ಐಪಿಎಲ್‌ 2023 | ಕ್ವಾಲಿಫೈಯರ್​ 2, ಫೈನಲ್‌ ಪಂದ್ಯದ ಟಿಕೆಟ್‌ ಪಡೆಯಲು ನೂಕುನುಗ್ಗಲು, ಕಾಲ್ತುಳಿತ

Date:

ಐಪಿಎಲ್‌ನ ಕೊನೆಯ ಎರಡು ಪಂದ್ಯಗಳ ಆನ್‌ಲೈನ್ ಟಿಕೆಟ್‌ಗಳ ಪ್ರತಿಯನ್ನೂ ಆಫ್‌ಲೈನ್‌ನಲ್ಲಿ ಸ್ಟೇಡಿಯಂನಲ್ಲಿ ಪಡೆಯಲು ಹೇಳಿರುವುದು ನೂಕುನುಗ್ಗಲು, ಕಾಲ್ತುಳಿತ ಸಮಸ್ಯೆಯನ್ನು ಸೃಷ್ಟಿಸಿದೆ.

ಐಪಿಎಲ್‌ 16ನೇ ಆವೃತ್ತಿಯ ಕ್ವಾಲಿಫೈಯರ್​ 2 ಮತ್ತು ಫೈನಲ್‌ ಪಂದ್ಯದ ಟಿಕೆಟ್‌ ಮಾರಾಟದ ವೇಳೆ ಭಾರಿ ಜನಸಂದಣಿಯಿಂದಾಗಿ ಕಾಲ್ತುಳಿತ ಉಂಟಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ, ಗುಜರಾತ್​ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಕ್ವಾಲಿಫೈಯರ್​ 2 ಮತ್ತು ಮೇ 29ರಂದು ಫೈನಲ್‌ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಟಿಕೆಟ್‌ ಪಡೆಯಲು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರಿ ಜನಸಂದಣಿ ನೆರೆದಿತ್ತು. ಭದ್ರತೆಗೆ ನಿಯೋಜಿಸಿದ್ದ ಪೊಲೀಸರು, ಸಾವಿರಾರು ಸಂಖ್ಯೆಯಲ್ಲಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ವಿಫಲರಾದ ಪರಿಣಾಮ ನೂಕುನುಗ್ಗಲು ಉಂಟಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರಿ ಬಿಸಿಲಿನ ತಾಪದ ನಡುವೆಯೂ ಅಭಿಮಾನಿಗಳು ಹಲವು ಗಂಟೆಗಳ ಕಾದು ಕುಳಿತ ಪರಿಣಾಮ  ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ  ತೀವ್ರ ಶಾಖದ ಪರಿಣಾಮ ಕೆಲವರು ಮೂರ್ಛೆ ಹೋದರು. ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೂ ಸಹ, ಸ್ಟೇಡಿಯಂನ ಬಾಕ್ಸ್ ಆಫೀಸ್‌ನಿಂದ ಟಿಕೆಟ್‌ ಪ್ರತಿಗಳನ್ನು ಪಡೆಯಲು ಸೂಚಿಸಲಾಗಿತ್ತು. ಇದು ನೂಕುನುಗ್ಗಲಿಗೆ ಪ್ರಮುಖ ಕಾರಣವಾಗಿತ್ತು.

ಈ ಸುದ್ದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ಬೆಂಗಳೂರು: ಅಂಡರ್‌ಪಾಸ್, ಫ್ಲೈಓವರ್, ರಸ್ತೆ ಗುಂಡಿ; ಹೆಜ್ಜೆ ಹೆಜ್ಜೆಗೂ ಕಾಡುವ ಸಾವು!

ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯವಿದ್ದರೂ ಸಹ ನರೇಂದ್ರ ಮೋದಿ ಸ್ಟೇಡಿಯಂನ ನಿರ್ಗಮನ ದ್ವಾರಗಳು ಅತ್ಯಂತ ಕಿರಿದಾಗಿವೆ. ಇದು ಅಧಿಕಾರಿಗಳಿಗೆ ಸಮಸ್ಯೆ ತಂದಿಟ್ಟಿದೆ. ಟಿಕೆಟ್‌ ವಿತರಣೆಗಾಗಿ ಸೂಕ್ತ ವ್ಯವಸ್ಥೆ ಮಾಡದ ಬಿಸಿಸಿಐ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕಿಂತ ಜನರಿಗೆ ಐಪಿಎಲ್​ ಟಿಕೆಟ್ ಹೆಚ್ಚಾಯಿತೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...