ರಬಕವಿ ಬನಹಟ್ಟಿ | ವಿನೂತನ ಕಾಲೇಜು ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

Date:

ಬಾಗಲಕೋಟೆ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿರುವ ರಬಕವಿ-ಬನಹಟ್ಟಿಯಲ್ಲಿ ನಿರ್ಮಿಸಿರುವ ಸರ್ಕಾರಿ ಪದವಿ ಕಾಲೇಜು ಸುಸಜ್ಜಿತ ಕಟ್ಟಡ ಹೊಂದಿದ್ದರೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಸವಾಲಾಗಿ ಪರಿಣಮಿಸಿದೆ.

- Advertisement -

ಕಲೆ ಹಾಗೂ ವಾಣಿಜ್ಯ ವಿಭಾಗ ಹೊಂದಿರುವ ಇಲ್ಲಿನ ಕಾಲೇಜ್‌ನಲ್ಲಿ ಪ್ರಸಕ್ತ ವರ್ಷದಿಂದ ಬಿಬಿಎ ಹಾಗೂ ಬಿಸಿಎ ಕೋರ್ಸ್ ಪ್ರಾರಂಭಗೊಳ್ಳಲಿವೆ. ಅವಳಿನಗರದಿಂದ ಸುಮಾರು 3 ಕಿ.ಮೀ. ದೂರದ ಮದನಮಟ್ಟಿ ಗ್ರಾಮ ಸಮೀಪ 5 ಎಕರೆ ಪ್ರದೇಶದಲ್ಲಿ ನೂತನ ಕಾಲೇಜು ಕಟ್ಟಡ ನಿರ್ಮಿಸಲಾಗಿದ್ದು, ಮಂಜೂರಾದ ಆರಂಭದಲ್ಲಿ ನಗರದಲ್ಲೇ ನಡೆಯುತ್ತಿದ್ದ ತರಗತಿಗಳನ್ನು ಐದು ವರ್ಷಗಳ ಹಿಂದೆ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಅಂದಿನಿಂದಲೂ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಪಟ್ಟಣದಿಂದ ಕಾಲೇಜು ದೂರವಿರುವುದು ವಿದ್ಯಾರ್ಥಿಗಳ ಸಂಖ್ಯೆ ಕುಸಿತಕ್ಕೆ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಾಲೇಜಿಗೆ ಸಮರ್ಪಕ ಸಾರಿಗೆ ಸೌಲಭ್ಯಗಳ ಕೊರತೆಯಿದ್ದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಅಡ್ಡಿಯಾಗುತ್ತಿದೆ. ಅವಳಿನಗರದ ಸುತ್ತಮುತ್ತಲಿನ ಹನಗಂಡಿ, ನಾವಲಗಿ, ಚಿಮ್ಮಡ, ಯಲ್ಲಟ್ಟಿ ಸೇರಿದಂತೆ ಹಲವು ಗ್ರಾಮಗಳಿಂದ ಪ್ರತಿದಿನ ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ನಿಯಮಿತ ಬಸ್ ವ್ಯವಸ್ಥೆ ಇಲ್ಲ. ಬನಹಟ್ಟಿಯಿಂದ ಬೆಳಗಿನ ವೇಳೆಯಲ್ಲಿ ಕೇವಲ ಒಂದು ಬಸ್ ಮಾತ್ರ ಕಾಲೇಜು ಮಾರ್ಗದತ್ತ ಸಂಚರಿಸುವುದರಿಂದ ಅನೇಕ ವಿದ್ಯಾರ್ಥಿಗಳು ಹಲವು ಕಿಲೋಮೀಟರ್‌ಗಳನ್ನು ಕಾಲ್ನಡಿಗೆಯಲ್ಲೇ ಕ್ರಮಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಲೇಜು ಇರುವ ಪ್ರದೇಶ ನಿರ್ಜನವಾಗಿರುವುದರಿಂದ ವಿದ್ಯಾರ್ಥಿಗಳು, ವಿಶೇಷವಾಗಿ ವಿದ್ಯಾರ್ಥಿನಿಯರು, ಸುರಕ್ಷತೆ ಕುರಿತ ಆತಂಕವನ್ನು ಎದುರಿಸುತ್ತಿದ್ದಾರೆ. ಕಾಲೇಜು ಮುಗಿದ ನಂತರವೂ ಬಸ್ ಸೌಲಭ್ಯ ಸಮರ್ಪಕವಾಗಿಲ್ಲದ ಕಾರಣ ಅವರು ಮತ್ತೆ ಕಾಲ್ನಡಿಗೆಯಲ್ಲೇ ಬಸ್ ನಿಲ್ದಾಣ ತಲುಪಬೇಕಾಗುತ್ತದೆ. ಈ ಎಲ್ಲ ಸಮಸ್ಯೆಗಳು ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಆತಂಕ ಮೂಡಿಸಿದ್ದು, ಕಾಲೇಜಿಗೆ ಪ್ರವೇಶ ಪಡೆಯುವ ಆಸಕ್ತಿಯನ್ನೇ ಕುಗ್ಗಿಸಿವೆ.

“ಈ ಹಿಂದೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಳೆದ ಐದು ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿದು ಈಗ ಸುಮಾರು 400ಕ್ಕೆ ಇಳಿದಿದೆ. ಸೂಕ್ತ ಸಾರಿಗೆ ವ್ಯವಸ್ಥೆಯ ಕೊರತೆ ಮತ್ತು ಕಾಲೇಜಿನ ಸ್ಥಳಾಂತರದಿಂದ ಉಂಟಾದ ತೊಂದರೆಗಳು ಈ ಇಳಿಕೆಗೆ ಪ್ರಮುಖ ಕಾರಣಗಳಾಗಿವೆ” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಸರ್ಕಾರಿ ಪದವಿ ಕಾಲೇಜು ಆವರಣಕ್ಕೆ ತಡೆಗೋಡೆ ಇಲ್ಲ. ರಾತ್ರಿ ಹೊತ್ತು ಕುಡುಕರು ಆವರಣದಲ್ಲಿ ಮದ್ಯ ಸೇವಿಸಿ ಬಾಟಲ್‌ಗಳನ್ನು ಅಲ್ಲಿಯೇ ಎಸೆಯುತ್ತಿದ್ದಾರೆ. ಸುಸಜ್ಜಿತ ಕಟ್ಟಡ ಹೊಂದಿರುವ ಕಾಲೇಜಿನಲ್ಲಿ ಗ್ರಂಥಾಲಯ ಇರದಿರುವುದು ಅಚ್ಚರಿ ಮೂಡಿಸಿದೆ.

ಈ ದಿನ.ಕಾಮ್ ಜೊತೆ ಮಾತನಾಡಿದ ಸಿದ್ದು ಸವದಿ “ಸರಕಾರಿ ಪದವಿ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ವ್ಯವಸ್ಥಾಪಕರೊಂದಿಗೆ ಚರ್ಚಿಸಿ ಹೆಚ್ಚಿನ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುವುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಸುಗಮವಾಗಿ ಆಗಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.” ಎಂದಿದ್ದಾರೆ.

ಈ ಕಾಲೇಜಿನಲ್ಲಿ ನುರಿತ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರಿದ್ದಾರೆ. ಮೂಲ ಸೌಕರ್ಯ ಕಲ್ಪಿಸುವಂತೆ ಮೇಲಾಧಿಕಾರಿಗಳ ಗಮನ ಸೆಳೆಯಲಾಗಿದೆ ಎನ್ನುತ್ತಾರೆ ಕಾಲೇಜಿನ ಪ್ರಾಂಶುಪಾಲರಾದ ಶಿವಾನಂದ ಹಂದಿಗುಂದಿ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...