ಹಾವೇರಿ | ಶಿಥಿಲಗೊಂಡ 411 ಸರ್ಕಾರಿ ಶಾಲೆಗಳಿಗೆ ಅನುದಾನ ಮರೀಚಿಕೆ

Date:

"ಶಿಕ್ಷಣವೇ ಪ್ರಗತಿಯ ಮೂಲ" ಎಂಬ ಮಾತು ಎಷ್ಟು ಸತ್ಯವೋ, ಆ ಶಿಕ್ಷಣವನ್ನು ನೀಡುವ ಶಾಲಾ ಕಟ್ಟಡಗಳು ಸುರಕ್ಷಿತವಾಗಿರುವುದು ಅಷ್ಟೇ ಮುಖ್ಯವಾಗಿದೆ. ಆದರೆ, ಹಾವೇರಿ ಜಿಲ್ಲೆಯ ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಯನ್ನು ನೋಡಿದರೆ ಗ್ರಾಮೀಣ ಭಾಗದ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಮೂಡುವುದು ಸಹಜ. ಒಂದೆಡೆ ಸರ್ಕಾರಿ ಶಾಲೆಗಳ ಉಳಿವಿನ ಕೂಗು ಎಲ್ಲೆಡೆ ಧ್ವನಿಸುತ್ತಿದ್ದರೆ, ಇನ್ನೊಂದೆಡೆ ಬುನಾದಿಯೇ ಕುಸಿವ ಹಂತದಲ್ಲಿದೆ.

ಹಾರಿ ಹೋದ ತಗಡು, ಬಿರುಕು ಬಿಟ್ಟ ಕಟ್ಟಡ, ಕುಸಿದ ಗೋಡೆ, ಸೋರುವ ಮೇಲ್ಚಾವಣಿಗಳು, ಗೋಡೆಯ ಸಂದಿಗಳಲ್ಲಿ ಬೆಳೆದ ಗಿಡಗಂಟಿ, ಒಡೆದ ಹೆಂಚು ಇದು ಹಾವೇರಿ ಜಿಲ್ಲೆಯ ಸರ್ಕಾರಿ ಶಾಲೆಗಳ ಸ್ಥಿತಿ, ಶಿಥಿಲಗೊಂಡ ಕಟ್ಟಡಗಳಲ್ಲಿ ಜೀವಭಯದಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ದಿನ ದೂಡುವಂತಾಗಿದೆ.

- Advertisement -

ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ರಜೆ ಮುಗಿದು, ಆರಂಭವಾಗಿ ಒಂದೂವರೆ ತಿಂಗಳು ಕಳೆದಿದೆ. ಸರ್ಕಾರದ ಸೂಚನೆಯ ಮೇರೆಗೆ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಬರಮಾಡಿಕೊಂಡು ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಹಾವೇರಿ ಜಿಲ್ಲೆಯಲ್ಲಿ 1283 ಶಾಲೆಗಳಿದ್ದು, 1118 ಪ್ರಾಥಮಿಕ ಶಾಲೆಗಳು ಹಾಗೂ 165 ಪ್ರೌಢ ಶಾಲೆಗಳಿವೆ. ಇವುಗಳಲ್ಲಿ 374 ಪ್ರಾಥಮಿಕ ಶಾಲೆಗಳ ಕೊಠಡಿಗಳು ಶಿಥಿಲಗೊಂಡಿವೆ. 37 ಪ್ರೌಡ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಒಟ್ಟು 411 ಶಾಲೆಗಳು ದುರಸ್ತಿಗೆ ಬಂದಿವೆ.

ಹಾವೇರಿ ತಾಲ್ಲೂಕಿನಲ್ಲಿ 183 ಶಾಲೆಗಳಿದ್ದು,  82 ಕೊಠಡಿಗಳು ಶಿಥಿಲಗೊಂಡಿವೆ. ಬ್ಯಾಡಗಿ ತಾಲ್ಲೂಕಿನಲ್ಲಿ 118 ಶಾಲೆಗಳಿದ್ದು, 54 ಕೊಠಡಿಗಳು. ಹಾನಗಲ್ ತಾಲೂಕಿನಲ್ಲಿ 249 ಶಾಲೆಗಳಿದ್ದು, 54 ಕೊಠಡಿಗಳು, ಹಿರೇಕೆರೂರು ತಾಲ್ಲೂಕಿನಲ್ಲಿ 223 ಶಾಲೆಗಳಿದ್ದು, 60 ಕೊಠಡಿಗಳು, ರಾಣಿಬೆನ್ನೂರು ತಾಲೂಕಿನಲ್ಲಿ 206 ಶಾಲೆಗಳಿದ್ದು, 41 ಕೊಠಡಿಗಳು, ಸವಣೂರು 127 ಶಾಲೆಗಳಿದ್ದು, 69 ಕೊಠಡಿಗಳು, ಶಿಗ್ಗಾವಿ ತಾಲ್ಲೂಕಿನಲ್ಲಿ 177 ಶಾಲೆಗಳಿದ್ದು, 51 ಕೊಠಡಿಗಳು ಶಿಥಿಲಗೊಂಡಿವೆ. 

ಹಾವೇರಿ ತಾಲೂಕಿನಲ್ಲಿ ಅತಿ ಹೆಚ್ಚು ಶಿಥಿಲಗೊಂಡ ಕೊಠಡಿಗಳು: ಜಿಲ್ಲೆಯಲ್ಲಿಯೇ ಹಾವೇರಿ ಪಟ್ಟಣ ಹಾಗೂ ತಾಲ್ಲೂಕು ಸೇರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. 70 ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಗೊಂಡಿದ್ದು, 12 ಪ್ರೌಡ ಶಾಲಾ ಕೊಠಡಿಗಳು ಶಿಥಿಲಗೊಂಡಿದ್ದು, ದುರಸ್ಥಿಗಾಗಿ ಕಾಯುತ್ತಿವೆ. ಇಂತಹ ದುರಾವಸ್ಥೆಯಲ್ಲಿರುವ ಶಾಲೆಗಳಿಗೆ ಮಕ್ಕಳನ್ನು ಕಲಿಕೆಗೆಂದು ಕಳುಹಿಸುವ ಪೋಷಕರು ಆತಂಕಕ್ಕೊಳಗಾಗಿದ್ದು, ಶಾಲಾ ಕೊಠಡಿಗಳ ದುರಸ್ಥಿಗೆ, ಹೊಸ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ದುರಸ್ತಿಗಾಗಿ ಹಾಗೂ ಅವುಗಳನ್ನು ತೆರವು ಮಾಡಲು ವರ್ಷದಿಂದ ವರ್ಷಕ್ಕೆ ಅನುದಾನ ಕಡಿಮೆ ಆಗುತ್ತಿದ್ದು, ಇದರಿಂದ ಶಿಥಿಲಗೊಂಡ ಕೊಠಡಿಗಳ ದುರಸ್ತಿಗೆ ಹಾಗೂ ಹೊಸ ಕೊಠಡಿ ನಿರ್ಮಾಣಕ್ಕೆ ಅಡ್ಡಿಯಾಗುತ್ತಿದೆ” ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಮಳೆಗಾಲ ಆರಂಭ ಆಗಿರುವುದರಿಂದ ಶಿಥಿಲಗೊಂಡಿರುವ ಕೊಠಡಿಗಳ ಒಳಗೆ ಮಳೆ ನೀರು ಸೋರಿಕೆಯಾಗಿ ವಿದ್ಯಾರ್ಥಿಗಳು ಕುಳಿತು ಪಾಠ ಕೇಳಲಾಗದ ಸ್ಥಿತಿಯಿದೆ. ದುರಸ್ತಿಗಾಗಿ ಕನಿಷ್ಟ ಅನುದಾನ ನೀಡಿದರೆ. ಮಕ್ಕಳಿಗೆ ಶಿಕ್ಷಕರಿಗೆ ಪಾಠ ಮಾಡಲು ಅನುಕೂಲವಾಗಲಿದೆ.

ಜಿಲ್ಲೆಯ ಬಹುತೇಕ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಆದರೆ ಇತ್ತಿಚೇಗೆ ಸರ್ಕಾರಿ ಶಾಲೆಗಳಲ್ಲಿ ಅಭಿವೃದ್ಧಿ ಮರೀಚಿಕೆಯಾಗುತ್ತಿದೆ. ಶಿಥಿಲಾವಸ್ಥೆಗೊಂಡ ಕೊಠಡಿಗಳ ದುರಸ್ತಿಯಾಗುತ್ತಿಲ್ಲ. ಶಿಥಿಲಗೊಂಡ ಕೊಠಡಿಗಳ ದುರಸ್ತಿಗೆ ಹಣವಿಲ್ಲವೆಂದು ಹೇಳುತ್ತಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಅಭಿವೃದ್ದಿಗೆ ಹಳೆ ವಿದ್ಯಾರ್ಥಿಗಳ ಸಂಘಗಳನ್ನು ಅವಲಂಬಿಸಿದ್ದಾರೆ.

ಈ ಕುರಿತು ಈದಿನ.ಕಾಮ್ ಜೊತೆಗೆ ಹಾವೇರಿ ಡಿಡಿಪಿಐ ಮೋಹನ್ ಎನ್ ದಂಡಿನ ಅವರು ಮಾತನಾಡಿ, “ಸರ್ಕಾರಿ ಶಾಲೆಗಳ ಕೊಠಡಿಗಳು ಶಿಥಿಲಿಕರಣಗೊಂಡಿದ್ದು, ದುರಸ್ತಿಗೆ ಬಂದ ಕೊಠಡಿಗಳನ್ನು ಗುರುತಿಸಿ, ಅಲ್ಲಿ ಮಕ್ಕಳಿಗೆ ಪಾಠ ಮಾಡದೇ ಬೇರೆ ಕೊಠಡಿಗಳಲ್ಲಿ ಪಾಠ ಮಾಡಲು ಹೇಳಲಾಗಿದೆ. ಸರ್ಕಾರದ ಅನುದಾನದಲ್ಲಿ ಕೆಲವನ್ನು ದುರಸ್ತಿಗೊಳಿಸಲಾಗುತ್ತಿದೆ ಜೊತೆಗೆ ಹಳೆ ವಿದ್ಯಾರ್ಥಿ ಸಂಘದ ಸಹಾಯದಿಂದ ಶಾಲೆಗಳಲ್ಲಿ ಹೊಸ ಕೊಠಡಿಗಳನ್ನು ನಿರ್ಮಿಸಲಾಗಿದೆ” ಎಂದು ಹೇಳಿದರು.

ಬಡ ಹಾಗೂ ಗ್ರಾಮೀಣ ಭಾಗದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸಿ, ಮಕ್ಕಳಿಗೆ ಸುರಕ್ಷಿತ ಮತ್ತು ಸುಸಜ್ಜಿತ ಕಲಿಕಾ ವಾತಾವರಣವನ್ನು ನಿರ್ಮಿಸಿಕೊಡುವುದು ಸರ್ಕಾರದ ಆಡಳಿತ ಯಂತ್ರದ ತುರ್ತು ಕರ್ತವ್ಯವಾಗಬೇಕಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...

ಕೊಪ್ಪಳ | ಡ್ಯಾನ್ಸ್‌ ಮಾಡಬೇಡವೆಂದು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...