ರಾಜ್ಯಸಭೆ ಟಿಕೆಟ್ ಕಸರತ್ತು: ದೆಹಲಿಯಲ್ಲಿ ಧ್ವನಿಸುವುದೇ ಉತ್ತರ ಕನ್ನಡ?

Date:

ಈ ಸಲದ ರಾಜ್ಯಸಭೆ ಚುನಾವಣೆ ಕೇವಲ ಸದಸ್ಯರ ಆಯ್ಕೆಗೆ ಸೀಮಿತವಾಗಿಲ್ಲ. ಕಾಂಗ್ರೆಸ್ ಯಾವ ವರ್ಗಕ್ಕೆ ಆದ್ಯತೆ ನೀಡುತ್ತದೆ? ಯುವ ನಾಯಕರಿಗೆ ಅವಕಾಶ ಸಿಗುತ್ತದೆಯೇ? ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಕ್ಕೆ ಪ್ರಾತಿನಿಧ್ಯ ದೊರೆಯುತ್ತದೆಯೇ? ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆಯೇ? ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವ ಚುನಾವಣೆಯೂ ಇದಾಗಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ತೆರವಾಗುತ್ತಿರುವ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆಡಳಿತಾರೂಢ ಕಾಂಗ್ರೆಸ್ ವಿಧಾನಸಭೆಯಲ್ಲಿ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸ್ಥಿತಿಯಲ್ಲಿದ್ದು, ಉಳಿದ ಒಂದು ಸ್ಥಾನ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಪಾಲಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಕಾಂಗ್ರೆಸ್‌ನಲ್ಲಿ ರಾಜ್ಯಸಭಾ ಟಿಕೆಟ್‌ಗಾಗಿ ಭಾರೀ ಪೈಪೋಟಿ ಆರಂಭವಾಗಿದೆ.

- Advertisement -

ಚುನಾವಣಾ ಆಯೋಗ ಈಗಾಗಲೇ ರಾಜ್ಯಸಭಾ ಚುನಾವಣೆಯ ಅಧಿಸೂಚನೆ ಪ್ರಕಟಿಸಿದೆ. ಜೂನ್ 18ರಂದು ಮತದಾನ ಹಾಗೂ ಮತ ಎಣಿಕೆ ನಡೆಯಲಿದ್ದು, ಜೂನ್ 8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂನ್ 11ರವರೆಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಬಾರಿ ಕಾಂಗ್ರೆಸ್ ಪಾಲಾಗುವ ಮೂರು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಹೀಗಾಗಿ ಉಳಿದ ಎರಡು ಸ್ಥಾನಗಳಿಗಾಗಿ ಕಾಂಗ್ರೆಸ್‌ನ ಹಿರಿಯ ಹಾಗೂ ಯುವ ನಾಯಕರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ.

ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೆಸರು ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಬಂದಿದೆ. ಕಳೆದ ಕೆಲವು ವರ್ಷಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್ ನಾಯಕ ನಿವೇದಿತ್ ಆಳ್ವ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

ಮಾಜಿ ಕೇಂದ್ರ ಸಚಿವೆ ಹಾಗೂ ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವ, ಹಲವು ವರ್ಷಗಳಿಂದ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಎಐಸಿಸಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಜೊತೆಗಿನ ಉತ್ತಮ ಸಂಪರ್ಕ ಹಾಗೂ ಸಂಘಟನೆಗೆ ನೀಡಿರುವ ಕೊಡುಗೆ ಅವರ ಪರವಾಗಿರುವ ಪ್ರಮುಖ ಅಂಶಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಕೆಲಸದಲ್ಲಿಯೂ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ರಾಜ್ಯಸಭೆಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ.

ಇನ್ನೊಂದೆಡೆ, ಮಾಜಿ ಶಾಸಕಿ ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ (ಕೆನರಾ) ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಂಜಲಿ ನಿಂಬಾಳ್ಕರ್ ಅವರ ಹೆಸರೂ ಪ್ರಮುಖವಾಗಿ ಕೇಳಿಬರುತ್ತಿದೆ. ಪ್ರಸ್ತುತ ಅವರು ರಾಷ್ಟ್ರೀಯ ಮಟ್ಟದಲ್ಲಿಯೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.

ಮಹಿಳಾ ಪ್ರತಿನಿಧಿತ್ವಕ್ಕೆ ಆದ್ಯತೆ ನೀಡುವ ಲೆಕ್ಕಾಚಾರ ನಡೆದರೆ ಅಂಜಲಿ ನಿಂಬಾಳ್ಕರ್ ಅವರ ಹೆಸರು ಬಲ ಪಡೆಯುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂಬ ವಾದವೂ ಅವರ ಪರವಾಗಿ ಕೆಲಸ ಮಾಡಬಹುದು ಎನ್ನಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಗೆ ಸಿಗುತ್ತದೆಯೇ ಪ್ರಾತಿನಿಧ್ಯ?

ಕರ್ನಾಟಕದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಉತ್ತರ ಕನ್ನಡಕ್ಕೆ ಕಳೆದ ಕೆಲವು ವರ್ಷಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಅಭಿಪ್ರಾಯ ಎರಡೂ ಪಕ್ಷಗಳ ಕಾರ್ಯಕರ್ತರಲ್ಲದೆ, ಜಿಲ್ಲೆಯ ಜನತೆಯಲ್ಲಿಯೂ ಇದೇ ಅಭಿಪ್ರಾಯವಿದೆ. ಜಿಲ್ಲೆಯ ಅಭಿವೃದ್ಧಿ ಯೋಜನೆಗಳು, ಕರಾವಳಿ ಭಾಗದ ಸಮಸ್ಯೆಗಳು, ಅರಣ್ಯ ಭೂಮಿ ಹಕ್ಕುಗಳ ಪ್ರಶ್ನೆ, ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿಚಾರದಲ್ಲಿ ದೆಹಲಿಯಲ್ಲಿ ಜಿಲ್ಲೆಯ ಪರವಾಗಿ ಬಲವಾದ ಧ್ವನಿ ಇರಬೇಕೆಂಬ ಬೇಡಿಕೆ ಆಗಾಗ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉತ್ತರ ಕನ್ನಡ ಮೂಲದ ನಾಯಕರಿಗೆ ಅವಕಾಶ ನೀಡುತ್ತದೆಯೇ ಎಂಬ ಪ್ರಶ್ನೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ–ಜೆಡಿಎಸ್ ಲೆಕ್ಕಾಚಾರ

ಉಳಿದ ಒಂದು ಸ್ಥಾನ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಪಾಲಾಗುವ ಸಾಧ್ಯತೆ ಇದ್ದರೂ, ಉತ್ತರ ಕನ್ನಡ ಜಿಲ್ಲೆಯಿಂದ ಯಾವುದೇ ಹೆಸರು ಪ್ರಮುಖವಾಗಿ ಕೇಳಿಬಂದಿಲ್ಲ. ಬಿಜೆಪಿ ರಾಷ್ಟ್ರೀಯ ಅಥವಾ ರಾಜ್ಯಮಟ್ಟದ ಹಿರಿಯ ನಾಯಕರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯಗಳು ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್‌ನ ಒಳರಾಜಕಾರಣದಲ್ಲಿ ಈ ಇಬ್ಬರು ನಾಯಕರ ಪ್ರಭಾವ ಹೆಚ್ಚಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಜಕೀಯ ಸಮತೋಲನಕ್ಕೂ ಆದ್ಯತೆ ಸಿಗಲಿದೆ.

ಒಂದು ವಲಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ದೊರೆತರೆ ಮತ್ತೊಂದು ವಲಯದಲ್ಲಿ ಅಸಮಾಧಾನ ಮೂಡುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಎಚ್ಚರಿಕೆಯಿಂದ ಅಂತಿಮ ಪಟ್ಟಿ ಸಿದ್ಧಪಡಿಸುವ ಸಾಧ್ಯತೆ ಇದೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇವಲ ಗೆಲುವಿನ ಲೆಕ್ಕಾಚಾರ ಮಾತ್ರವಲ್ಲದೆ, ಪಕ್ಷ ಸಂಘಟನೆಗೆ ನೀಡಿರುವ ಕೊಡುಗೆ, ಹೈಕಮಾಂಡ್‌ನ ವಿಶ್ವಾಸ ಹಾಗೂ ರಾಷ್ಟ್ರೀಯ ಮಟ್ಟದ ಕಾರ್ಯಕ್ಷಮತೆಯೂ ಪ್ರಮುಖ ಪಾತ್ರವಹಿಸುತ್ತದೆ.

ರಾಜ್ಯಸಭಾ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಲವು ಹಿರಿಯ ಹಾಗೂ ಯುವ ನಾಯಕರ ಹೆಸರುಗಳು ಕೇಳಿಬರುತ್ತಿವೆ. ಮಾಜಿ ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ರಾಷ್ಟ್ರೀಯ ಹುದ್ದೆ ಹೊಂದಿರುವ ನಾಯಕರು ಸೇರಿದಂತೆ 20ಕ್ಕೂ ಅಧಿಕ ಮಂದಿ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿದ್ದೀರಾ? ಮೋದಿ ‘ತುರ್ತು ಪರಿಸ್ಥಿತಿಯಂತಹದ್ದನ್ನು’ ಹೇರಬಹುದು, ವರ್ಷದೊಳಗೆ ಪಿಎಂ ಸ್ಥಾನ ಕಳೆದುಕೊಳ್ತಾರೆ: ರಾಹುಲ್ ಗಾಂಧಿ

ಈ ಸಲದ ರಾಜ್ಯಸಭೆ ಚುನಾವಣೆ ಕೇವಲ ಸದಸ್ಯರ ಆಯ್ಕೆಗೆ ಸೀಮಿತವಾಗಿಲ್ಲ. ಕಾಂಗ್ರೆಸ್ ಯಾವ ವರ್ಗಕ್ಕೆ ಆದ್ಯತೆ ನೀಡುತ್ತದೆ? ಯುವ ನಾಯಕರಿಗೆ ಅವಕಾಶ ಸಿಗುತ್ತದೆಯೇ? ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಕ್ಕೆ ಪ್ರಾತಿನಿಧ್ಯ ದೊರೆಯುತ್ತದೆಯೇ? ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆಯೇ? ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವ ಚುನಾವಣೆಯೂ ಇದಾಗಿದೆ.

ಮುಂದಿನ ಕೆಲವೇ ದಿನಗಳಲ್ಲಿ ಪ್ರಕಟವಾಗುವ ಅಭ್ಯರ್ಥಿಗಳ ಪಟ್ಟಿ ರಾಜ್ಯ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವ ಪ್ರಮುಖ ಬೆಳವಣಿಗೆಯಾಗಲಿದೆ. ಸದ್ಯ ಉತ್ತರ ಕನ್ನಡದ ರಾಜಕೀಯ ವಲಯದ ಕಣ್ಣುಗಳು ದೆಹಲಿಯತ್ತ ನೆಟ್ಟಿದ್ದು, ʼಈ ಬಾರಿ ಜಿಲ್ಲೆಗೆ ರಾಜ್ಯಸಭೆಯ ಅವಕಾಶ ಸಿಗುತ್ತದೆಯೇ?ʼ ಎಂಬುದನ್ನು ಕಾದು ನೋಡಬೇಕಿದೆ..

987638ca8c89079659d0147ec8165bb4e02be67aff4a7af8f502ae66e86a5a1e?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆಗಳನ್ನು ನೀಡಿದ ಬಸವಣ್ಣನವರು ಮನುಕುಲದ...