ಗಂಭೀರ ಗಾಯಗೊಂಡಿದ್ದರೂ ಆಡಿಯೋ ಮೂಲಕವೇ ಇರಾನ್ ಮುನ್ನಡೆಸುತ್ತಿರುವ ಮೊಜ್ತಬಾ ಖಮೇನಿ

Date:

ಇತ್ತೀಚೆಗೆ ನಡೆದ ಭಾರಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ ಅವರ ಮುಖ ವಿಕೃತಗೊಂಡಿದ್ದು, ಕಾಲುಗಳಿಗೆ ತೀವ್ರ ಪೆಟ್ಟಾಗಿದೆ. ಆದರೂ ಅವರು ಮಾನಸಿಕವಾಗಿ ಸ್ಥಿರವಾಗಿದ್ದು, ಆಡಳಿತದಲ್ಲಿ ಸಕ್ರಿಯರಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಕಳೆದ ಫೆಬ್ರವರಿ 28ರಂದು ಮಧ್ಯ ತೆಹ್ರಾನ್‌ನಲ್ಲಿರುವ ಸರ್ವೋಚ್ಚ ನಾಯಕರ ನಿವಾಸದ ಮೇಲೆ ಈ ದಾಳಿ ನಡೆದಿತ್ತು. ಇದರಲ್ಲಿ ಮೊಜ್ತಬಾ ಅವರ ತಂದೆ ಹಾಗೂ ಇರಾನ್‌ನ ಹಿಂದಿನ ನಾಯಕ ಅಲಿ ಖಮೇನಿ ಸೇರಿದಂತೆ ಹಲವು ಕುಟುಂಬಸ್ಥರು ಸಾವನ್ನಪ್ಪಿದ್ದರು. ಈ ಭೀಕರ ದಾಳಿಯಿಂದ ಪಾರಾಗಿರುವ 56 ವರ್ಷದ ಮೊಜ್ತಬಾ, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಗಾಯಗಳ ತೀವ್ರತೆಯ ಹೊರತಾಗಿಯೂ ಅವರು ಸಂಪೂರ್ಣ ಎಚ್ಚರದಿಂದಿದ್ದಾರೆ. ಆಡಿಯೋ ಕಾನ್ಫರೆನ್ಸ್ ಮೂಲಕವೇ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ. ಯುದ್ಧದ ಮುಂದಿನ ನಡೆ ಹಾಗೂ ಅಮೆರಿಕದ ಜೊತೆಗಿನ ಸೂಕ್ಷ್ಮ ಮಾತುಕತೆಗಳ ಬಗ್ಗೆ ಅವರೇ ಖುದ್ದಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ‘ರಾಯಿಟರ್ಸ್’ ಸುದ್ದಿಸಂಸ್ಥೆಗೆ ತಿಳಿಸಿವೆ.

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

ಮಾರ್ಚ್ 8ರಂದು ಅವರು ಅಧಿಕೃತವಾಗಿ ಇರಾನ್‌ನ ಸರ್ವೋಚ್ಚ ನಾಯಕರಾಗಿ ನೇಮಕಗೊಂಡರು. ಆದರೆ, ದಾಳಿಯಾದ ದಿನದಿಂದ ಇಲ್ಲಿಯವರೆಗೆ ಅವರ ಯಾವುದೇ ಫೋಟೋ ಅಥವಾ ವಿಡಿಯೋ ಬಿಡುಗಡೆಯಾಗಿಲ್ಲ. ಈ ಬೆಳವಣಿಗೆಯು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಅವರು ಕೋಮಾ ಸ್ಥಿತಿಗೆ ತಲುಪಿದ್ದಾರೆ ಅಥವಾ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ ಎಂದು ಪಾಶ್ಚಿಮಾತ್ಯ ದೇಶಗಳು ಹಾಗೂ ಇಸ್ರೇಲ್ ಗುಪ್ತಚರ ವರದಿಗಳು ಅಂದಾಜಿಸಿವೆ. ಆದರೆ, ಈ ವರದಿಗಳು ಇನ್ನೂ ದೃಢಪಟ್ಟಿಲ್ಲ.

ಒಂದೆಡೆ ನಾಯಕನ ಆರೋಗ್ಯದ ಬಗ್ಗೆ ಗೊಂದಲಗಳಿದ್ದರೆ, ಮತ್ತೊಂದೆಡೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮದ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಯುತ್ತಿದೆ. ಅಮೆರಿಕದ ಕಡೆಯಿಂದ ಡೊನಾಲ್ಡ್ ಟ್ರಂಪ್ ನೇತೃತ್ವ ವಹಿಸಿದ್ದು, ಅವರು ಖಮೇನಿ ಬದಲಿಗೆ ಇರಾನ್‌ನ ಇತರ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇದು ಪ್ರಸ್ತುತ ಇರಾನ್‌ನಲ್ಲಿ ಯಾರ ಆದೇಶ ನಡೆಯುತ್ತಿದೆ ಎಂಬ ಪ್ರಶ್ನೆಯನ್ನು ಮತ್ತಷ್ಟು ಬಲಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...