ಮಹಿಳಾ ಪ್ರೀಮಿಯರ್‌ ಲೀಗ್‌; ಫೈನಲ್‌ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್

Date:

  • ಫೈನಲ್ ತಲುಪಿದ ಡೆಲ್ಲಿ ಕ್ಯಾಪಿಟಲ್ಸ್
  • ಮುಂಬೈ, ಡೆಲ್ಲಿ ತಂಡಗಳಿಗೆ ಜಯ

ಅಲಿಸ್ಸಾ ಹೀಲಿ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಚೊಚ್ಚಲ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪ್ರವೇಶಿಸಿದೆ.

- Advertisement -

ಮಂಗಳವಾರ ನಡೆದ ಅಂತಿಮ ಲೀಗ್‌ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು 5 ವಿಕೆಟ್‌ಗಳ ಅಂತರದಲ್ಲಿ ಮಣಿಸಿದ ಡೆಲ್ಲಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗುವುದರ ಮೂಲಕ ನೇರವಾಗಿ ಫೈನಲ್‌ ಹಂತಕ್ಕೆ ಅರ್ಹತೆ ಪಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಾರ್ಚ್‌ 24, ಶುಕ್ರವಾರದಂದು‌ ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ವಿಜೇತರು ಮಾರ್ಚ್‌ 26, ಭಾನುವಾರದಂದು ಬ್ರಬೋರ್ನ್‌ ಮೈದಾನದಲ್ಲಿ ನಡೆಯುವ ಪ್ರಥಮ ಆವೃತ್ತಿಯ ಡಬ್ಲ್ಯೂಪಿಎಲ್ ಫೈನಲ್‌ ‌ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲನ್ನು ಎದುರಿಸಲಿದ್ದಾರೆ.

ಲೀಗ್‌ ಹಂತದಲ್ಲಿ ಆಡಿದ ಒಟ್ಟು 8 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ತಲಾ 6 ಗೆಲುವು ಸಾಧಿಸುವ ಮೂಲಕ ತಲಾ 12 ಅಂಕಗಳನ್ನು ಹೊಂದಿದೆ. ಆದರೆ ಡೆಲ್ಲಿ (1.856) ಮುಂಬೈ ತಂಡಕ್ಕಿಂತ (1.711) ಉತ್ತಮ ನೆಟ್‌ ರನ್‌ರೇಟ್‌ ಹೊಂದಿರುವುದರಿಂದ ಫೈನಲ್‌ಗೆ ಅರ್ಹತೆ  ಪಡೆಯಿತು.

ಮುಂಬೈ, ಡೆಲ್ಲಿ ತಂಡಗಳಿಗೆ ಜಯ

ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಮಂಗಳವಾರ ನಡೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಜಯಭೇರಿ ಬಾರಿಸಿದೆ. ಡಿವೈ ಪಾಟೀಲ್‌ ಮೈದಾನದಲ್ಲಿ ನಡೆದ  ಮೊದಲ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್‌ ತಂಡ ಆರ್‌ಸಿಬಿ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ. ಬ್ರಬೋರ್ನ್‌ ಮೈದಾನದಲ್ಲಿ ನಡೆದ ಎರಡನೇ  ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿರುವ ಯುಪಿ ವಾರಿಯರ್ಸ್‌ ತಂಡವನ್ನು 5 ವಿಕೆಟ್‌ಗಳ ಅಂತರದಲ್ಲಿ ಮಣಿಸಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....