2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯನ್ನು ಮೋದಿ ಸರ್ಕಾರ ಜಾರಿ ಮಾಡಬಹುದಲ್ಲವೇ?

Date:

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನಿಡುವ 2023ರ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಅಧಿನಿಯಮ) ಹೊಸದೇನಲ್ಲ. 128ನೇ ಸಂವಿಧಾನ ತಿದ್ದುಪಡಿ ಮಸೂದೆಯಾದ ಮಹಿಳಾ ಮೀಸಲಾತಿ ಮಸೂದೆ 2023ರ ಸೆಪ್ಟೆಂಬರ್‌ನಲ್ಲೇ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು.

ಮಹಿಳಾ ಮೀಸಲಾತಿ ಮಸೂದೆ – ಸದ್ಯ ಅತಿ ಹೆಚ್ಚು ಚರ್ಚೆಯಾಗುತ್ತಿರುವ, ಮೋದಿ ಸರ್ಕಾರ ತನ್ನ ಕುತಂತ್ರ ಬಳಸಿ ವಿಪಕ್ಷಗಳನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಬಳಸಿಕೊಂಡ ಮಸೂದೆ. ಜನಸಂಖ್ಯೆಯ ಆಧಾರದಲ್ಲಿ ನಡೆಯುವ ಕ್ಷೇತ್ರ ಮರುವಿಂಗಡಣೆಗೆ ವಿರೋಧವಿರುವಾಗ ಅದರೊಂದಿಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಜೋಡಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆಡಿದ ಆಟ ಸದ್ಯ ಫಲಿಸಿದಂತಿದೆ. ಇವೆಲ್ಲವುದರ ನಡುವೆ ಕೇಂದ್ರ ಸರ್ಕಾರವನ್ನು ನಾವು ಕೇಳಬೇಕಾದ ಪ್ರಶ್ನೆಯೊಂದಿದೆ. 2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯನ್ನೇ ಮೋದಿ ಸರ್ಕಾರ ಜಾರಿ ಮಾಡಬಹುದಲ್ಲವೇ?

- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನಿಡುವ 2023ರ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಅಧಿನಿಯಮ) ಹೊಸದೇನಲ್ಲ. 128ನೇ ಸಂವಿಧಾನ ತಿದ್ದುಪಡಿ ಮಸೂದೆಯಾದ ಮಹಿಳಾ ಮೀಸಲಾತಿ ಮಸೂದೆ 2023ರ ಸೆಪ್ಟೆಂಬರ್‌ನಲ್ಲೇ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು. ಆದರೆ ಜಾರಿಯ ವಿಷಯ ಬಂದಾಗ ಮತ್ತೆ ಕೇಂದ್ರ ಸರ್ಕಾರ ಮೀನಾಮೇಷ ಎನಿಸಲು ಶುರು ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಮೀಸಲಾತಿ ಮರೆಯಲ್ಲಿ ಮೋದಿ ಸರ್ಕಾರದ ಮಸಲತ್ತು!

ಅಂಗೀಕಾರಗೊಂಡಿರುವ ಕಾಯ್ದೆಯನ್ನು ಜಾರಿಗೊಳಿಸಲು ವಿಳಂಬ ಮಾಡುವುದನ್ನು ವಿಪಕ್ಷಗಳು ಪ್ರಶ್ನಿಸಿದಾಗ ಮೋದಿ ಸರ್ಕಾರ ಮುಂದಿಟ್ಟಿದ್ದು ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ. ಅಷ್ಟಕ್ಕೂ ಅನೇಕ ಸಾಂವಿಧಾನಿಕ ತಜ್ಞರ ಪ್ರಕಾರ, ಈಗಿರುವ ಕ್ಷೇತ್ರಗಳಲ್ಲೇ 33% ಮೀಸಲಾತಿಯನ್ನು ತಕ್ಷಣವೇ ಜಾರಿ ಮಾಡಲು ತಾಂತ್ರಿಕವಾಗಿ ಸಾಧ್ಯವಿತ್ತು. ಆದರೆ, ಸರ್ಕಾರವು ಕ್ಷೇತ್ರ ಮರುವಿಂಗಡಣೆ ಎಂಬ ಸುದೀರ್ಘ ಪ್ರಕ್ರಿಯೆಯನ್ನು ಆರಿಸಿಕೊಂಡಿರುವುದು ಈ ಮಹಿಳಾ ಮೀಸಲಾತಿಯ ನಿಜವಾದ ಉದ್ದೇಶವೇನು ಎಂಬುದನ್ನು ಪ್ರಶ್ನಿಸುವಂತೆ ಮಾಡಿತ್ತು. 2023ರ ಮೂಲ ಕಾಯ್ದೆಯು ಹೊಸ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ನಂತರವೇ ಜಾರಿಗೆ ಬರಬೇಕೆಂದು ಹೇಳಿತ್ತು. ಆದರೆ 2026ರಲ್ಲಿ ಪ್ರಧಾನಿ ನರೇಂದ್ರ ಮೋದಿ ಒಂದೇ ಕಲ್ಲಿನಲ್ಲಿ ಹಲವಾರು ಹಕ್ಕಿಗಳನ್ನು ಹೊಡೆಯುವ ತಂತ್ರಗಾರಿಕೆಯನ್ನು ಹೆಣೆಯಿತು.

ಒಂದೆಡೆ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಲಾಭ ಪಡೆಯುವ ತಂತ್ರ. ಇನ್ನೊಂದೆಡೆ ವಿಪಕ್ಷಗಳನ್ನು ಮಹಿಳಾ ವಿರೋಧಿಗಳನ್ನಾಗಿ ಬಿಂಬಿಸುವ ಕುತಂತ್ರ. ನಡುವೆ ಕ್ಷೇತ್ರ ಮರುವಿಂಗಡಣೆಯನ್ನೂ ಸಾಧ್ಯವಾದರೆ ಪರೋಕ್ಷವಾಗಿ ಅಂಗೀಕರಿಸುವ ಎಂದುಕೊಂಡಿತ್ತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆಗೆ 2026ರಲ್ಲಿ ಕೇಂದ್ರ ತಿದ್ದುಪಡಿ ತಂದು ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿತು. ಇದರಿಂದಾಗಿ ಸಂವಿಧಾನದ (131ನೇ ತಿದ್ದುಪಡಿ) ಮಸೂದೆ, 2026 ವಿಪಕ್ಷಗಳ ವಿರೋಧಕ್ಕೆ ಸಿಲುಕಿತು. ಅಗತ್ಯವಿದ್ದ ಮೂರನೇ ಎರಡರಷ್ಟು ಬಹುಮತ ಪಡೆಯಲು ವಿಫಲವಾಗಿ ಸೋಲನ್ನು ಅನುಭವಿಸಿತು. ಮಸೂದೆಯ ಪರವಾಗಿ 298 ಮತಗಳು ಬಂದರೆ, ವಿರುದ್ಧವಾಗಿ 230 ಮತಗಳು ಬಿದ್ದವು.

2023ರ ಮೂಲ ಮಹಿಳಾ ಮೀಸಲಾತಿ ಕಾಯ್ದೆಯು ಹೊಸ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ನಂತರವೇ ಜಾರಿಗೆ ಬರಬೇಕೆಂದು ಹೇಳಿತ್ತು. ಆದರೆ 2026ರ ಹೊಸ ಮಸೂದೆಯು ಈ ಷರತ್ತನ್ನು ತೆಗೆದುಹಾಕಿ, 2011ರ ಜನಗಣತಿ ಆಧಾರಿತ ಕ್ಷೇತ್ರ ಮರುವಿಂಗಡಣೆಯ ಮೂಲಕ 2029ರ ಚುನಾವಣೆಯಲ್ಲೇ ಮೀಸಲಾತಿಯನ್ನು ಜಾರಿಗೆ ತರುವ ಗುರಿ ಹೊಂದಿತ್ತು.

ಇದನ್ನು ಓದಿದ್ದೀರಾ? ಮಹಿಳಾ ಮೀಸಲಾತಿ | ಮುಸ್ಲಿಂ ಮಹಿಳೆಯರಿಗೆ ಒಳಮೀಸಲಾತಿ ನೀಡುವುದರಲ್ಲಿ ತಪ್ಪೇನಿದೆ?

ಈಗಾಗಲೇ 2011ರ ಅಥವಾ ಮುಂದಿನ ಜನಗಣತಿ ಆಧಾರಿತ ಕ್ಷೇತ್ರ ಮರುವಿಂಗಡಣೆಗೆ ಪ್ರಕ್ರಿಯೆಗೆ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಜನಸಂಖ್ಯೆ ಅಧಿಕವಾದ ಜನಸಂಖ್ಯಾ ನಿಯಂತ್ರಣವನ್ನು ಮಾಡುವಲ್ಲಿ ಯಶಸ್ವಿಯಾಗಿದ್ದು ದಕ್ಷಿಣ ಭಾರತದ ರಾಜ್ಯಗಳು. ಹಾಗಿರುವಾಗ 2011ರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಿದರೆ ಜನಸಂಖ್ಯಾ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೆ ತಂದ ಕರ್ನಾಟಕ, ತಮಿಳುನಾಡು, ಕೇರಳದಂತಹ ದಕ್ಷಿಣ ರಾಜ್ಯಗಳು ಲೋಕಸಭೆಯಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿ ಇದೆ.

ಉತ್ತರ ಭಾರತದ ರಾಜ್ಯಗಳ ಜನಸಂಖ್ಯೆ ವೇಗವಾಗಿ ಬೆಳೆಯುತ್ತಿರುವುದರಿಂದ, ಮರುವಿಂಗಡಣೆಯ ನಂತರ ಲೋಕಸಭೆಯಲ್ಲಿ ಉತ್ತರ ಭಾರತದ ಪ್ರಾಬಲ್ಯ ಹೆಚ್ಚಾಗಿ, ದಕ್ಷಿಣದ ರಾಜ್ಯಗಳ ಧ್ವನಿ ಕ್ಷೀಣಿಸಬಹುದು ಎಂಬ ಆತಂಕವಿದೆ. ಈ ಆತಂಕಗಳ ನಡುವೆ ಮೋದಿ ಸರ್ಕಾರವು ವಿಪಕ್ಷಗಳನ್ನು ಮಹಿಳಾ ವಿರೋಧಿಗಳನ್ನಾಗಿ ಬಿಂಬಿಸುವ ತಂತ್ರಗಾರಿಕೆ ರಚಿಸಿತು. 2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯನ್ನು ವಿಪಕ್ಷಗಳು ವಿರೋಧಿಸುತ್ತಿರುವ ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿತು. ಅಂದರೆ ತಿದ್ದುಪಡಿಯಾದ ಸಂವಿಧಾನದ (131ನೇ ತಿದ್ದುಪಡಿ) ಮಸೂದೆ, 2026 ಅಂಗೀಕಾರಗೊಳಿಸಿದರೆ 2011ರ ಜನಗಣತಿ ಆಧಾರಿತ ಕ್ಷೇತ್ರ ಮರುವಿಂಗಡಣೆಯನ್ನು ಒಪ್ಪಿದಂತಾಗುತ್ತದೆ. ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಿಪಕ್ಷಗಳು ಮಸೂದೆ ವಿರುದ್ಧ ಮತ ಹಾಕಿತು. ಇದೀಗ ವಿಪಕ್ಷಗಳ ವಿರುದ್ಧ ಬಿಜೆಪಿ ಸರ್ಕಾರ ಹೌಹಾರುತ್ತಿದೆ.

ಇದೀಗ 2023ರ ಮಹಿಳಾ ಮೀಸಲಾತಿ ಮಸೂದೆಯನ್ನು (ನಾರಿ ಶಕ್ತಿ ವಂದನಾ ಅಧಿನಿಯಮ) ತಕ್ಷಣವೇ ಜಾರಿಗೆ ತರಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದೆ. ಕೇಂದ್ರ ಸರ್ಕಾರವು ನಿಜವಾಗಿಯೂ ಮಹಿಳಾಪರವಾಗಿದ್ದರೆ 2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಬಹುದಲ್ಲವೇ? ಆದರೆ ಮಾಡುತ್ತಿರುವುದೇನು? ಇದು ಸ್ಪಷ್ಟವಾಗಿ 2029ರ ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ/ ಮೋದಿ ಸರ್ಕಾರ ಈಗಲೇ ಹೆಣೆಯುತ್ತಿರುವ ತಂತ್ರವಲ್ಲವೇ?.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು ಸರಿಯೇ?

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...

ಮಾಮಾ Vs ಚಾಚಾ: ಬಿಜೆಪಿ ಬಿರುಕನ್ನು ಬಯಲು ಮಾಡಿದ ಮಧ್ಯಪ್ರದೇಶ ಆದಿವಾಸಿ ಪ್ರತಿಭಟನೆ

ಈ ವಿವಾದವು ಕೇವಲ ಒಂದು ಅರಣ್ಯ ಭೂಮಿ ತೆರವು ಪ್ರಕರಣವಾಗಿ ಉಳಿದಿಲ್ಲ....