NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ ಲೆಕ್ಕಾಚಾರವೇನು?

Date:

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ ನಡೆದ ಎನ್‌ಸಿಪಿ ನಿಯೋಗದ ಸಭೆಯು ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ರಾಜಕೀಯ ಸಮೀಕರಣಕ್ಕೆ ಮುನ್ನುಡಿ ಬರೆದಿದೆ. ಎನ್‌ಸಿಪಿಯ ವಿಭಜಿತ ಬಣಗಳ ನಡುವಿನ ವಿಲೀನಕ್ಕೆ ಬಿಜೆಪಿ ಮೃದು ಧೋರಣೆ ತೋರುತ್ತಿದೆ.

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ. ಹಿಂದೆ ಎನ್‌ಸಿಪಿ (ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ) ಪಕ್ಷವನ್ನು ಇಬ್ಬಾಗಗೊಳಿಸಿ, ಅಜಿತ್ ಪವಾರ್ ಬಣವನ್ನು ತನ್ನತ್ತ ಸೆಳೆದುಕೊಂಡಿದ್ದ ಬಿಜೆಪಿ, ಈಗ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಜತೆ ನಿಕಟ ಬಾಂಧವ್ಯ ಬೆಳೆಸಲು ಮತ್ತು ಎನ್‌ಸಿಪಿಯ ಎರಡೂ ಬಣಗಳನ್ನು ಒಂದಾಗಿಸಲು ಆಸಕ್ತಿ ತೋರಿಸುತ್ತಿದೆ. ಹಿರಿಯ ನಾಯಕ ಶರದ್ ಪವಾರ್ ಅವರೊಂದಿಗೆ ಮತ್ತೊಮ್ಮೆ ಹಳೇ ಬಾಂಧವ್ಯವನ್ನು ಚಿಗುರಿಸಲು ಮುಂದಾಗಿದೆ.

- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶರದ್ ಪವಾರ್ ಆಸ್ಪತ್ರೆಗೆ ದಾಖಲಾದಾಗ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು ಮತ್ತು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್‌ಸಿಪಿ ನಿಯೋಗವನ್ನು ಭೇಟಿಯಾಗಿದ್ದು ಈ ಅನುಮಾನಗಳಿಗೆ ಪ್ರಮುಖ ಪುಷ್ಟಿ ನೀಡಿವೆ. ರಾಜಕೀಯದಲ್ಲಿ ಶಾಶ್ವತ ಶತ್ರುಗಳಾಗಲಿ ಅಥವಾ ಮಿತ್ರರಾಗಲಿ ಇರುವುದಿಲ್ಲ ಎಂಬುದಕ್ಕೆ ಈ ಬೆಳವಣಿಗೆಗಳು ಜೀವಂತ ಉದಾಹರಣೆಯಾಗಿವೆ. ಹಾಗೆಯೇ ಈ ಹಿಂದೆ ಎನ್‌ಸಿಪಿ ಪಕ್ಷವನ್ನು ಒಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿ ಬಿಜೆಪಿ ಈಗ ಎನ್‌ಸಿಪಿಯ ಎರಡೂ ಬಣಗಳನ್ನು ಮತ್ತೆ ಒಂದಾಗಿಸಲು ಒಲವು ತೋರುತ್ತಿರುವುದರ ಹಿಂದೆ ದೊಡ್ಡ ರಾಜಕೀಯ ಲೆಕ್ಕಾಚಾರವಿರುವುದು ಸ್ಪಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ...

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ ಬಿಕ್ಕಟ್ಟು ಶಾಶ್ವತವಾಗಿ ಪರಿಹಾರವಾಗುತ್ತದೆಯೇ ಎಂಬುದು. ಆದರೆ, ಇದು ವಾಸ್ತವಕ್ಕೆ ತೀರಾ ದೂರವಾದ ನಿರೀಕ್ಷೆಯಾಗಿದೆ. ಐಸೆನ್‌ಕೋಟ್‌ ಅವರು ವಾಸ್ತವಿಕವಾದಿ ನಾಯಕನೇ ಹೊರತು,...

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ...

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ ನಿಲುವಿನಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ, ಜನಪರ ಧೋರಣೆಯನ್ನು ಉಳಿಸಿಕೊಂಡು ಬಂದಿದೆ. ಸಾರ್ಥಕ 49 ವರ್ಷಗಳನ್ನು ಪೂರೈಸಿ, ಈಗ 50ನೇ ವರ್ಷಕ್ಕೆ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ...

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ ಇದಾಗಿದೆ,ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಮಂಡ್ಯ, ಮೈಸೂರು ಸೇರಿದಂತೆ 10 ರಿಂದ 15 ಜಿಲ್ಲೆಗಳಲ್ಲಿ...

ಇದನ್ನೂ ಓದಿ: ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ವಿಧೇಯಕಗಳಿಗೆ ಬೆಂಬಲ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಂಬರುವ ದಿನಗಳಲ್ಲಿ ದೇಶಾದ್ಯಂತ ಕ್ಷೇತ್ರ ಮರು ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗಳನ್ನು ಸಂಸತ್ತಿನಲ್ಲಿ ಅನುಮೋದನೆ ಮಾಡಿಸುವುದು ಅತ್ಯಂತ ಸವಾಲಿನ ಹೆಜ್ಜೆಯಾಗಿದೆ. ಈ ಪ್ರಮುಖ ಶಾಸನಗಳಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು (2/3rd) ಬಹುಮತ ಕಡ್ಡಾಯವಾಗಿದೆ. ಆದರೆ, ಕಳೆದ ವಿಶೇಷ ಅಧಿವೇಶನದಲ್ಲಿ ಬಿಜೆಪಿಗೆ ಈ ಸಂಖ್ಯೆಯನ್ನು ತಲುಪಲು ಸಾಧ್ಯವಾಗಿರಲಿಲ್ಲ. ಲೋಕಸಭೆಯಲ್ಲಿ 298 ಮತಗಳು ಮಾತ್ರ ಮಸೂದೆಗೆ ಪರವಾಗಿ ಬಂದಿದ್ದರೆ, 230 ಮತಗಳು ವಿರೋಧವಾಗಿ ಬಿದ್ದಿದ್ದವು. ಈ ಹಿನ್ನೆಲೆಯಲ್ಲಿ, ಸಂಸತ್ತಿನಲ್ಲಿ ಬಲವಾಗಿರುವ ಶರದ್ ಪವಾರ್ ಅವರ ಪಕ್ಷದ ಬೆಂಬಲವನ್ನು ಸಂಪೂರ್ಣವಾಗಿ ಪಡೆಯಲು ಮತ್ತು ಸಂಖ್ಯಾಬಲವನ್ನು ಭದ್ರಪಡಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಪ್ರಾದೇಶಿಕ ಶಕ್ತಿಗಳ ಜೊತೆ ರಾಜಿ ಸೂತ್ರಕ್ಕೆ ಮುಂದಾಗಿದೆ.

ಮಹಾರಾಷ್ಟ್ರದಲ್ಲಿ ಪ್ರಬಲಗೊಳ್ಳುತ್ತಿರುವ ಕಾಂಗ್ರೆಸ್ ನಿಯಂತ್ರಣ

ಮಹಾರಾಷ್ಟ್ರದ ರಾಜಕೀಯ ರಂಗದಲ್ಲಿ ಕಾಂಗ್ರೆಸ್ ಇತ್ತೀಚಿನ ದಿನಗಳಲ್ಲಿ ಮತ್ತೊಮ್ಮೆ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸುತ್ತಿದೆ. ಜನರ ನಡುವೆ ತನ್ನ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದೆ. ಕಾಂಗ್ರೆಸ್‌ನ ಈ ಅನಿರೀಕ್ಷಿತ ಬೆಳವಣಿಗೆಯು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವುದು ರಾಜಕೀಯ ಅನಿವಾರ್ಯತೆಯಾಗಿದೆ ಎಂದು ಬಿಜೆಪಿ ನಂಬಿದೆ. ಎನ್‌ಸಿಪಿಯ ಒಡೆದ ಬಣಗಳು ಪ್ರತ್ಯೇಕವಾಗಿ ಉಳಿದರೆ ಅದು ಒಟ್ಟಾರೆ ಪ್ರಾದೇಶಿಕ ಮತ ಬ್ಯಾಂಕಿಗೆ ಧಕ್ಕೆ ತರಬಹುದು ಎಂಬ ಕಾರಣಕ್ಕೆ, ಎರಡೂ ಬಣಗಳ ವಿಲೀನಕ್ಕೆ ಬಿಜೆಪಿ ಮೃದು ಧೋರಣೆ ತೋರುತ್ತಿದೆ.

ಸೈದ್ಧಾಂತಿಕವಾಗಿ ಬಿಜೆಪಿ ಮತ್ತು ಶರದ್ ಪವಾರ್ ವಿರುದ್ಧ ಧ್ರುವಗಳಲ್ಲಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹಾಗೂ ಶರದ್ ಪವಾರ್ ನಡುವಿನ ವೈಯಕ್ತಿಕ ಸಂಬಂಧಗಳು ಸೌಹಾರ್ದಯುತವಾಗಿವೆ. ಪವಾರ್ ಆಸ್ಪತ್ರೆಯಿಂದ ಬಿಡುಗಡೆಯಾದ ಸಂದರ್ಭದಲ್ಲೂ ಅವರ ಆರೋಗ್ಯದ ಬಗ್ಗೆ ವಿಚಾರಿಸುವುದು ಯಾವುದೇ ಅಸಾಮಾನ್ಯ ರಾಜಕೀಯ ನಡೆ ಎಂದು ಬಿಜೆಪಿ ಪರಿಗಣಿಸಿರುವಂತಿಲ್ಲ.

ಇದನ್ನೂ ಓದಿ: ಪುಣೆ ಪಾಲಿಕೆ ಚುನಾವಣೆ: ಒಗ್ಗೂಡಿದ ಎನ್‌ಸಿಪಿ ಬಣಗಳು; ಜಂಟಿ ಪ್ರಣಾಳಿಕೆ ಬಿಡುಗಡೆ

ಇದರೊಂದಿಗೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಕುಟುಂಬದ ಪ್ರಮುಖರಾದ ಸುಪ್ರಿಯಾ ಸುಳೆ (ಲೋಕಸಭೆ ಸಂಸದೆ) ಅವರ ರಾಜಕೀಯ ಕಾರ್ಯವೈಖರಿಯನ್ನು ಬಿಜೆಪಿ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಎನ್‌ಸಿಪಿ ವಿಲೀನದ ಅಂತಿಮ ತೀರ್ಮಾನವನ್ನು ಶರದ್ ಪವಾರ್ ಮತ್ತು ಸುನೇತ್ರಾ ಪವಾರ್ ಅವರ ವಿವೇಚನೆಗೆ ಬಿಡಲಾಗಿದೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರೂ, ತೆರೆಮರೆಯಲ್ಲಿ ಇದಕ್ಕೆ ಪೂರಕವಾದ ವಾತಾವರಣ ನಿರ್ಮಿಸಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಿಜೆಪಿಯು ಇಂದು ಎನ್‌ಸಿಪಿಯನ್ನು ಮತ್ತೆ ಒಗ್ಗೂಡಿಸಲು ಅಥವಾ ಎರಡೂ ಬಣಗಳ ನಡುವೆ ಸೌಹಾರ್ದತೆ ಮೂಡಿಸಲು ಹೊರಟಿರುವುದು ಯಾವುದೇ ಭಾವನಾತ್ಮಕ ಕಾರಣಕ್ಕಲ್ಲ; ಬದಲಿಗೆ ಇದು ಸಂಪೂರ್ಣವಾಗಿ ರಾಜಕೀಯ ಮತ್ತು ಸಂಸತ್ ವ್ಯವಸ್ಥೆಯ ಅಂಕಿ-ಅಂಶಗಳ ಲೆಕ್ಕಾಚಾರದ ಮೇರೆಗೆ ತೆಗೆದುಕೊಂಡಿರುವ ತಂತ್ರವಾಗಿದೆ. ಕೇಂದ್ರ ಸರ್ಕಾರದ ಪ್ರಮುಖ ಮಸೂದೆಗಳನ್ನು ಯಾವುದೇ ಅಡಚಣೆಯಿಲ್ಲದೆ ಪಾಸ್ ಮಾಡಿಕೊಳ್ಳಲು ಪ್ರತಿಯೊಬ್ಬ ಸಂಸದರ ಬೆಂಬಲವೂ ಮುಖ್ಯವಾಗಿರುವ ಕಾರಣ, ಬಿಜೆಪಿ ಹೊಸ ರಾಜಕೀಯ ಸಮೀಕರಣಕ್ಕೆ ಕೈಹಾಕಿದೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಈ ‘ಪವಾರ್-ಬಿಜೆಪಿ’ ಸಖ್ಯ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ ಮಾಧ್ಯಮ’

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ ಆಗ್ರಹ

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ...

ನಾನೊಬ್ಬ ಧಾರ್ಮಿಕ ವ್ಯಕ್ತಿ , ಸತ್ತ ಮೇಲೆ ನಾನು ಸ್ವರ್ಗ ಸೇರುತ್ತೇನೆ: ಟ್ರಂಪ್

ತಮ್ಮ ವಿರುದ್ಧ ಸಾಲು ಸಾಲು ಆರೋಪಗಳು, ವಿವಾದಾತ್ಮಕ ನಿರ್ಧಾರಗಳು ಹಾಗೂ ಗಂಭೀರ...