡದಲ್ಲಿ ಕೆಲಸ ಮಾಡುವುದು ಹಠಾತ್ ಸಾವಿಗೆ ಕಾರಣವಾಗಿದೆ. 15 ವರ್ಷದ ಮಕ್ಕಳಿಗೆ ತಪಾಸಣೆ ಮಾಡಲಾಗುವುದು ಇದರಿಂದ ವಂಶವಾಹಿಯಾಗಿ ಏನಾದರೂ ಸಮಸ್ಯೆ ಇದ್ದರೆ ಗುರುತಿಸಿ ಸೂಕ್ತ ಕ್ರಮ ಕೈಗೊಂಡು ಮಾರ್ಗದರ್ಶನ ನೀಡಿ, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.

***

ಸೌಜನ್ಯ ಪರ ನಿಂತಿದ್ದಕ್ಕಾಗಿ ಈದಿನ ಯೂಟ್ಯೂಬ್‌ ಚಾನೆಲ್ ಬ್ಲಾಕ್ ಮಾಡಲಾಗಿದೆ. ಪರ್ಯಾಯವಾಗಿ eedina tv ಚಾನೆಲ್‌ ಕಾರ್ಯನಿರ್ವಹಿಸುತ್ತಿದೆ. ಸಬ್‌ಸ್ಕ್ರೈಬ್‌ ಮಾಡಿ👇🏽

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ವಜಾ ಮಾಡುವ ಮಸೂದೆ: ಪ್ರಜಾಪ್ರಭುತ್ವದ ಮೇಲಿನ ದಾಳಿಯೇ?

ಪದಚ್ಯುತಿ ಮಸೂದೆಯು ಭ್ರಷ್ಟಾಚಾರ ನಿಗ್ರಹದ ನೆಪದಲ್ಲಿ ರಾಜಕೀಯ ಪಿತೂರಿಯನ್ನು ಹುಟ್ಟುಹಾಕುತ್ತದೆ. ಬಿಜೆಪಿ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X