ಏಕದಿನ ವಿಶ್ವಕಪ್ 2023 | ಟಾಸ್‌ ಗೆದ್ದ ಶ್ರೀಲಂಕಾ ಭಾರತದ ಗೆಲುವಿನ ಓಟಕ್ಕೆ ತಡೆ ಹಾಕುವುದೆ?

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಸತತ ಆರು ಗೆಲುವಿನೊಂದಿಗೆ ಉತ್ತಮ ಸಾಧನೆ ತೋರಿರುವ ಭಾರತ ತಂಡ ಇಂದು ಶ್ರೀಲಂಕಾ ವಿರುದ್ಧ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ 7ನೇ ಪಂದ್ಯವಾಡಲಿದೆ.

- Advertisement -

ಟಾಸ್‌ ಗೆದ್ದ ಶ್ರೀಲಂಕಾ ತಂಡದ ನಾಯಕ ಕುಸಾಲ್ ಮೆಂಡಿಸ್ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡು ಭಾರತವನ್ನು ಬ್ಯಾಟಿಂಗ್‌ ಆಹ್ವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ರೋಹಿತ್‌ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈ ಪಂದ್ಯದಲ್ಲಿ ವಿಜಯ ಸಾಧಿಸಿದರೆ ಬಹುತೇಕ ಸೆಮಿಫೈನಲ್‌ಗೆ ಸ್ಥಾನ ಗಟ್ಟಿ ಮಾಡಿಕೊಳ್ಳುತ್ತದೆ. ಕೇವಲ 2 ಪಂದ್ಯಗಳಲ್ಲಿ ಜಯಗಳಿಸಿರುವ ಕುಸಾಲ್‌ ಮೆಂಡಿಸ್ ನೇತೃತ್ವದ ಲಂಕಾ ಪಡೆ ಈ ಪಂದ್ಯದೊಂದಿಗೆ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶ ಪಡೆಯುವುದು ಕಷ್ಟಸಾಧ್ಯವಾಗಿದೆ. ಒಂದು ವೇಳೆ ಭಾರತವನ್ನು ಸೋಲಿಸಿದರೆ ಉಪಾಂತ್ಯ ಪ್ರವೇಶಕ್ಕೆ ಏರುವ ಟೀಂ ಇಂಡಿಯಾಕ್ಕೆ ಒಂಚೂರು ತಡೆಯೊಡ್ಡಬಹುದು.

ಉಭಯ ತಂಡಗಳು ಒಟ್ಟಾರೆಯಾಗಿ ಏಕದಿನ ಕ್ರಿಕೆಟ್‌ನಲ್ಲಿ 167 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 98 ಬಾರಿ ಜಯಗಳಿಸಿದರೆ, 57 ಬಾರಿ ಶ್ರೀಲಂಕಾ ಟೀಂ ಇಂಡಿಯಾವನ್ನು ಮಣಿಸಿದೆ. 11 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.

ವಿಶ್ವಕಪ್‌ ಪಂದ್ಯಾವಳಿಯಲ್ಲೂ ಕೂಡ ಎರಡೂ ತಂಡಗಳು ತಲಾ 4 ಬಾರಿ ಗೆಲುವು ಸಾಧಿಸಿದ್ದರೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗಾಗಿ ವಿಶ್ವಕಪ್‌ನಲ್ಲಿ ಭಾರತ-ಶ್ರೀಲಂಕಾ ತಂಡಗಳು ಸಮಾನವಾಗಿ ಬಲಿಷ್ಠವಾಗಿದೆ.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ 2023 | ನ್ಯೂಜಿಲೆಂಡ್‌ಗೆ ಹ್ಯಾಟ್ರಿಕ್ ಸೋಲಿನ ಆಘಾತ; ಸೆಮಿಫೈನಲ್‌ನತ್ತ ದಕ್ಷಿಣ ಆಫ್ರಿಕಾ

ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ 3 ಪಂದ್ಯಗಳಲ್ಲಿ ಭಾರತ 2 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 1ರಲ್ಲಿ ಗೆದ್ದಿದೆ.

ಭಾರತ ತಂಡದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್‌ ಬೂಮ್ರಾ ಒಳಗೊಂಡು ಹಿರಿಯ ಆಟಗಾರರು ಉತ್ತಮ ಲಯದಲ್ಲಿದ್ದಾರೆ.

ಇತ್ತ ಶ್ರೀಲಂಕಾದಲ್ಲಿ ತಂಡಕ್ಕೆ ಮರಳಿರುವ ಅನುಭವಿ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್‌, ಭಾರತದ ವಿರುದ್ಧ ಉತ್ತಮ ದಾಖಲೆ ನಿರ್ಮಿಸಿದ್ದಾರೆ. ಅವರು ಏಕದಿನ ಮಾದರಿಯಲ್ಲಿ ಸಿಡಿಸಿರುವ ಎಲ್ಲ ಮೂರು ಶತಕಗಳು ಭಾರತದ ವಿರುದ್ಧವೇ ಬಂದಿವೆ. ಭಾರತದ ವಿರುದ್ಧ 53.57ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿರುವ ಅವರು, 84.93 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಇದಲ್ಲದೆ ಮ್ಯಾಥ್ಯೂಸ್ ಏಕದಿನ ಪಂದ್ಯಗಳಲ್ಲಿ ಏಳು ಭಾರಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್‌ ಕಬಳಿಸಿರುವುದು ವಿಶೇಷ.

ಉಭಯ ತಂಡಗಳಲ್ಲಿ ಆಡುವ 11ರ ಬಳಗ

‌ಭಾರತ:

ರೋಹಿತ್ ಶರ್ಮಾ(ನಾಯಕ), ಶುಭಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್‌ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ‌, ಕುಲ್ದೀಪ್ ಯಾದವ್.

ಶ್ರೀಲಂಕಾ:

ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ ಮತ್ತು ವಿಕೆಟ್‌ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ.

ಪಂದ್ಯ ಆರಂಭ: ಮಧ್ಯಾಹ್ನ 2 ಗಂಟೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...