ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿತ್ತು.
ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಯಕ ರೋಹಿತ್ ಶರ್ಮಾರೊಂದಿಗೆ ಜೊತೆಯಾದ ರವೀಂದ್ರ ಜಡೇಜಾ ಉತ್ತಮ ಸಾಥ್ ನೀಡುವ ಮೂಲಕ ಉತ್ತಮ ಜೊತೆಯಾಟ ನಡೆಸಿದರು.
DO NOT MISS
🎥 That Moment when captain @ImRo45 brought up a fine 💯 👏 👏
Follow the match ▶️ https://t.co/FM0hVG5pje#TeamIndia | #INDvENG | @IDFCFIRSTBank pic.twitter.com/MtK2wm89CQ
— BCCI (@BCCI) February 15, 2024
ಈ ನಡುವೆ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಕರ್ಷಕ ಸೆಂಚುರಿ ಸಿಡಿಸಿದ್ದಾರೆ.
ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅವರ ಸಮಯೋಚಿತ ಜತೆಯಾಟದ ನೆರವಿನಿಂದ ಟೀಂ ಇಂಡಿಯಾ ಆರಂಭಿಕ ಆಘಾತದಿಂದ ಪಾರಾಗಿದೆ.
ದಿಢೀರ್ ವಿಕೆಟ್ ಪತನದ ಆಘಾತ ಅನುಭವಿಸಿದ ಟೀಂ ಇಂಡಿಯಾ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಜೊತೆಯಾಟ ಕೈಹಿಡಿಯಿತು. ರೋಹಿತ್ ಶರ್ಮಾ ದಿಟ್ಟ ಹೋರಾಟದ ಮೂಲಕ ಸೆಂಚುರಿ ಸಿಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 31ನೇ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾದರು.
Captain Rohit Sharma 🤝 Ravindra Jadeja
1⃣0⃣0⃣-run partnership ✅
Follow the match ▶️ https://t.co/FM0hVG5pje#TeamIndia | #INDvENG | @ImRo45 | @imjadeja | @IDFCFIRSTBank pic.twitter.com/c4m4NNUEUG
— BCCI (@BCCI) February 15, 2024
ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಗರಿಷ್ಠ ಶತಕ ಸಿಡಿಸಿದ 5ನೇ ಬ್ಯಾಟ್ಸ್‌ಮನ್ ದಾಖಲೆ ಬರೆದರು. ಈ ಶತಕದ ಮೂಲಕ 217 ದಿನಗಳ ಬಳಿಕ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.
ಸದ್ಯ ಟೀಮ್ ಇಂಡಿಯಾ ನಾಲ್ಕು ವಿಕೆಟ್ ಕಳೆದುಕೊಂಡು 234 ರನ್ ಗಳಿಸಿದೆ. ರೋಹಿತ್ ಶರ್ಮಾ 131 ರನ್ ಗಳಿಸಿ ಔಟ್ ಆದರು. ರವೀಂದ್ರ ಜಡೇಜಾ 78 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ. ಈ ಜೋಡಿಯು 202 ರನ್‌ಗಳ ಜೊತೆಯಾಟ ನಡೆಸಿದೆ.