ಶಿಕ್ಷಕರಿಗೆ SIR ಕರ್ತವ್ಯವೋ, ಮಕ್ಕಳ ಪಾಠವೋ- ಬಗೆಹರಿಯದ ಗೊಂದಲ

Date:

ಪಾಠ ಮಾಡಬೇಕೋ, ಎಸ್‌ಐಆರ್‌ ಡ್ಯೂಟಿ ಮಾಡಬೇಕೋ? ಎಂಬ ಬಿಕ್ಕಟ್ಟಿಗೆ ರಾಜ್ಯದ ಶಿಕ್ಷಕರು ಸಿಲುಕಿದ್ದಾರೆ. ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದರೆ, ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ಕೆ ಕಡ್ಡಾಯವಾಗಿ ಹಾಜರಾಗದಿದ್ದರೆ ಎಫ್‌ಐಆರ್ (FIR) ದಾಖಲಿಸುತ್ತೇವೆ ಎಂದು ಚುನಾವಣಾ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಈ ಎರಡು ಇಲಾಖೆಗಳ ದ್ವಂದ್ವ ಆದೇಶಗಳ ಹಗ್ಗಜಗ್ಗಾಟದಲ್ಲಿ ಶಾಲಾ ಆಡಳಿತ ಮಂಡಳಿಗಳು ಹಾಗೂ ಶಿಕ್ಷಕರು ಗೊಂದಲಕ್ಕೆ ಸಿಲುಕಿದ್ದಾರೆ.

- Advertisement -

ಕೇಂದ್ರ ಚುನಾವಣಾ ಆಯೋಗವು ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವು ಇದೀಗ ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಗಳ ನಡುವೆ ತೀವ್ರ ಗೊಂದಲವನ್ನು ಸೃಷ್ಟಿಸಿದೆ. ಒಂದೆಡೆ SIR ಕರ್ತವ್ಯಕ್ಕೆ ಶಿಕ್ಷಕರನ್ನು ಕಳುಹಿಸದಿದ್ದರೆ ಎಫ್‌ಐಆರ್ ದಾಖಲಿಸುವ ಬೆದರಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಹಾಗೂ ಚುನಾವಣಾ ಅಧಿಕಾರಿಗಳು ಒಡ್ಡುತ್ತಿದ್ದಾರೆ. ಮತ್ತೊಂದೆಡೆ, ಶಾಲೆಯ ದೈನಂದಿನ ತರಗತಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸದೇ ಸುಗಮವಾಗಿ ನಡೆಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. ಈ ಎರಡು ಇಲಾಖೆಗಳ ದ್ವಂದ್ವ ನಿಲುವುಗಳಿಂದಾಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಮುಖ್ಯೋಪಾಧ್ಯಾಯರು, ಶಿಕ್ಷಕರನ್ನು ತ್ರಿಶಂಕು ಸ್ಥಿತಿಗೆ ಸಿಲುಕಿ ಒದ್ದಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

‘ಎಸ್‌ಐಆರ್’ (SIR) ಕೇಂದ್ರ ಚುನಾವಣಾ ಆಯೋಗದ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ ಕಾರ್ಯಕ್ರಮವಾಗಿದೆ. ಈ ವಿವಾದಾತ್ಮಕ ಕಾರ್ಯಕ್ರಮವನ್ನು ನಿಗದಿತ ಸಮಯದಲ್ಲಿ ಮುಕ್ತಾಯಗೊಳಿಸಬೇಕೆಂದು ರಾಜ್ಯ ಚುನಾವಣಾ ಆಯೋಗ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಕಾರ್ಯಕ್ಕಾಗಿ ತಳಮಟ್ಟದಲ್ಲಿ ಬೂತ್ ಮಟ್ಟದ ಅಧಿಕಾರಿಗಳಾಗಿ (ಬಿಎಲ್ಒ) ಕಾರ್ಯನಿರ್ವಹಿಸಲು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರನ್ನು ವ್ಯಾಪಕವಾಗಿ ನಿಯೋಜಿಸಲಾಗುತ್ತಿದೆ. ತಮಗೆ ವಹಿಸಿರುವ ಈ ಚುನಾವಣಾ ಆಯೋಗದ ಕೆಲಸಕ್ಕೆ ಶಿಕ್ಷಕರನ್ನು ತಕ್ಷಣವೇ ಶಾಲೆಯಿಂದ ಬಿಡುಗಡೆ ಮಾಡಬೇಕು ಹಾಗೂ ನಿಗದಿತ ಅವಧಿಯೊಳಗೆ ಕಾರ್ಯ ಪೂರ್ಣಗೊಳಿಸಬೇಕು ಎಂಬುದು ಚುನಾವಣಾ ಅಧಿಕಾರಿಗಳ ಉದ್ದೇಶವಾಗಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯ ಮೂಲಕವೇ ಶಾಲೆಗಳಿಗೆ ತಾಕೀತು ಮಾಡಲಾಗುತ್ತಿದೆ.

ಈ ಕುರಿತು ಶಿಕ್ಷಣ ಇಲಾಖೆಯ ಉನ್ನತ ಮಟ್ಟದಿಂದಲೇ ಸ್ಪಷ್ಟ ಆದೇಶಗಳು ಹೊರಬಿದ್ದಿವೆ. ಜೂನ್ 30 ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹೊರಡಿಸಿರುವ ಲಿಖಿತ ಆದೇಶದಂತೆ, ಎಸ್‌ಐಆರ್ (SIR) ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರನ್ನು ಶಾಲಾ ಬೋಧನಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಕೂಡಲೇ ಕರ್ತವ್ಯಕ್ಕೆ ಹಾಜರುಪಡಿಸಲು ಸೂಚಿಸಲಾಗಿದೆ. ಜೊತೆಗೆ, ಈ ಕಾರ್ಯದಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಉಪನಿರ್ದೇಶಕರ ಈ ಆದೇಶದ ಬೆನ್ನಲ್ಲೇ, ಜುಲೈ 01ರಂದು ಬೆಂಗಳೂರು ದಕ್ಷಿಣ ವಲಯ-2ರ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಕೂಡ ತಮ್ಮ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಮುಖ್ಯ ಶಿಕ್ಷಕರಿಗೆ ಸುತ್ತೋಲೆ ರವಾನಿಸಿದ್ದಾರೆ. ಎಸ್‌ಐಆರ್ ಕಾರ್ಯಕ್ಕೆ ಶಿಕ್ಷಕರ ನಿಯೋಜನೆ ಕಾಯ್ದೆಯಲ್ಲಿ ಲೋಪವಾದರೆ ಮುಖ್ಯ ಶಿಕ್ಷಕರ ಮೇಲೆಯೇ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಈ ಪತ್ರದಲ್ಲೂ ಯಥಾವತ್ತಾಗಿ ಪುನರುಚ್ಚರಿಸಲಾಗಿದೆ. ಈ ಕಠಿಣ ಎಚ್ಚರಿಕೆಗಳು ಶಾಲಾ ಆಡಳಿತ ಹಾಗೂ ಶಿಕ್ಷಕರ ಮೇಲೆ ತೀವ್ರ ಮಾನಸಿಕ ಒತ್ತಡ ಹೇರುತ್ತಿವೆ.

ಆದರೆ, ಗೊಂದಲವನ್ನು ಮತ್ತಷ್ಟು ಹೆಚ್ಚಿಸುವಂತೆ ಜುಲೈ 02ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಮತ್ತೊಂದು ಅಧಿಕೃತ ಕಚೇರಿ ಆದೇಶವನ್ನು ಹೊರಡಿಸಿದ್ದಾರೆ. ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಜೂನ್ 30 ರಿಂದ ಜುಲೈ 29, 2026 ರವರೆಗೆ ನಡೆಯಲಿರುವ ಬಿ.ಎಲ್.ಒ ಗಳ ಮನೆಮನೆ ಭೇಟಿ ಹಾಗೂ ಇತರ ಎಸ್‌ಐಆರ್ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಶಿಕ್ಷಕರನ್ನು ಕೂಡಲೇ ಕರ್ತವ್ಯಕ್ಕೆ “ಪೂರ್ಣಪ್ರಮಾಣದಲ್ಲಿ ಬಿಡುಗಡೆಗೊಳಿಸುವುದು” ಎಂದು ಈ ಆದೇಶದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ಪಷ್ಟವಾಗಿ ಸೂಚಿಸಲಾಗಿದೆ. ಜೊತೆಗೆ, ಈ ಆದೇಶ ಉಲ್ಲಂಘನೆಯಾದರೆ ಸಂಬಂಧಿಸಿದವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದನ್ನು ಓದಿದ್ದೀರಾ? ‘ನನ್ನ ವಿಶ್ವಕಪ್ ಪಯಣ ಅಂತ್ಯ’; ಕಣ್ಣೀರಿನೊಂದಿಗೆ ವಿಶ್ವಕಪ್‌ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ

ಒಮ್ಮೆ ಬೋಧನಾ ಕಾರ್ಯಕ್ಕೆ ಅಡಚಣೆಯಾಗದಂತೆ ಹಾಜರಾಗಿ ಎನ್ನುವ ಅಧಿಕಾರಿಗಳು, ಬೆನ್ನಲ್ಲೇ ಪೂರ್ಣಪ್ರಮಾಣದಲ್ಲಿ ಬಿಡುಗಡೆಗೊಳಿಸಿ ಎಂದು ಆದೇಶಿಸಿದ್ದು ಆಡಳಿತ ಮಂಡಳಿಗಳನ್ನು ಅಕ್ಷರಶಃ ಸಂಕಷ್ಟಕ್ಕೆ ದೂಡಿದೆ. ಒಂದೆಡೆ SIR ಕರ್ತವ್ಯಕ್ಕೆ ಶಿಕ್ಷಕರನ್ನು ಕಳುಹಿಸದಿದ್ದರೆ ಎಫ್‌ಐಆರ್ ದಾಖಲಿಸುವುದಾಗಿ ಬಿಇಒ ಹಾಗೂ ಚುನಾವಣಾ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ಇನ್ನೊಂದೆಡೆ ಶಾಲೆಯಲ್ಲಿ ನಿಯಮಿತ ತರಗತಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸದೆ ನಡೆಸಬೇಕು ಎಂಬ ನಿಯಮವೂ ಇದೆ. ಶಾಲೆಯ ಬೋಧನೆಗೂ ತೊಂದರೆಯಾಗಬಾರದು, ಚುನಾವಣಾ ಕೆಲಸವೂ ಆಗಬೇಕು ಎಂಬ ಈ ‘ಎರಡೂ ದೋಣಿಯ ಮೇಲಿನ ಪಯಣ’ ಶಿಕ್ಷಕರಿಗೆ ಅಸಾಧ್ಯವಾಗಿದೆ.

ದ್ವಂದ್ವ ನಿಲುವುಗಳ ಬಗ್ಗೆ KAMS ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಕಳವಳ

ಈ ಗೊಂದಲಮಯ ಮತ್ತು ಆತಂಕದ ಪರಿಸ್ಥಿತಿಯ ಕುರಿತು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ (KAMS) ತೀವ್ರ ಕಳವಳ ವ್ಯಕ್ತಪಡಿಸಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು ಜುಲೈ 07ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸುದೀರ್ಘವಾದ ಮನವಿ ಪತ್ರವನ್ನು ಬರೆದಿದ್ದಾರೆ. ಶಿಕ್ಷಣ ಇಲಾಖೆ ಹಾಗೂ ಮುಖ್ಯ ಚುನಾವಣಾಧಿಕಾರಿಗಳು ಜಂಟಿಯಾಗಿ ಸ್ಪಷ್ಟ ಆದೇಶ ಹೊರಡಿಸಿ, SIR ಅವಧಿಯಲ್ಲಿ ಶಾಲೆಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ “ಈ‌ ದಿನ ಡಾಟ್‌ ಕಾಂ” ನೊಂದಿಗೆ ಮಾತನಾಡಿದ ಅವರು, “ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ಶಿಕ್ಷಕರನ್ನು ಕಡ್ಡಾಯವಾಗಿ ಬಿಡುಗಡೆ ಮಾಡಬೇಕು ಎಂದು ಆದೇಶ ನೀಡಿದ್ದಾರೆ ಮತ್ತು ಶಿಕ್ಷಕರನ್ನು ಬಿಡದಿದ್ದರೆ FIR ದಾಖಲಿಸುವುದು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಒಂದೇ ಸಮಯದಲ್ಲಿ ಸರ್ಕಾರವು ಶಿಕ್ಷಕರೊಂದಿಗೆ ಶಾಲೆಯಲ್ಲಿ ನಿಯಮಿತ ತರಗತಿಗಳನ್ನು ನಡೆಸಬೇಕು ಎಂದು ಹೇಳುವುದು, ಮತ್ತು ಅದೇ ಶಿಕ್ಷಕರನ್ನು ಪೂರ್ಣಾವಧಿ ಚುನಾವಣಾ ಕಾರ್ಯಕ್ಕೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುವುದು ಪ್ರಾಯೋಗಿಕವಾಗಿ ಅಸಾಧ್ಯವಾದ ವಿಷಯ. ಶಿಕ್ಷಕರನ್ನು ಶಾಲೆಯಲ್ಲೇ ಉಳಿಸಿಕೊಂಡರೆ ಚುನಾವಣಾ ಅಧಿಕಾರಿಗಳು FIR ಬೆದರಿಕೆ ಹಾಕುತ್ತಾರೆ.

“ಚುನಾವಣಾ ಕರ್ತವ್ಯಕ್ಕೆ ಕಳುಹಿಸಿದರೆ ತರಗತಿಗಳು ನಡೆಯುವುದಿಲ್ಲ, ಇದರಿಂದ ಪೋಷಕರಿಂದ ದೂರು ಬಂದು ವಿದ್ಯಾರ್ಥಿಗಳ ಕಲಿಕೆಗೆ ಹಾನಿಯಾಗುತ್ತದೆ. ಒಂದು ಕಡೆ ಶಾಲೆಯಲ್ಲಿ ಮಕ್ಕಳ ಶಿಕ್ಷಣವನ್ನು ಮೊಟಕುಗೊಳಿಸಬೇಡಿ ಎಂದು ಹೇಳುತ್ತಾ ಇನ್ನೊಂದು ಕಡೆ ಎಸ್‌ಐಆರ್‌ಗೆ ನಿಯೋಜಿಸಿದರೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬಹುದು. ಇದರಿಂದ ಮಕ್ಕಳ ಹಾಗೂ ಶಿಕ್ಷಕರು ಇಬ್ಬರ ಮೇಲೂ ಪರಿಣಾಮ ಬೀರುತ್ತದೆ” ಎಂದು ಡಿ. ಶಶಿಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

‘ಶಿಕ್ಷಕರನ್ನೇ ಬಳಸಿ ಎಂದು ನಾವೆಲ್ಲೂ ಹೇಳಿಲ್ಲ’: ರಾಜ್ಯ ಚುನಾವಣಾಧಿಕಾರಿ ಅನ್ಬುಕುಮಾರ್

ಈ ಇಡೀ ಗೊಂದಲದ ಬಗ್ಗೆ ‘ಈ ದಿನ.ಕಾಮ್’ ರಾಜ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರನ್ನು ಸಂಪರ್ಕಿಸಿ ಮಾತನಾಡಿಸಿದಾಗ ಅವರು ‘ಶಿಕ್ಷಕರನ್ನೇ ಬಳಸಿ ಎಂದು ನಾವೆಲ್ಲೂ ಹೇಳಿಲ್ಲ’ ಎಂದು ತಿಳಿಸಿದರು. ಚುನಾವಣಾ ಕರ್ತವ್ಯಕ್ಕೆ ಕೇವಲ ಶಾಲಾ ಶಿಕ್ಷಕರನ್ನೇ ಬಳಸಿಕೊಳ್ಳಬೇಕು ಎಂಬ ನಿಯಮವೇನಾದರೂ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮತದಾರರ ಪಟ್ಟಿಯ SIR ಎಂಬುದು ಬೃಹತ್ ಪ್ರಕ್ರಿಯೆಯಾಗಿದ್ದು, ಇದರ ಯಶಸ್ವಿ ಜಾರಿಗಾಗಿ ಬೂತ್ ಮಟ್ಟದ ಅಧಿಕಾರಿಗಳ (ಬಿ.ಎಲ್.ಒ) ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ. ಈ ಬಿ.ಎಲ್.ಒಗಳನ್ನು ನೇಮಿಸಿಕೊಳ್ಳುವಂತೆ ನಾವು ರಾಜ್ಯ ಮಟ್ಟದಿಂದ ಜಿಲ್ಲಾಧಿಕಾರಿಗಳಿಗೆ (ಡಿಸಿ) ಕೇವಲ ಸಾಮಾನ್ಯ ನಿರ್ದೇಶನವನ್ನಷ್ಟೇ ನೀಡುತ್ತೇವೆ. ಆದರೆ, ಯಾವ ಇಲಾಖೆಯ ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಬೇಕು ಮತ್ತು ಯಾರನ್ನು ನೇಮಿಸಿಕೊಳ್ಳಬೇಕು ಎಂಬುದು ಸಂಪೂರ್ಣವಾಗಿ ಆಯಾ ಜಿಲ್ಲಾಧಿಕಾರಿಗಳ ಪರಮಾಧಿಕಾರ ಹಾಗೂ ವಿವೇಚನೆಗೆ ಬಿಟ್ಟ ವಿಚಾರವಾಗಿದೆ’ ಎಂದು ಹೇಳಿದರು.

ಇದರರ್ಥ, ಮೇಲ್ಮಟ್ಟದ ಅಧಿಕಾರಿಗಳು ಕೇವಲ ಶಿಕ್ಷಕರನ್ನೇ ಬಳಸಿ ಎಂದಿಲ್ಲದಿದ್ದರೂ, ಒಟ್ಟಾರೆ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಲು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ಮೇಲೆ ಒತ್ತಡ ಹೇರುತ್ತಿರುವುದು ಇಡೀ ಗೊಂದಲಕ್ಕೆ ಮೂಲ ಕಾರಣವಾಗಿದೆ.

SIR School 1
KAMS 1
KAMS 2
blo copy
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...