ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ

Date:

1989, 1992ರ ಅವಧಿಯಲ್ಲಿ ವಿಎಚ್‌ಪಿ ದೇಶ-ವಿದೇಶಗಳಿಂದ ಕೋಟ್ಯಂತರ ರೂಪಾಯಿಗಳ ರಾಮಮಂದಿರ ನಿಧಿಯನ್ನು ಸಂಗ್ರಹಿಸಿತ್ತು. ಆ ಹಣ ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಗೆ ಇಂದಿಗೂ ಉತ್ತರವಿಲ್ಲ! ನೂರಾರು ಕೋಟಿ ರೂಪಾಯಿಗಳ ದೇಣಿಗೆಗೆ ಸರಿಯಾದ ಆಡಿಟ್ ವರದಿ ಇಲ್ಲ ಎಂದು ನಿರ್ಮೋಹಿ ಅಖಾಡ ಮತ್ತು ಕೆಲವು ಸಾಧು-ಸಂತರು ಇಂದಿಗೂ ಆಗಾಗ ಅಸಮಾಧಾನ ಹೊರಹಾಕುತ್ತಿದ್ದಾರೆ.

ಅಯೋಧ್ಯೆಯ ರಾಮಮಂದಿರ ಹಲವು ದಶಕಗಳಿಂದ ವಿವಾದದ ಗೂಡು. ರಾಮಮಂದಿರ ನಿರ್ಮಾಣವು ದೇಶದ ಇತಿಹಾಸದಲ್ಲಿ ಕೇವಲ ಧಾರ್ಮಿಕ ವಿಷಯವಾಗಿರದೆ, ಬಿಜೆಪಿಯ ರಾಜಕೀಯ ವಿಷಯವಸ್ತು ಕೂಡ ಆಗಿದೆ. ಈ ಮಂದಿರ ನಿರ್ಮಾಣ ವಿಚಾರದಲ್ಲಿ ಹಿಂಸಾಚಾರ, ಕೋಮು ವಿಭಜನೆ ನಡೆಸಿ ಬಿಜೆಪಿ ತನ್ನ ಬೇಳೆಬೇಯಿಸಿಕೊಂಡಿದ್ದು ಜಗಜ್ಜಾಹೀರು ವಿಚಾರ. ಇದೀಗ ಇದೇ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ನಡೆಯುತ್ತಿದೆ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ.

- Advertisement -

ಮಂದಿರ ನಿರ್ಮಾಣಕ್ಕಾಗಿ ದೇಶ-ವಿದೇಶಗಳ ಕೋಟ್ಯಂತರ ಭಕ್ತರು ಸ್ವಪ್ರೇರಣೆಯಿಂದ ಶತಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡಿದ್ದಾರೆ. ಆದರೆ ಇತ್ತೀಚೆಗೆ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ದೇಣಿಗೆ ದುರುಪಯೋಗದ ಆರೋಪ ಮಾಡಿರುವುದು ಮತ್ತು ಕಳೆದ ಕೆಲವು ವರ್ಷಗಳಲ್ಲಿ ವಿರೋಧ ಪಕ್ಷಗಳು ಮಾಡಿರುವ ಭೂ ಹಗರಣದ ಆರೋಪಗಳು ಈ ನಿಧಿಯ ನಿರ್ವಹಣೆಯ ಸುತ್ತ ಅನುಮಾನಗಳನ್ನು ಮೂಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ದೇಣಿಗೆ ದುರುಪಯೋಗದ ಆರೋಪಗಳು ಆಗಾಗ್ಗೆ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ. ಈ ಆರೋಪಗಳು ಹೊಸದೇನಲ್ಲ. ಆದರೆ ಈ ಹಿಂದೆ ಈ ಆರೋಪಗಳನ್ನು ಮಾಡಿರುವುದು ವಿಪಕ್ಷಗಳು. ಆ ವೇಳೆ ಆಡಳಿತಾರೂಢ ಬಿಜೆಪಿ ವಿರುದ್ಧ ಸುಖಾಸುಮ್ಮನೆ ವಿಪಕ್ಷಗಳು ಆರೋಪ ಹೊರಿಸುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ರಾಮಮಂದಿರ ದೇಣಿಗೆ ದುರುಪಯೋಗದ ಆರೋಪ ಮಾಡಿರುವುದು ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್!

ಇದನ್ನು ಓದಿದ್ದೀರಾ? ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಬ್ರಿಜ್ ಭೂಷಣ್ ಶರಣ್ ಸಿಂಗ್ ಮಾಡಿರುವ ಆರೋಪವೇನು?

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಹಿಂದೆಯೂ ಹಲವು ಬಾರಿ ಸುದ್ದಿಗೆ ಗ್ರಾಸವಾದವರು. ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಬ್ರಿಷ್ ಭೂಷಣ್ ಮೇಲಿದೆ. ಈ ಆರೋಪಗಳು ಕೇಳಿಬಂದಾಗ ಬಿಜೆಪಿ ಬ್ರಿಷ್ ಭೂಷಣ್ ಪರವಾಗಿಯೇ ನಿಂತಿತ್ತು. ಸಂತ್ರಸ್ತರ ಪರವಾಗಿ ಮಾತನಾಡದೆ ಮೌನವಹಿಸಿತ್ತು. ತೀವ್ರ ಆಕ್ರೋಶ ವ್ಯಕ್ತವಾದಾಗ ಭೂಷಣ್‌ಗೆ ಟಿಕೆಟ್ ನಿರಾಕರಿಸಿ, ಅವರ ಮಗ ಕರಣ್ ಭೂಷಣ್ ಸಿಂಗ್‌ಗೆ ಅವಕಾಶ ನೀಡಿತು.

ಈಗ ಅದೇ ಭೂಷಣ್ ರಾಮಮಂದಿರ ಆಂದೋಲನ ಮತ್ತು ದೇಣಿಗೆ ಸಂಗ್ರಹಣೆಗೆ ಸಂಬಂಧಿಸಿದಂತೆ ಸ್ವಪಕ್ಷೀಯರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ರಾಮಮಂದಿರ ಆಂದೋಲನದ ಸಮಯದಲ್ಲಿ ಮತ್ತು ನಂತರದ ದಿನಗಳಲ್ಲಿ ದೇಣಿಗೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸಿ, ಅದನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ” ಎಂದು ನೇರವಾಗಿ ಭೂಷಣ್ ಆರೋಪಿಸಿದ್ದಾರೆ.

ಇನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ರಾಮಮಂದಿರ ಟ್ರಸ್ಟ್‌ ಕೆಲವು ಪ್ರಮುಖ ಪದಾಧಿಕಾರಿಗಳನ್ನು ಉಲ್ಲೇಖಿಸಿ ಮಾತನಾಡುತ್ತಾ, “ಕೆಲವರು ರಾಮಮಂದಿರ ಆಂದೋಲನವನ್ನು ತಮ್ಮ ವೈಯಕ್ತಿಕ ಆಸ್ತಿ ಮತ್ತು ರಾಜಕೀಯ ಬೆಳವಣಿಗೆಗೆ ಬಳಸಿಕೊಂಡರು. ಜನಸಾಮಾನ್ಯರು ಭಕ್ತಿಯಿಂದ ನೀಡಿದ ಹಣ ದುರುಪಯೋಗವಾಗಿದೆ” ಎಂದು ದೂರಿದ್ದಾರೆ. “ಆರಂಭಿಕ ದಿನಗಳಿಂದಲೂ ಸಂಗ್ರಹವಾದ ಕೋಟ್ಯಂತರ ರೂಪಾಯಿಗಳ ನಿಧಿಗೆ ಸರಿಯಾದ ಲೆಕ್ಕಪತ್ರ ಇಟ್ಟಿಲ್ಲ ಮತ್ತು ಇದರಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ” ಎಂದಿದ್ದಾರೆ.

ಈ ಹಿಂದೆಯೂ ಕೇಳಿ ಬಂದಿದೆ ಗಂಭೀರ ಆರೋಪ

ಅಷ್ಟಕ್ಕೂ ರಾಮಮಂದಿರ ದೇಣಿಗೆ ದುರುಪಯೋಗ, ಅಕ್ರಮ, ಭ್ರಷ್ಟಾಚಾರ ವಿಚಾರದಲ್ಲಿ ಇದೇ ಹೊಸದಾಗಿ ಆರೋಪ ಕೇಳಿಬರುತ್ತಿರುವುದಲ್ಲ. ರಾಮಮಂದಿರ ನಿರ್ಮಾಣಕ್ಕಾಗಿ ರಚಿಸಲಾದ ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ಅಸ್ತಿತ್ವಕ್ಕೆ ಬಂದ ಮೇಲೂ ಮತ್ತು ಅದಕ್ಕಿಂತ ಮುಂಚೆಯೂ ದೇಣಿಗೆ ಹಾಗೂ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮತ್ತು ಕೆಲವು ಸಂಘಟನೆಗಳು ಗಂಭೀರ ಆರೋಪಗಳನ್ನು ಮಾಡಿದ್ದವು.

2021ರಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ನಾಯಕ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಪವನ್ ಪಾಂಡೆ ಜಂಟಿ ಸುದ್ದಿಗೋಷ್ಠಿ ನಡೆಸಿ ರಾಮಮಂದಿರ ಟ್ರಸ್ಟ್ ವಿರುದ್ಧ ಅತ್ಯಂತ ದೊಡ್ಡ ಭೂ ಹಗರಣದ ಆರೋಪ ಮಾಡಿದ್ದರು. ಅಯೋಧ್ಯೆಯ ಬಾಗ್ ಬಜೇಸಿ ಎಂಬಲ್ಲಿ ಸುಮಾರು 1.208 ಹೆಕ್ಟೇರ್ (12,080 ಚದರ ಮೀಟರ್) ಜಮೀನನ್ನು ಸುಲ್ತಾನ್ ಅನ್ಸಾರಿ ಮತ್ತು ರವಿ ಮೋಹನ್ ತಿವಾರಿ ಎಂಬುವರು ಹರೀಶ್ ಪಾಠಕ್ ಎಂಬುವರಿಂದ 2 ಕೋಟಿ ರೂಪಾಯಿಗೆ ಖರೀದಿಸಿದ್ದರು.

ಇದನ್ನು ಓದಿದ್ದೀರಾ? ಮೋದಿಯ ‘ಕನಿಷ್ಠ ಸರ್ಕಾರ – ಗರಿಷ್ಠ ಆಡಳಿತ’ಕ್ಕಿದು ಸಮಯ

ಈ ಖರೀದಿ ಪ್ರಕ್ರಿಯೆ ನಡೆದ ಕೇವಲ 5ರಿಂದ 10 ನಿಮಿಷಗಳ ಒಳಗೆ, ಅದೇ ಜಮೀನನ್ನು ರಾಮಮಂದಿರ ಟ್ರಸ್ಟ್ ಮುಖಂಡರಾದ ಚಂಪತ್ ರಾಯ್ ಅವರು ಟ್ರಸ್ಟ್ ಹೆಸರಿಗೆ 18.5 ಕೋಟಿ ರೂಪಾಯಿಗೆ ಖರೀದಿಸಿದ್ದರು ಎಂಬ ಆರೋಪ ಮಾಡಿದ್ದರು. ಕೇವಲ ಹತ್ತು ನಿಮಿಷಗಳಲ್ಲಿ ಭೂಮಿಯ ಬೆಲೆ ಎರಡು ಕೋಟಿ ರೂಪಾಯಿಯಿಂದ 18.5 ಕೋಟಿ ರೂಪಾಯಿಗೆ ಏರಿದ್ದು ಹೇಗೆ ಎಂಬ ಪ್ರಶ್ನೆ ಹುಟ್ಟಿತ್ತು. ಹಾಗೆಯೇ ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡಲು ಭಕ್ತರ ದೇಣಿಗೆಯ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪಗಳೂ ಕೇಳಿಬಂದವು.

ಅದಾದ ಬಳಿಕ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳೂ ಭೂಮಿ ಖರೀದಿಯ ವ್ಯವಹಾರವನ್ನು ಬೊಟ್ಟು ಮಾಡಿತ್ತು. “ಇದು ಜಗತ್ತಿನ ಅತಿ ದೊಡ್ಡ ಭೂ ಹಗರಣ ಮತ್ತು ಭಕ್ತರ ನಂಬಿಕೆಗೆ ಮಾಡಿದ ದ್ರೋಹ” ಎಂದು ಕರೆದಿತ್ತು. ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿತ್ತು. ದೇಶಾದ್ಯಂತ ರಾಮನ ಮೇಲಿನ ಭಕ್ತಿಯಿಂದ ಅದೆಷ್ಟೋ ಬಡವರು, ಕೂಲಿ ಕಾರ್ಮಿಕರು ದೇಣಿಗೆ ನೀಡಿದ್ದಾರೆ. ಆ ಹಣವನ್ನು ಬಿಜೆಪಿಗರು ಲೂಟಿ ಮಾಡಿದ್ದಲ್ಲವೇ ಎಂಬ ಚರ್ಚೆಗಳು ಶುರುವಾಯಿತು.

swami
ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಮತ್ತು ಅದರ ನಿರ್ವಹಣೆಗೆ ಸಂಬಂಧಿಸಿ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿಯವರು ಹಲವು ಬಾರಿ ಗಂಭೀರ ಆರೋಪಗಳನ್ನು ಮಾಡಿದ್ದರು, ಆಕ್ಷೇಪ ವ್ಯಕ್ತಪಡಿಸಿದ್ದರು. ಮೊದಲನೆಯದಾಗಿ ದೇವಾಲಯದ ನಿರ್ಮಾಣ ಕಾರ್ಯ ಇನ್ನೂ ಪೂರ್ಣವಾಗದೆಯೇ ಅಪೂರ್ಣ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿ ಶಾಸ್ತ್ರ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ದೂರಿದ್ದರು.

ಇದರ ಹೊರತಾಗಿ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ಸಂಪೂರ್ಣವಾಗಿ ರಾಜಕೀಯ ಕಾರ್ಯಕ್ರಮವನ್ನಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ್ದರು. ಚುನಾವಣೆಯ ರಾಜಕೀಯ ಲಾಭಕ್ಕಾಗಿ ಕಾರ್ಯಕ್ರಮವನ್ನು ಅವಸರ ಅವಸರವಾಗಿ ಆಯೋಜಿಸಲಾಗಿದೆ ಎಂದು ಆಕ್ಷೇಪಿಸಿದ್ದರು. ಹಾಗೆಯೇ ಅಕ್ರಮ, ಭ್ರಷ್ಟಾಚಾರದ ಆರೋಪವನ್ನೂ ಮಾಡಿದ್ದರು.

“ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹಣಕಾಸು ವ್ಯವಹಾರಗಳು ಮತ್ತು ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ದೇವಾಲಯದ ಹೆಸರಿನಲ್ಲಿ ಸಂಗ್ರಹವಾದ ಕೋಟ್ಯಂತರ ರೂಪಾಯಿ ದೇಣಿಗೆಯನ್ನು ಸರಿಯಾಗಿ ಬಳಸುತ್ತಿಲ್ಲ. ಅಯೋಧ್ಯೆಯಲ್ಲಿ ಮಂದಿರದ ಸುತ್ತಮುತ್ತಲಿನ ಭೂಮಿಯನ್ನು ಕಡಿಮೆ ಬೆಲೆಗೆ ಖರೀದಿಸಿ, ಕೆಲವೇ ನಿಮಿಷಗಳಲ್ಲಿ ಟ್ರಸ್ಟ್‌ಗೆ ಕೋಟ್ಯಂತರ ರೂಪಾಯಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾದ ಹಗರಣಗಳು ನಡೆದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಈ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.

ಅಷ್ಟಕ್ಕೂ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಅವ್ಯವಹಾರ, ವಂಚನೆಯನ್ನು 1990ರ ದಶಕದಲ್ಲೇ ಸಂಘಪರಿವಾರ ವಿಶ್ವ ಹಿಂದೂ ಪರಿಷತ್ ನಡೆಸಿದೆ. 1989, 1992ರ ಅವಧಿಯಲ್ಲಿ ವಿಎಚ್‌ಪಿ ದೇಶ-ವಿದೇಶಗಳಿಂದ ಕೋಟ್ಯಂತರ ರೂಪಾಯಿಗಳ ರಾಮಮಂದಿರ ನಿಧಿಯನ್ನು ಸಂಗ್ರಹಿಸಿತ್ತು. ಆ ಹಣ ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಗೆ ಇಂದಿಗೂ ಉತ್ತರವಿಲ್ಲ! ನೂರಾರು ಕೋಟಿ ರೂಪಾಯಿಗಳ ದೇಣಿಗೆಗೆ ಸರಿಯಾದ ಆಡಿಟ್ ವರದಿ ಇಲ್ಲ ಎಂದು ನಿರ್ಮೋಹಿ ಅಖಾಡ ಮತ್ತು ಕೆಲವು ಸಾಧು-ಸಂತರು ಇಂದಿಗೂ ಆಗಾಗ ಅಸಮಾಧಾನ ಹೊರಹಾಕುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಗಪ್‌ಚುಪ್!

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....