92ರ ದೇವೇಗೌಡರು ಮೂರನೇ ಬಾರಿ ಮೇಲ್ಮನೆಗೆ ಪ್ರವೇಶಿಸುವರೇ?

Date:

ಬಿಜೆಪಿ ಬೆಂಬಲದೊಂದಿಗೆ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆಯಾಗಲು ದೇವೇಗೌಡರು ಉತ್ಸುಕರಾಗಿದ್ದಾರೆ. ಈ ಸಂಬಂಧ ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ

10 ರಾಜ್ಯಗಳಲ್ಲಿ ತೆರವಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ ನಿಗದಿಯಾಗಿದೆ. ಕರ್ನಾಟಕದಲ್ಲಿ ರಾಜಕೀಯ ಚರ್ಚೆಗಳು ಗರಿಗೆದರಿವೆ. ರಾಜ್ಯದಿಂದ ಈ ಬಾರಿ ಆಯ್ಕೆಯಾಗಬೇಕಿರುವ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‌ನಿಂದ ಮೂವರು, ಬಿಜೆಪಿಯಿಂದ ಒಬ್ಬರು ಗೆಲ್ಲುವುದು ನಿಶ್ಚಿತ. ಆದರೆ, ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದು ಸದ್ಯದ ಕುತೂಹಲ.

- Advertisement -

ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಬಿಜೆಪಿಯ ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಜೂನ್ 25ಕ್ಕೆ ಮುಗಿಯಲಿದೆ. ಚುನಾವಣಾ ಅಧಿಸೂಚನೆ ಜೂನ್ 1ಕ್ಕೆ ಹೊರಬೀಳಲಿದ್ದು, ಜೂನ್ 8- ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಜೂನ್‌ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 11- ನಾಮಪತ್ರ ವಾಪಸ್ಗೆ ಕಡೆಯ ದಿನ. ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆ ಆಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಕರ್ನಾಟಕದಿಂದ ಒಟ್ಟು 12 ರಾಜ್ಯಸಭಾ ಸದಸ್ಯರು ಆಯ್ಕೆಯಾಗಲಿದ್ದು, ಈ ಬಾರಿ ನಾಲ್ಕು ಸ್ಥಾನಗಳು ತೆರವಾಗುತ್ತಿವೆ. 2020ರಲ್ಲಿ ಮೇಲ್ಮನೆಗೆ ಹೋದವರ ಅವಧಿ ಜೂನ್ ತಿಂಗಳು ಮುಗಿಯುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ದೇವೇಗೌಡರು, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಎದುರು ಸೋಲು ಕಂಡಿದ್ದರು. ಆನಂತರ ನಡೆದ ಆಪರೇಷನ್ ಕಮಲದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ಸಂಸದರಾಗಿ ಸೇವೆ ಸಲ್ಲಿಸಲು ದೇವೇಗೌಡರು ಇಚ್ಛಿಸಿದ್ದರಿಂದ, ಅವರು ಮೇಲ್ಮನೆಗೆ ಆಯ್ಕೆಯಾಗಬೇಕಿತ್ತು. ಆದರೆ ಸ್ವಂತ ಬಲದಿಂದ ಗೆಲ್ಲುವಷ್ಟು ಮತಗಳು ಜೆಡಿಎಸ್ ಬಳಿ ಇರಲಿಲ್ಲ.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲಿಸುವುದಾಗಿಯೂ, ಅದಕ್ಕೆ ಪ್ರತಿಯಾಗಿ ದೇವೇಗೌಡರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಕಾಂಗ್ರೆಸ್ ಮತಹಾಕುವುದಾಗಿಯೂ ಮೈತ್ರಿಯಾಯಿತು. ಸೋನಿಯಾ ಗಾಂಧಿಯವರ ಒತ್ತಾಸೆಯು ದೇವೇಗೌಡರ ಆಯ್ಕೆ ಹಿಂದಿತ್ತು.

ದೇವೇಗೌಡರಂತಹ ದೇಶದ ಅತ್ಯಂತ ಹಿರಿಯ ನಾಯಕರೊಬ್ಬರು ಸಂಸತ್ತಿನಲ್ಲಿ ಇರಬೇಕು ಎಂಬ ಕಾರಣಕ್ಕೆ, ಅಂದಿನ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ತನ್ನಲ್ಲಿದ್ದ ಹೆಚ್ಚುವರಿ ಮತಗಳನ್ನು ಜೆಡಿಎಸ್ಗೆ ನೀಡಲು ಒಪ್ಪಿಕೊಂಡಿತು. ಅತ್ತ ಆಡಳಿತ ಪಕ್ಷವಾಗಿದ್ದ ಬಿಜೆಪಿಯೂ ಗೌಡರ ವಿರುದ್ಧ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌರವ ಸೂಚಿಸಿತು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಹಿಡಿಯಿತು. ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಬಳಿಕ ಕುಮಾರಸ್ವಾಮಿಯವರು, 2024ರ ಲೋಕಸಭಾ ಚುನಾವಣೆ ವೇಳೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರು. ಹೀಗಾಗಿ ರಾಜ್ಯಸಭಾ ಸೀಟು ವಿಚಾರದಲ್ಲಿ ಉಭಯ ಪಕ್ಷಗಳು ಕೂತು ನಿರ್ಧಾರ ಕೈಗೊಳ್ಳಬೇಕಿದೆ. ರಾಜ್ಯದಲ್ಲಿ ತೆರವಾಗಲಿರುವ ಸ್ಥಾನಗಳ ಪೈಕಿ ಬಿಜೆಪಿಗೆ ಸಿಗುವ ಒಂದು ಸ್ಥಾನ ಯಾರಿಗೆ ದೊರಕಲಿದೆ ಎಂಬುದೇ ಸದ್ಯದ  ಕುತೂಹಲ. ದೇವೇಗೌಡರನ್ನು ಮರು ಆಯ್ಕೆ ಮಾಡಲು ಬಿಜೆಪಿ ಅವಕಾಶ ನೀಡುತ್ತದೆಯೋ ಅಥವಾ ಬೇರೊಬ್ಬರನ್ನು ತಂದು ಕೂರಿಸುತ್ತದೆಯೋ ಎಂಬ ಚರ್ಚೆಗಳು ಶುರುವಾಗಿವೆ.

“ಬಿಜೆಪಿ ಬೆಂಬಲದೊಂದಿಗೆ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆಯಾಗಲು ದೇವೇಗೌಡರು ಉತ್ಸುಕರಾಗಿದ್ದಾರೆ. ಈ ಸಂಬಂಧ ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ” ಎಂದು ವರದಿಯಾಗಿದೆ.

ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವೇಗೌಡರ ಹೆಸರಿಗೆ ಒಪ್ಪುಗೆ ಸೂಚಿಸಿದರೆ, ಅವರೇ ಆಯ್ಕೆಯಾಗುವುದು ಖಚಿತ. ನರೇಂದ್ರ ಮೋದಿ ಅವರ ಕಾರ್ಯವೈಖರಿಗೆ ಆಗಾಗ್ಗೆ ದೇವೇಗೌಡರು ಬಹುಪರಾಕ್ ಹೇಳಿದ್ದೂ ಉಂಟು. ಮೋದಿ ಸರ್ಕಾರದ ಕೆಲವು ನಿರ್ಧಾರಗಳನ್ನು ಬೇಷರತ್ ಬೆಂಬಲಿಸಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ಟೀಕಾಪ್ರಹಾರ ನಡೆಸಿದ್ದೂ ಉಂಟು. ಆ ಮೂಲಕ ಬಿಜೆಪಿ ಹೈಕಮಾಂಡ್‌ಗೆ ದೇವೇಗೌಡರು ಪ್ರಿಯವಾಗಿಯೂ ಇದ್ದಾರೆ. ಮುಂಬರುವ ಜಿಬಿಎ ಚುನಾವಣೆ, ವಿಧಾನಸಭಾ ಚುನಾವಣೆಗಳ ಭವಿಷ್ಯದ ದೃಷ್ಟಿಯಿಂದಲೂ ದೇವೇಗೌಡರ ಆಯ್ಕೆಯ ಕುರಿತು ಬಿಜೆಪಿ-ಜೆಡಿಎಸ್ ಯೋಚಿಸದೆ ಇರುವುದಿಲ್ಲ.

ಬಿಜೆಪಿ ಹೈಕಮಾಂಡ್ ಒಲವು ದೇವೇಗೌಡ ಕಡೆ ಇದ್ದರೂ ರಾಜ್ಯದ ಬಿಜೆಪಿ ನಾಯಕರು ಬೇರೆ ಅಭ್ಯರ್ಥಿಗಳ ಆಯ್ಕೆಗೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ಮೂರು ಹೆಸರುಗಳನ್ನು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ರಾಜ್ಯ ಪ್ರಮುಖರ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ವರದಿಯಾಗಿದೆ. ಒಂದು ವೇಳೆ ದೇವೇಗೌಡ ಹೆಸರೇ ಅಂತಿಮವಾದರೆ 3ನೇ ಬಾರಿಗೆ ಮೇಲ್ಮನೆಗೆ ಗೌಡರು ಪ್ರವೇಶಿಸುವುದು ಖಚಿತವಾದಂತೆ.

ದೇವೇಗೌಡರು ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದು, 1996ರ ಸೆಪ್ಟೆಂಬರ್ ತಿಂಗಳಿನಲ್ಲಿ. ಆಗ ಅವರು ಈಗಾಗಲೇ ದೇಶದ ಪ್ರಧಾನಮಂತ್ರಿಯಾಗಿದ್ದರು. 1996ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ಆಗ ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಪ್ರಾದೇಶಿಕ ಪಕ್ಷಗಳ ಒಕ್ಕೂಟವಾದ ‘ಯುನೈಟೆಡ್ ಫ್ರಂಟ್’ (ವಿಶ್ವನಾಥ್ ಪ್ರತಾಪ್ ಸಿಂಗ್ ಮತ್ತು ಜ್ಯೋತಿ ಬಸು ಅವರು ಪ್ರಧಾನಿ ಹುದ್ದೆ ನಿರಾಕರಿಸಿದ ನಂತರ) ಅನಿವಾರ್ಯವಾಗಿ ಕರ್ನಾಟಕದ ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತು. ದೇವೇಗೌಡರು 1996ರ ಜೂನ್ 1 ರಂದು ಭಾರತದ 11ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂವಿಧಾನದ ನಿಯಮಗಳ ಪ್ರಕಾರ ಪ್ರಧಾನಿಯಾದವರು 6 ತಿಂಗಳ ಒಳಗಾಗಿ ಸಂಸತ್ತಿನ ಯಾವುದಾದರೂ ಒಂದು ಸದನದ (ಲೋಕಸಭೆ ಅಥವಾ ರಾಜ್ಯಸಭೆ) ಸದಸ್ಯರಾಗಬೇಕಿತ್ತು. ಆಗ ಅವರು ಲೋಕಸಭೆಗೆ ಸ್ಪರ್ಧಿಸಿ ಉಪಚುನಾವಣೆ ಎದುರಿಸುವ ಬದಲು, ಕರ್ನಾಟಕ ವಿಧಾನಸಭೆಯಲ್ಲಿದ್ದ ಜನತಾದಳದ ಬಲದ ಆಧಾರದ ಮೇಲೆ ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಿಸಲು ನಿರ್ಧರಿಸಿದರು. ಅದರಂತೆ 1996ರ ಸೆಪ್ಟೆಂಬರ್ನಲ್ಲಿ ಅವಿರೋಧವಾಗಿ ಆಯ್ಕೆಯಾಗಿ, ನಂತರ ರಾಜ್ಯಸಭೆಯ ಸಭಾ ನಾಯಕರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

ಈ ಲೇಖನ ಓದಿದ್ದೀರಾ?: ದಿನಕ್ಕೆ 4 ಲಕ್ಷ ಬ್ಯಾರೆಲ್‌ ಎಲ್‌ಪಿಜಿ ಕೊರತೆ: ಅಸಲಿಯತ್ತು ಮುಚ್ಚಿಡುತ್ತಿದೆಯೇ ಮೋದಿ ಸರ್ಕಾರ?

ಎರಡನೇ ಬಾರಿಗೆ ಮೇಲ್ಮನೆಗೆ ಆಯ್ಕೆಯಾಗುವಾಗ ಅವರ ವಯಸ್ಸು 87 ವರ್ಷಗಳಾಗಿತ್ತು. ಈಗವರಿಗೆ 93 ವರ್ಷಗಳಾಗಿವೆ. ಸದ್ಯದ ಅಂಕಿ-ಅಂಶಗಳ ಪ್ರಕಾರ ಮೇಲ್ಮನೆಯ ಅತ್ಯಂತ ಹಿರಿಯ ಸದಸ್ಯ ಅವರಾಗಿದ್ದಾರೆ. ಮರು ಆಯ್ಕೆಯ ಪ್ರಶ್ನೆ ಬಂದಾಗ, ‘ವಯಸ್ಸಿನ ಫ್ಯಾಕ್ಟರ್’ ಮುನ್ನಲೆಗೆ ತಂದು ದೇವೇಗೌಡರ ಹೆಸರು ಕೈಬಿಡಲಾಗುತ್ತದೆಯೋ ನೋಡಬೇಕಿದೆ. ಅಥವಾ ಬೇರೆ ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಂದಲೂ ಆಯ್ಕೆ ಮಾಡಲು ಅವಕಾಶಗಳಿರುವುದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಾರೋ ನೋಡಬೇಕಿದೆ.

ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಖಚಿತ

ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಪುನರಾಯ್ಕೆಯಾಗುವುದು ಬಹುತೇಖ ಖಚಿತ. ಆದರೆ ಉಳಿದ ಎರಡು ಸ್ಥಾನಗಳಿಗಾಗಿ ಭಾರೀ ಲಾಬಿ ಆರಂಭವಾಗಿದೆ. ಈ ಸಲ ಅಭ್ಯರ್ಥಿಗಳ ಆಯ್ಕೆಯಲ್ಲಿ ಲಿಂಗಾಯತ ಹಾಗೂ ಇತರ ಹಿಂದುಳಿದ ವರ್ಗದವರಿಗೆ (ಒಬಿಸಿ) ಪ್ರಾತಿನಿಧ್ಯ ನೀಡಲು ಪಕ್ಷದಲ್ಲಿ ಒಲವು ವ್ಯಕ್ತವಾಗಿದೆ ಎನ್ನಲಾಗಿದೆ.

ಯುವ ಕಾಂಗ್ರೆಸ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಂಸದ ಮುದ್ದ ಹನುಮೇಗೌಡ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಸೇರಿದಂತೆ ಹಲವರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ ಅವರನ್ನು ರಾಜ್ಯಸಭೆಗೆ ಪರಿಗಣಿಸಬೇಕು ಎಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ನ ಮುಖಂಡರು ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದಾರೆ. ಹೈಕಮಾಂಡ್ ಆಯ್ಕೆಯಾಗಿ ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರ ಹೆಸರು ಕೇಳಿ ಬರುತ್ತಿದೆ. ಆದರೆ, ಅವರನ್ನು ರಾಜಸ್ಥಾನದಿಂದ ಕಣಕ್ಕಿಳಿಸುವ ಸಂಭವ ಇದೆ. ಕರ್ನಾಟಕದಲ್ಲಿ ಅನ್ಯ ರಾಜ್ಯದವರಿಗೆ ಮಣೆ ಹಾಕುವ ಬದಲು ರಾಜ್ಯದ ನಾಯಕರಿಗೆ ಆದ್ಯತೆ ನೀಡಬೇಕು ಎಂಬ ಒತ್ತಡವೂ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...