ವಿಜಯಪುರ | ಪಕ್ಷಿಗಳ ದಾಹ ತಣಿಸಿದ ಯುವಪಡೆ: ಪ್ಲಾಸ್ಟಿಕ್ ಬಾಟಲಿ ಬಳಸಿ ಅರವಟ್ಟಿಗೆ ನಿರ್ಮಾಣ

Date:

ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನೀರಿನ ಕೊರತೆಯಿಂದ ಪಕ್ಷಿ ಸಂಕುಲ ಸಂಕಷ್ಟಕ್ಕೆ ಸಿಲುಕುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಆದರೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಗಡಿ ಸೋಮನಾಳ ಗ್ರಾಮದ ಯುವಕರ ತಂಡ ಕೈಗೊಂಡಿರುವ ವಿನೂತನ ಕಾರ್ಯ ಪರಿಸರ ಪ್ರೇಮಿಗಳ ಗಮನ ಸೆಳೆದಿದೆ. ತ್ಯಾಜ್ಯ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ಅರವಟ್ಟಿಗೆಗಳನ್ನು ಕಟ್ಟುವ ಮೂಲಕ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸುವ ಕಾರ್ಯಕ್ಕೆ ಯುವಕರು ಮುಂದಾಗಿದ್ದಾರೆ.

- Advertisement -

ಗ್ರಾಮದ ರಸ್ತೆ ಬದಿಯ ಗಿಡಗಳು, ಅರಣ್ಯ ಇಲಾಖೆಯಿಂದ ನೆಡಲಾದ ಗಿಡ ಮರಗಳಿಗೆ ಬಾಟಲಿ ನಿರ್ಮಿತ ಅರವಟ್ಟಿಗೆಗಳಲ್ಲಿ ನೀರು ತುಂಬಿ ಪಕ್ಷಿಗಳಿಗೆ ನೀರುಣಿಸುವ ಶ್ಲಾಘನೀಯ ಕಾರ್ಯ ನಡೆಯುತ್ತಿದೆ. ಈ ಪ್ರಯತ್ನದಿಂದ ಚಿಟುಗುಬ್ಬಿ, ಗಿಳಿ, ಕಾಗೆ, ಕೋಗಿಲೆ, ಮರಕುಟಿಕ, ಗುಬ್ಬಚ್ಚಿ ಸೇರಿದಂತೆ ವಿವಿಧ ಪಕ್ಷಿಗಳು ಗುಂಪು ಗುಂಪಾಗಿ ಬಂದು ನೀರು ಕುಡಿದು ದಾಹ ತಣಿಸಿಕೊಳ್ಳುತ್ತಿವೆ. ಮಧ್ಯಾಹ್ನದ ಸುಡುಬಿಸಿಲ ಗಳಿಗೆಯಲ್ಲಿ ಈ ಗಿಡಮರಗಳು ಪಕ್ಷಿಗಳಿಗೆ ನೆರಳು ಹಾಗೂ ವಿಶ್ರಾಂತಿಯ ನೆಲೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...


ಶ್ರೀ ವಾಸ್ಗತೇಶ್ವರ ಮಠದ ಬಾಲ ಸೇವಯೋಗಿ ಸಿದ್ದಲಿಂಗ ಶ್ರೀಗಳ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈ ಕಾರ್ಯ ಆರಂಭವಾಗಿದೆ. “ಅಜ್ಜನ ನಡಿಗೆ ಹಳ್ಳಿ ಕಡೆಗೆ” ಎಂಬ ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆ, ಪ್ರಾಣಿ–ಪಕ್ಷಿ ಸಂಕುಲ ಉಳಿವು ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಯುವಕರಿಗೆ ತಿಳಿವಳಿಕೆ ನೀಡಲಾಗಿತ್ತು. ಈ ಸಂದೇಶದಿಂದ ಪ್ರೇರಿತಗೊಂಡ ಗಡಿ ಸೋಮನಾಳ ಗ್ರಾಮದ ಶ್ರೀ ಬಸವ ಚೇತನ ಗ್ರಾಮೀಣಾಭಿವೃದ್ಧಿ ಸಂಘದ ಯುವಕರು ತಕ್ಷಣ ಕಾರ್ಯ ಪ್ರವೃತ್ತರಾಗಿದ್ದಾರೆ.

ಸಾವಿರ ಗಿಡಗಳಿಗೆ ಅರವಟ್ಟಿಗೆ:

ಬಳಸಿ ಎಸೆದ ಬಿಸ್ಲೆರಿ ಬಾಟಲಿಗಳನ್ನು ಸಂಗ್ರಹಿಸಿ ಅವುಗಳನ್ನು ಕತ್ತರಿಸಿ ನೀರು ತುಂಬುವ ಅರವಟ್ಟಿಗೆಗಳಾಗಿ ಮಾರ್ಪಡಿಸಲಾಗಿದೆ. ಬಳಿಕ ಅವುಗಳನ್ನು ಗಿಡಗಳಿಗೆ ಕಟ್ಟಲಾಗಿದ್ದು, ದಿನವೂ ನೀರು ತುಂಬುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸಾವಿರಕ್ಕೂ ಹೆಚ್ಚು ಗಿಡಗಳಿಗೆ ಅರವಟ್ಟಿಗೆಗಳನ್ನು ನಿರ್ಮಿಸಿರುವ ಯುವಕರು ಮುಂದಿನ ದಿನಗಳಲ್ಲಿ ಈ ಅರವಟ್ಟಿಗೆ ಕಾರ್ಯವನ್ನು ವಿಸ್ತರಿಸುವ ಗುರಿ ಹೊಂದಿದ್ದಾರೆ.


ಈ ಕಾರ್ಯ ಆರಂಭವಾದ ಬಳಿಕ ಪ್ರದೇಶದಲ್ಲಿ ಪಕ್ಷಿಗಳ ಸಂಚಾರ ಹೆಚ್ಚಾಗಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನದ ಹೊತ್ತಿನಲ್ಲಿ ನೂರಾರು ಪಕ್ಷಿಗಳು ನೀರು ಕುಡಿಯಲು ಬರುತ್ತಿರುವುದು ಗ್ರಾಮಸ್ಥರ ಗಮನ ಸೆಳೆಯುತ್ತಿದೆ. ಕೆಲವು ಪಕ್ಷಿಗಳು ಇದೇ ಗಿಡಗಳಲ್ಲಿ ನೆಲೆಸಲು ಪ್ರಾರಂಭಿಸಿರುವುದು ಪರಿಸರ ಸಮತೋಲನದ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಡುತ್ತಾರೆ.


ಇಂದಿನ ತಂತ್ರಜ್ಞಾನ ಯುಗದಲ್ಲಿ ಮಾನವನ ಬದುಕು ವೇಗವಾಗಿ ಬದಲಾಗುತ್ತಿರುವಂತೆ ಪಕ್ಷಿಗಳ ನೆಲೆಗಳು ಕಡಿಮೆಯಾಗುತ್ತಿವೆ. ಮರಗಳ ನಾಶ, ನೀರಿನ ಕೊರತೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯದ ಹೆಚ್ಚಳದಿಂದ ಪಕ್ಷಿ ಸಂಕುಲಕ್ಕೆ ಅಪಾಯ ಎದುರಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿಗಳನ್ನು ಉಪಯೋಗಿಸಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿರುವುದು ಪರಿಸರ ಜಾಗೃತಿ ಮೂಡಿಸುವ ಕಾರ್ಯವಾಗಿದೆ.

ಗ್ರಾಮಸ್ಥರಿಂದ ಪ್ರಶಂಸೆ

ಗ್ರಾಮಸ್ಥರು ಯುವಕರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಕಡಿಮೆ ವೆಚ್ಚದಲ್ಲಿ, ಸುಲಭವಾಗಿ ಮಾಡಬಹುದಾದ ಈ ಪ್ರಯತ್ನವನ್ನು ಇತರೆ ಗ್ರಾಮಗಳೂ ಅನುಸರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಶಾಲಾ ವಿದ್ಯಾರ್ಥಿಗಳಿಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯ ಸಹಕಾರಿಯಾಗಲಿದೆ ಎಂದು ಹಿರಿಯರು ತಿಳಿಸಿದ್ದಾರೆ.


ಪಕ್ಷಿ ಸಂಕುಲ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಮನೆಯ ಮುಂದೆ ಒಂದು ಪಾತ್ರೆಯಲ್ಲಿ ನೀರು ಇಡುವುದರಿಂದಲೂ ಪಕ್ಷಿಗಳಿಗೆ ಜೀವದಾನ ನೀಡಬಹುದು. ಬಳಕೆಯಾದ ಬಾಟಲಿಗಳನ್ನು ಎಸೆಯುವ ಬದಲು ಇಂತಹ ಉಪಯೋಗಕ್ಕೆ ತರಬಹುದು ಎಂಬ ಸಂದೇಶವನ್ನು ಯುವಕರು ನೀಡಿದ್ದಾರೆ


ಈ ಮಾದರಿ ಕಾರ್ಯದಲ್ಲಿ ಶ್ರೀ ಬಸವಚೇತನ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಸಂಗಮೇಶ ಹರವಾಳ, ಕಾರ್ಯದರ್ಶಿ ಗುರುರಾಜ ಕಾಜಗಾರ, ಪದಾಧಿಕಾರಿಗಳಾದ ಗೌಡ ಬಿರಾದಾರ, ವಡವಡಗಿ, ಕುಮಾರ ಹರವಾಳ, ವಿಜಯಕುಮಾರ ಸಾಸನೂರ, ರಮೇಶ ಹರಳ ಸೇರಿದಂತೆ ಅನೇಕ ಯುವಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ.

ಪರಿಸರ ಸಂರಕ್ಷಣೆ ಮತ್ತು ಪಕ್ಷಿ ಸಂಕುಲ ಉಳಿವಿಗೆ ಯುವಕರು ಕೈಗೊಂಡಿರುವ ಈ ವಿನೂತನ ಪ್ರಯತ್ನ ಇತರ ಪ್ರದೇಶಗಳಿಗೆ ಮಾದರಿಯಾಗಿದ್ದು, “ಚಿಕ್ಕ ಪ್ರಯತ್ನ – ದೊಡ್ಡ ಪರಿಣಾಮ” ಎಂಬುದಕ್ಕೆ ನಿಜವಾದ ಉದಾಹರಣೆ ಯಾಗಿದೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...