ಏಕದಿನ ವಿಶ್ವಕಪ್ 2023 | ಪ್ರಬಲ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿದ ನೆದರ್ಲೆಂಡ್ಸ್

Date:

ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ 2023ರ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದೆ. ಸತತ ಎರಡು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಪ್ರಬಲ ದಕ್ಷಿಣ ಆಫ್ರಿಕಾ ತಂಡವನ್ನು ರ‍್ಯಾಂಕಿಂಗ್‌ನ ಕೊನೆಯ ಸ್ಥಾನದಲ್ಲಿರುವ ನೆದರ್ಲೆಂಡ್ಸ್ ತಂಡ 38 ರನ್‌ಗಳಿಂದ ಸೋಲಿಸಿ ತಾನು ಕೂಡ ಪ್ರಬಲ ತಂಡ ಎಂದು ಸಾಬೀತುಪಡಿಸಿದೆ.

- Advertisement -

ಕಳೆದ ಎರಡು ದಿನಗಳ ಹಿಂದೆ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ತಂಡವನ್ನು ಅಫ್ಘಾನಿಸ್ತಾನ್‌ ಸೋಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ನೀಡಿದ 246 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹರಿಣಗಳ ತಂಡ 42.5 ಓವರ್‌ಗಳಲ್ಲಿ 207 ರನ್‌ಗಳಷ್ಟನ್ನೆ ಗಳಿಸಿ ಆಲೌಟ್‌ ಆಯಿತು.

ಅತ್ಯುತ್ತಮ ಬೌಲಿಂಗ್‌ ಮಾಡಿದ ಪಾಲ್ ವ್ಯಾನ್ ಮೀಕೆರೆನ್ 40/2, ಲೋಗನ್ ವ್ಯಾನ್ ಬೀಕ್ 60/3, ರೋಲೋಫ್ ವ್ಯಾನ್ ಡೆರ್ ಮೆರ್ವೆ 34/2 ಹಾಗೂ ಬಾಸ್ ಡಿ ಲೀಡೆ 36/2 ವಿಕೆಟ್‌ ಕಬಳಿಸಿ ಗೆಲುವಿನ ರೂವಾರಿಗಳಾದರು.

ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ (43), ಬೌಲರ್‌ ಕೇಶವ್ ಮಹಾರಾಜ್(40) ಹಾಗೂ ಹೆನ್ರಿಕ್ ಕ್ಲಾಸೆನ್ (28) ರನ್‌ ಗಳಿಸಿದ್ದನ್ನು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳು ಗೆಲುವಿಗಾಗಿ ಹೋರಾಟ ನಡೆಸಲಿಲ್ಲ.

ಈ ಮೊದಲು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ನೆದರ್ಲೆಂಡ್ಸ್ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಡಚ್ಚರ ತಂಡದ ನಾಯಕ ಸ್ಕಾಟ್‌ ಎಡ್ವರ್ಡ್‌ ಹಾಗೂ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ 43 ಓವರ್‌ಗಳಲ್ಲಿ 8‌ ವಿಕೆಟ್‌ ಕಳೆದುಕೊಂಡು 245 ರನ್‌ಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ಮಳೆಯಿಂದ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಉಭಯ ತಂಡಗಳಿಗೂ ತಲಾ 43 ಓವರ್‌ ನಿಗದಿಪಡಿಸಲಾಯಿತು.‌

ಮೊದಲು ಬ್ಯಾಟಿಂಗ್‌ ಆರಂಭಿಸಿದ ಡಚ್ಚರಿಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ ವಿಕ್ರಮ್‌ಜಿತ್‌ ಸಿಂಗ್‌ 2(16) ರನ್‌ ಗಳಿಸಿ ಕಗೀಸೊ ರಬಾಡಾಗೆ ವಿಕೆಟ್‌ ಒಪ್ಪಿಸಿದರು. ಅವರ ಬೆನ್ನಲ್ಲೇ ಮ್ಯಾಕ್ಸ್ ಒಡೌಡ್ 18(25) ರನ್‌ ಗಳಿಸಿ ಎರಡನೆಯವರಾಗಿ ವಿಕೆಟ್‌ ಒಪ್ಪಿಸಿದರು. ಮಾರ್ಕೊ ಜಾನ್ಸೆನ್ ಎಸೆತದಲ್ಲಿ ಕೀಪರ್‌ ಡಿ ಕಾಕ್ ಕ್ಯಾಚ್‌ ಹಿಡಿದು ತಂಡಕ್ಕೆ ಮುನ್ನಡೆ ತಂದುಕೊಟ್ಟರು.

ರಬಾಡ ಎಸೆತದಲ್ಲಿ ಬಾಸ್ ಡಿ ಲೀಡೆ 2(7) ರನ್‌ ಗಳಿಸಿದ್ದಾಗ ಎಲ್‌ಬಿ ಬಲೆಗೆ ಬಿದ್ದರು. ಅವರ ಬೆನ್ನಲ್ಲೇ ಕಾಲಿನ್ ಅಕರ್ಮನ್ ಕೂಡಾ 13(25) ರನ್‌ ಗಳಿಸಿ ಜೆರಾಲ್ಡ್ ಕೋಟ್ಜಿಗೆ ವಿಕೆಟ್‌ ಒಪ್ಪಿಸಿದರು.

ಸಂಕಷ್ಟದಲ್ಲಿದ್ದ ತಂಡವನ್ನು 200 ರನ್‌ಗಳ ಗಡಿ ದಾಟಿಸಿದವರು ನಾಯಕ ಎಡ್ವರ್ಡ್ಸ್‌ ಮತ್ತು ಮೆರ್ವೆ. ಇವರಿಬ್ಬರೂ ಎಂಟನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದರು.

ನಾಯಕನ ಆಟವಾಡಿದ ಎಡ್ವರ್ಡ್ಸ್‌ 69 ಎಸೆತಗಳಲ್ಲಿ 78 ರನ್‌ ಪೇರಿಸಿದರೆ, ಮೆರ್ವೆ 19 ಚೆಂಡುಗಳಲ್ಲಿ 29 ರನ್‌ ಸ್ಫೋಟಿಸಿದರು. ಕೊನೆಯಲ್ಲಿ ಬಂದ ಆರ್ಯನ್‌ ದತ್‌ ಕೇವಲ 9 ಎಸೆತಗಳಲ್ಲಿ 3 ಸ್ಫೋಟಕ ಸಿಕ್ಸರ್‌ ಸಹಿತ 23 ರನ್‌ ಗಳಿಸಿದರು. ಮುರಿಯದ 9ನೇ ವಿಕೆಟ್‌ಗೆ ಇವರಿಬ್ಬರೂ ಕೇವಲ 19 ಎಸೆತಗಳಲ್ಲಿ 41 ರನ್‌ ಕಲೆಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...