ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ ರೋಚಕ ಜಯ

Date:

ನಾಥನ್ ಎಲ್ಲಿಸ್ ಮಾರಕ ಬೌಲಿಂಗ್‌ ಪರಿಣಾಮ ಪಂಜಾಬ್‌ ಕಿಂಗ್ಸ್ ಇಲೆವೆನ್‌ ತಂಡ, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ರನ್‌ಗಳ ರೋಚಕ ಜಯ ಗಳಿಸಿತು.

- Advertisement -

ಕೊನೆಯ ಓವರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್,ಧ್ರುವ್ ಜುರೆಲ್ ಸಿಕ್ಸರ್‌ ಬೌಂಡರಿ ಮೂಲಕ ಗೆಲುವಿನ ಭರವಸೆ ಚಿಗುರಿಸಿದರೂ ಗುರಿ ನೆರವೇರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 198 ರನ್‌ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಕೊನೆಯ ಗಳಿಗೆಯಲ್ಲಿ ಸ್ಪೋಟಕ ಆಟವಾಡಿದ ಶಿಮ್ರಾನ್ ಹೆಟ್ಮೆಯರ್ (36),ಧ್ರುವ್ ಜುರೆಲ್ (32) ಸೋಲಿನಲ್ಲೂ ಪ್ರೇಕ್ಷಕರ ಮನದಲ್ಲಿ ಉಳಿದರು.

ಪಂಜಾಬ್‌ ತಂಡದ ನಾಥನ್ ಎಲ್ಲಿಸ್ 30/4 ಹಾಗೂ ಅರ್ಶ್‌ದೀಪ್ ಸಿಂಗ್‌ 47/2 ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್ ತಂಡದ ಪ್ರಭಾಸಿಮ್ರಾನ್, ಶಿಖರ್ ಧವನ್ ಮೊದಲ ಎಸೆತದಿಂದಲೇ ಬ್ಯಾಟ್‌ ಬೀಸಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್‌ ರಾಯಲ್ಸ್ ತಂಡದ ಬೌಲರ್‌ಗಳನ್ನು ಬೆವರಿಳಿಸತೊಡಗಿದರು.

ಸಿಕ್ಸ್ ಹಾಗೂ ಬೌಂಡರಿ ಬಾರಿಸುತ್ತಿದ್ದ ಪ್ರಭಾಸಿಮ್ರಾನ್ ಸಿಂಗ್‌ ಹತ್ತನೇ ಓವರ್‌ನಲ್ಲಿ ಜೇಸನ್‌ ಹೋಲ್ಡರ್‌ ಬೌಲಿಂಗ್‌ನಲ್ಲಿ ವಿಕೇಟ್‌ ಕೀಪರ್‌ ಜಾಸ್‌ ಬಟ್ಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. 34 ಚಂಡುಗಳಲ್ಲಿ 60 ರನ್‌ ಬಾರಿಸಿದ ಪ್ರಭಾಸಿಮ್ರಾನ್ ಬ್ಯಾಟಿಂಗ್‌ನಲ್ಲಿ 7 ಅಮೋಘ ಬೌಂಟರಿ ಹಾಗೂ 3 ಭರ್ಜರಿ ಸಿಕ್ಸರ್‌ ಒಳಗೊಂಡಿದ್ದವು.

ಮೂರನೇ ಕ್ರಮಾಂಕದಲ್ಲಿ ಆಗಮಿಸಿದ ಭಾನುಕಾ ರಾಜಪಕ್ಸೆ ಗಾಯಗೊಂಡು ನಿವೃತ್ತರಾದರೆ, ನಾಲ್ಕನೇ ಕ್ರಮಾಂಕದ ಜಿತೀಶ್ ಶರ್ಮಾ, ಧವನ್‌ಗೆ ಜೊತೆಯಾಗಿ 16 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್‌ನೊಂದಿಗೆ 27 ರನ್‌ ಬಾರಿಸಿದರು. ಸಿಕಂದರ್ ರಝಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಒಂದು ರನ್‌ ಗಳಿಸಿ ಅಶ್ವಿನ್‌ಗೆ ಬೌಲ್ಡ್‌ ಆದರು.

ಕೊನೆಯವರೆಗೂ ಆಟವಾಡಿದ ನಾಯಕ ಶಿಖರ್ ಧವನ್‌ 56 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ನೊಂದಿಗೆ 86 ರನ್‌ ಪೇರಿಸಿ ಪಂಜಾಬ್‌ 20 ಓವರ್‌ಗಳಲ್ಲಿ 197/4 ಮೊತ್ತ ದಾಖಲಿಸಲು ಕಾರಣರಾದರು.

ರಾಜಸ್ಥಾನ್‌ ಪರ ಹೋಲ್ಡರ್‌ 2, ಚಹಾಲ್‌ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...