ಈ ದಿನ ಇಂಪ್ಯಾಕ್ಟ್ | ಅಲೆಮಾರಿಗಳ ಮೂಲಸೌಕರ್ಯ ಪರಿಶೀಲನೆಗೆ ತಹಶೀಲ್ದಾರ್‌ ಸೂಚನೆ: ಅಧಿಕಾರಿಗಳ ಭೇಟಿ

Date:

ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಶೌಚಾಲಯ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ 44ನೇ ವಾರ್ಡ್‌ನಲ್ಲಿ ಸುಮಾರು 30 ವರ್ಷಗಳಿಂದ ವಾಸವಾಗಿರುವ ಅಲೆಮಾರಿ ಸಮುದಾಯದವರು ಮೂಲಸೌಕರ್ಯಗಳಿಂದ ವಂಚಿರಾಗಿದ್ದ ಕುರಿತು ಈ ದಿನ.ಕಾಮ್ ಪ್ರಕಟಿಸಿದ್ದ ವರದಿಗೆ ಯರಗಟ್ಟಿ ತಹಶೀಲ್ದಾ‌ರ್ ಮಾಧವಾನಂದ ಗುಂಡಪ್ಪಗೋಳ ಸ್ಪಂದಿಸಿದ್ದರು. ಈ ಹಿನ್ನೆಲೆಯಲ್ಲಿ ಯರಗಟ್ಟಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

- Advertisement -

ಆಧಾರ್‌ ಕಾರ್ಡ್‌ ಮತ್ತು ರೇಷನ್‌ ಕಾರ್ಡ್‌ ಇಲ್ಲದಿರುವವರನ್ನು ಗಮನಿಸಿದ ಅಧಿಕಾರಿಗಳು ಪಟ್ಟಣ ಪಂಚಾಯಿತಿಯಿಂದ ಸೌಲಭ್ಯ ಪಡೆಯುವಂತೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ದಿನ.ಕಾಮ್‌ನಿಂದ ಆಗಸ್ಟ್ 16ರಂದು ʼ80 ವರ್ಷಗಳ ಸ್ವಾತಂತ್ರ್ಯದ ಬಳಿಕವೂ ಅಲೆಮಾರಿಗಳ ಬದುಕಿಗೆ ಮೂಲಸೌಕರ್ಯ ಮರೀಚಿಕೆʼ ಎಂಬ ಶೀರ್ಷಿಕೆಯಡಿ ವರದಿಯನ್ನು ಪ್ರಕಟಿಸಲಾಗಿತ್ತು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ತಹಶೀಲ್ದಾ‌ರ್, ಅಲೆಮಾರಿ ಸಮುದಾಯದವರು ವಾಸಿಸುವ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸುವಂತೆ ಯರಗಟ್ಟಿ ಪಟ್ಟಣ ಪಂಚಾಯಿತಿಗೆ ಲಿಖಿತ ಸೂಚನೆ ನೀಡಿದ್ದಾರೆ.

ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಶೌಚಾಲಯ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಲ್ಲದೆ, ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯದ ಜನರ ನಿಖರ ಸಂಖ್ಯೆ, ವಾಸಸ್ಥಳದ ವಿವರ, ಲಭ್ಯವಿರುವ ಹಾಗೂ ಕೊರತೆಯಿರುವ ಮೂಲಭೂತ ಸೌಲಭ್ಯಗಳ ಮಾಹಿತಿ, ಪಟ್ಟಣ ಪಂಚಾಯತಿ ವತಿಯಿಂದ ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ಕಾಯ್ದಿರಿಸಿರುವ ಶೇ.7.25 ಅಥವಾ ಇತರೆ ವಿಶೇಷ ನಿಧಿಗಳ ಬಳಕೆಯ ವಿವರವನ್ನು ಸಲ್ಲಿಸುವಂತೆ ನಿರ್ದೇಶಿಸಲಾಗಿದೆ.

ಅಲೆಮಾರಿಗಳ ನೋವಿಗೆ ಅಧಿಕಾರಿಗಳ ಸ್ಪಂದನೆ

ಸಮುದಾಯಕ್ಕೆ ತುರ್ತಾಗಿ ಒದಗಿಸಬಹುದಾದ ಕುಡಿಯುವ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳ ಕುರಿತು ಕೈಗೊಳ್ಳುವ ತಾತ್ಕಾಲಿಕ ಕ್ರಮಗಳು ಹಾಗೂ ಶಾಶ್ವತ ವಸತಿ ಮತ್ತು ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದ ಭವಿಷ್ಯದ ಕ್ರಿಯಾ ಯೋಜನೆಯನ್ನೂ ವರದಿಯಲ್ಲಿ ತಿಳಿಸುವಂತೆ ಸೂಚಿಸಲಾಗಿದೆ.

ಯರಗಟ್ಟಿ ಪಟ್ಟಣದ ಅಲೆಮಾರಿ ಕುಟುಂಬಗಳು ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳಿಂದ ವಂಚಿತಹೊಂಡು ಜೀವನ ಸಾಗಿಸುತ್ತಿವೆ. ಪ್ಲ್ಯಾಸ್ಟಿಕ್ ಹೆಕ್ಕುವುದೇ ಪ್ರಮುಖ ಉದ್ಯೋಗವಾಗಿದ್ದು, ದಿನವಿಡೀ ದುಡಿದರೂ ಸುಮಾರು ₹200 ಆದಾಯ ದೊರೆಯುತ್ತದೆ. ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಮಹಿಳೆಯರು ಮತ್ತು ಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿದ್ದೀರಾ? Deep State ಎಂಬ ಅದೃಶ್ಯ ಅಧಿಕಾರ; ಚುನಾಯಿತ ಸರ್ಕಾರದ ಹಿಂದಿನ ಕಾಣದ ಕೈಗಳ ಕಾರಸ್ಥಾನ ಬಲ್ಲಿರಾ?

ಮುರಿದ ತಗಡಿನ ಶೆಡ್‌ಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಮಳೆ ಬಂದಾಗ ನೀರು ಸೋರಿಕೆಯಿಂದ ತೊಂದರೆ ಅನುಭವಿಸುತ್ತಿವೆ. ಮಕ್ಕಳಿಗೆ ಶಿಕ್ಷಣದ ಅವಕಾಶವೂ ಸಮರ್ಪಕವಾಗಿ ದೊರೆಯುತ್ತಿಲ್ಲ. ರೇಷನ್ ಕಾರ್ಡ್ ಇಲ್ಲದ ಕಾರಣ ಪಡಿತರದಿಂದಲೂ ವಂಚಿತರಾಗಿದ್ದು, ಆಧಾರ್ ಕಾರ್ಡ್‌ ಮಾಡಿಸಿಕೊಳ್ಳಲೂ ಆಗದೆ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ಸಮಸ್ಯೆಗಳ ಕುರಿತು ಪ್ರಕಟವಾದ ಸುದ್ದಿಗೆ ತಹಶೀಲ್ದಾ‌ರ್ ಅವರು ತಕ್ಷಣ ಸ್ಪಂದಿಸಿ ಸ್ಥಳ ಪರಿಶೀಲನೆಗೆ ಸೂಚಿಸಿರುವುದು ಅಲೆಮಾರಿ ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...