ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ BJP-JDS ಪಟ್ಟು, ಸಾಹುಕಾರ್-ಕನ್ನಾಳೆ ವಿಚಾರದಲ್ಲಿ ಮೌನವೇಕೆ?

Date:

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಸಿಐಡಿ ತನಿಖೆಯಿಂದ ಹೊರಬರುತ್ತಿರುವ ಮಾಹಿತಿಗಳು ಬರಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಂಕಗಳ ಮರುಹಂಚಿಕೆಗೆ ಸೀಮಿತವಾಗಿಲ್ಲ. ಬದಲಿಗೆ, ಸಂವಿಧಾನಾತ್ಮಕ ಸಂಸ್ಥೆಯೊಂದರ ಆಡಳಿತ ಮಂಡಳಿ, ಮಧ್ಯವರ್ತಿಗಳು ಹಾಗೂ ಪ್ರಭಾವಿ ಜಾಲಗಳು ಒಂದಾಗಿ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವುದನ್ನು ತೋರಿಸುತ್ತಿವೆ. ಇದೀಗ, ಈ ನೇಮಕಾತಿಯಲ್ಲಿ 12 ಕೋಟಿ ರೂ.ಗೂ ಹೆಚ್ಚು ಹಣ ಅಕ್ರಮ ಎಂದಿದೆ ಎಂಬ ಮಾಹಿತಿ ಸಿಐಡಿ ಮೂಲಗಳಿಂದ ಬಹಿರಂಗವಾಗಿದೆ.

- Advertisement -

ಆದರೆ, ರಾಜ್ಯದ ರಾಜಕೀಯ ಅಂಗಳದಲ್ಲಿ ಕೆಪಿಎಸ್‌ಸಿ ಹಗರಣಕ್ಕಿಂತ ಮುಖ್ಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಗುರಿಯಾಗಿಸಿಕೊಂಡಿವೆ. ಗ್ರಾಮೀಣಾಭಿವೃದ್ಧಿ ಇಲಾಖೆಯಡಿ 24 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE Grade-I) ಹುದ್ದೆಗಳ ನೇಮಕಾತಿಯಲ್ಲಿ OMR ಶೀಟ್ ತಿದ್ದುಪಡಿ, CCTV ದೃಶ್ಯಗಳ ಕೊರತೆ ಮತ್ತು ನಿಯಮ ಉಲ್ಲಂಘನೆಗಳ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ-ಜೆಡಿಎಸ್‌ ಆಗ್ರಹಿಸುತ್ತಿವೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರೂ ಪ್ರಿಯಾಂಕ್‌ ಖರ್ಗೆ ಅವರನ್ನೇ ಗುರಿಯಾಗಿಸಿಕೊಂಡು ಆರೋಪ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಎಇಇ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೆ, ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಗಳ ತನಿಖೆ ನಡೆಯಲೇಬೇಕು, ಪ್ರಿಯಾಂಕ್ ಖರ್ಗೆ ಅವರ ಹೊಣೆಗಾರಿಕೆ ಇದ್ದರೆ, ಅವರು ರಾಜೀನಾಮೆಯನ್ನೂ ನೀಡಬೇಕು. ಆದರೆ, ಮುಖ್ಯವಾಗಿ ವಿಪಕ್ಷಗಳ ಸ್ಥಾನದಲ್ಲಿರುವ ಬಿಜೆಪಿ-ಜೆಡಿಎಸ್‌ ಕೇವಲ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಪಾದಿಕ ಅಕ್ರಮದ ಬಗ್ಗೆ ಮಾತ್ರವೇ ಮಾತನಾಡುತ್ತಿದ್ದು, ಕೆಪಿಎಸ್‌ಸಿ ಹಗರಣದ ಕುರಿತು ನಿರುಮ್ಮಳ ಮೌನಕ್ಕೆ ಜಾರಿವೆ. ಈ ಮೌನವೇ ಸದ್ಯದ ರಾಜಕೀಯ ಪಡಸಾಲೆಯಲ್ಲಿ ಬಿಜೆಪಿ-ಜೆಡಿಎಸ್‌ಅನ್ನು ಅನುಮಾನಿಸುವಂತೆ ಮಾಡಿವೆ. ಅದಕ್ಕೆ, ಹಲವು ಕಾರಣಗಳೂ ಇವೆ.

ಕೆಪಿಎಸ್‌ಸಿ ಹಗರಣ ಮತ್ತು ಬಿಜೆಪಿ ನಂಟು

ಅಂದಹಾಗೆ, 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲು 2026ರ ಜನವರಿ 8 ಮತ್ತು 9ರಂದು ಕೆಪಿಎಸ್‌ಸಿ ಪರೀಕ್ಷೆ ನಡೆಸಿತು. ಈ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಹಾಗೂ ಅಂತಿಮ ಆಯ್ಕೆಪಟ್ಟಿಗೆ ಅಭ್ಯರ್ಥಿಗಳನ್ನು ಹಣ ಪಡೆದು ಆಯ್ಕೆ ಮಾಡಲಾಗಿದೆ ಎಂಬ ಆರೋಪಗಳು ಭುಗಿಲೆದ್ದವು. ಈ ಬಳಿಕ, ಇದೇ ವರ್ಷದ ಜುಲೈ ಕೊನೆಯ ವಾರದಲ್ಲಿ ಎಫ್‌ಐಆರ್ ದಾಖಲಿಸಿ, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಜುಲೈ 28ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು.

ಗಮನಾರ್ಹ ವಿಚಾರವೆಂದರೆ, ಕಾಂಗ್ರೆಸ್‌ ಸರ್ಕಾರದ ಅಡಳಿತಾವಧಿಯಲ್ಲಿ ನಡೆದಿರುವ ಈ ಅಕ್ರಮದ ಬಗ್ಗೆ ಬಿಜೆಪಿಯಾಗಲೀ, ಅದರ ಮಿತ್ರಪಕ್ಷ ಜೆಡಿಎಸ್‌ ಆಗಲೀ ಮಾತನಾಡುತ್ತಿಲ್ಲ. ಆಡಳಿತ ಪಕ್ಷ ಅಥವಾ ಸರ್ಕಾರದಿಂದ ರಾಜೀನಾಮೆ ಕೇಳುವುದಿರಲಿ, ಹೊಣೆಗಾರಿಕೆಯನ್ನೂ ಕೇಳುತ್ತಿಲ್ಲ. ಯಾಕೆಂದರೆ, ಈ ಅಕ್ರಮದ ಬೇರುಗಳು ನೇರವಾಗಿ ಬಿಜೆಪಿ ಬುಡಕ್ಕೆ ಬೆಸೆದುಕೊಂಡಿವೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿನ ಕೆಪಿಎಸ್‌ಸಿ ಅಕ್ರಮದ ಪ್ರಮುಖ ಆರೋಪಿ, ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್. ಇವರ ವಿರುದ್ಧ ಸಿಐಡಿ ಪ್ರಕರಣ ದಾಖಲಿಸಿದೆ. ಅವರನ್ನು ಅಧ್ಯಕ್ಷ ಸ್ಥಾನದಿಂದಲೂ ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ಬಂಧನದಿಂದ ವಿನಾಯತಿ ಕೋರಿ ಶಿವಶಂಕರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಯಾವುದೇ ಸಂದರ್ಭದಲ್ಲಾದರೂ ಶಿವಶಂಕರಪ್ಪ ಬಂಧನವಾಗುವ ಸಾಧ್ಯತೆಗಳಿವೆ.

ಅಂದಹಾಗೆ, ಈ ಶಿವಶಂಕರಪ್ಪ ಸಾಹುಕಾರ್ ಅವರು ಕೆಪಿಎಸ್‌ಸಿಗೆ ಸದಸ್ಯರಾಗಿ ಆಯ್ಕೆಯಾದ್ದದ್ದು, 2019ರ ಸೆಪ್ಟೆಂಬರ್ 3ರಂದು, ಆಗ ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ತದನಂತರ, 2021ರ ಏಪ್ರಿಲ್‌ನಲ್ಲಿ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಬಡ್ತಿ ನೀಡಲಾಯಿತು. ಆಗಲೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೇ ಆಡಳಿತ ನಡೆಸುತ್ತಿತ್ತು.

ಬಿಜೆಪಿ ಸರ್ಕಾರವೇ ನೇಮಿಸಿರುವ ಶಿವಶಂಕರಪ್ಪ ಅವರೇ ಅಕ್ರಮದ ರುವಾರಿಯಾಗಿರುವುದರಿಂದ ಕೆಪಿಎಸ್‌ಸಿ ಅಕ್ರಮದ ಬಗ್ಗೆ ಬಿಜೆಪಿ ಮಾತನಾಡಲು ಹಿಂದೇಟು ಹಾಕುತ್ತಿದೆ ಎಂಬ ಗುಮಾನಿಗಳಿವೆ.

ಸಿಐಡಿ ತನಿಖೆ ಮತ್ತು ಹೈಕೋರ್ಟ್‌ನ ಗಂಭೀರ ಅವಲೋಕನ

ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ನಾನಾ ರೀತಿಯ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಇತ್ತೀಚೆಗೆ ಬಹಿರಂಗಗೊಂಡಿರುವ ತನಿಖಾ ಮಾಹಿತಿಯ ಪ್ರಕಾರ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಒಂದು ಹುದ್ದೆಗೆ 40 ಲಕ್ಷದಿಂದ 80 ಲಕ್ಷ ರೂಪಾಯಿಯವರೆಗೆ ಬೃಹತ್ ಡೀಲ್ ನಡೆದಿದೆ, ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ರಹಸ್ಯ ಸ್ಥಳಗಳಲ್ಲಿ ಪ್ರಶ್ನೆಪತ್ರಿಕೆ ಲಭ್ಯವಾಗುವಂತೆ ಮಾಡಲಾಗಿತ್ತು, ಪರೀಕ್ಷೆಯಲ್ಲಿ ಅಕ್ರಮ ಎಸಗಲು ತರಬೇತಿಯನ್ನೂ ನೀಡಲಾಗಿತ್ತು ಎಂಬ ಗಂಭೀರ ಆರೋಪಗಳು ಹೊರಬಂದಿವೆ.

 ಅಲ್ಲದೆ, ಪ್ರಮುಖ ಆರೋಪಿ ಶಿವಶಂಕರಪ್ಪ ಸಾಹುಕಾರ್, ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಹಾಗೂ ಮಧ್ಯವರ್ತಿಗಳ ನಡುವೆ ಪರೀಕ್ಷೆಯ ಸಂದರ್ಭದಲ್ಲಿ ನಡೆದ ಸಂಪರ್ಕ ಜಾಲಕ್ಕೆ ಸಂಬಂಧಿಸಿದ IPDR ದಾಖಲೆಗಳನ್ನು ಸಿಐಡಿ ಪತ್ತೆಹಚ್ಚಿದೆ.

ಮಧ್ಯವರ್ತಿ ಕನ್ನಾಳೆ ಮತ್ತು ಬಿಜೆಪಿ ನಂಟು

ಶಿವಶಂಕರಪ್ಪ ಅಲ್ಲದೆ, ಈ ಇಡೀ ಅಕ್ರಮ ಜಾಲದ ಪ್ರಮುಖ ಕೊಂಡಿಯಾಗಿದ್ದದ್ದು ಉದ್ಯಮಿ ಬಸವರಾಜ ಕನ್ನಾಳೆ ಎಂದು ಹೇಳಲಾಗಿದೆ. ಈತನ ವಿರುದ್ಧವೂ ಸಿಐಡಿ ತೀವ್ರ ತನಿಖೆ ನಡೆಸುತ್ತಿದೆ. ಆದರೂ, ಕನ್ನಾಳೆ ವಿಚಾರದಲ್ಲಿ ರಾಜಕೀಯ ಪಕ್ಷಗಳು ಮೌನವಾಗಿವೆ. ಈ ಮೌನದ ಸುತ್ತ, ‘ಕನ್ನಾಳೆಗೂ-ಬಿಜೆಪಿಗೂ ನಿಕಟ ಸಂಬಂಧವಿತ್ತು. ಕನ್ನಾಳೆ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯ-ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು’ ಎಂಬ ಗಂಭೀರ ವಿಚಾರಗಳು ಚರ್ಚೆಗೆ ಬಂದಿವೆ. ಅದಕ್ಕೆ ಪುರಾವೆ ಎಂಬಂತೆ ಬಿಜೆಪಿ ನಾಯಕರ ಜೊತೆಗಿನ ಕನ್ನಾಳೆಯವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಈ ಲೇಖನ ಓದಿದ್ದೀರಾ?: ಜೆಡಿಎಸ್‌ನಿಂದ ಜಿಟಿಡಿ ದೂರ ದೂರ; ಕಾಂಗ್ರೆಸ್‌ನಲ್ಲಿ ಹೊಸ ನೆಲೆ ಹುಡುಕಾಟವೇ?

ಸಾಹುಕಾರ್ ನೇಮಕಾತಿಯ ಹಿನ್ನೆಲೆ ಮತ್ತು ಕನ್ನಾಳೆ ಜೊತೆಗಿನ ಬಿಜೆಪಿ ಸಂಪರ್ಕಗಳಪಕ್ಷದ ಸಂಪರ್ಕಗಳ ಕಾರಣದಿಂದಾಗಿ, ಕೆಪಿಎಸ್‌ಸಿ ಹಗರಣದ ಕುರಿತು ಬಿಜೆಪಿ ಮತ್ತು ಅದರ ದೋಸ್ತಿಪಕ್ಷ ಜೆಡಿಎಸ್‌ ಅರ್ಥಾಥ್ ಕುಮಾರಸ್ವಾಮಿ ಮಾತನಾಡುತ್ತಿಲ್ಲ ಎಂಬ ಗುಸುಗುಸು ರಾಜಕೀಯ ವಲಯದಲ್ಲಿದೆ.

ಸಚಿವ ಖರ್ಗೆ ಮೇಲಿನ ಆರೋಪ ಮತ್ತು ಸರಕಾರದ ಹೊಣೆ

ಕೆಪಿಎಸ್‌ಸಿ ಅಕ್ರಮದ ವಿಚಾರದಲ್ಲಿ ಮೌನವಾಗಿರುವ ಬಿಜೆಪಿ-ಜೆಡಿಎಸ್‌, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಲೋಕೋಪಯೋಗಿ ಇಲಾಖೆಯ ಸಚಿವರಾಗಿದ್ದ ಸಮಯದಲ್ಲಿ ನಡೆದಿದ್ದ AEE Grade-I ನೇಮಕಾತಿಯಲ್ಲಿ ಒಎಂಆರ್‌ ಪತ್ರಿಕೆಗಳ ತಿದ್ದುಪಡಿ ಸೇರಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು, ಇಲಾಖೆಯ ಅಂದಿನ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಉತ್ತರ ನೀಡಬೇಕು, ನೈತಿಕ ಹೊಣೆಗಾರಿಕೆ ಹೊರಬೇಕು, ರಾಜೀನಾಮೆ ನೀಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ವಿಪಕ್ಷ ನಾಯಕರು ಆಗ್ರಹಿಸುತ್ತಿದ್ದಾರೆ.

ಸದ್ಯದ ರಾಜಕೀಯ ವಿದ್ಯಮಾನಗಳಲ್ಲಿ, ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ನೋಂದಣಿ, ದೇಣಿಗೆಗಳ ಮೂಲ, ನಿಲುವು, ಸಿದ್ಧಾಂತಗಳ ಕುರಿತು ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ. ಸಂಘಪರಿವಾರದ ಹಿಡನ್ ಅಜೆಂಡಾಗಳನ್ನು ಬಟಾಬಯಲು ಮಾಡುತ್ತಿದ್ದಾರೆ. ಆದ್ದರಿಂದ, ಖರ್ಗೆ ಅವರನ್ನು ಹಣಿಯಲು ಮೋದಿ-ಶಾ ಜೋಡಿಯು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮತ್ತು ಕುಮಾರಸ್ವಾಮಿ ಅವರನ್ನು ಮುಂದೆ ಬಿಟ್ಟಿದೆ ಎಂದೂ ಹೇಳಲಾಗುತ್ತಿದೆ.

ಅದೇನೇ ಇರಲಿ, ಎಇಇ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೆ ಅದಕ್ಕೆ ಪ್ರಿಯಾಂಕ್ ಖರ್ಗೆ ಅವರು ಉತ್ತರದಾಯಿ ಆಗಿರಬೇಕು, ಉತ್ತರ ನೀಡಬೇಕು. ಅದೇ ಸಮಯದಲ್ಲಿ, ಕೆಪಿಎಸ್‌ಸಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ ಮೌನವನ್ನೂ ಪ್ರಶ್ನಿಸುವುದೂ ಅತ್ಯಗತ್ಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವೆ ಮೊದಲು, ಪರಿಶೀಲನೆ ಆಮೇಲೆ: ಫಲಾನುಭವಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರದ ಹೊಸ ಆದೇಶ

ರಾಜ್ಯ ಸರ್ಕಾರವು ನಾಗರಿಕರಿಗೆ ಮುಂಚಿತವಾಗಿ ಅರ್ಹತೆಯ ಪರಿಶೀಲನೆಯಿಲ್ಲದೆ ಸೇವೆಗಳು ಮತ್ತು ಯೋಜನೆಯ...

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಒಬ್ಬ ಮಹಿಳೆ ತನ್ನನ್ನು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಬದುಕನ್ನೇ ನಾಶಮಾಡುವ ಹಕ್ಕು...

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...