ಏಕದಿನ ವಿಶ್ವಕಪ್ 2023 | ಚಾಂಪಿಯನ್ ಇಂಗ್ಲೆಂಡ್‌ಗೆ ಆಘಾತ ನೀಡಿದ ಅಫ್ಘಾನಿಸ್ತಾನ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಆವೃತ್ತಿಯ 13ನೇ ಪಂದ್ಯದಲ್ಲಿಯೇ ಅಚ್ಚರಿ ನಡೆದಿದೆ. ಕಳೆದ ಬಾರಿಯ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಐಸಿಸಿ 9 ನೇ ರ‍್ಯಾಂಕಿಂಗ್‌ನಲ್ಲಿರುವ ಅಫ್ಘಾನಿಸ್ತಾನ ಆಘಾತ ನೀಡಿದೆ.

- Advertisement -

ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ನೀಡಿದ 285 ರನ್‌ಗಳ ಸವಾಲನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 40.3 ಓವರ್‌ಗಳಲ್ಲಿ 215 ರನ್ನುಗಳಿಗೆ   ತನ್ನ ಎಲ್ಲ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಂಘಟಿತ ಬೌಲಿಂಗ್‌ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಮುಜೀಬ್ ಉರ್ ರೆಹಮಾನ್ 51/3, ರಶೀದ್ ಖಾನ್ 37/3, ಮೊಹಮ್ಮದ್ ನಬಿ 16/2 ವಿಕೆಟ್ ಕಬಳಿಸಿ ಅಫ್ಘಾನ್‌ 69 ರನ್‌ಗಳ ಅಂತರದಲ್ಲಿ ಗೆಲುವು ಗಳಿಸಲು ಪ್ರಮುಖ ರೂವಾರಿಗಳಾದರು.

ಮಧ್ಯಮ ಕ್ರಮಾಂಕದ ಆಟಗಾರ ಹ್ಯಾರಿ ಬ್ರೂಕ್ (66) ಬಿಟ್ಟರೆ ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಹೊರಬರಲಿಲ್ಲ.

ಮೂರು ಪಂದ್ಯಗಳಾಡಿರುವ ಇಂಗ್ಲೆಂಡ್‌ಗೆ ಇದು ಎರಡನೇ ಸೋಲಾಗಿದೆ. ಈ ಮೊದಲು ನ್ಯೂಜಿಲೆಂಡ್ ಪಂದ್ಯದಲ್ಲಿ ಮೊದಲ ಸೋಲು ಅನುಭವಿಸಿತ್ತು. ಅಫ್ಘಾನಿಸ್ತಾನ ಮೂರು ಪಂದ್ಯಗಳಲ್ಲಿ ಮೊದಲ ಗೆಲುವು ಗಳಿಸಿದೆ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಜಯ್ ಶಾ ಪ್ರತಿಷ್ಠೆಯಿಂದ ಪ್ರೇಕ್ಷಕರಿಲ್ಲದ ಕ್ರೀಡಾಂಗಣಗಳು, ಕಳೆಗುಂದಿದ ಕ್ರಿಕೆಟ್

ಈ ಮೊದಲು ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಇನ್ನಿಂಗ್ಸ್​​ ಆರಂಭದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಅಫ್ಘಾನಿಸ್ತಾನ, ಕೊನೆಯಲ್ಲಿ ಇಂಗ್ಲೆಂಡ್ ದಾಳಿಗೆ ತತ್ತರಿಸಿತು.

ಇಬ್ರಾಹಿಂ ಜರ್ದಾನ್ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದರೆ, ರೆಹಮಾನುಲ್ಲಾ ಗುರ್ಬಾಜ್ ಮಾತ್ರ ಆಕ್ರಮಣಕಾರಿ ಆಟದ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದರು. ಕೇವಲ 57 ಎಸೆತಗಳಲ್ಲಿ 4 ಸಿಕ್ಸರ್, 8 ಬೌಂಡರಿಯೊಂದಿಗೆ 80 ರನ್ ಸಿಡಿಸಿದರು. ಈ ನಡುವೆ 48 ಎಸೆತಗಳಲ್ಲಿ 28 ರನ್ ಗಳಿಸಿದ್ದ ಜದ್ರಾನ್, ಆದಿಲ್ ರಶೀದ್ ಬೌಲಿಂಗ್​​ನಲ್ಲಿ ವಿಕೆಟ್ ಒಪ್ಪಿಸಿದರು.

ತಂಡದ ಮೊತ್ತ 122 ರನ್ ಆಗುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಆರಂಭಿಕ 3 ವಿಕೆಟ್ ಬೆನ್ನಲ್ಲೇ ಮಧ್ಯಮ ಕ್ರಮಾಂಕದ ಆಟಗಾರರು ತಂಡಕ್ಕೆ ಚೇತರಿಕೆ ನೀಡಲು ಯತ್ನಿಸದೆ ಔಟಾದರು.

ಸತತ ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ಇಕ್ರಮ್ ಅಲಿಖಿಲ್ ಆಸರೆಯಾದರು. ಅಲಿಖಿಲ್ ಮಹತ್ವದ ಅರ್ಧಶತಕ (58) ಸಿಡಿಸಿದರು. ಅಲಿಖಿಲ್​ಗೆ ರಶೀದ್ ಖಾನ್ (23), ಮುಜೀಬ್ ಉರ್​ ರೆಹಮಾನ್ (28) ಜೊತೆ ನೀಡಿದ ಪರಿಣಾಮ ಅಫ್ಘಾನಿಸ್ತಾನ  49.5 ಓವರ್​​ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 285 ರನ್ ಗಳಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...