ಆರ್‌ಸಿಬಿ ಸಂಭ್ರಮಾಚರಣೆಗೆ 11 ಮಂದಿ ಬಲಿ: ಸರ್ಕಾರದ ವಿರುದ್ಧ ಸಿಪಿಐಎಂ, ಸಿಪಿಐಎಂಎಲ್‌ ಆಕ್ರೋಶ

Date:

ಐಪಿಎಲ್ 18ನೇ ಆವೃತ್ತಿಯ ಫೈನಲ್‌ನಲ್ಲಿ ಗೆದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆ ಸಮಯದಲ್ಲಿ ನಡೆದ ಕಾಲ್ತುಳಿತದಲ್ಲಿ 10 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯತನ ಮೆರೆದಿರುವ ಸರ್ಕಾರದ ವಿರುದ್ಧ ಸಿಪಿಐಎಂ ಮತ್ತು ಸಿಪಿಐಎಂಎಲ್‌ ಲಿಬರೇಷನ್ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

- Advertisement -

ಆರ್‌ಸಿಬಿ ಅಭಿಮಾನಿಗಳ ಸಾವಿನ ಹೊಣೆಯನ್ನು ವಿಜಯೋತ್ಸವದ ಆಯೋಜನರು ಮತ್ತು ರಾಜ್ಯ ಸರ್ಕಾರವು ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿ ಸಿಪಿಐಎಂ ಮತ್ತು ಸಿಪಿಐಎಂಎಲ್‌ ಲಿಬರೇಷನ್ ಪಕ್ಷಗಳು ಪ್ರತ್ಯೇಕವಾಗಿ ಪ್ರತಿಕಾ ಪ್ರಕಟಣೆ ನೀಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಐಪಿಎಲ್ ಗೆಲುವಿನ ಸಂಭ್ರಮದ ಯಾವುದೇ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಭಾಗವಹಿಸುವಿಕೆಯ ಪ್ರಮಾಣದ ಬಗ್ಗೆ ರಾಜ್ಯ ಸರ್ಕಾರ ಮತ್ತು ಸಂಘಟಕರಿಗೆ ಅರಿವು ಇರಬೇಕು. ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ರಾಜ್ಯ ಸರ್ಕಾರವೇ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಜಯೋತ್ಸವಗಳು ದುರಂತ ಮತ್ತು ಸಂಪೂರ್ಣವಾಗಿ ತಪ್ಪಿಸಬಹುದಾದ ಜೀವಹಾನಿಗೆ ಕಾರಣವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿವೆ.

“ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದ್ದರೂ, ಜನರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಗಣಿಸದೆ ಆರ್‌ಸಿಬಿ ಆಯೋಜಕರು ಏಕಪಕ್ಷೀಯವಾಗಿ ವಿಜಯೋತ್ಸವ ರ್‍ಯಾಲಿಯನ್ನು ನಡೆಸುವುದಾಗಿ ಘೋಷಿಸಿತ್ತು. ಆಯೋಜಕರು ಬೇಜವಾಬ್ದಾರಿ ನಿರ್ಲಕ್ಷ್ಯ ಧೋರಣೆ ಮೆರೆದಿದ್ದಾರೆ. ಈ ಅತಿ ಕಾರ್ಪೊರೇಟ್ ಸರಕು ಕ್ರಿಕೆಟ್ ಆವೃತ್ತಿಯಿಂದ ರಾಜಕೀಯ ಲಾಭ ಪಡೆಯಲು ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ದುರದೃಷ್ಟಕರ. ಇದರ ಹಿಂದೆ, ಸರ್ಕಾರದ ಅವಕಾಶವಾದಿತನ ಸ್ಪಷ್ಟವಾಗಿದ್ದೆ” ಎಂದು ಕಿಡಿಕಾರಿವೆ.

“ಆರ್‌ಸಿಬಿ ಅಭಿಮಾನಿಗಳ ದುರಂತ ಸಾವು ನೋವಿಗೆ ಒಳಗಾದ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಈ ದುರ್ಘಟನೆಗೆ ರಾಜ್ಯ ಸರ್ಕಾರ ಹಾಗೂ ವಿಜಯೋತ್ಸವ ಸಂಭ್ರಮಾಚರಣೆ ಆಯೋಜಕರು ನೇರ ಹೊಣೆಯಾಗಿದೆ. ಸಂತ್ರಸ್ತರಿಗೆ ಕೂಡಲೇ ಸಮರೋಪಾದಿಯಲ್ಲಿ ನೆರವು ಕಾರ್ಯಗಳನ್ನು ಕೈಗೊಳ್ಳಬೇಕು, ಮೃತಕುಟುಂಬಕ್ಕೆ ಸೂಕ್ತ ಪರಿಹಾರ,ಶಾಶ್ವತ ಅಂಗವೈಕಲ್ಯರಾದವರಿಗೆ ಸಹ ಸೂಕ್ತ ಪರಿಹಾರ ಹಾಗೂ ಗಂಭೀರ ಸ್ವರೂಪದ ಗಾಯಗಳಾದವರಿಗೆ ಚಿಕಿತ್ಸೆ ವೆಚ್ಚ ಭರಿಸಿ ಬೇಕು ಹಾಗೂ ಈ ದುರಂತ ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...