ಮಹಿಳಾ ವಿಶ್ವಕಪ್‌ ಗೆದ್ದ ತಂಡಕ್ಕೆ ಎಷ್ಟು ಬಹುಮಾನ?

Date:

7 ಬಾರಿ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತ ಮಹಿಳಾ ಕ್ರಿಕೆಟ್‌ ತಂಡ 2025ನೇ ಸಾಲಿನ ವಿಶ್ವಕಪ್‌ ಫೈನಲ್‌ ತಲುಪಿದೆ. ನವೆಂಬರ್ 2ರಂದು ಮುಂಬೈನ ಡಿ ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಭಾರತ ತಂಡ ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಲಿದೆ. ಐಸಿಸಿಯಿಂದ ಚಾಂಪಿಯನ್‌ ತಂಡಕ್ಕೆ 37.3 ಕೋಟಿ ರೂ. ಹಾಗೂ ರನ್ನರ್‌ ಅಪ್‌ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಗಲಿದೆ.

- Advertisement -

ಇದಲ್ಲದೇ ಭಾರತ ಪ್ರಶಸ್ತಿ ಗೆದ್ದರೆ ನಗದು ಬಹುಮಾನ ನೀಡಲು ಬಿಸಿಸಿಐ ಬದ್ಧವಾಗಿದೆ ಎಂದು ವರದಿಗಳು ತಿಳಿಸಿವೆ. ಬಿಸಿಸಿಐ ಮಾಜಿ ಕಾರ್ಯದರ್ಶಿ ಹಾಗೂ ಹಾಲಿ ಐಸಿಸಿ ಅಧ್ಯಕ್ಷ ಜಯ್‌ ಶಾ ಪ್ರತಿಪಾದಿಸಿದ ʻಸಮಾನ ವೇತನʼ ನೀತಿ ಅಡಿಯಲ್ಲಿ ಮಹಿಳಾ ತಂಡ‌ ಪ್ರಶಸ್ತಿ ಗೆದ್ದರೆ ಅವರಿಗೆ ನಗದು ಬಹುಮಾನ ನೀಡಲು ಬಿಸಿಸಿಐ ಸಂಪೂರ್ಣ ಸಿದ್ಧವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಕಳೆದ ವರ್ಷ ಅಮೆರಿಕಾದಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಪುರುಷರ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಟಿ20 ವಿಶ್ವಕಪ್‌ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆಗ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ನೀಡಿತ್ತು. ಅದೇ ರೀತಿ ಮಹಿಳಾ ತಂಡ ವಿಶ್ವಕಪ್‌ ಗೆದ್ದರೂ ಅಷ್ಟೇ ಮೊತ್ತವನ್ನ ಬಹುಮಾನವಾಗಿ ನೀಡಲು ಉನ್ನತ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? Ind vs Aus T20: ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಗೆಲುವು

ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದ್ರೆ ಕೆಲ ಕ್ರಿಕೆಟ್‌ ತಜ್ಞರು ಹಾಗೂ ಬಿಸಿಸಿಐ ಮಂಡಳಿಯ ಕೆಲ ಅಧಿಕಾರಿಗಳು ಟ್ರೋಫಿ ಗೆಲ್ಲುವ ಮೊದಲೇ ಬಹುಮಾನ ಘೋಷಣೆ ಮಾಡುವುದು ಸರಿಯಲ್ಲ ಅಂತ ಹೇಳಿದ್ದಾರೆಂಬುದಾಗಿ ವರದಿಗಳು ತಿಳಿಸಿವೆ.

2008ರಲ್ಲಿ ಭಾರತ ಮೊದಲ ಬಾರಿ ಫೈನಲ್‌ ಪ್ರವೇಶಿಸಿದಾಗ ಆಸೀಸ್‌ ವಿರುದ್ಧವೇ 98 ರನ್‌ಗಳಿಂದ ಸೋತಿತ್ತು. 2017ರಲ್ಲಿ ಇಂಗ್ಲೆಂಡ್‌ ವಿರುದ್ಧ ಲಾರ್ಡ್ಸ್‌ನಲ್ಲಿ 9 ರನ್‌ಗಳ ವಿರೋಚಿತ ಸೋಲು ಕಂಡಿತ್ತು. ಲಾರ್ಡ್ಸ್‌ನಲ್ಲಿ ಮಹಿಳಾ ತಂಡ ಸೋತಾಗ ಪ್ರತಿಯೊಬ್ಬರಿಗೂ ತಲಾ 50 ಲಕ್ಷ ಬಹುಮಾನ ಘೋಷಿಸಿತ್ತು. ಸದ್ಯ 8 ವರ್ಷಗಳ ಬಳಿಕ ಭಾರತ 3ನೇ ಬಾರಿಗೆ ಫೈನಲ್‌ ತಲುಪಿದ್ದು, ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ ‘ವಿವಾದಿತ ಆಟಗಾರ’ನ ಅಸಲಿ ಮುಖ

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ...