ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ | ಸತತ 2ನೇ ಚಿನ್ನದ ಪದಕ ಗೆದ್ದ ಝರೀನ್

Date:

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಿಖತ್ ಝರೀನ್ ನೂತನ ದಾಖಲೆ ಬರೆದಿದ್ದಾರೆ. ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಚಾಂಪಿಯನ್‌ಶಿಪ್‌ನ 50 ಕೆಜಿ ವಿಭಾಗದಲ್ಲಿ ಝರೀನ್, ವಿಯೆಟ್ನಾಂನ ಬಾಕ್ಸರ್ ಎನ್‌ಗುಯೆನ್ ಥಿ ಥಾಯ್ ವಿರುದ್ಧ 5-0 ಅಂತರದಲ್ಲಿ ಏಕಪಕ್ಷೀಯ ಜಯ ಸಾಧಿಸಿದರು. ಆ ಮೂಲಕ ಸತತ ಎರಡನೇ ವರ್ಷ ಚಿನ್ನದ ಪದಕ ಗೆದ್ದ ದಾಖಲೆ ನಿರ್ಮಿಸಿದರು.

2022ರ ಸಾಲಿನ ವಿಶ್ವ ಚಾಂಪಿಯನ್‌ಷಿಪ್‌ನ 52 ಕೆಜಿ ವಿಭಾಗದಲ್ಲಿ ಝರೀನ್ ಚಿನ್ನದ ಪದಕ ಗೆದ್ದಿದ್ದರು. ಇದರೊಂದಿಗೆ ದಿಗ್ಗಜ ತಾರೆ ಮೇರಿ ಕೋಮ್ ಬಳಿಕ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಬಾಕ್ಸರ್‌ ಎಂಬ ಕೀರ್ತಿಗೆ ಕಾಮನ್‌ವೆಲ್ತ್‌ ಚಾಂಪಿಯನ್ ನಿಖತ್ ಭಾಜನರಾಗಿದ್ದಾರೆ.‌

ಕೆ ಡಿ ಜಾಧವ್‌ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಝರೀನ್‌, 28-27, 28-27, 28-27, 29-26 ಮತ್ತು 28-27 ಅಂತರದಲ್ಲಿ ಎನ್‌ಗುಯೆನ್ ವಿರುದ್ಧ ಗೆಲುವು ಸಾಧಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರತಕ್ಕೆ 4 ಚಿನ್ನದ ಪದಕ

ಟೋಕಿಯೋ ಒಲಿಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್, 75 ಕೆಜಿ ಮಿಡ್ಲ್ ವೇಟ್‌ ವಿಭಾಗದ ಫೈನಲ್​ನಲ್ಲಿ ಆಸ್ಟ್ರೇಲಿಯದ ಕೈಟ್ಲಿನ್ ಪಾರ್ಕರ್ ವಿರುದ್ಧ 5-2 ಅಂತರದಿಂದ ಗೆಲುವು ಸಾಧಿಸಿದರು. ಇದು ಭಾನುವಾರ ಭಾರತಕ್ಕೆ ಲಭಿಸಿದ 2ನೇ ಚಿನ್ನದ ಪದಕ. ಇದರೊಂದಿಗೆ 2023ರ ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಒಟ್ಟು 4 ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದೆ. ಇದಕ್ಕೂ ಮೊದಲು ನೀತು ಗಂಗಾಸ್‌ ಮತ್ತು ಸ್ವೀಟಿ ಬೂರಾ ಅವರು ಕ್ರಮವಾಗಿ 48 ಕೆಜಿ ಹಾಗೂ 81 ಕೆಜಿ ವಿಭಾಗಗಳಲ್ಲಿ ಚಾಂಪಿಯನ್‌ ಆಗಿದ್ದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...