ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ ಗಟ್ಟಿಗಿತ್ತಿ ಪ್ರಿಯಾಂಕಾ!

Date:

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು ಹೋರಾಟಕ್ಕೆ ಸಂಪೂರ್ಣ ಸಾಥ್‌ ನೀಡಿದ್ದಾರೆ. ಈ ಬೃಹತ್ ಪ್ರತಿಭಟನೆಯ ವೇಳೆ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ದಿಟ್ಟತನದ ಹೋರಾಟ, ಸಹೋದರನ ಹೆಗಲಿಗೆ ಹೆಗಲು ಕೊಟ್ಟು ಪ್ರಜಾಪ್ರಭುತ್ವದ ರಕ್ಷಣೆಗೆ ಸೆಣಸಾಡುತ್ತಿರುವ ಪರಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

- Advertisement -

ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ನಿಗದಿತವಾಗಿದ್ದ ಈ ಮೆರವಣಿಗೆಯನ್ನು ತಡೆಯಲು ದೆಹಲಿ ಪೊಲೀಸರು ನೀತಿ ಆಯೋಗದ ಬಳಿ ಬೃಹತ್ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಭಾರೀ ಭದ್ರತೆ ಮತ್ತು ರಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಯನ್ನು ನಿಯೋಜಿಸಿದ್ದರು. “ವೋಟ್ ಚೋರ್, ಗದ್ದಿ ಛೋಡ್” ಘೋಷಣೆಗಳನ್ನು ಕೂಗುತ್ತಾ ಬಂದ ವಿಪಕ್ಷ ನಾಯಕರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭಾರಿ ಗಾತ್ರದ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಹತ್ತಿ ತ್ರಿವರ್ಣ ಧ್ವಜವನ್ನು ಹಾರಿಸಿ ಮುಂದೆ ಸಾಗಲು ಯತ್ನಿಸಿದರು. ಈ ಹಂತದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ಅಖಿಲೇಶ್ ಯಾದವ್, ಅಭಿಷೇಕ್ ಬ್ಯಾನರ್ಜಿ, ಡಿಎಸ್ ಒಬ್ರಿಯನ್ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಮುಖ ನಾಯಕರು ಪೊಲೀಸರ ವಶಕ್ಕೆ ಒಳಪಟ್ಟರು. ಮೋಶಾ ಜೋಡಿ ಕಟ್ಟಿದ ಪೊಲೀಸ್ ಗೋಡೆ ಕೆಡವಿ ಜ‌ನತೆಯನ್ನು ಮುಟ್ಟಿದರು ರಾಹುಲ್ ಗಾಂಧಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಜಂತರ್‌ ಮಂತರ್‌ ಸಮೀಪವೇ ಇದ್ದ ಆಕಾಶವಾಣಿ ಭವನದ ಕಡೆ ಲಗ್ಗೆ ಇಟ್ಟರು. ಭವನದ ಒಳ ಹೋಗಲು ಬಿಡದಂತೆ ದೆಹಲಿ ಪೊಲೀಸರು ತಡೆದರು. ಪ್ರತಿಭಟನಾಕಾರರು, ಪೊಲೀಸರ ನಡುವೆ ಭಾರೀ ತಳ್ಳಾಟ, ನೂಕಾಟ ಆರಂಭವಾಯಿತು. ಪರಿಸ್ಥಿತಿಯ ಗಂಭೀರತೆ ಅರಿತ ಪ್ರಿಯಾಂಕಾ, ನೇರವಾಗಿ ಆಕಾಶವಾಣಿ ಭವನದ ಗೇಟ್ ಕಡೆಗೆ ದೌಡಾಯಿಸಿದರು. ಪೊಲೀಸರ ತಡೆಗೋಡೆಗಳನ್ನು ಲೆಕ್ಕಿಸದೆ ಗೇಟ್ ಹತ್ತಿ, ಅದರ ಚಿಲಕ ತೆಗೆದು ರಾಹುಲ್‌ ಗಾಂಧಿ ಒಳಹೋಗಲು ಅನುವು ಮಾಡಿಕೊಟ್ಟರು. ಈ ಇಡೀ ಪ್ರಹಸನ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತು. ಇಂದೂ ಕೂಡ ಪ್ರತಿಭಟನೆ ಮುಂದುವರೆದಿದೆ. ಸದ್ಯ ವೈರಲ್‌ ಆಗುತ್ತಿರುವ ಹೋರಾಟದ ವಿಡಿಯೋಗಳಲ್ಲಿ ಇದು ಪ್ರಮುಖವಾದುದು.

ಪ್ರತಿಭಟನೆ ಅಲ್ಲಿಗೆ ಮುಗಿಯಲಿಲ್ಲ. ಬಂಧಿಸಿ ಬಸ್‌ಗಳಲ್ಲಿ ಕೂರಿಸಲಾಗಿದ್ದ ವಿಪಕ್ಷ ನಾಯಕರು ಕೆಳಗಿಳಿದು, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಕಾಶವಾಣಿ ಭವನದ ಒಳಗೆ ನುಗ್ಗಿದರು. ಭದ್ರತಾ ಪಡೆಗಳು ತಡೆಯಲು ಯತ್ನಿಸಿದರೂ, ತೀವ್ರ ವಾಗ್ವಾದದ ನಡುವೆಯೂ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭವನದ ಒಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾದರು. ನಂತರ ಕೆ.ಸಿ. ವೇಣುಗೋಪಾಲ್ ಮತ್ತು ಪವನ್ ಖೇರಾ ಸೇರಿದಂತೆ ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ಇತರ ನಾಯಕರು ಸಹ ಒಳಗೆ ಪ್ರವೇಶಿಸಿ, ಅಲ್ಲಿ ದಿನವಿಡೀ ಅಂದರೆ ಸುಮಾರು ಒಂಬತ್ತು ಗಂಟೆಗಳ ಕಾಲ ಸುದೀರ್ಘ ಧರಣಿ ಆರಂಭಿಸಿದರು. ಈ ಸುದೀರ್ಘ ಅವಧಿಯುದ್ದಕ್ಕೂ ರಾಹುಲ್‌ ಜೊತೆಯಾಗಿಯೇ ಇದ್ದರು ಪ್ರಿಯಾಂಕ.

2019ರಲ್ಲಿ ಉತ್ತರ ಪ್ರದೇಶದ ಸೋನ್‌ಭದ್ರದಲ್ಲಿ ಹತ್ಯೆಗೊಳಗಾದ ಆದಿವಾಸಿ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದರು. ಪೊಲೀಸರ ಅಡೆತಡೆಗಳನ್ನು ಲೆಕ್ಕಿಸದೆ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ್ದರು. ಸಂತ್ರಸ್ತರ ಮನೆ ಬಾಗಿಲಿಗೆ ಹೋಗುವವರೆಗೆ ಛಲ ಬಿಡದೇ ಇದ್ದದ್ದು ದೇಶದ ಗಮನ ಸೆಳೆದಿತ್ತು.

2021ರಲ್ಲಿ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಲಖಿಮಪುರ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಘಟನೆ ಬಳಿಕ ಸಂತ್ರಸ್ತ ರೈತರ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಪ್ರಿಯಾಂಕಾ ಅವರನ್ನು ಸೀತಾಪುರದಲ್ಲಿ ಪೊಲೀಸರು ಅಕ್ಟೋಬರ್ 4ರ ಮುಂಜಾನೆ ವಶಕ್ಕೆ ಪಡೆದಿದ್ದರು. ನಂತರ ಅವರನ್ನು PAC ಅತಿಥಿಗೃಹದಲ್ಲಿ ಇರಿಸಲಾಗಿತ್ತು. ಅಲ್ಲಿ ತಮ್ಮ ಕೊಠಡಿಯನ್ನು ಸ್ವತಃ ಪೊರಕೆಯಿಂದ ಗುಡಿಸಿದ ದೃಶ್ಯಗಳು ವ್ಯಾಪಕವಾಗಿ ಸುದ್ದಿಯಾಗಿದ್ದವು. ಬಂಧನದ ವೇಳೆ ಅವರು ಉಪವಾಸ ಧರಣಿ ನಡೆಸಿದ್ದು, ಬಳಿಕ ಲಖನೌನಲ್ಲಿ ಮೌನ ವ್ರತ ನಡೆಸಿ ಸಂತ್ರಸ್ತ ರೈತರಿಗೆ ನ್ಯಾಯ ಹಾಗೂ ಅಂದಿನ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ವಜಾಗೆ ಆಗ್ರಹಿಸಿದ್ದರು.

ದೇಶಾದ್ಯಂತ ಸಿಎಎ ವಿರುದ್ಧ ವಿದ್ಯಾರ್ಥಿಗಳು ಹಾಗೂ ನಾಗರೀಕರು ಧ್ವನಿಯೆತ್ತಿದಾಗ, ದೆಹಲಿಯ ಇಂಡಿಯಾ ಗೇಟ್ ಹಾಗೂ ವಿವಿಧ ಪೊಲೀಸ್ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗಳ ಮನೆಗಳಿಗೆ ಖುದ್ದು ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳುವುದರ ಜೊತೆಗೆ, ಸರ್ಕಾರದ ದಬ್ಬಾಳಿಕೆ ನೀತಿಯನ್ನು ಬೀದಿಗಿಳಿದು ಪ್ರಶ್ನಿಸಿದ ಧೈರ್ಯಶಾಲಿ ನಾಯಕಿಯಾಗಿ ಪ್ರಿಯಾಂಕಾ ಗುರುತಿಸಿಕೊಂಡರು.

ಇದನ್ನೂ ಓದಿ: ಮೋಶಾ ಕಟ್ಟಿದ ಪೊಲೀಸ್ ಗೋಡೆ ಕೆಡವಿದ ರಾಹುಲ್ ಗಾಂಧಿ, ಪ್ರತಿಭಟನೆಯನ್ನು ಜೀವಂತವಿರಿಸಿದ್ದು ಹೀಗೆ..

ಉತ್ತರ ಪ್ರದೇಶದ ಹತ್ರಾಸ್ ಹಾಗೂ ಉನ್ನಾವೋದಲ್ಲಿ ದಲಿತ ಯುವತಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಬರ್ಬರ ಹತ್ಯೆಯ ಪ್ರಕರಣಗಳು ದೇಶಾದ್ಯಂತ ಆಕ್ರೋಶ ಹುಟ್ಟುಹಾಕಿದ್ದವು. ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ರಾತ್ರೋರಾತ್ರಿ ಕಾರು ಡ್ರೈವ್ ಮಾಡಿಕೊಂಡು ಹತ್ರಾಸ್‌ಗೆ ಹೊರಟಿದ್ದ ಪ್ರಿಯಾಂಕಾ ಅವರನ್ನು ಎಕ್ಸ್‌ಪ್ರೆಸ್‌ವೇ ಬಳಿ ಉತ್ತರ ಪ್ರದೇಶ ಪೊಲೀಸರು ತಡೆದು ತಳ್ಳಾಡಿದ್ದರು. ಆದರೂ ಪೊಲೀಸರ ಸರ್ಪಗಾವಲನ್ನು ಲೆಕ್ಕಿಸದೆ ಕಾಲ್ನಡಿಗೆಯಲ್ಲೇ ಮುನ್ನಡೆದು ಸಂತ್ರಸ್ತರ ಮನೆ ತಲುಪಿ, ಸರ್ಕಾರದ ನಿರ್ಲಕ್ಷ್ಯ ಹಾಗೂ ರಕ್ಷಣಾ ವೈಫಲ್ಯವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ರಾಜಕೀಯ ವಿರೋಧಕ್ಕಷ್ಟೇ ಸೀಮಿತವಾಗದೆ, ಮಹಿಳಾ ಸಬಲೀಕರಣಕ್ಕಾಗಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ “ಲಡ್ಕಿ ಹೂಂ, ಲಡ್ ಸಕತೀ ಹೂಂ” ಎಂಬ ಶಕ್ತಿಶಾಲಿ ಅಭಿಯಾನವನ್ನು ಪ್ರಿಯಾಂಕಾ ನೇತೃತ್ವದಲ್ಲಿ ಆರಂಭಿಸಲಾಯಿತು. ರಾಜಕೀಯದಲ್ಲಿ ಮಹಿಳೆಯರಿಗೆ ಶೇ. 40ರಷ್ಟು ಟಿಕೆಟ್ ಘೋಷಿಸುವ ಮೂಲಕ ಸಾಂಪ್ರದಾಯಿಕ ರಾಜಕಾರಣದ ದಿಕ್ಕನ್ನೇ ಬದಲಿಸಲು ಅವರು ಯತ್ನಿಸಿದರು. ಬೀದಿಬೀದಿಗಳಲ್ಲಿ ಮಹಿಳೆಯರೊಂದಿಗೆ ಸಭೆ ನಡೆಸಿ, ಅವರ ಹಕ್ಕುಗಳಿಗಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದರು.

ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆಗಳ (ED) ಒತ್ತಡ ಹೆಚ್ಚಾದಾಗ ಮತ್ತು ಅವರನ್ನು ವಿಚಾರಣೆಗೆ ಕರೆದಾಗ, ಪ್ರಿಯಾಂಕಾ ಗಾಂಧಿ ಅವರು ದೆಹಲಿ ಕಾಂಗ್ರೆಸ್ ಕಚೇರಿಯಿಂದ ಈಡಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿ ನಿಂತು ನಾಯಕತ್ವ ನೀಡಿದರು. ಕೇಂದ್ರ ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣವನ್ನು ಖಂಡಿಸಿ ಅವರು ನಡೆಸಿದ ಪ್ರತಿಭಟನೆ ಪಕ್ಷದ ಕಾರ್ಯಕರ್ತರಿಗೆ ದೊಡ್ಡ ಮಟ್ಟದ ನೈತಿಕ ಬಲ ತುಂಬಿತ್ತು.

ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡ ನಂತರ, ಕಚೇರಿ ರಾಜಕಾರಣಕ್ಕೆ ಸೀಮಿತವಾಗದೆ ಲಕ್ನೋದ ಕಾಂಗ್ರೆಸ್ ಕಚೇರಿಯಲ್ಲಿ ದಿನಗಟ್ಟಲೆ ಕುಳಿತು ಕಾರ್ಯಕರ್ತರ ಅಹವಾಲುಗಳನ್ನು ಆಲಿಸುವುದು, ಪ್ರತಿಭಟನೆಗಳ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಸಾಮಾನ್ಯ ಕಾರ್ಯಕರ್ತನ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಅವರು ಅಪ್ಪಟ ‘ನೆಲದ ಹೋರಾಟಗಾರ್ತಿ’ಯಾಗಿ ಗುರುತಿಸಿಕೊಂಡರು.

ಸಾರ್ವಜನಿಕ ರಂಗದಲ್ಲಿ ಪ್ರಿಯಾಂಕಾ ಗಾಂಧಿ ಅವರು ಕಾಣಿಸಿಕೊಳ್ಳುವ ರೀತಿ, ಅವರ ಹಾವಭಾವಗಳು, ಆಕ್ರಮಣಕಾರಿ ನಾಯಕತ್ವ, ದಿಟ್ಟತನದ ಹೋರಾಟಗಳು ಅವರ ಅಜ್ಜಿ ಇಂದಿರಾ ಗಾಂಧಿಯವರನ್ನು ನೆನಪಿಸುತ್ತವೆ ಎನ್ನುತ್ತಾರೆ ನೆಟ್ಟಿಗರು. ರಾಹುಲ್ ಗಾಂಧಿ ರಾಜಕಾರಣದಲ್ಲಿ ಬೇಗನೇ ಮುಂಚೂಳಿಗೆ ಬಂದರೂ, ಪ್ರಿಯಾಂಕಾ ಬಹಳ ವರ್ಷಗಳ ಕಾಲ ತೆರೆಮರೆಯಲ್ಲಿ ನಿಂತು ರಾಯ್‌ಬರೇಲಿ ಮತ್ತು ಅಮೇಥಿ ಕ್ಷೇತ್ರಗಳ ಚುನಾವಣಾ ನಿರ್ವಹಣೆ ಹಾಗೂ ಪಕ್ಷದ ಸಂಘಟನೆಯ ಜವಾಬ್ದಾರಿಯನ್ನಷ್ಟೇ ನಿಭಾಯಿಸುತ್ತಿದ್ದರು. ತಮಗೆ ಸಂಪೂರ್ಣ ರಾಜಕೀಯ ಪರಿಪಕ್ವತೆ ಬಂದಿದೆ ಎನಿಸಿದ ಬಳಿಕವೇ ಅವರು ಬಹಿರಂಗ ರಾಜಕಾರಣಕ್ಕೆ ಧುಮುಕಿದರು. ಸದಾ ವಿಮರ್ಶೆ, ಟೀಕೆಗೆ ಗುರಿಯಾಗುವ ಕಠಿಣ ರಾಜಕೀಯದಲ್ಲೂ ಎದೆಗುಂದದ ಹೋರಾಟಗಾರಿಕೆಯ ಗುಣಗಳ ಮೂಲಕ ಅವರು ವಿಶಿಷ್ಟ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ಸಂಸತ್ತಿನ ಒಳಗೆ ಹಾಗೂ ಹೊರಗೆ ವಿರೋಧ ಪಕ್ಷಗಳು ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿಯುವಾಗ, ಮಹಿಳೆಯರ ಮೇಲಿನ ದೌರ್ಜನ್ಯ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ಜನಸಾಮಾನ್ಯರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೀದಿಗಿಳಿದು ಪ್ರತಿಭಟನೆ ನಡೆಸುವುದರಲ್ಲಿ ಪ್ರಿಯಾಂಕಾ ಯಾವಾಗಲೂ ಮುಂಚೂಣಿಯಲ್ಲಿರುತ್ತಾರೆ.

ರಾಷ್ಟ್ರೀಯ ರಾಜಕಾರಣದಲ್ಲಿ ರಾಹುಲ್ ಗಾಂಧಿ ಮುಂಚೂಣಿಯಲ್ಲಿ ನಿಂತು ಸರ್ಕಾರದ ನೀತಿಗಳನ್ನು ಪ್ರಶ್ನಿಸುತ್ತಿದ್ದರೆ, ಆ ಹೋರಾಟಕ್ಕೆ ಮತ್ತಷ್ಟು ಬಲ ನೀಡಿ ದೃಢತೆಯನ್ನು ತಂದುಕೊಡುವಲ್ಲಿ ಪ್ರಿಯಾಂಕಾ ಗಾಂಧಿ ಅವರ ಪಾತ್ರ ದೊಡ್ಡದಿದೆ. ಪೊಲೀಸರ ವಶಕ್ಕೆ ಹೆದರಿ ಹಿಂದೆ ಸರಿಯದೆ, ಧರಣಿ ಕುಳ್ಳುವ ಈ ಒಡಹುಟ್ಟಿದವರ ಜೋಡಿಯು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಜೋಶ್ ತುಂಬಿದೆ. ಯಾರು ರಾಹುಲ್‌, ಯಾರು ಪ್ರಿಯಾಂಕಾ ಎನ್ನುತ್ತಿದ್ದ ಪ್ರಧಾನಿ ಮೋದಿಯವರೇ ಒಮ್ಮೆ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ವಿರುದ್ಧದ ಈ ಸಮರದಲ್ಲಿ ರಾಹುಲ್ ಗಾಂಧಿಯವರ ಪ್ರತಿ ಹೆಜ್ಜೆಗೆ ಪ್ರಿಯಾಂಕಾ ಸಮಬಲದ ಹೋರಾಟಗಾರ್ತಿಯಾಗಿ ನಿಂತಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...