ಏಕದಿನ ವಿಶ್ವಕಪ್ 2023 | ಅಫ್ಘಾನ್ ಸೋಲಿಸಿದ ನ್ಯೂಜಿಲೆಂಡ್; ಸತತ 4 ಪಂದ್ಯ ಗೆದ್ದು ಬೀಗಿದ ಕಿವೀಸ್

Date:

ಏಕದಿನ ವಿಶ್ವಕಪ್‌ 2023ರ 14ನೇ ಆವೃತ್ತಿಯ 16ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸುವುದರೊಂದಿಗೆ ಗೆಲುವಿನ ಓಟ ಮುಂದುವರಿಸಿದೆ.

- Advertisement -

ಚೆನ್ನೈನ ಚೆಪಾಕ್‌ ಮೈದಾನದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅಬ್ಬರಿಸಿದ ಟಾಮ್‌ ಲಥಮ್‌ ಬಳಗ ಅಫ್ಘಾನಿಸ್ತಾನ ತಂಡವನ್ನು 149 ರನ್ನುಗಳಿಂದ ಮಣಿಸಿ ಪ್ರಸಕ್ತ ವಿಶ್ವಕಪ್‌ ಆವೃತ್ತಿಯಲ್ಲಿ ಸತತ ನಾಲ್ಕನೇ ಜಯ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ನ್ಯೂಜಿಲೆಂಡ್ ನೀಡಿದ್ದ 289 ರನ್‌ಗಳನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ 34.4 ಓವರ್‌ಗಳಲ್ಲಿ 139 ರನ್‌ಗಳಿಗೆ ಆಲೌಟ್‌ ಆಯಿತು. ಅಫ್ಘಾನ್‌ ಪರ ರಹಮತ್ ಶಾ(36) ಹಾಗೂ ಅಜ್ಮತುಲ್ಲಾ ಒಮರ್ಜಾಯ್(27) ರನ್‌ ಗಳಿಸಿದ್ದನ್ನು ಬಿಟ್ಟರೆ ಉಳಿದ ಆಟಗಾರರು ಕಿವೀಸ್‌ ಬೌಲಿಂಗ್‌ ದಾಳಿಗೆ ಪೆವಿಲಿಯನ್‌ ದಡ ಸೇರಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ನ್ಯೂಜಿಲೆಂಡ್ ಪರ ಲಾಕಿ ಫರ್ಗುಸನ್ 19/3, ಮಿಚೆಲ್ ಸ್ಯಾಂಟ್ನರ್ 39/3 ಹಾಗೂ ಟ್ರೆಂಟ್ ಬೌಲ್ಟ್ 18/2 ವಿಕೆಟ್ ಕಿತ್ತು ಗೆಲುವಿನ ರೂವಾರಿಗಳಾದರು.

ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್‌, ಟಾಮ್‌ ಲಥಮ್‌ ಮತ್ತು ಗ್ಲೆನ್‌ ಫಿಲಿಪ್ಸ್‌ ಶತಕದ ಜೊತೆಯಾಟದ ನೆರವಿನಿಂದ 6 ವಿಕೆಟ್‌ ಕಳೆದುಕೊಂಡು 288 ರನ್‌ ಗಳಿಸಿತು.

ನ್ಯೂಜಿಲೆಂಡ್ ಪರ ವಿಲ್‌ ಯಂಗ್‌ ಮತ್ತು ರಚಿನ್‌ ರವೀಂದ್ರ ಉತ್ತಮ ಜೊತೆಯಾಟ ನಡೆಸಿದರು. ಉಭಯ ಬ್ಯಾಟರ್‌ಗಳಿಂದ ಅರ್ಧಶತಕದ ಜೊತೆಯಾಟ ಬಂತು. 41 ಎಸೆತಗಳಲ್ಲಿ 32 ರನ್‌ ಗಳಿಸಿದ್ದ ರಚಿನ್‌ ರವಿಂದ್ರ, ಒಮರ್ಜಾಯ್‌ ಎಸೆತದಲ್ಲಿ ಬೋಲ್ಡ್‌ ಆದರು.

ಅರ್ಧಶತಕ ಸಿಡಿಸಿ ಆಡುತ್ತಿದ್ದ ವಿಲ್‌ ಯಂಗ್‌ 54(64) ರನ್‌ ಗಳಿಸಿ ಔಟಾದರು. ಗ್ಲೆನ್‌ ಫಿಲಿಪ್ಸ್‌ 80 ಎಸೆತಗಳಲ್ಲಿ 71 ರನ್‌ ಸಿಡಿಸಿದರು. ಅಲ್ಲದೆ ನಾಯಕ ಲಥಮ್‌ ಜೊತೆಗೆ 144(153) ರನ್‌ಗಳ ಬೃಹತ್‌ ಜೊತೆಯಾಟವಾಡಿದರು. ನಾಯಕನ ಆಟವಾಡಿದ ಲಥಮ್ 68 ರನ್‌ ಗಳಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...