ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ತರಾತುರಿ | ಕ್ಷೇತ್ರಗಳ ಮರುವಿಂಗಡನೆ ಸಂದರ್ಭದಲ್ಲೇ ಜಾರಿ?

Date:

ರಾಜಕೀಯದಲ್ಲಿ ಮಹಿಳಾ ಮೀಸಲಾತಿ ವಿಚಾರ ಮತ್ತೆ ಮೇಲ್ಪಂಕ್ತಿಗೆ ಬಂದಿದೆ. ಸದ್ಯ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲೇ, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದಕ್ಕಾಗಿ ಎರಡು ಮಸೂದೆಗಳನ್ನು ಮಂಡಿಸಲಿದೆ. ಮಹಿಳಾ ಮೀಸಲಾತಿ ಜಾರಿಯನ್ನು ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಂದರ್ಭದಲ್ಲೇ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಕೂಡ ಹೇಳಲಾಗುತ್ತಿದೆ.

ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ (ಮಹಿಳಾ ಮೀಸಲಾತಿ ಕಾಯ್ದೆ) ತಿದ್ದುಪಡಿ ತರಲು ಸಂವಿಧಾನ ತಿದ್ದುಪಡಿ ಮಾಡುವ ಮಸೂದೆ, ಕ್ಷೇತ್ರ ಮರುವಿಂಗಡಣೆ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಈ ಅಧಿವೇಶನದಲ್ಲೇ ಕೇಂದ್ರ ಸಂಸತ್‌ನಲ್ಲಿ ಮಂಡಿಸುವುದಕ್ಕೆ ಮುಂದಾಗಿದೆ. ಬಜೆಟ್‌ ಅಧಿವೇಶನದಲ್ಲಿ ಸಾಧ್ಯವಾಗದಿದ್ದಲ್ಲಿ ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇದೆ ಎಂದು ಕೂಡ ವರದಿಗಳಿವೆ.

ಸಂವಿಧಾನಕ್ಕೆ 106ನೇ ತಿದ್ದುಪಡಿ ತಂದು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು 2023ರಲ್ಲಿ ಸಂಸತ್ತು ಮೂರನೇ ಎರಡು ಬಹುಮತದೊಂದಿಗೆ ಅಂಗೀಕರಿಸಿತ್ತು. ರಾಷ್ಟ್ರಪತಿ ದೌಪದಿ ಮುರ್ಮು ಅವರು  ಮಸೂದೆಗೆ ಅಂಕಿತ ಹಾಕಿದ್ದರು. 2027ರಲ್ಲಿ ನಡೆಯಲಿರುವ ಜನಗಣತಿ ಆಧಾರದಲ್ಲಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಈಗ 2011ರ ಜನಗಣತಿ ಆಧಾರದಲ್ಲೇ ಮೀಸಲಾತಿ ನೀಡುವ ನಿರ್ಧಾರಕ್ಕೆ ಕೇಂದ್ರ ಮುಂದಾಗಿದೆಯೇ ಎನ್ನುವ ಪ್ರಶ್ನೆಯೂ ಉದ್ಭವವಾಗಿದೆ. ಇದೇ ಹಿನ್ನೆಲೆಯಲ್ಲಿ ವಿಪೊಕ್ಷಗಳು ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷಗಳ ಸಭೆಯನ್ನು ಕರೆಯಬೇಕು ಎಂದು ಆಗ್ರಹಿಸಿವೆ.

ಜನಸಂಖ್ಯೆಯನ್ನು ಆಧರಿಸಿ ಲೋಕಸಭೆ ಮತ್ತು ವಿಧಾನಭೆಗಳಲ್ಲಿ ಈ ಹಿಂದಿನ ಕ್ಷೇತ್ರ ಮರುವಿಂಗಡಣೆಯ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಲ್ಪಿಸಲಾಗಿತ್ತು. ಈಗ ಮಹಿಳಾ ಮೀಸಲು ಕ್ಷೇತ್ರಗಳನ್ನು ಗುರುತಿಸುವುದಕ್ಕೂ ಇದೇ ಮಾದರಿಯನ್ನು ಬಳಸುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯೂ ಇರಲಿದೆ. ಆದರೆ, ಒಬಿಸಿ ಮೀಸಲಾತಿ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಕ್ಷೇತ್ರಗಳ ಮರುವಿಂಗಡನೆಯಾದರೆ, ಲೋಕಸಭೆಯ 543 ಕ್ಷೇತ್ರಗಳು 816ಕ್ಕೆ ಏರಿಕೆಯಾಗಲಿವೆ. ಹೆಚ್ಚಳವಾದ 273 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

ಇದನ್ನೂ ಓದಿ : ಹಾಸನ ಮಣ್ಣಿನ ಹೆಣ್ಣು ದನಿಗಳು | ಕೃಷಿಯನ್ನೇ ಖುಷಿಯಾಗಿಸಿಕೊಂಡಿರುವ- ಹೇಮಾ ಅನಂತ್

ಸುದೀರ್ಘ ಇತಿಹಾಸ ಕಂಡ ʼಮಹಿಳಾ ಮೀಸಲಾತಿʼ ಹಾದಿ :

ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಲೋಕಸಭೆ ಮತ್ತು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿ ನೀಡಬೇಕು ಎನ್ನುವ ಬೇಡಿಕೆ ಇಂದು ನಿನ್ನೆಯದಲ್ಲ. ಸ್ವಾತಂತ್ರ್ಯಪೂರ್ವದಲ್ಲೇ ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎನ್ನುವ ಚರ್ಚೆಗಳು ನಡೆದಿದ್ದವು. ಸ್ವಾತಂತ್ರ್ಯ ಹೋರಾಟಗಾರ್ತಿ ರೇಣುಕಾ ರೇ ಅವರಂತಹ ಅನೇಕ ಮಹಿಳಾ ಹೋರಾಟಗಾರ್ತಿಯರ ಶ್ರಮದಿಂದ ರಾಜಕೀಯದಲ್ಲಿ ಮಹಿಳೆಯರ ಸ್ಥಿತಿಗತಿ ಅಧ್ಯಯನ ಮಾಡುವುದಕ್ಕೆ ವಿಶೇಷ ಸಮಿತಿಯೂ ರಚನೆಯಾಯಿತು.  1974ರಲ್ಲಿ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಿತ್ತು. ದಶಕಗಳವರೆಗೆ ಸಂವಿಧಾನ ತಿದ್ದುಪಡಿ, ಬೇಡಿಕೆ, ಮಹಿಳಾ ಮೀಸಲಾತಿ ಹೋರಾಟಗಳಲ್ಲೇ ಕಾಲ ಉರುಳಿತ್ತು.

* ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸರ್ಕಾರ 1996 ಸೆಪ್ಟೆಂಬರ್ 12ರಂದು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ಮಸೂದೆ ಮಂಡಿಸಿತು. ಸರ್ಕಾರದ ಅಸ್ಥಿರತೆ ನಿರ್ಮಾಣವಾದ ಕಾರಣ, ಆ ಮಸೂದೆ ಬಿದ್ದು ಹೋಗಿದೆ.

- Advertisement -

* ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ 1998ರಿಂದ 2003ರ ನಡುವೆ ಬಿಜೆಪಿ ನೇತೃತ್ವದ ಮೀಸಲಾತಿ ಮಸೂದೆಯನ್ನು ನಾಲ್ಕು ಬಾರಿ ಸಂಸತ್ತಿನಲ್ಲಿ ಮಂಡಿಸಿತ್ತು. ಆದರೆ, ಅಂಗೀಕಾರವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

* 2008ರಲ್ಲಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ ಮೊದಲಿಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿತ್ತು. ವರದಿ ಬಾರದೇ ಇದ್ದುದರಿಂದ ಮಸೂದೆ ಬಿದ್ದು ಹೋಯಿತು.

* 2014, 2019ರ ಚುನಾವಣೆ ಸಂದರ್ಭದಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ್ದ ಬಿಜೆಪಿ ಈ ಬಗ್ಗೆ ನಿರ್ಧಾರ ಕೈಗೊಂಡಿರಲಿಲ್ಲ.

*  ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ 2021ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿತ್ತು.

* 2023ರ ಆಗಸ್ಟ್‌ನಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಎರಡೂ ಸದನಗಳಲ್ಲಿ ನಾರಿ ಶಕ್ತಿ ವಂದನಾ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...