ವೆಸ್ಟ್‌ ಇಂಡೀಸ್‌ಗೆ 6 ವಿಕೆಟ್ ಜಯ; ಭಾರತ ತಂಡದ ಕಳಪೆ ಪ್ರದರ್ಶನ

Date:

ರೊಮಾರಿಯೋ ಶೆಫರ್ಡ್, ಗುಡಾಕೇಶ್ ಮೋಟಿ ಅವರ ಅಮೋಘ ಬೌಲಿಂಗ್ ಹಾಗೂ ನಾಯಕ ಶಾಯ್‌ ಹೋಪ್ ಮತ್ತು ಕೇಸಿ ಕಾರ್ಟಿ ಅವರ ಸಮಯೋಚಿತ ಬ್ಯಾಟಿಂಗ್‌ ನೆರವಿನಿಂದ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ 6 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು.

- Advertisement -

ಬಾರ್ಬಡೋಸ್‌ನ ಬ್ರಿಜ್‌ಟೌನ್‌ನಲ್ಲಿ ನಡೆದ ಎರಡನೆ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 181 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್‌ ತಂಡ 36.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಗಳಿಸಿ ಸರಣಿಯನ್ನು ಸಮಬಲ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

181 ರನ್‌ಗಳ ಸುಲಭ ಗುರಿಯೊಂದಿಗೆ ಇನ್ನಿಂಗ್ಸ್‌ ಆರಂಭಿಸಿದ ವಿಂಡೀಸ್ ಆರಂಭಿಕರಾದ​ ಕೈಲ್ ಮೇಯರ್ಸ್ (36) ಮತ್ತು ಬ್ರಾಂಡನ್ ಕಿಂಗ್ (15) ವೇಗದ ಆರಂಭ ನೀಡಿದರು. ಕೇವಲ 8.2 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟವಾಡಿದರು. ಇವರಿಬ್ಬರ ಜೋಡಿಯನ್ನು ವೇಗಿ ಶಾರ್ದೂಲ್ ಠಾಕೂರ್ 9ನೇ ಓವರ್‌ನಲ್ಲಿ ಮುರಿದರು. ಬಳಿಕ 13 ನೇ ಓವರ್‌ನಲ್ಲಿ ಅಲಿಕ್ ಅಥಾನಾಜ್(6) ಅವರನ್ನು ಪೆವಿಲಿಯನ್‌ಗೆ ಕಳಿಸುವ ಮೂಲಕ ಶಾರ್ದೂಲ್ ಮೂರು ವಿಕೆಟ್ ಕಬಳಿಸಿದರು. ಆ ನಂತರ ಬಂದ ಶಿಮ್ರೋನ್ ಹೆಟ್ಮೆಯರ್(9) ಹೆಚ್ಚು ಹೊತ್ತು ನಿಲ್ಲದೆ ಕುಲದೀಪ್​ ಯಾದವ್​ಗೆ ಔಟಾದರು.

ನಾಲ್ಕು ವಿಕೆಟ್ ಕಳೆದುಕೊಂಡ ವಿಂಡೀಸ್‌ಗೆ ನಾಯಕ ಶಾಯ್ ಹೋಪ್ ಹಾಗೂ ಯುವ ಬ್ಯಾಟ್ಸ್‌ಮನ್ ಕೇಸಿ ಕಾರ್ಟಿ ಅವರ 91 ರನ್‌ಗಳ ಜೊತೆಯಾಟದಿಂದ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಶಾಯ್ ಹೋಪ್(80 ಎಸೆತ, ಎರಡು ಬೌಂಡರಿ,ಎರಡು ಸಿಕ್ಸರ್) ಅಜೇಯ 63 ರನ್ ಬಾರಿಸಿದರೆ, ಯುವ ಬ್ಯಾಟ್ಸ್‌ಮನ್ ಕೇಸಿ ಕಾರ್ಟಿ ಕೂಡ ಅಜೇಯ 48(65 ಚೆಂಡು, 4 ಬೌಂಡರಿ) ರನ್​ಗಳ ಕೊಡುಗೆ ನೀಡಿದರು.

ಹಾರ್ದಿಕ್‌ ಪಾಂಡ್ಯ ಸಾರಥ್ಯ

ಇದಕ್ಕೂ ಮೊದಲು ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ವಿಶ್ರಾಂತಿಯೊಂದಿಗೆ ತಂಡದ ಸಾರಥ್ಯ ವಹಿಸಿಕೊಂಡ ಹಾರ್ದಿಕ್‌ ಪಾಂಡ್ಯ ಟಾಸ್ ಸೋತು ಬ್ಯಾಟಿಂಗ್ ಜವಾಬ್ದಾರಿ ವಹಿಸಿಕೊಂಡರು.

ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

ಟೀಂ ಇಂಡಿಯಾ ಪರ ಆರಂಭಿಕರಾಗಿ ಬಂದ ಇಶಾನ್ ಕಿಶನ್ (55) ಅಮೋಘ ಅರ್ಧಶತಕ ಬಾರಿಸಿ, ಗಿಲ್ ಅವರೊಂದಿಗೆ 90 ರನ್‌ಗಳ ಜೊತೆಯಾಟವಾಡಿದರು. ಶುಭಮನ್‌ ಗಿಲ್ (34) ಕೂಡ ಉತ್ತಮ ಆರಂಭ ಪಡೆದುಕೊಂಡರಾದರೂ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಗಿಲ್ ಔಟಾದ ನಂತರ ಇಬ್ಬರ ಜೊತೆಯಾಟ ಮುರಿದುಕೊಂಡಿತು. ಇಲ್ಲಿಂದ ಭಾರತ ತಂಡದ ಪೆವಿಲಿಯನ್ ಪರೇಡ್ ಶುರುವಾಯಿತು.

ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್​ಗೆ ಬ್ಯಾಟಿಂಗ್ ಬಡ್ತಿ ಸಿಕ್ಕಿತ್ತು. ಆದರೆ ಇಬ್ಬರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿಲ್ಲ. ಸಂಜು ಸ್ಯಾಮ್ಸನ್ 9 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ (1) ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ನಾಯಕ ಹಾರ್ದಿಕ್ ಪಾಂಡ್ಯ ಕೂಡ 7 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಸ್ಟಾರ್‌ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ 24 ರನ್ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು.

ರವೀಂದ್ರ ಜಡೇಜಾ(10) ಮತ್ತು ಶಾರ್ದೂಲ್ ಠಾಕೂರ್(16) ಕೂಡ ಹೆಚ್ಚಿನ ಹೊತ್ತು ನಿಲ್ಲಲಿಲ್ಲ. ಟೀಂ ಇಂಡಿಯಾವನ್ನು ಕಾಡಿದ ವೆಸ್ಟ್ ಇಂಡೀಸ್ ಬೌಲರ್​ಗಳಾದ ಗುಡ್ಕೇಶ್ ಮೋತಿ (36/3) ಮತ್ತು ವೇಗದ ಬೌಲರ್ ರೊಮಾರಿಯೊ ಶೆಫರ್ಡ್ (37/3) ವಿಕೆಟ್ ಪಡೆದರೆ,ಅಲ್ಜಾರಿ ಜೊಸೆಫ್ (35/2) ವಿಕೆಟ್ ಪಡೆದು ಭಾರತ ತಂಡವನ್ನು 181 ರನ್‌ಗಳಿಗೆ ಆಲೌಟ್‌ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...