ಈ ದಿನ ಇಂಪ್ಯಾಕ್ಟ್‌ | ಹೆಬ್ಬೆರಳು ಗುರುತು ಪಡೆದು ಪಡಿತರ ನೀಡದೆ ವಂಚನೆ: ಜರ್ಮಲಿ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು

Date:

ಈ ರೀತಿಯ ವಂಚನೆಯಿಂದಾಗಿ ಸರ್ಕಾರಿ ಯೋಜನೆಗಳ ಮೇಲಿನ ವಿಶ್ವಾಸಾರ್ಹತೆ ಕುಂದುತ್ತದೆ. ಫಲಾನುಭವಿಗಳು ದೂರು ನೀಡಲು ಹಿಂಜರಿಯದೆ, ತ್ವರಿತವಾಗಿ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ತಿಳಿಸುವುದು ಮುಖ್ಯ. ಸರ್ಕಾರವೂ ಮೇಲ್ವಿಚಾರಣೆಯನ್ನು ಬಲಪಡಿಸಬೇಕು. 

ಮೂರು ತಿಂಗಳಿಂದ ಜನರ ಹೆಬ್ಬೆರಳು ಗುರುತು ಪಡೆದು ಪಡಿತರ ಕೊಡದೇ ವಂಚನೆ ಮಾಡುತ್ತಿದ್ದ ಸಿಬ್ಬಂದಿಗೆ ತಕ್ಕ ಶಾಸ್ತಿಯಾಗಿದ್ದು, ಜರ್ಮಲಿ ಗ್ರಾಮದ ನ್ಯಾಯಬೆಲೆ ಅಂಗಡಿಯ ಪರವಾನಗಿ(ಲೈಸೆನ್ಸ್) ರದ್ದುಮಾಡಲಾಗಿದೆ.

- Advertisement -

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹರವದಿ ಗ್ರಾಮಸ್ಥರಿಗೆ ಮೂರು ತಿಂಗಳಿಂದ ರೇಷನ್ ವಿತರಿಸಿಲ್ಲವೆಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಮೇ 2ರಂದು ʼಕೂಡ್ಲಿಗಿ | ಪಡಿತರ ಗೋಲ್‌ಮಾಲ್: 3 ತಿಂಗಳಿಂದ ಸಿಗದ ಅನ್ನಭಾಗ್ಯ, 200 ಕ್ವಿಂಟಲ್ ಅಕ್ಕಿಗೆ ಕನ್ನ?ʼ ಎಂಬ ತಲೆಬರಹದಡಿ ವರದಿ ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಕುರಿತು ಜರ್ಮಲಿ ಗ್ರಾಮದ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ವಿರುದ್ಧ ಹರವದಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ವಿಚಾರ ತಿಳಿದ ಬಳಿಕ ಈ ದಿನ.ಕಾಮ್ ತಂಡ ಗ್ರಾಮಕ್ಕೆ ಭೇಟಿ ನೀಡಿ ರಿಯಾಲಿಟಿ ಚೆಕ್ ಮಾಡಿ ವಿಸ್ತೃತ ವರದಿ ಮಾಡಿತ್ತು. ವರದಿಯಾದ ಬೆನ್ನಲ್ಲೇ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಜರ್ಮಲಿ ಗ್ರಾಮದ ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದುಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಜರ್ಮಲಿ ಗ್ರಾಮದಿಂದ ನಾಲ್ಕೈದು ಕಿಲೋ ಮೀಟರ್ ದೂರದಲ್ಲಿರುವ ನರಸಿಂಹಗಿರಿಯ ನ್ಯಾಯಬೆಲೆ ಅಂಗಡಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿದ್ದಾರೆ.

ಜರ್ಮಲಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಭಾರೀ ಹಗರಣ ನಡೆದಿದೆ ಎಂದು ಹರವದಿ ಗ್ರಾಮಸ್ಥರು ಆರೋಪಿಸಿದ್ದಾರೆ. ಜರ್ಮಲಿಯಲ್ಲಿರುವ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜ್ಯೋತಿಲಿಂಗಪ್ಪ ಅವರು, ʼಕಳೆದ 3 ತಿಂಗಳಿಂದ ಜನರಿಗೆ ಪಡಿತರ ವಿತರಣೆ ಮಾಡಿಲ್ಲ. ಈಗಿರುವ ಸೆಕ್ರೆಟರಿ ಸುನಿಲ್ ಅವರನ್ನು ಕೇಳಿದರೆ, ಹಿಂದೆ ಇದ್ದ ಅಧಿಕಾರಿ ಗಾದಿಲಿಂಗಪ್ಪ 200 ಕ್ವಿಂಟಲ್ ಅಕ್ಕಿ ಹಗರಣ ಮಾಡಿ ಹೋಗಿದ್ದಾರೆʼ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿದ್ದೀರಾ? ಉಡುಪಿ | ಕಾದ ಸಮುದ್ರ: ಬರಿದಾದ ಮೀನುಗಾರರ ಬದುಕು

ಇನ್ನು, 3 ತಿಂಗಳಿಂದ ಹರವದಿ ಗ್ರಾಮಕ್ಕೆ ಪಡಿತರ ಕೊಡದೇ ಸಿಬ್ಬಂದಿ ವಂಚನೆ ಮಾಡಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಆದರೆ ಆ ಮೂರು ತಿಂಗಳ ಪಡಿತರ ಯಾರ ಗೋದಾಮು ಸೇರಿತು? ಬಡವರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಯಾರ ಪಾಲಾಯ್ತು? ಭ್ರಷ್ಟಾಚಾರ ಮಾಡಿದ್ಯಾರು ಎನ್ನುವ ಪ್ರಶ್ನೆಗಳಿಗೆ ಉತ್ತರ ನಿಗೂಢವಾಗಿದೆ. ಭ್ರಷ್ಟಾಚಾರ ಎಸಗಿದವರ ಮೇಲೆ ಜಿಲ್ಲಾಧಿಕಾರಿಗಳು ಯಾವ ರೀತಿಯ ಕ್ರಮ ಜರುಗಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಈ ರೀತಿಯ ವಂಚನೆಯಿಂದಾಗಿ ಸರ್ಕಾರಿ ಯೋಜನೆಗಳ ಮೇಲಿನ ವಿಶ್ವಾಸಾರ್ಹತೆ ಕುಂದುತ್ತದೆ. ಫಲಾನುಭವಿಗಳು ದೂರು ನೀಡಲು ಹಿಂಜರಿಯದೆ, ತ್ವರಿತವಾಗಿ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ತಿಳಿಸುವುದು ಮುಖ್ಯ. ಸರ್ಕಾರವೂ ಮೇಲ್ವಿಚಾರಣೆ ಬಲಪಡಿಸಬೇಕು. ಇದು ಕೇವಲ ಒಂದು ಘಟನೆಯಲ್ಲ, ನಿಜವಾದ ಫಲಾನುಭವಿಗಳನ್ನು ವಂಚಿತರನ್ನಾಗಿ ಮಾಡುತ್ತದೆ. ಅಲ್ಲದೆ ವ್ಯವಸ್ಥೆಯ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ.

WhatsApp Image 2026 04 20 at 18.37.37 e1776691850820
ವಿಜಯಕುಮಾರ್ ಎಂ
+ posts

ವಿಜಯನಗರ ಕೋಆರ್ಡಿನೇಟರ್‌

ಪೋಸ್ಟ್ ಹಂಚಿಕೊಳ್ಳಿ:

ವಿಜಯಕುಮಾರ್ ಎಂ
ವಿಜಯಕುಮಾರ್ ಎಂ
ವಿಜಯನಗರ ಕೋಆರ್ಡಿನೇಟರ್‌

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...