ಫಿಫಾ ವಿಶ್ವಕಪ್: ಇಂಗ್ಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಅರ್ಜೆಂಟೀನಾ; ಮೆಸ್ಸಿ ಪಡೆಯ ರೋಚಕ ಜಯ

Date:

ನಾಯಕ ಲಿಯೋನೆಲ್ ಮೆಸ್ಸಿ ಅವರ ಅದ್ಭುತ ಆಟದ ನೆರವಿನಿಂದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು 2026ರ ಫಿಫಾ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 2-1 ಗೋಲುಗಳ ಅಂತರದ ರೋಚಕ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಸತತ ಎರಡನೇ ಬಾರಿ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೆಸ್ಸಿ ಪಡೆಯ ಕನಸು ಜೀವಂತವಾಗಿದೆ.

- Advertisement -

ಬುಧವಾರ ಇಲ್ಲಿನ ಅಟ್ಲಾಂಟಾ ಸ್ಟೇಡಿಯಂನಲ್ಲಿ 68,239 ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ತೀವ್ರ ಪೈಪೋಟಿಯ ಪಂದ್ಯದಲ್ಲಿ, ಆರಂಭಿಕ ಹಿನ್ನಡೆಯ ನಡುವೆಯೂ ಅರ್ಜೆಂಟೀನಾ ತಿರುಗೇಟು ನೀಡುವಲ್ಲಿ ಯಶಸ್ವಿಯಾಯಿತು. ಭಾನುವಾರ ನ್ಯೂಯಾರ್ಕ್-ನ್ಯೂಜೆರ್ಸಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಹಣಾಹಣಿಯಲ್ಲಿ ಅರ್ಜೆಂಟೀನಾ ತಂಡವು ಯುರೋಪಿಯನ್ ಚಾಂಪಿಯನ್ ಸ್ಪೇನ್ ತಂಡವನ್ನು ಎದುರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪಂದ್ಯದ ಮೊದಲಾರ್ಧದಲ್ಲಿ ಎರಡೂ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ, ದ್ವಿತೀಯಾರ್ಧದ 55ನೇ ನಿಮಿಷದಲ್ಲಿ ಇಂಗ್ಲೆಂಡ್‌ನ ಆ್ಯಂಟನಿ ಗಾರ್ಡನ್ ಅವರು ಆಕರ್ಷಕ ಗೋಲು ಬಾರಿಸುವ ಮೂಲಕ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು. ನಾಯಕ ಹ್ಯಾರಿ ಕೇನ್ ಮತ್ತು ಮೋರ್ಗನ್ ರೋಜರ್ಸ್ ಅವರ ಸಂಘಟಿತ ಆಟದ ನೆರವಿನಿಂದ ಈ ಗೋಲು ಮೂಡಿಬಂತು.

1966ರ ನಂತರ ಮೊದಲ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸುವ ಇಂಗ್ಲೆಂಡ್‌ನ ಕನಸು ನನಸಾಗುವತ್ತ ಸಾಗುತ್ತಿರುವಾಗಲೇ, ಚಾಂಪಿಯನ್ ಅರ್ಜೆಂಟೀನಾ ತನ್ನ ನೈಜ ಆಟ ತೆರೆದಿಟ್ಟಿತು. ಪಂದ್ಯದ 85ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ನೀಡಿದ ಅತ್ಯುತ್ತಮ ಪಾಸ್ ಅನ್ನು ಎನ್ಜೊ ಫೆರ್ನಾಂಡಿಸ್ ಅವರು ಗೋಲಾಗಿ ಪರಿವರ್ತಿಸಿ 1-1ರ ಸಮಬಲ ಸಾಧಿಸಿದರು

ಬಳಿಕ ಪಂದ್ಯವು ಹೆಚ್ಚುವರಿ ಸಮಯದತ್ತ ಸಾಗುವ ನಿರೀಕ್ಷೆಯಿದ್ದಾಗ, ಇಂಜುರಿ ಟೈಮ್‌ನ 2ನೇ ನಿಮಿಷದಲ್ಲಿ (92ನೇ ನಿಮಿಷ) ಲಿಯೋನೆಲ್ ಮೆಸ್ಸಿ ಅವರು ನೀಡಿದ ಮತ್ತೊಂದು ಕರಾರುವಕ್ಕಾದ ಕ್ರಾಸ್ ಪಾಸ್ ಅನ್ನು ಬದಲಿ ಆಟಗಾರ ಲೌಟಾರೊ ಮಾರ್ಟಿನೆಜ್ ಅವರು ಹೆಡರ್ ಮೂಲಕ ಗೋಲಿನ ಬಲೆಗೆ ಸೇರಿಸಿದರು. ಈ ಮೂಲಕ ಅರ್ಜೆಂಟೀನಾ 2-1 ಅಂತರದ ಐತಿಹಾಸಿಕ ಜಯ ಒಲಿಸಿಕೊಂಡಿತು.

39 ವರ್ಷದ ಲಿಯೋನೆಲ್ ಮೆಸ್ಸಿ ಅವರು ತಮ್ಮ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಸ್ಪರ್ಧಾತ್ಮಕ ಪಂದ್ಯವನ್ನಾಡಿದರು. ಈ ಪಂದ್ಯದ ಗೆಲುವಿನೊಂದಿಗೆ ಅವರು, ಬ್ರೆಜಿಲ್‌ನ ದಿಗ್ಗಜ ಆಟಗಾರ ಕಾಫು ಅವರ ನಂತರ ಮೂರು ವಿಶ್ವಕಪ್ ಫೈನಲ್‌ಗಳನ್ನು ಆಡಿದ ವಿಶ್ವದ ಕೇವಲ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 1962ರಲ್ಲಿ ಬ್ರೆಜಿಲ್ ಸತತ ಎರಡು ಬಾರಿ ವಿಶ್ವಕಪ್ ಗೆದ್ದ ಬಳಿಕ ಬೇರೆ ಯಾವುದೇ ತಂಡ ಟ್ರೋಫಿ ಉಳಿಸಿಕೊಂಡಿಲ್ಲ, ಇದೀಗ ಆ ದಾಖಲೆ ಸರಿಗಟ್ಟುವ ಅವಕಾಶ ಅರ್ಜೆಂಟೀನಾ ಮುಂದಿದೆ.

ಥಾಮಸ್ ಟುಚೆಲ್ ಗರಡಿಯಲ್ಲಿ ಪಳಗಿದ್ದ ಇಂಗ್ಲೆಂಡ್ ತಂಡವು ಆರಂಭದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ, ಅಂತಿಮ ಕ್ಷಣದ ಎಡವಟ್ಟಿನಿಂದಾಗಿ ಫೈನಲ್ಗೇರುವ ಅವಕಾಶದಿಂದ ವಂಚಿತವಾಯಿತು. ತಂಡದ ಪ್ರಮುಖ ಆಟಗಾರರಾದ ಜೂಡ್ ಬೆಲ್ಲಿಂಗ್‌ಹ್ಯಾಮ್ ಮತ್ತು ಹ್ಯಾರಿ ಕೇನ್ ಅವರು ನಿರೀಕ್ಷಿತ ಮಟ್ಟದಲ್ಲಿ ಮಿಂಚಲಿಲ್ಲ. ಶನಿವಾರ ಮಿಯಾಮಿಯಲ್ಲಿ ನಡೆಯಲಿರುವ ಮೂರನೇ ಸ್ಥಾನದ ಪ್ಲೇ-ಆಫ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಫ್ರಾನ್ಸ್ ಅನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ತಂಬಾಕು ನಿಯಂತ್ರಣ ಅಭಿಯಾನ: ಜಾಗೃತಿ ಪೋಸ್ಟರ್ ಬಿಡುಗಡೆ

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ...

BREAKING NEWS | ಸಂಧಾನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುವರಿಕೆ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಧಾರವಾಡ |ಕನ್ನಡ ಭಾಷೆಯ ವೈಭವ, ಏಕೀಕರಣದ ಹೆಮ್ಮೆ ಸಾರಿದ ‘ಹಚ್ಚೇವು ಕನ್ನಡದ ದೀಪ’ ಕಾರ್ಯಕ್ರಮ

ಕನ್ನಡ ಭಾಷೆ ಹಳೆಗನ್ನಡ, ನಡುಗನ್ನಡ, ಆಧುನಿಕ ಸಾಹಿತ್ಯ ಸೇರಿದಂತೆ ಶರಣರು, ದಾಸರು,...

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...