ಭಾರತ-ಐರ್ಲೆಂಡ್ ಟಿ20 ಸರಣಿ: ವೈಭವ್ ಪದಾರ್ಪಣೆ ಕುತೂಹಲ

Date:

ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವು ಬಿಲ್ ಫಾಸ್ಟ್ ನಲ್ಲಿ ಇಂದು ನಡೆಯಲಿದ್ದು, ನಾಯಕ ಶ್ರೇಯಸ್ ಅಯ್ಯರ್ ಸಾರಥ್ಯದಲ್ಲಿ ಭಾರತ ತಂಡವು ಹೊಸ ಯುಗಕ್ಕೆ ಕಾಲಿಡುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಮೇಲಿದ್ದು, ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವರೇ ಎಂಬ ಕುತೂಹಲ ಗರಿಗೆದರಿದೆ.

- Advertisement -

ಇತ್ತೀಚೆಗೆ ತಮ್ಮ ಮಿಂಚಿನ ಬ್ಯಾಟಿಂಗ್ ಮೂಲಕ ಭಾರಿ ಸಂಚಲನ ಮೂಡಿಸಿರುವ ಹದಿಹರೆಯದ ವೈಭವ್, ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡಿ ‘ಆರೆಂಜ್ ಕ್ಯಾಪ್’ ಒಲಿಸಿಕೊಂಡಿದ್ದರು. ಇತ್ತೀಚೆಗೆ ದಂಬುಲಾದಲ್ಲಿ ನಡೆದ ತ್ರಿಕೋನ ಏಕದಿನ ಸರಣಿಯ ಫೈನಲ್‌ನಲ್ಲಿ ಶ್ರೀಲಂಕಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಈ ಪ್ರತಿಭಾವಂತ, ಕೇವಲ 29 ಎಸೆತಗಳಲ್ಲಿ 94 ರನ್ ಸಿಡಿಸಿ ಅಬ್ಬರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಆದರೆ, ಈ ಚಿಗುರುಮೀಸೆಯ ಹುಡುಗನಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸುವುದು ತಂಡದ ಆಡಳಿತ ಮಂಡಳಿಗೆ ಬಹುದೊಡ್ಡ ಸವಾಲಾಗಿದೆ. ಪ್ರಸ್ತುತ ಭಾರತದ ಅಗ್ರ ಮೂರು ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಹಾಗೂ ಇತ್ತೀಚಿನ ವಿಶ್ವಕಪ್ ಫೈನಲ್‌ನಲ್ಲಿ ಈ ಮೂವರೂ ಅರ್ಧಶತಕ ಬಾರಿಸಿದ್ದರು. ಅಗ್ರ ಕ್ರಮಾಂಕದಲ್ಲಿ ಸಂಜು 28 ಇನಿಂಗ್ಸ್‌ಗಳಲ್ಲಿ 926 ರನ್ ಕಲೆಹಾಕುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.

ತಂಡದ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ಕ್ರಮವಾಗಿ ನಾಯಕ ಶ್ರೇಯಸ್ ಅಯ್ಯರ್ ಮತ್ತು ಉಪನಾಯಕ ತಿಲಕ್ ವರ್ಮಾ ಆಡುವುದು ಬಹುತೇಕ ಖಚಿತವಾಗಿರುವುದರಿಂದ ಅಲ್ಲಿಯೂ ಅವಕಾಶವಿಲ್ಲ. ಒಂದು ವೇಳೆ ವೈಭವ್‌ಗೆ ಆರನೇ ಕ್ರಮಾಂಕ ನೀಡಬೇಕಾದರೆ, ತಂಡವು ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಸೂರ್ಯಾಂಶ ಶೆಡ್ಗೆ ಅಥವಾ ಅಕ್ಷರ್ ಪಟೇಲ್ ಅವರಂತಹ ಪ್ರಮುಖ ಆಲ್‌ರೌಂಡರ್‌ಗಳಲ್ಲಿ ಒಬ್ಬರನ್ನು, ಇಲ್ಲವೇ ಓರ್ವ ಬೌಲರ್‌ನನ್ನು ಕೈಬಿಡಬೇಕಾದ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.

ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಗಳಾದ ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಅನುಪಸ್ಥಿತಿ ತಂಡದಲ್ಲಿ ಎದ್ದು ಕಾಣುತ್ತಿದೆ. ಆದಾಗ್ಯೂ, ಹರ್ಷಿತ್ ರಾಣಾ ತಂಡಕ್ಕೆ ಮರಳಿರುವುದು ಬೌಲಿಂಗ್ ಬಲವನ್ನು ಕೊಂಚಮಟ್ಟಿಗೆ ಹೆಚ್ಚಿಸಿದ್ದು, ಅವರೊಂದಿಗೆ ಪ್ರಸಿದ್ಧ್ ಕೃಷ್ಣ ಮತ್ತು ಪ್ರಿನ್ಸ್ ಯಾದವ್ ಬೌಲಿಂಗ್ ವಿಭಾಗದ ಜವಾಬ್ದಾರಿ ಹೊರಲಿದ್ದಾರೆ.

ಇತ್ತ ಆತಿಥೇಯ ಐರ್ಲೆಂಡ್ ತಂಡವು ಗಾಯದ ಸಮಸ್ಯೆಯಿಂದ ಕಂಗೆಟ್ಟಿದ್ದು, ಪ್ರಮುಖ ಆಟಗಾರರಾದ ಜೋಶ್ ಲಿಟ್ಲ್, ಮಾರ್ಕ್ ಅಡೇರ್, ಪಾಲ್ ಸ್ಟರ್ಲಿಂಗ್ ಮತ್ತು ಕರ್ಟಿಸ್ ಕ್ಯಾಂಫರ್ ಇಲ್ಲದೆ ಕಣಕ್ಕಿಳಿಯಬೇಕಾದ ಅನಿವಾರ್ಯತೆಯಲ್ಲಿದೆ. ಲೋರ್ಕಾನ್ ಟಕರ್ ನಾಯಕತ್ವದ ಈ ತಂಡದಲ್ಲಿ ಜಾರ್ಜ್ ಡಾಕ್ರೆಲ್, ಗರೆತ್ ಡೆಲಾನಿ, ಹ್ಯಾರಿ ಟೆಕ್ಟರ್ ಮತ್ತು ಭಾರತ ಮೂಲದ ಜೈ ಮುಂದ್ರಾ ಅವರಂತಹ ಅನುಭವಿಗಳಿದ್ದರೂ, ಹಾಲಿ ವಿಶ್ವ ಚಾಂಪಿಯನ್ ಭಾರತವನ್ನು ಎದುರಿಸುವುದು ದ್ವೀಪ ರಾಷ್ಟ್ರಕ್ಕೆ ಸುಲಭವಲ್ಲ.

ಈ ರೋಚಕ ಕ್ರಿಕೆಟ್ ಪಂದ್ಯವು ಸೋನಿ ಸ್ಪೋರ್ಟ್ಸ್ 1, ಸೋನಿ ಸ್ಪೋರ್ಟ್ಸ್ 4 ಕನ್ನಡ ಹಾಗೂ ಸೋನಿ ಲಿವ್‌ನಲ್ಲಿ ಸಂಜೆ 6 ಗಂಟೆಗೆ ಆರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...