ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ: ಸುಪ್ರೀಂ ಕೆಂಗಣ್ಣು – ಕೇಸರೀಕರಣ, ಇತಿಹಾಸ ತಿರುಚುವಿಕೆಗೂ ಬೀಳುವುದೇ ಕಡಿವಾಣ?

Date:

ಎನ್‌ಸಿಇಆರ್‌ಟಿ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ವಿಷಯವನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಷಯವನ್ನು ಸ್ವಯಂಪ್ರೇರಿತ ಪ್ರಕರಣವಾಗಿ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಇದೊಂದು ಆಳವಾಗಿ ಬೇರೂರಿರುವ ಸಂಚು ಎಂದು ಬಣ್ಣಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಪಠ್ಯಪುಸ್ತಕಗಳ ಕೇಸರೀಕರಣ ಹಾಗೂ ಇತಿಹಾಸ ತಿರುಚುವಿಕೆಯಂತಹ ಆರೋಪಗಳ ಬಗ್ಗೆಯೂ ಸರ್ವೋಚ್ಚ ನ್ಯಾಯಾಲಯ ಇದೇ ರೀತಿಯ ಬಿಗಿ ನಿಲುವು ತಾಳುವುದೇ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಮುನ್ನೆಲೆಗೆ ಬಂದಿದೆ.

- Advertisement -

ನ್ಯಾಯಾಲಯದ ಘನತೆಗೆ ಚ್ಯುತಿ ತರುವಂತಹ ಪಠ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ವಿಚಾರಣೆ ವೇಳೆ ಹಲವು ಕಟು ಮಾತುಗಳನ್ನಾಡಿದೆ. “ಅವರು ಗುಂಡು ಹಾರಿಸಿದ್ದಾರೆ, ಅದರ ಪರಿಣಾಮವಾಗಿ ಇಂದು ನ್ಯಾಯಾಂಗಕ್ಕೆ ರಕ್ತಸ್ರಾವವಾಗುತ್ತಿದೆ” ಎಂದು ನ್ಯಾಯಾಲಯ ಖೇದ ವ್ಯಕ್ತಪಡಿಸಿತು. ಈ ಪಠ್ಯ ಸೇರ್ಪಡೆಯು ಆಕಸ್ಮಿಕವಲ್ಲ, ಬದಲಾಗಿ ನ್ಯಾಯಾಂಗದ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಲೆಕ್ಕಾಚಾರದ ನಡೆ ಮತ್ತು ಆಳವಾದ ಸಂಚು ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಕೃತ್ಯಕ್ಕೆ ಕಾರಣರಾದವರನ್ನು ಪತ್ತೆಹಚ್ಚಲು ಆಳವಾದ ತನಿಖೆಯ ಅಗತ್ಯವಿದ್ದು, ತಪ್ಪು ಮಾಡಿದವರು ತಲೆದಂಡ ತೆರಲೇಬೇಕು ಮತ್ತು ಈ ಪ್ರಕರಣವನ್ನು ಮುಚ್ಚಿಹಾಕುವುದಿಲ್ಲ ಎಂದು ಕಟುವಾಗಿ ಎಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ರೀತಿಯ ದುರ್ನಡತೆಯನ್ನು ತಡೆಯದಿದ್ದರೆ ಅದು ನ್ಯಾಯಾಂಗ ಕಚೇರಿಯ ಪಾವಿತ್ರ್ಯತೆಯನ್ನು ಹಾಳುಮಾಡುತ್ತದೆ; ಇದು ಉದ್ದೇಶಪೂರ್ವಕ ಕೃತ್ಯವಾದರೆ ನ್ಯಾಯದಾನದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿದಂತೆ ಹಾಗೂ ‘ಕ್ರಿಮಿನಲ್ ನ್ಯಾಯಾಂಗ ನಿಂದನೆ’ಯ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಸಮ್ಮತ ಟೀಕೆಗಳನ್ನು ಹತ್ತಿಕ್ಕಲು ತಾನು ಉದ್ದೇಶಿಸಿಲ್ಲ ಎಂದಿರುವ ನ್ಯಾಯಾಲಯ, ಕಠಿಣ ಚರ್ಚೆಗಳು ಸಂಸ್ಥೆಯ ಜೀವಂತಿಕೆಗೆ ಸಹಾಯ ಮಾಡುತ್ತವೆ, ಆದರೆ ಎಳೆಯ ಮನಸ್ಸುಗಳಿಗೆ ಈ ವಯಸ್ಸಿನಲ್ಲಿ ಇಂತಹ ಪಕ್ಷಪಾತದ ನಿರೂಪಣೆಯನ್ನು ಒಡ್ಡಿಕೊಳ್ಳುವುದು ಅನುಚಿತ ಎಂದಿದೆ.

ಪಠ್ಯದಲ್ಲಿರುವ ವಿಚಾರಗಳು ಕೇವಲ ವಿದ್ಯಾರ್ಥಿಗಳಿಗೆ ಸೀಮಿತವಾಗದೆ, ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ, ಅಲ್ಲಿಂದ ಪೋಷಕರಿಗೆ ಹಾಗೂ ಇಡೀ ಸಮಾಜಕ್ಕೆ ಹರಡುತ್ತವೆ ಎಂಬ ಆತಂಕವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ. ಸದ್ಯ ನ್ಯಾಯಾಲಯದ ಸೂಚನೆ ಮೇರೆಗೆ ವಿವಾದಿತ ಪಠ್ಯದ ವಿತರಣೆಯನ್ನು ನಿರ್ಬಂಧಿಸಲಾಗಿದ್ದು, ಡಿಜಿಟಲ್ ಹಾಗೂ ಭೌತಿಕ ಪ್ರತಿಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆದೇಶಿಸಲಾಗಿದೆ.

ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ | ಜಾಗತಿಕ ಆರ್ಥಿಕತೆಯ ಅವಳಿ ಅಸ್ತ್ರಗಳು: ಐಎಂಎಫ್, ವಿಶ್ವಬ್ಯಾಂಕ್‌ನ ಒಳಹೊರಗು

ನ್ಯಾಯಾಂಗದ ಮೇಲಿನ ದಾಳಿಯನ್ನು ಸುಪ್ರೀಂ ಕೋರ್ಟ್ ಅತ್ಯಂತ ಕಟುವಾಗಿ ಮತ್ತು ನಿಷ್ಠುರವಾಗಿ ಖಂಡಿಸಿರುವುದು ಸ್ವಾಗತಾರ್ಹವಾದರೂ, ಇದೇ ವೇಳೆ ಶಿಕ್ಷಣ ತಜ್ಞರು, ವಿರೋಧ ಪಕ್ಷಗಳು ಹಾಗೂ ಕೆಲವು ವಿಮರ್ಶಕರು ಸರ್ಕಾರ ಮತ್ತು ನ್ಯಾಯಾಲಯದ ಮುಂದೆ ಮತ್ತೊಂದು ಗಂಭೀರ ಪ್ರಶ್ನೆಯನ್ನು ಎತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಎನ್‌ಸಿಇಆರ್‌ಟಿ ಪಠ್ಯಕ್ರಮಗಳಲ್ಲಿ ಪಠ್ಯಪುಸ್ತಕಗಳ ಕೇಸರೀಕರಣ ಮಾಡಲಾಗುತ್ತಿದೆ ಮತ್ತು ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ತಿರುಚಲಾಗುತ್ತಿದೆ.

ಇತಿಹಾಸದ ಪ್ರಮುಖ ಘಟ್ಟಗಳ ಕಡಿತ, ನಿರ್ದಿಷ್ಟ ಸಿದ್ಧಾಂತಗಳ ಹೇರಿಕೆ ಸೇರಿದಂತೆ ಹಲವು ವಿಷಯಗಳು ವ್ಯಾಪಕ ಸಾರ್ವಜನಿಕ ಚರ್ಚೆಗೆ ಕಾರಣವಾಗಿವೆ. ಶಿಕ್ಷಣ ವ್ಯವಸ್ಥೆಯಲ್ಲಿನ ಇಂತಹ ಬದಲಾವಣೆಗಳು ಎಳೆಯ ಮನಸ್ಸುಗಳ ಮೇಲೆ ಬೀರುವ ಪ್ರಭಾವದ ಬಗ್ಗೆಯೂ ಸುಪ್ರೀಂ ಕೋರ್ಟ್ ಇಷ್ಟೇ ಕಟುವಾಗಿ, ಬಿಗಿಯಾಗಿ ಮತ್ತು ನಿಷ್ಠುರವಾಗಿ ಪ್ರತಿಕ್ರಿಯಿಸುವುದು ಯಾವಾಗ ಎಂದು ಹಲವು ಪ್ರಜ್ಞಾವಂತರು ಪ್ರಶ್ನಿಸುತ್ತಿದ್ದಾರೆ. ಸಾಂವಿಧಾನಿಕ ಸಂಸ್ಥೆಯಾಗಿ ತನ್ನ ಘನತೆಯನ್ನು ಕಾಪಾಡಿಕೊಳ್ಳುವಲ್ಲಿ ಸುಪ್ರೀಂ ಕೋರ್ಟ್ ತೋರಿದ ಬದ್ಧತೆಯು, ಶಿಕ್ಷಣ ವ್ಯವಸ್ಥೆಯ ಮೂಲ ಸ್ವರೂಪ ಹಾಗೂ ನೈಜ ಇತಿಹಾಸವನ್ನು ಕಾಪಾಡುವ ವಿಷಯದಲ್ಲೂ ಪ್ರತಿಫಲಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ ರಾಜಕೀಯ ಒತ್ತಡ, ಬ್ಲ್ಯಾಕ್‌ಮೇಲ್‌ನ ಆಯುಧವಾಗಬಾರದು

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...