‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

Date:

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್ ಶಮಿ ವ್ಯಕ್ತಿಯೊಬ್ಬರ ಪ್ರಾಣ ಉಳಿಸಿದ್ದು, ಸ್ವತಃ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

- Advertisement -

ಉತ್ತರಾಖಂಡ್‌ನ ನೈನಿತಾಲ್‌ನ ಕಣಿವೆ ರಸ್ತೆಯಲ್ಲಿ ಮೊಹಮ್ಮದ್ ಶಮಿ ಚಲಿಸುತ್ತಿದ್ದ ಕಾರಿನ ಮುಂದೆಯೆ ಮತ್ತೊಂದು ಕಾರು ಅಪಘಾತಕ್ಕೀಡಾಗಿದೆ. ತಕ್ಷಣವೇ ಎಚ್ಚೆತ್ತ ಶಮಿ, ಗಾಯಾಳುವಿನ ಜೀವ ಉಳಿಸಿದ್ದಾರೆ. ಶಮಿ ಅಪಘಾತದ ಸಂಪೂರ್ಣ ವಿವರ ಮತ್ತು ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ದೃಶ್ಯದಲ್ಲಿ ಕಾರು ಪಲ್ಟಿಯಾಗಿ ಬಿದ್ದಿರುವುದು ಮತ್ತು ಶಮಿ ಸಂತ್ರಸ್ತನಿಗೆ ಸಹಾಯ ಮಾಡುವುದನ್ನು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಅವರು, “ಅವನು ತುಂಬಾ ಅದೃಷ್ಟಶಾಲಿ, ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ. ಆತನ ಕಾರು ನೈನಿತಾಲ್ ಬಳಿಯ ಕಣಿವೆ ರಸ್ತೆಯಿಂದ ನನ್ನ ಕಾರಿನ ಮುಂದೆ ಬಿದ್ದು ಪಲ್ಟಿಯಾಯಿತು. ನಾವು ಅವರನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ದೆವು” ಎಂದು ಶಮಿ ಬರೆದುಕೊಂಡಿದ್ದಾರೆ.

ಶಮಿ 2023 ರ ಏಕದಿನ ವಿಶ್ವಕಪ್‌ನಲ್ಲಿ ಅತ್ಯಂತ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ ಆಗಿದ್ದಾರೆ. ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ. ಸೆಮಿಫೈನಲ್‌ನಲ್ಲಿ 7 ವಿಕೆಟ್‌ ಗಳಿಸುವುದರ ಜೊತೆಗೆ ಎರಡು ಪಂದ್ಯಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಮಿ ತಾವು ಆಡಿದ  ಪಂದ್ಯಾವಳಿಯುದ್ದಕ್ಕೂ ತಮ್ಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು. ವಿಶ್ವಕಪ್‌ನಲ್ಲಿ ಮೂರು ಬಾರಿ 5 ಅಥವಾ 5ಕ್ಕಿಂತ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾದ ಮೊದಲ ಬೌಲರ್‌ ಎನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞತೆ ಸಲ್ಲಿಸಿದ ಕ್ರಿಕೆಟಿಗ ಜಾಂಟಿ ರೋಡ್ಸ್

ನವೆಂಬರ್ 19 ರ ಭಾನುವಾರದಂದು ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ 6 ವಿಕೆಟ್‌ ಗೆಲುವು ಸಾಧಿಸಿವುದರೊಂದಿಗೆ 6 ಬಾರಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಶಮಿ ಈ ಪಂದ್ಯದಲ್ಲಿಯೂ ಪ್ರಮುಖ ಒಂದು ವಿಕೆಟ್‌ ಗಳಿಸಿದರಾದರೂ ಆಸೀಸ್‌ ಉತ್ತಮ ಬ್ಯಾಟಿಂಗ್‌ನಿಂದ ಭಾರತಕ್ಕೆ ವಿಶ್ವಕಪ್‌ ಕೈತಪ್ಪಿತು.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರ ಅರ್ಧಶತಕಗಳ ನೆರವಿನಿಂದ 240 ರನ್‌ಗಳನ್ನು ಕಲೆ ಹಾಕಿತು. ಆದಾಗ್ಯೂ, ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅದ್ಭುತ ಶತಕ ಬಾರಿಸಿ ಆಸೀಸ್‌ಗೆ ಸುಲಭ ಜಯದಲ್ಲಿ ಪ್ರಮುಖ ರೂವಾರಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...