ಟಿ20: ಹಲವು ದಾಖಲೆಗಳ ಪಂದ್ಯದಲ್ಲಿ 133 ರನ್​ಗಳಿಂದ ಬಾಂಗ್ಲಾ ಮಣಿಸಿದ ಭಾರತ

Date:

Advertisements

ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಂ ಇಂಡಿಯಾ, ಇದೀಗ ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಬಾಂಗ್ಲಾದೇಶವನ್ನು ಮಣಿಸಿದೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 133 ರನ್​ಗಳಿಂದ ಸೋಲಿಸಿದೆ.

ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಟೆಸ್ಟ್ ಸರಣಿಯನ್ನೂ 2-0 ಅಂತರದಿಂದ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡಕ್ಕೆ ಭಾರತ ಪ್ರವಾಸದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಭಾರತಕ್ಕೆ ಬರುವ ಮುನ್ನ ಪಾಕಿಸ್ತಾನವನ್ನು ಅವರದ್ದೇ ನೆಲದಲ್ಲಿ ಮಣಿಸಿದ್ದ ಬಾಂಗ್ಲಾ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಭಾರತವನ್ನು ಭಾರತದಲ್ಲಿ ಮಣಿಸಲು ಸಾಧ್ಯವೇ ಇಲ್ಲ ಎಂಬುದನ್ನು ಸಾಬೀತು ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

ಸಂಜು- ಸೂರ್ಯ ಸಿಡಿಲಬ್ಬರದ ಬ್ಯಾಟಿಂಗ್‌

Advertisements

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ ಟಿ20 ವಿಶ್ವ ದಾಖಲೆಯ 297 ರನ್ ಗಳಿಸಿತು. ತಂಡದ ಪರ ಶತಕದ ಇನ್ನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿಗಳಲ್ಲಿ ಪ್ರಮುಖರಾಗಿದ್ದಾರೆ. ತಮ್ಮ ಇನಿಂಗ್ಸ್​ನಲ್ಲಿ 111 ರನ್ ಬಾರಿಸಿದ ಸಂಜು ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಆ ಬಳಿಕ 40 ಎಸೆತಗಳಲ್ಲಿ ಶತಕ ಸಿಡಿಸಿದರು. ಸಂಜುಗೆ ಜೊತೆ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ಈ ಸುದ್ದಿ ಓದಿದ್ದೀರಾ? ಮಹಿಳಾ ಟಿ20 ವಿಶ್ವಕಪ್ | ಪಾಕಿಸ್ತಾನವನ್ನು ಮಣಿಸಿದ ಭಾರತ ತಂಡ

ಕೊನೆಯಲ್ಲಿ ತಂಡದ ಸ್ಕೋರ್ ​ ವೇಗ ಹೆಚ್ಚಿಸದ ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಬ್ಯಾಟಿಂಗ್ ಕ್ರಮಾಂಕದಲ್ಲಿ ಮುಂಬಡ್ತಿ ಪಡೆದು ಬಂದ ರಿಯಾನ್ ಪರಾಗ್ 13 ಎಸೆತಗಳಲ್ಲಿ 34 ರನ್ ಗಳಿಸಿದರು. ಉಳಿದಂತೆ ರಿಂಕು ಸಿಂಗ್ ಔಟಾಗದೆ 8 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 4 ರನ್ ಕೊಡುಗೆ ನೀಡಿದರು. ವಾಷಿಂಗ್ಟನ್ ಸುಂದರ್ 1 ರನ್ ಗಳಿಸಿ ಅಜೇಯರಾಗಿ ಮರಳಿದರು. ಬಾಂಗ್ಲಾದೇಶ ಪರ ತಂಜಿಮ್ ಹಸನ್ ಶಾಕಿಬ್ 3 ವಿಕೆಟ್ ಪಡೆದರೆ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ಮತ್ತು ಮಹಮ್ಮದುಲ್ಲಾ ತಲಾ 1 ವಿಕೆಟ್ ಪಡೆದರು.

ಹಲವು ದಾಖಲೆಗಳನ್ನು ಬರೆದ ಟೀಂ ಇಂಡಿಯಾ

ಬಾಂಗ್ಲಾದೇಶ ವಿರುದ್ಧ 297 ರನ್ ಕಲೆಹಾಕಿದ ಭಾರತಕ್ಕೆ ಇದು ಟಿ20 ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಸ್ಕೋರ್ ಆಗಿದೆ. ಇದಕ್ಕೂ ಮುನ್ನ 2017ರಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 260 ರನ್ ಗಳಿಸಿತ್ತು. ಅದೇ ಹೊತ್ತಿಗೆ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 250 ರನ್‌ಗಳ ಗಡಿ ದಾಟಿದ್ದು ಇದು ಮೂರನೇ ಬಾರಿ.ಇದಲ್ಲದೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನೂ ಮಾಡಿದೆ.

ಟೀಂ ಇಂಡಿಯಾ ಕೇವಲ 7.1 ಓವರ್‌ಗಳಲ್ಲಿ 100 ರನ್‌ಗಳ ಗಡಿಯನ್ನು ಪೂರೈಸಿತು, ಇದು ಹೊಸ ವಿಶ್ವ ದಾಖಲೆಯಾಗಿದೆ.ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಭಾರತ ತಂಡ ಮಾಡಿದೆ. ಬಾಂಗ್ಲಾದೇಶ ವಿರುದ್ಧ ಭಾರತದ ಬ್ಯಾಟ್ಸ್‌ಮನ್‌ಗಳು ಒಟ್ಟು 22 ಸಿಕ್ಸರ್‌ಗಳನ್ನು ಬಾರಿಸಿದ್ದು, ಇದು ಹೊಸ ವಿಶ್ವ ದಾಖಲೆಯಾಗಿದೆ.

Sanju samson t20

ತತ್ತರಿಸಿದ ಬಾಂಗ್ಲಾ

ಭಾರತ ನೀಡಿದ 297 ರನ್​ಗಳ ಬೃಹತ್ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗೆ 164 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶ ಪರ ತೌಹೀದ್ ಹೃದೋಯ್ 42 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯರಾಗಿ ಉಳಿದರೆ, ಲಿಟ್ಟನ್ ದಾಸ್ 42 ರನ್​​ಗಳ ಕಾಣಿಕೆ ನೀಡಿದರು. ಉಳಿದಂತೆ ಯಾರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಭಾರತದ ಪರ ರವಿ ಬಿಷ್ಣೋಯ್ ಗರಿಷ್ಠ ಮೂರು ವಿಕೆಟ್ ಪಡೆದರೆ, ವೇಗದ ಬೌಲರ್ ಮಯಾಂಕ್ ಯಾದವ್ ಎರಡು ವಿಕೆಟ್ ಪಡೆದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X