ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ; ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

Date:

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ ತೆಕ್ಕೆಯಲ್ಲಿದೆ. ಕ್ಷೇತ್ರವನ್ನು ಈ ಬಾರಿ ಶತಾಯ ಗತಾಯವಾಗಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಪಣತೊಟ್ಟಿದೆ.

- Advertisement -

ಪಶ್ಚಿಮ ಪದವೀಧರರ ಕ್ಷೇತ್ರ ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ. ಎರಡು ರಾಷ್ಟೀಯ ಪಕ್ಷಗಳ ಹೈಕಮಾಂಡ್ ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿ, ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿವೆ. ಬಿಜೆಪಿಯಿಂದ ಪ್ರೊ. ಎಸ್.ವಿ ಸಂಕನೂರು ಮತ್ತು ಕಾಂಗ್ರೆಸ್‌ನಿಂದ ಮೋಹನ್ ಲಿಂಬಿಕಾಯಿ ಕಣದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

2008ರಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್‌ನ ಹೆಚ್.ಕೆ ಪಾಟೀಲ್​ ಅವರನ್ನು ಸೋಲಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಲಿಂಬಿಕಾಯಿ ಅವರು ಮೊದಲಿಗೆ ವಿಧಾನಸಭಾ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ, ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಆದಾಗ್ಯಾ, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಗೂ ಎಂಟತ್ತು ತಿಂಗಳು ಮುನ್ನವೇ ಲಿಂಬಿಕಾಯಿ ಅವರನ್ನೇ ಕಾಂಗ್ರೆಸ್‌ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಅಂದಿನಿಂದಲೂ ತಯಾರಿ ನಡೆಸಿರುವ ಲಿಂಬಿಕಾಯಿ ಅವರು, ಕಾಂಗ್ರೆಸ್‌ಗೆ ಗೆಲುವು ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ 24 ವಿಧಾನಸಭಾ ಕ್ಷೇತ್ರಗಳ ಪೈಕಿ 17+1 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. 6 ಜನ ಶಾಸಕರಷ್ಟೇ ಬಿಜೆಪಿಗರಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆಲುವಿಗೆ ಅನುಕೂಲಕರ ವಾತಾವರಣವಿದೆ ಎಂಬ ವಿಶ್ವಾಸವೂ ಪಕ್ಷದಲ್ಲಿದೆ.

“ಕ್ಷೇತ್ರದಲ್ಲಿ ಐದಾರು ತಿಂಗಳಿನಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಶಿಕ್ಷಕರು ಮತ್ತು ಪದವೀಧರನ್ನು ಭೇಟಿಯಾಗಿದ್ದು, ಸರ್ಕಾರ 74 ಸಾವಿರ ಖಾಲಿ ಹುದ್ದೆ ತುಂಬಿಕೊಳ್ಳುತ್ತಿದೆ. 24 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಕೈಗೊಂಡಿದೆ. ಯುವನಿಧಿ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದೆಲ್ಲವೂ ತಮ್ಮ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ” ಎಂದು ಲಿಂಬಿಕಾಯಿ ಹೇಳಿಕೊಂಡಿದ್ದಾರೆ.

ಯುವಜನರ ಹಿತದೃಷ್ಟಿಯಿಂದ ಯುವನಿಧಿ ಯೋಜನೆ

“ಉದ್ಯೋಗಾವಕಾಶ ಹೆಚ್ಚಿಸಲು ಅತ್ಯಾಧುನಿಕ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ನಿರ್ಮಾಣ ಮಾಡುವುದು, ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರನ್ನು ಬೋಧಕೇತರ ಹೊರೆಗಳಿಂದ ಮುಕ್ತಗೊಳಿಸುವುದು, ವಕೀಲರ ಸುರಕ್ಷತೆಗಾಗಿ ಬಲವಾದ ಕಾನೂನು ಜಾರಿಗೆ ತರುವುದು ಹಾಗೂ ಯುವ ಉದ್ಯಮಿಗಳ ಸ್ವಾವಲಂಬನೆಗೆ ಬಲಿಷ್ಠ ಆರ್ಥಿಕ ಭರವಸೆ ನೀಡುವುದು ಸೇರಿದಂತೆ ಹತ್ತು ಹಲವು ಕ್ರಾಂತಿಕಾರಿ ಬದಲಾವಣೆಗಳನ್ನು ತರುವ ದೃಢ ಇರಾದೆ ನನ್ನದಾಗಿದ್ದು, ಯುವ ಸಮುದಾಯ ಕಾಂಗ್ರೆಸ್ ಪಕ್ಷದ ಪರವಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ್ದರಿಂದ, ಅತೃಪ್ತಗೊಂಡಿರುವ ಆರ್.ಎಂ ಕುಬೇರಪ್ಪ ಬಂಡಾಯವೆದ್ದಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಪಕ್ಷದ ನಾಯಕರು ಅವರನ್ನು ಮನವೊಲಿಸಿದ್ದರಿಂದ ನಾಮಪತ್ರ ಹಿಂಪಡೆದಿದ್ದಾರೆ. ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿದ್ದ ಬಸವರಾಜ ಗುರಿಕಾರ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಅವರ ಬೆಂಬಲವೂ ಕಾಂಗ್ರೆಸ್‌ಗೆ ವರವಾಗಲಿದೆ ಎನ್ನುತ್ತಾರೆ ಕ್ಷೇತ್ರದ ಮುಖಂಡರು.

ಮೂರನೇ ಬಾರಿ ಗೆಲ್ಲುವ ವಿಶ್ವಾಸದಲ್ಲಿ ಪ್ರೊ. ಎಸ್.ವಿ ವಿಸಂಕನೂರ

ಈಗಾಗಲೇ ಈ ಕ್ಷೇತ್ರದಿಂದ ಎರಡು ಬಾರಿ‌ ಗೆದ್ದು ಎಮ್‌ಎಲ್‌ಸಿ ಆಗಿರುವ ಪ್ರೊ. ‌ಎಸ್.ವಿ ಸಂಕನೂರ ಅವರು 3ನೇ ಬಾರಿಗೆ ಬಿಜೆಪಿಯಿಂದ ಕಳಕ್ಕಿಳಿದಿದ್ದಾರೆ. ಈ ಸಲವೂ ಗೆಲ್ಲುವ ವಿಶ್ವಾಸ ಅವರಲ್ಲಿದೆ.

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಸುಮಾರು 10ಕ್ಕೂ ಹೆಚ್ಚು ಜನರು ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಈ ಭಾರಿಯೂ ಹಾಲಿ ಸದಸ್ಯ ಪ್ರೊ. ಎಸ್.ವಿ ಸಂಕನೂರ ಅವರಿಗೆ ಮಣೆ ಹಾಕಿದೆ. ಈ ಕ್ಷೇತ್ರಕ್ಕೆ ಬಿಜೆಪಿಯ ಲಿಂಗರಾಜ ಪಾಟೀಲ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಅವರನ್ನು ಶಾಸಕರಿಂದ ನಡೆಯುವ ಆಯ್ಕೆಯಲ್ಲಿ ಪರಿಷತ್‌ಗೆ ಆಯ್ಕೆ ಮಾಡಿರುವ ಬಿಜೆಪಿ, ಪಕ್ಷದೊಳಗೆ ಉಂಟಾಗಬಹುದಾಗಿದ್ದ ಅಸಮಾಧಾನ ಶಮನ ಮಾಡಿದೆ.

ಈ ಲೇಖನ ಓದಿದ್ದೀರಾ?: ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ ನಡುವೆ ಟ್ರಂಪ್‌ಗೆ ಅಗ್ನಿಪರೀಕ್ಷೆ!

“ಎರಡು ಅವಧಿಯಲ್ಲಿ ಪರಿಷತ್ ಸದಸ್ಯನಾಗಿ ಎಲ್ಲ ಪದವೀಧರರ ಸಮಸ್ಯೆಗೆ ಸ್ಪಂದಿಸಿದ್ದೇನೆ. ನರೇಂದ್ರ ‌ಮೋದಿಯವರು ಪ್ರಧಾನಮಂತ್ರಿಗಳಾದ ಮೇಲೆ ಯುವಜನರಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇವೆಲ್ಲವುಗಳನ್ನು ಮತದಾರರ ಮುಂದಿಟ್ಟು ಮತಯಾಚನೆ ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕೂಡ ಪ್ರಜ್ಞಾವಂತ ಮತದಾರರು ನನ್ನ ಎರಡು ವರ್ಷಗಳ ಸಾಧನೆ ಗಮನಿಸಿ ಮತ ಹಾಕಲಿದ್ದಾರೆ” ಎನ್ನುವ ವಿಶ್ವಾಸದಲ್ಲಿ ಪ್ರೊ.ಎಸ್.ವಿ ಸಂಕನೂರ ಇದ್ದಾರೆ. 

ಈ ಬಾರಿ ಪಶ್ಚಿಮ ಪದವೀಧರರ ಚುನಾವಣೆಗೆ ಒಟ್ಟು 14 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಲ್ಲಿ ಮತ ವಿಭಜನೆಯ ಆತಂಕ ಮನೆ ಮಾಡಿದೆ.

ಪ್ರಸಕ್ತ ಪಶ್ಚಿಮ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ 88,087 ಮತದಾರರಿದ್ದಾರೆ. ಇದರಲ್ಲಿ 51,599 ಪುರುಷರು ಮತ್ತು 36,488 ಮಹಿಳೆಯರು ಇದ್ದಾರೆ. ಜಿಲ್ಲಾವಾರು ಧಾರವಾಡದಲ್ಲಿ 30,907 ಮತದಾರರು, ಹಾವೇರಿಯಲ್ಲಿ 22,161 ಮತದಾರರು, ಗದಗದಲ್ಲಿ 19,643 ಮತದಾರರು, ಉತ್ತರ ಕನ್ನಡದಲ್ಲಿ 15,376 ಮತದಾರರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...