ಐಪಿಎಲ್ ಫೈನಲ್ | ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್‌ ಹೈದರಾಬಾದ್

Date:

ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಫೈನಲ್​ ಪಂದ್ಯಕ್ಕಾಗಿ ಬ್ಯಾಟಿಂಗ್​ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್​ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದರು. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಟಾಸ್ ಗೆದ್ದಿರುವ ಹೈದರಾಬಾದ್, ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮೊತ್ತವನ್ನು ಕಲೆ ಹಾಕುವ ನಿರೀಕ್ಷೆಯಲ್ಲಿದೆ ಪ್ಯಾಟ್ ಕಮ್ಮಿನ್ಸ್‌ ಬಳಗ.

ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್‌, ಟೀಮ್ ಇಂಡಿಯಾ ವಿರುದ್ಧ ಕೂಡ ಟಾಸ್ ಗೆದ್ದಿದ್ದರು. ಟಾಸ್ ಗೆದ್ದಿದ್ದರಿಂದ ಮೊದಲು ಬೌಲಿಂಗ್ ನಡೆಸಿದ್ದರು. ಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು 240 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಲ್ಲದೇ, ಆಸ್ಟ್ರೇಲಿಯಾವು 43 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಮುಟ್ಟಿತ್ತು. ಟ್ರಾವಿಸ್ ಹೆಡ್ ಆಸೀಸ್ ಪರ 137 ರನ್‌ ಗಳಿಸಿ, ಮಿಂಚಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟ್ರಾವಿಸ್ ಹೆಡ್ ಅವರು ಕೂಡ ಈ ಬಾರಿ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಆರಂಭಿಕರಾಗಿದ್ದಾರೆ. ಕೆಕೆಆರ್ ವಿರುದ್ಧದ ಇಂದಿನ ಪಂದ್ಯದಲ್ಲಿ ಅವರಿಂದ ಸ್ಫೋಟಕ ಬ್ಯಾಟಿಂಗ್‌ನ ನಿರೀಕ್ಷೆ ಇದೆ.

ಉಭಯ ತಂಡಗಳ ಪ್ಲೇಯಿಂಗ್ 11:

ಸನ್‌ರೈಸರ್ಸ್‌ ಹೈದರಾಬಾದ್‌:
ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ಏಡನ್‌ ಮಾರ್ಕ್ರಮ್‌. ನಿತೀಶ್‌ ಕುಮಾರ್‌ ರೆಡ್ಡಿ, ಹೆನ್ರಿಕ್‌ ಕ್ಲಾಸೆನ್‌ (ವಿಕೆಟ್‌ ಕೀಪರ್‌), ಶಹಬಾಜ್‌ ಅಹ್ಮದ್‌, ಪ್ಯಾಟ್‌ ಕಮ್ಮಿನ್ಸ್‌ (ನಾಯಕ), ಭುವನೇಶ್ವರ್‌ ಕುಮಾರ್‌, ಜಯದೇವ್‌ ಉನದ್ಕಟ್‌, ಟಿ ನಟರಾಜನ್.

ಕೋಲ್ಕತಾ ನೈಟ್‌ ರೈಡರ್ಸ್‌
ಸುನೀಲ್‌ ನರೇನ್‌, ರೆಹಮಾನುಲ್ಲಾ ಗುರ್ಬಾಝ್ (ವಿಕೆಟ್‌ ಕೀಪರ್‌), ವೆಂಕಟೇಶ್‌ ಅಯ್ಯರ್‌, ಶ್ರೇಯಸ್‌ ಅಯ್ಯರ್‌ (ನಾಯಕ), ರಿಂಕು ಸಿಂಗ್‌, ಆಂಡ್ರೆ ರಸೆಲ್‌, ರಮಣ್‌ದೀಪ್ ಸಿಂಗ್‌, ಮಿಚೆಲ್ ಸ್ಟಾರ್ಕ್‌, ವೈಭವ್‌ ಅರೋರಾ, ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ಆತಿಥೇಯ ಅಮೆರಿಕ ಸೋಲಿಸಿ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದ ಟೀಮ್ ಇಂಡಿಯಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ...

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ...

2026ರ ಫಿಫಾ ವಿಶ್ವಕಪ್​ ಅರ್ಹತಾ ಟೂರ್ನಿ | ಕತಾರ್​ ಮೋಸದಾಟಕ್ಕೆ ಭಾರತ ಫುಟ್ಬಾಲ್​ ತಂಡ ‘ಔಟ್’; ವ್ಯಾಪಕ ಆಕ್ರೋಶ

ಕ್ರಿಕೆಟ್​​ನಂತೆ ಫುಟ್ಬಾಲ್​ನಲ್ಲಿ ಮಹತ್ತರ ಬದಲಾವಣೆ ತರಬೇಕಿದೆ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ...