ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ ಗಾಜಾ ತಾಯಿ ಏನು ಮಾಡುವಳು?

Date:

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ

- Advertisement -

ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.
ಹೊಟೇಲ್ ಬಿಡುವ ಮೊದಲು ಬಟ್ಟೆ, ಪುಸ್ತಕಗಳನ್ನು ಜೋಡಿಸಿಕೊಳ್ಳುವಂತೆ.
ಅವಳು ತನ್ನ ಮಕ್ಕಳ ಕಿವಿಗಳು, ಬಾಯಿಗಳು, ಮೂಗುಗಳನ್ನು ಎಣಿಸಿ
ನಂತರ ಅವರ ಕಣ್ಣುಗಳನ್ನು ನಿಟ್ಟಿಸುವಳು.
ಆಣೆ ಮಾಡಿ ಹೇಳುತ್ತೇನೆ ಅವಳು ನಸುನಗುವಳು.
ಅವಳು ರಾತ್ರಿಯ ಹಾಡು ಹಾಡುವಳು
ಬಾಂಬಿನ ಶಬ್ದ ಗೌಣವಾಗಿಸಲು,
ಸುಂಯ್ ಗುಡುವ ಡ್ರೋನ್ ಗಳು ಮೋಡಗಳೊಳಗೆ ಅಡಗುವವರೆಗೆ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಅವಳು ತನ್ನ ಪ್ರತಿ ಕಂದನನ್ನೂ ಅಪ್ಪಿಕೊಳುವಳು,
ಬಾಂಬಿನ ನಂತರವೂ ಉಳಿದವು.
ಬಾಂಬು ಇನ್ನೇನು ಆಕಾಶ, ಕೊಠಡಿಗಳಲ್ಲಿ ಕಣ್ಣು ಕುಕ್ಕುವ ಮಿಂಚಿನೊಡನೆ ಸ್ಫೋಟಿಸಬಹುದೆಂದು ಅವಳಿಗೆ ತಿಳಿದಿರಬಹುದು
ಅವಳು ತನ್ನ ಮಕ್ಕಳ ಕಣ್ಣುಗಳನ್ನು ಮುಚ್ಚಿ ಜೋರಾಗಿ ಕೇಳುವಳು,
“ನಿಮ್ಮ ಕಣ್ಣುಗಳನ್ನು ಮುಚ್ಚಿದಾಗ ನೀವೇನು ನೋಡಬಲ್ಲಿರಿ?”
ಅವಳ ನಡುಗುವ ದನಿಯು ನಶಿಸುತ್ತಿರುವ ಬಾಂಬಿನ ಸದ್ದನ್ನು ಅಡಗಿಸಬಹುದೆಂದು ಭರವಸೆ ಇಡುತ್ತಾ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ ಪೆರಿಯಾರ್ ಯಾರು?

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ...