ವಿಜಯಪುರ | ಆಲಮಟ್ಟಿ ಒಳಹರಿವು ವಿಳಂಬ: ಕೃಷ್ಣಾ ತೀರದ ರೈತರಲ್ಲಿ ಆತಂಕದ ಕಾರ್ಮೋಡ

Date:

ಜೂನ್ ತಿಂಗಳು ಆರಂಭವಾಗಿ ಏಳು ದಿನಗಳು ಕಳೆದರೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ವಿಜಯಪುರದ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನಿರೀಕ್ಷಿತ ಮಟ್ಟದಲ್ಲಿ ನೀರಿನ ಒಳಹರಿವು ಬಾರದಿರುವುದು, ಬೇಸಾಯಕ್ಕೆ ಜಲಾಶಯವನ್ನು ಅವಲಂಬಿಸಿರುವ ಕೃಷ್ಣಾ ತೀರದ ರೈತರ ಆತಂಕಕ್ಕೆ ಕಾರಣವಾಗಿದೆ.

- Advertisement -

ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲೇ ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸುಗೊಂಡು, ಕೃಷ್ಣಾ ನದಿಯ ಮೂಲಕ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವು ಆರಂಭವಾಗುತ್ತಿತ್ತು. ಆದರೆ ಈ ಬಾರಿ ಸಮರ್ಪಕ ಮಳೆಯಾಗದ ಕಾರಣ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದ ನೀರು ಇನ್ನೂ ಹರಿದು ಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಜೂನ್ 7 ಉತ್ತರ ಕರ್ನಾಟಕದ ರೈತರಿಗೆ ವಿಶೇಷ ದಿನವಾಗಿದೆ. ಸಾಮಾನ್ಯವಾಗಿ ಈ ವೇಳೆಗೆ ಮುಂಗಾರು ಚುರುಕುಗೊಂಡು ಕೃಷ್ಣಾ ನದಿಗೆ ನೀರಿನ ಹರಿವು ಹೆಚ್ಚಾಗಿ, ಜಲಾಶಯಗಳಿಗೆ ಒಳಹರಿವು ಆರಂಭವಾಗುತ್ತಿತ್ತು. ಇದು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸುತ್ತಿತ್ತು. ಜುಲೈ ತಿಂಗಳ ಗುರುಪೂರ್ಣಿಮೆ ಅಥವಾ ಕಡ್ಲಿಗರ ಹುಣ್ಣಿಮೆಯ ವೇಳೆಗೆ ಜಲಾಶಯಗಳು ಭರ್ತಿಯ ಹಂತ ತಲುಪಿ, ರೈತರು ಬಾಗಿನ ಅರ್ಪಿಸಿ ಸಂಭ್ರಮಿಸುತ್ತಿದ್ದರು. ಆದರೆ, ಈ ವರ್ಷ ಮಳೆಯ ಕೊರತೆಯಿಂದ ಜೂನ್ ಮೊದಲ ವಾರ ಕಳೆದರೂ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದ ಒಳಹರಿವು ಆರಂಭವಾಗದೆ ರೈತರಲ್ಲಿ ಆತಂಕ ಮನೆ ಮಾಡಿದೆ.

ಆಲಮಟ್ಟಿ ಜಲಾಶಯಕ್ಕೆ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿಯುವ ಮಳೆಯೇ ಪ್ರಮುಖ ಆಸರೆಯಾಗುತ್ತದೆ. ರಾಜ್ಯದಲ್ಲಿ ಮಳೆಯಾಗದಿದ್ದರೂ ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರ ಸೇರಿದಂತೆ ಕೃಷ್ಣಾ ಜಲಾನಯನ ವ್ಯಾಪ್ತಿಯಲ್ಲಿ ಸುರಿವ ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಾ ಬಂದಿದೆ. ಅಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾದಾಗ ಕೃಷ್ಣೆಯ ಉಪನದಿಗಳಾದ ಕೊಯ್ತಾ, ದೂದಗಂಗಾ, ವೇದಗಂಗಾ, ಘಟಪ್ರಭಾ ಸೇರಿದಂತೆ ನಾನಾ ನದಿಗಳು ತುಂಬಿ ಹರಿದು ಆಲಮಟ್ಟಿ ಜಲಾಶಯಕ್ಕೆ ಹೇರಳ ಪ್ರಮಾಣದಲ್ಲಿ ನೀರು ಬರುತ್ತದೆ.

ಅಲ್ಲದೇ ಕೆಲ ಬಾರಿ ಪ್ರವಾಹ ಕೂಡ ಉಂಟಾಗಿದೆ. ಆದರೆ, ಸದ್ಯ ಪಶ್ಚಿಮ ಘಟ್ಟಗಳಲ್ಲಿ ಮಳೆ ಬಾರದ ಕಾರಣ ಒಳಹರಿವು ಉಂಟಾಗಿಲ್ಲ. ಇದರಿಂದ ಕೃಷ್ಣಾನದಿ ತೀರದ ರೈತರು, ವಿಶೇಷವಾಗಿ ನೀರಾವರಿ ಆಧಾರಿತ ಬೆಳೆಗಳನ್ನು ಬೆಳೆಯುವವರು ಚಿಂತೆಗೆ ಒಳಗಾಗಿದ್ದಾರೆ.

519.60 ಮೀಟರ್ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿಗ 508.39 ಮೀಟ‌ರ್ ಎತ್ತರದಲ್ಲಿ 22.888 ಟಿಎಂಸಿ ನೀರು ಸಂಗ್ರಹವಿತ್ತು. ಕೆರೆ ತುಂಬಲು ಸೇರಿದಂತೆ ಒಟ್ಟು 1,806 ಕ್ಯುಸೆಕ್ ಹೊರಹರಿವು ಇತ್ತು. 2025ರ ಜೂ.6ರಂದು 514.09 ಮೀಟರ್ ಎತ್ತರದಲ್ಲಿ 55.392 ನೀರು ಸಂಗ್ರಹವಿತ್ತು.5,885 ಕ್ಯುಸೆಕ್ ಒಳಹರಿವು ಇತ್ತು. ಕುಡಿವ ನೀರು ಸೇರಿದಂತೆ ಒಟ್ಟು 2,158 ಕ್ಯುಸೆಕ್ ಹೊರಹರಿವು ಇತ್ತು. 2025ಕ್ಕೆ ಹೋಲಿಸಿದರೆ ಈ ವರ್ಷ 32.504 ಟಿಎಂಸಿ ನೀರು ಕಡಿಮೆ ಇದೆ.

ಸದ್ಯ ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹಗೊಂಡಿರುವ 22.888 ಟಿಎಂಸಿ ನೀರಿನಲ್ಲಿ ಡೆಡ್ ಸ್ಟೋರೇಜ್ 17.61 ಟಿಎಂಸಿ ಹೊರತು ಪಡಿಸಿ 5.268 ಟಿಎಂಸಿ ನೀರು ಬಳಸಬಹುದಾಗಿದೆ. ಈ ನೀರನ್ನು ಕೇವಲ ಕುಡಿವ ನೀರಿನ ಉದ್ದೇಶಕ್ಕೆ ಬಳಸಲಾಗುತ್ತದೆ.

ಜಲಾಶಯಕ್ಕೆ ಮೇ ಮತ್ತು ಜೂನ್ ತಿಂಗಳಲ್ಲಿ ಒಳಹರಿವು ಆರಂಭವಾಗುತ್ತದೆ. 2025ರಲ್ಲಿ ಮೇ 19ರಿಂದ ಒಳಹರಿವು ಆರಂಭಗೊಂಡಿತ್ತು. ಮೇ ತಿಂಗಳ ಮೂರನೇ ವಾರಕ್ಕೆ ಒಳಹರಿವು ಕಂಡು ಬಂದಿರುವುದು ಜಲಾಶಯ ಇತಿಹಾಸದಲ್ಲಿಯೇ ಅದು ಮೊದಲ ಬಾರಿಯಾಗಿತ್ತು.2022ರಲ್ಲಿ ಅಸಾನಿ ಚಂಡ ಮಾರುತದ ಪರಿಣಾಮ ಸುರಿದ ಮಳೆಯಿಂದಾಗಿ ಮೇ 21ಕ್ಕೆ ಒಳ ಹರಿವು ಹೆಚ್ಚಾದರೆ, 2021ರಲ್ಲಿ ತೌತೆ ಚಂಡ ಮಾರುತ ದಿಂದ ಮೇ 24ಕ್ಕೆ ಒಳಹರಿವು ಶುರುವಾಯಿತು.2020ರಲ್ಲಿ ಜೂ.5ಕ್ಕೆ ಆರಂಭ, 2019ರಲ್ಲಿ ಜು.3ರಂದು ಒಳಹರಿವು ಆರಂಭವಾಗಿತ್ತು.

ಈದಿನ. ಕಾಮ್ ಜೊತೆ ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಈ ಬಾರಿ ಸಮರ್ಪಕವಾಗಿ ಮಳೆಯಾಗದ ಕಾರಣ ರೈತ ಸಮುದಾಯದಲ್ಲಿ ಆತಂಕ ಮನೆ ಮಾಡಿದೆ. ಕೃಷಿ ಚಟುವಟಿಕೆಗಳು ಮುಂಗಾರು ಮಳೆಯನ್ನೇ ಅವಲಂಬಿಸಿರುವುದರಿಂದ ಅನ್ನದಾತರು ವರುಣನ ಕೃಪೆಗಾಗಿ ಎದುರು ನೋಡುತ್ತಿದ್ದಾರೆ. ಆಲಮಟ್ಟಿ ಜಲಾಶಯಕ್ಕೂ ಇನ್ನೂ ನಿರೀಕ್ಷಿತ ಪ್ರಮಾಣದ ಒಳಹರಿವು ಆರಂಭವಾಗಿಲ್ಲ. ಶೀಘ್ರದಲ್ಲೇ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ ರೈತರಲ್ಲಿ ಹೊಸ ಆಶಾಭಾವನೆ ಮೂಡಲಿ ಎಂಬ ನಿರೀಕ್ಷೆಯಿದೆ” ಎಂದು ಅಭಿಪ್ರಾಯಪಟ್ಟರು.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು ಸೇರಿ 11 ಬಂದರುಗಳನ್ನು ಮಾರಲು ಹೊರಟ ಮೋದಿ

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...