ಮೂರನೇ ಟೆಸ್ಟ್‌ | ಶತಕ ಬಾರಿಸಿ ಮಿಂಚಿದ ನಾಯಕ ರೋಹಿತ್ ಶರ್ಮಾ: ಸಾಥ್ ನೀಡಿದ ರವೀಂದ್ರ ಜಡೇಜಾ

Date:

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿತ್ತು.

- Advertisement -

ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಯಕ ರೋಹಿತ್ ಶರ್ಮಾರೊಂದಿಗೆ ಜೊತೆಯಾದ ರವೀಂದ್ರ ಜಡೇಜಾ ಉತ್ತಮ ಸಾಥ್ ನೀಡುವ ಮೂಲಕ ಉತ್ತಮ ಜೊತೆಯಾಟ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ನಡುವೆ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಕರ್ಷಕ ಸೆಂಚುರಿ ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅವರ ಸಮಯೋಚಿತ ಜತೆಯಾಟದ ನೆರವಿನಿಂದ ಟೀಂ ಇಂಡಿಯಾ ಆರಂಭಿಕ ಆಘಾತದಿಂದ ಪಾರಾಗಿದೆ.

ದಿಢೀರ್ ವಿಕೆಟ್ ಪತನದ ಆಘಾತ ಅನುಭವಿಸಿದ ಟೀಂ ಇಂಡಿಯಾ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಜೊತೆಯಾಟ ಕೈಹಿಡಿಯಿತು. ರೋಹಿತ್ ಶರ್ಮಾ ದಿಟ್ಟ ಹೋರಾಟದ ಮೂಲಕ ಸೆಂಚುರಿ ಸಿಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 31ನೇ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾದರು.

ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಗರಿಷ್ಠ ಶತಕ ಸಿಡಿಸಿದ 5ನೇ ಬ್ಯಾಟ್ಸ್‌ಮನ್ ದಾಖಲೆ ಬರೆದರು. ಈ ಶತಕದ ಮೂಲಕ 217 ದಿನಗಳ ಬಳಿಕ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.

ಸದ್ಯ ಟೀಮ್ ಇಂಡಿಯಾ ನಾಲ್ಕು ವಿಕೆಟ್ ಕಳೆದುಕೊಂಡು 234 ರನ್ ಗಳಿಸಿದೆ. ರೋಹಿತ್ ಶರ್ಮಾ 131 ರನ್ ಗಳಿಸಿ ಔಟ್ ಆದರು. ರವೀಂದ್ರ ಜಡೇಜಾ 78 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ. ಈ ಜೋಡಿಯು 202 ರನ್‌ಗಳ ಜೊತೆಯಾಟ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...