ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್ ದಾಳಿಗೆ ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳು ಬ್ಯಾಟ್ ಬೀಸಲು ಸಾಧ್ಯವಾಗದೆ 302 ರನ್‌ಗಳ ದಾಖಲೆ ಅಂತರದಿಂದ ಸೋಲನ್ನು ಅನುಭವಿಸಿದರು.
ಮುಂಬೈನ್ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 358 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕುಸಾಲ್ ಮೆಂಡಿಸ್ ಸಾರಥ್ಯದ ಶ್ರೀಲಂಕಾ ತಂಡ 19.4 ಓವರ್‌ಗಳಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್ ಆದರು. ಶ್ರೀಲಂಕಾ 11 ಬ್ಯಾಟ್ಸ್‌ಮನ್‌ಗಳಲ್ಲಿ ಐವರು ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾದರೆ, ಇಬ್ಬರು 1 ರನ್‌ಗಳಿಗೆ ಪೆವಿಲಿಯನ್‌ಗೆ ತೆರಳಿದರು.
ಲಂಕಾ ಬೌಲರ್‌ಗಳನ್ನು ಧೂಳೀಪಟ ಮಾಡಿದ ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯಲ್ಲಿ ಎರಡನೇ ಬಾರಿ 5 ವಿಕೆಟ್ ಕಬಳಿಸಿದರು. ಕೇವಲ ಮೂರು ಪಂದ್ಯಗಳಲ್ಲಿ 14 ವಿಕೆಟ್ ಕಿತ್ತು ದಾಖಲೆ ನಿರ್ಮಿಸಿದ್ದಾರೆ.
ಮತ್ತೊಬ್ಬ ವೇಗಿ ಮೊಹಮದ್ ಸಿರಾಜ್ 16/3 ವಿಕೆಟ್ ಉರಿಸಿದರೆ, ಬುಮ್ರಾ 8/1 ಹಾಗೂ ರವೀಂದ್ರ ಜಡೇಜಾ 4/1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
𝙄𝙉𝙏𝙊 𝙏𝙃𝙀 𝙎𝙀𝙈𝙄𝙎! 🙌#TeamIndia 🇮🇳 becomes the first team to qualify for the #CWC23 semi-finals 👏👏#MenInBlue | #INDvSL pic.twitter.com/wUMk1wxSGX
— BCCI (@BCCI) November 2, 2023
ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಗೆಲುವು ದಾಖಲಿಸಿರುವ ಭಾರತ ಮತ್ತೊಂದು ದಾಖಲೆ ನಿರ್ಮಿಸಿತು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವುದರ ಜೊತೆಗೆ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಂಡಿತು.
ಶ್ರೇಯಸ್, ಗಿಲ್, ವಿರಾಟ್ ಅರ್ಧ ಶತಕ
ಮೊದಲು ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಭಾರತವನ್ನು ಬ್ಯಾಟಿಂಗ್ ಆಹ್ವಾನಿಸಿದರು.
ಬ್ಯಾಟಿಂಗ್ ಆರಂಭಿಸಿದ ಮೊದಲ ಓವರ್‌ನಲ್ಲಿ ಲಂಕಾ ವೇಗಿ ಮಧುಶಂಕಾ ನಾಯಕ ರೋಹಿತ್ ಶರ್ಮಾ(4) ಅವರನ್ನು ಬೌಲ್ಡ್ ಮಾಡಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ನೀಡಿದರು.
ನಂತರ ಎರಡನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಅತ್ಯುತ್ತಮ 189 ರನ್‌ಗಳ ಜೊತೆಯಾಟವಾಡಿದ ಉದಯೋನ್ಮುಖ ಆಟಗಾರ ಶುಭಮನ್ ಗಿಲ್ 92 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ನೊಂದಿಗೆ 92 ರನ್ ಗಳಿಸಿ 8 ರನ್‌ನಿಂದ ಶತಕ ತಪ್ಪಿಸಿಕೊಂಡರು.
A record win at Wankhede helps India qualify for the semi-final stage of the #CWC23 🎇#INDvSL📝: https://t.co/0PWB7VT3DF pic.twitter.com/l6cr1LP9Uk
— ICC Cricket World Cup (@cricketworldcup) November 2, 2023
ಕೊಹ್ಲಿ ದಾಖಲೆ
ಶುಭಮನ್ ಔಟಾದ ಎರಡು ಓವರ್‌ಗಳ ತರುವಾಯು 88 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ಔಟಾದರು. 94 ಚೆಂಡುಗಳ ಅವರ ಆಟದಲ್ಲಿ 11 ಬೌಂಡರಿಗಳಿದ್ದವು. ಕೊಹ್ಲಿ ಈ ಪಂದ್ಯದಲ್ಲಿ ಸಂಗಕ್ಕರ, ಶಕೀಬ್ ಹಾಗೂ ರೋಹಿತ್ ದಾಖಲೆಯನ್ನು ಸರಿಗಟ್ಟಿದರು.
ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್‌ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇ ರಿದರು. ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು 21 ಬಾರಿ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 13ನೇ ಬಾರಿ ಈ ಸಾಧನೆ ಮಾಡಿದರು.
ಶ್ರೀಲಂಕಾದ ಕುಮಾರ ಸಂಗಕ್ಕರ, ಬಾಂಗ್ಲಾದೇಶದ ಶಕಿಬ್ ಅಲ್ ಹಸನ್ ಮತ್ತು ಭಾರತದ ರೋಹಿತ್ ಶರ್ಮ ಅವರು 12 ಬಾರಿ 50ಕ್ಕಿಂತ ಹೆಚ್ಚು ರನ್‌ಗಳಿಸಿದ್ದಾರೆ.
ಶುಭಮನ್ ಹಾಗೂ ವಿರಾಟ್ ಪೆವಿಲಿಯನ್‌ಗೆ ತೆರಳಿದ ನಂತರ ಶ್ರೇಯಸ್ ಅಯ್ಯರ್ ಬಿರುಸಿನ ಆಟವಾಡಿದರು. 56 ಚೆಂಡುಗಳಲ್ಲಿ 6 ಸಿಕ್ಸರ್ ಹಾಗೂ 3 ಬೌಂಡರಿ ಸಹಿತ 82 ಚಚ್ಚಿದರು. ಕೊನೆಯಲ್ಲಿ ರವೀಂದ್ರ ಜಡೇಜಾ 24 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿಯೊಂದಿಗೆ 35 ರನ್ ಬಾರಿಸಿದರು.
ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಕಲೆ ಹಾಕಿತು.
ಶ್ರೀಲಂಕಾ ಪರ ದಿಲ್ಶನ್ ಮಧುಶಂಕ 80 ರನ್ ಕೊಟ್ಟರು ಪ್ರಮುಖ 5 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರು.