ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ, ತೊಡುವ, ಸ್ವಚ್ಛಂದವಾಗಿ ವಿಹರಿಸುವ ಕನಿಷ್ಠ ಸ್ವಾತಂತ್ರ್ಯವನ್ನು ಕಸಿಯಲಾಗುತ್ತಿದೆ. ಹೀಗೆ ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕುವ ಬದಲು ಆಕೆ ನಿರ್ಭಯಳಾಗಿ ಓಡಾಡುವ ಸುರಕ್ಷಿತ ಸಮಾಜ ನಿರ್ಮಿಸಬೇಕಿರುವುದು ಸ್ವಾಸ್ಥ್ಯ ಸಮಾಜದ ಆದ್ಯ ಕರ್ತ್ಯವ್ಯ. 

ದಕ್ಷಿಣ ದೆಹಲಿಯ ಆಸ್ತಾ ಕುಂಜ್ ಪಾರ್ಕ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ದೆಹಲಿ ವಿಶ್ವವಿದ್ಯಾನಿಲಯದ ನೂರಾರು ವಿದ್ಯಾರ್ಥಿನಿಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಬೆನ್ನಲ್ಲೇ ಸಾರ್ವಜನಿಕ ಸುರಕ್ಷತೆಯಲ್ಲಿ ಸರ್ಕಾರದ ವೈಫಲ್ಯವನ್ನು ತೀವ್ರವಾಗಿ ಟೀಕೆಗೊಳಪಡಿಸಿದ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕಟ್ಟುನಿಟ್ಟಿನ ಕ್ರಮಗಳಿಗೆ ಆದೇಶಿಸಿದೆ.

- Advertisement -

ದೆಹಲಿ ವಿಶ್ವವಿದ್ಯಾನಿಲಯದ ನೂರಾರು ವಿದ್ಯಾರ್ಥಿನಿಯರು ಸೆಪ್ಟೆಂಬರ್ 2026ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮಹಿಳಾ ಸುರಕ್ಷತೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಸಂಚರಿಸುವ ಸ್ವಾತಂತ್ರ್ಯಕ್ಕೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದರು. ದಕ್ಷಿಣ ದೆಹಲಿಯ ಕಲ್ಕಾಜಿ ದೇವಸ್ಥಾನದ ಸಮೀಪವಿರುವ ಆಸ್ತಾ ಕುಂಜ್ ಪಾರ್ಕ್‌ನಲ್ಲಿ ಸೆಪ್ಟೆಂಬರ್ 21ರಂದು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಈ ಬೃಹತ್ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು.

ಮಿರಂಡಾ ಹೌಸ್, ಲೇಡಿ ಶ್ರೀ ರಾಮ್, ಗಾರ್ಗಿ ಮತ್ತು ಕಮಲಾ ನೆಹರು ಸೇರಿದಂತೆ ದೆಹಲಿ ವಿವಿಯ ವಿವಿಧ ಮಹಿಳಾ ಕಾಲೇಜುಗಳ ವಿದ್ಯಾರ್ಥಿನಿಯರು ಮತ್ತು ಕ್ವೀರ್ ಸಮುದಾಯದವರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ಹಮ್ ಔರತೇನ್ ಆಜಾದ್ ಹೈ” …

Advertisements

ಸೆಪ್ಟೆಂಬರ್ 28ರಂದು ನಡೆದ ಅತಿದೊಡ್ಡ ಮೆರವಣಿಗೆಯಲ್ಲಿ ವಿದ್ಯಾರ್ಥಿನಿಯರು “ಹಮ್ ಔರತೇನ್ ಆಜಾದ್ ಹೈ” ಎಂಬ ಘೋಷಣೆಯಡಿ ಮಿರಂಡಾ ಹೌಸ್‌ನಿಂದ ಕಲಾ ವಿಭಾಗದ ಸ್ವಾಮಿ ವಿವೇಕಾನಂದರ ಪ್ರತಿಮೆಯವರೆಗೆ ಭಾರಿ ಮಳೆಯ ನಡುವೆಯೂ ಮೆರವಣಿಗೆ ನಡೆಸಿದರು. ಸುರಕ್ಷತೆಯ ಹೆಸರಿನಲ್ಲಿ ಮಹಿಳೆಯರ ಸಂಚಾರಕ್ಕೆ ರಾತ್ರಿ ವೇಳೆ ಕರ್ಫ್ಯೂ ವಿಧಿಸುವುದನ್ನು ಅಥವಾ ಸಾರ್ವಜನಿಕ ಸ್ಥಳಗಳಿಗೆ ಬರುವುದನ್ನು ತಡೆಯುವುದನ್ನು ತೀವ್ರವಾಗಿ ವಿರೋಧಿಸಿದರು. ಸಾರ್ವಜನಿಕ ಸ್ಥಳಗಳನ್ನು ಮಹಿಳೆಯರಿಗೆ ನಿರ್ಬಂಧಿಸುವುದು ಸಮಸ್ಯೆಗೆ ಪರಿಹಾರವಲ್ಲ ಬದಲಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ ಎಂಬುದನ್ನು ಒತ್ತಿ ಹೇಳಿದರು.

ಕ್ಯಾಂಪಸ್ ರಸ್ತೆಗಳು, ಹಾಸ್ಟೆಲ್‌ಗಳು ಮತ್ತು ಪಾರ್ಕ್‌ಗಳ ಸುತ್ತ ಸರಿಯಾದ ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ತಡರಾತ್ರಿ ಪ್ರಯಾಣಿಸುವ ವಿದ್ಯಾರ್ಥಿನಿಯರಿಗಾಗಿ ದೆಹಲಿ ಸಾರಿಗೆ ಸಂಸ್ಥೆ ವತಿಯಿಂದ ವಿಶೇಷ ಶಟಲ್ ಬಸ್ ಸೇವೆಗಳನ್ನು ಹೆಚ್ಚಿಸಬೇಕು ಮತ್ತು ಸುರಕ್ಷಿತ ಸಾರಿಗೆ ಸಂಪರ್ಕ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ಇಟ್ಟರು. ಕಾಲೇಜು ಈವೆಂಟ್‌ಗಳು ಮತ್ತು ಹಬ್ಬಗಳ ಸಮಯದಲ್ಲಿ ನಡೆಯುವ ಲೈಂಗಿಕ ಕಿರುಕುಳದ ದೂರುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗ್ರಹಿಸಿದರು.

ಈ ಭಾರಿ ಪ್ರತಿಭಟನೆಯ ಬೆನ್ನಲ್ಲೇ ದೆಹಲಿ ಪೊಲೀಸರು ನಗರದಾದ್ಯಂತ ವಿಶ್ವವಿದ್ಯಾಲಯಗಳು, ಶಾಲೆ-ಕಾಲೇಜುಗಳು ಮತ್ತು ಪಾರ್ಕ್‌ಗಳ ಸುತ್ತಮುತ್ತ ಭದ್ರತೆ ಹಾಗೂ ಪೆಟ್ರೋಲಿಂಗ್ ಹೆಚ್ಚಿಸಿದ್ದಾರೆ. ಪಾರ್ಕ್‌ಗಳ ಸುರಕ್ಷತಾ ತಪಾಸಣೆ, ಬೀದಿ ದೀಪಗಳು, ಸಿಸಿಟಿವಿ ಮತ್ತು ಪೆಟ್ರೋಲಿಂಗ್ ಮೇಲೆ ಗಮನ ಹರಿಸಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಕೂಡ ಪಾರ್ಕ್‌ಗಳ ಸಮಗ್ರ ಸುರಕ್ಷತಾ ತಪಾಸಣೆಗೆ ಆದೇಶಿಸಿದ್ದಾರೆ.

ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಕೋರ್ಟ್‌ ಛೀಮಾರಿ…

ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠವು ಪೊಲೀಸ್ ಕಮಿಷನರ್‌ಗೆ ಪ್ರತಿ ಜಿಲ್ಲೆಯಲ್ಲಿ ಡೆಪ್ಯೂಟಿ ಸೂಪರಿಂಟೆಂಟ್ ಆಫ್ ಪೊಲೀಸ್ ಮಟ್ಟದ ಅಧಿಕಾರಿಗಳ ನೇತೃತ್ವದ ತಂಡಗಳನ್ನು ರಚಿಸಿ ನಗರದ ನಿರ್ಜನ ಪ್ರದೇಶಗಳಲ್ಲಿ ಬೆಳಕು ಮತ್ತು ಸಿಸಿಟಿವಿ ವ್ಯವಸ್ಥೆ ಇದೆಯೆ ತಪಾಸಣೆ ನಡೆಸಿ ನಾಲ್ಕು ವಾರಗಳೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. 2012ರ ನಿರ್ಭಯಾ ಪ್ರಕರಣವನ್ನು ನೆನೆಯುತ್ತಾ ಅಂದಿನಿಂದಲೂ ಜಡವಾಗಿಯೇ ಉಳಿದ ಭದ್ರತಾ ವೈಫಲ್ಯವನ್ನು ಕೋರ್ಟ್‌ ಗಂಭೀರವಾಗಿ ಪ್ರಶ್ನಿಸಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ಇತ್ತೀಚೆಗೆ ನಡೆದ ಹಲವು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸುಪ್ರೀಂ ಕೋರ್ಟ್ ಸೋಮವಾರ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಈ ಪ್ರಕರಣಗಳನ್ನು ಆಘಾತಕಾರಿ ಘಟನೆಗಳಾಗಿ ವಿವರಿಸಿದೆ.

ಪೀಠವು ದೆಹಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ವಾತಾವರಣ ಒದಗಿಸಲು ವ್ಯವಸ್ಥಿತವಾಗಿ ವಿಫಲವಾಗಿದೆ ಎಂದು ತೀವ್ರವಾಗಿ ಟೀಕಿಸಿದೆ. ಸುರಕ್ಷಿತ ವಾತಾವರಣದಲ್ಲಿ ಬದುಕುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಪೀಠವು ಸ್ಪಷ್ಟಪಡಿಸಿದೆ.

ಸಂವಿಧಾನದ 21ನೇ ವಿಧಿಯಡಿ ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು, ಹಿಂಸೆಯ ಭಯವಿಲ್ಲದೆ ಘನತೆಯಿಂದ ಬದುಕುವ ಹಕ್ಕನ್ನು ಒಳಗೊಂಡಿದೆ ಎಂದು ಪೀಠವು ಹೇಳಿದೆ. ಉದ್ಯಾನವನಗಳು, ರಸ್ತೆಗಳು, ಬಸ್‌ಗಳು, ಮೆಟ್ರೋ ನಿಲ್ದಾಣಗಳು, ಸಬ್‌ವೇಗಳು ಮತ್ತು ಕಾಲು ಸೇತುವೆಗಳಂತಹ ಸಾರ್ವಜನಿಕ ಸ್ಥಳಗಳು ಸರಿಯಾದ ಬೆಳಕು, ನಿಗಾ ಮತ್ತು ಪೊಲೀಸ್ ಗಸ್ತಿನ ಕೊರತೆಯಿಂದ “ಅಪಾಯದ ವಲಯಗಳಾಗಿ” ಪರಿವರ್ತನೆಗೊಳ್ಳಬಾರದು ಎಂದು ಎಚ್ಚರಿಸಿದೆ.

2012ರ ನಿರ್ಭಯಾ ಪ್ರಕರಣದೊಂದಿಗೆ, ಕಳೆದ ದಶಕದಲ್ಲಿ ಕಾನೂನು ಜಾರಿ ವ್ಯವಸ್ಥೆಗಳು ಅರ್ಥಪೂರ್ಣ ಪ್ರಗತಿ ಸಾಧಿಸಿವೆಯೇ ಎಂದು ಪೀಠವು ಪ್ರಶ್ನಿಸಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೇವಲ ಸಹಾನುಭೂತಿ ವ್ಯಕ್ತಪಡಿಸುವುದು ಸಾಕಾಗದು ತಮಗೆ ನೇಮಿಸಿದ ಕಾರ್ಯಗಳ ಸರಿಯಾಗಿ ನಿರ್ವಹಿಸುವ ಜವಬ್ದಾರಿ ಎಲ್ಲರ ಹೆಗಲಿಗಿದೆ ಎಂದು ತಿಳಿಯಪಡಿಸಿದೆ.

ಸ್ವರೂಪ್ ನಗರದಲ್ಲಿ ಹದಿಹರೆಯದ ಹುಡುಗಿಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಗ್ರೇಟರ್ ನೊಯ್ಡಾದಿಂದ ದೆಹಲಿಗೆ ಸುಮಾರು 47 ಕಿಮೀ ಪ್ರಯಾಣಿಸಿದ ಸ್ಲೀಪರ್ ಬಸ್‌ನಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನೂ ಗಮನಕ್ಕೆ ತಂದಿದೆ.

ದೆಹಲಿ ಪೊಲೀಸ್ ಕಮಿಷನರ್‌ಗೆ ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್‌ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸುವಂತೆ ಆದೇಶಿಸಲಾಗಿದೆ. ಈ ತಂಡಗಳು ಉದ್ಯಾನವನಗಳು, ಪ್ರವಾಸಿ ಕೇಂದ್ರಗಳು, ಮಾರುಕಟ್ಟೆಗಳು, ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೀಘ್ರವೇ ಸಮೀಕ್ಷೆ ನಡೆಸಬೇಕೆಂದು ಆದೇಶಿಸಲಾಗಿದೆ.

ಸಾರ್ವಜನಿಕ ಸ್ಥಳಗಳು ಮಹಿಳೆಯರಿಗೆ ನಿರ್ಬಂಧಿತ ವಲಯಗಳಾಗದೆ, ಸುರಕ್ಷಿತ ತಾಣಗಳಾಗಬೇಕು. ವಿದ್ಯಾರ್ಥಿನಿಯರ ಹೋರಾಟ ಮತ್ತು ನ್ಯಾಯಾಲಯದ ಕಟ್ಟುನಿಟ್ಟಿನ ನಿರ್ದೇಶನಗಳು ಸರ್ಕಾರದ ಹೊಣೆಗಾರಿಕೆಯನ್ನು ನೆನಪಿಸಿವೆ. ಈಗ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಕಾಲಮಿತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರತಿಯೊಬ್ಬ ಮಹಿಳೆಗೆ ಸುರಕ್ಷತೆಯ ಭರವಸೆ ನೀಡಬೇಕಿದೆ.

WhatsApp Image 2026 03 09 at 18.17.26
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...