ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

Date:

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಪ್ರವಾಸಿ ಅಫ್ಘಾನಿಸ್ತಾನ ತಂಡವನ್ನು 127 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ, ಸರಣಿಯನ್ನು 3-0 ಅಂತರದಲ್ಲಿ ‘ಕ್ಲೀನ್ ಸ್ವೀಪ್’ ಮಾಡಿಕೊಂಡಿದೆ. ಎಡಗೈ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಶತಕವು ಟೀಮ್ ಇಂಡಿಯಾದ ಭರ್ಜರಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿತು.

- Advertisement -

​ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡವು ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ಕೈಗೊಂಡಿತು. ಪ್ರಸಕ್ತ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ, ಆರಂಭದಿಂದಲೇ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿತು. ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ (50 ರನ್, 35 ಎಸೆತ) ಮೊದಲ ವಿಕೆಟ್‌ಗೆ ಕೇವಲ 59 ಎಸೆತಗಳಲ್ಲಿ 142 ರನ್‌ಗಳ ಬೃಹತ್ ಜೊತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿದರು. ಪವರ್‌ಪ್ಲೇ ಅವಧಿಯಲ್ಲೇ ವಿಕೆಟ್ ನಷ್ಟವಿಲ್ಲದೆ ಭಾರತ 100 ರನ್‌ಗಳ ಗಡಿ ದಾಟಿದ್ದು ವಿಶೇಷವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

​ಅಫ್ಘಾನ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ತಮ್ಮ 3ನೇ ಅಂತರರಾಷ್ಟ್ರೀಯ ಟಿ20 ಶತಕ ಪೂರೈಸಿದರು. ಒಟ್ಟು 34 ಎಸೆತಗಳನ್ನು ಎದುರಿಸಿದ ಅವರು 9 ಬೌಂಡರಿ ಹಾಗೂ 11 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 108 ರನ್ ಸಿಡಿಸಿ ರಶೀದ್ ಖಾನ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಶತಕದ ಬೆನ್ನಲ್ಲೇ ಮೈದಾನದಲ್ಲಿ ಧ್ಯಾನದ ಭಂಗಿಯಲ್ಲಿ ಕುಳಿತು ಅವರು ಸಂಭ್ರಮಿಸಿದರು. ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ (29 ರನ್) ಮತ್ತು ಶಿವಂ ದುಬೆ (14 ರನ್) ಬಿರುಸಿನ ಆಟವಾಡಿದ್ದರಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 221 ರನ್‌ಗಳ ಪರ್ವತ ನಿರ್ಮಿಸಿತು.

ಸಿಕ್ಸರ್‌ಗಳ ಸರದಾರ ಅಭಿಷೇಕ್: ’96 vs 86′ ರೋಚಕ ಪೈಪೋಟಿ

2026ರ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಮಾದರಿಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಮತ್ತು 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 11 ಸಿಕ್ಸರ್ ಸಿಡಿಸಿದ ಅಭಿಷೇಕ್, ಈ ವರ್ಷದ ತಮ್ಮ ಒಟ್ಟು ಸಿಕ್ಸರ್‌ಗಳ ಸಂಖ್ಯೆಯನ್ನು 96ಕ್ಕೆ ಏರಿಸಿಕೊಂಡಿದ್ದಾರೆ. ಈ ಮೂಲಕ 86 ಸಿಕ್ಸರ್ ಸಿಡಿಸಿರುವ ವೈಭವ್ ಸೂರ್ಯವಂಶಿ ಅವರಿಗಿಂತ 10 ಸಿಕ್ಸರ್‌ಗಳ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ. ವಿಶೇಷವೆಂದರೆ, ಟಿ20 ಕ್ರಿಕೆಟ್‌ನ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯರ ಪಟ್ಟಿಯಲ್ಲಿ ಅಭಿಷೇಕ್ ಅವರೇ ಅಗ್ರಸ್ಥಾನದಲ್ಲಿದ್ದು, 2025ರಲ್ಲಿ 108 ಸಿಕ್ಸರ್ ಸಿಡಿಸಿದ ಮಹತ್ತರ ದಾಖಲೆ ಅವರ ಹೆಸರಿನಲ್ಲಿದೆ. ಇದೀಗ 2026ರ ಸಾಲಿನಲ್ಲೂ 96 ಸಿಕ್ಸರ್‌ಗಳೊಂದಿಗೆ ತಮ್ಮದೇ ದಾಖಲೆಯನ್ನು ಮುರಿಯುವತ್ತ ಅವರು ದಾಪುಗಾಲಿಟ್ಟಿದ್ದಾರೆ.

​222 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ತಂಡವು ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿತು. ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನಿಲ್ಲಲು ಪರದಾಡಿದ ಪರಿಣಾಮ, ಆ ತಂಡ ಕೇವಲ 14.1 ಓವರ್‌ಗಳಲ್ಲಿ ಕೇವಲ 94 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ಮಾರಕ ದಾಳಿ ಸಂಘಟಿಸಿದ ಮಧ್ಯಮ ವೇಗಿ ನಿತೀಶ್ ಕುಮಾರ್ ರೆಡ್ಡಿ (25ಕ್ಕೆ 3), ರವಿ ಬಿಷ್ಣೋಯಿ (26ಕ್ಕೆ 3) ಹಾಗೂ ಅಕ್ಷರ್ ಪಟೇಲ್ (9ಕ್ಕೆ 2) ಎದುರಾಳಿ ಪಾಳಯವನ್ನು ಧೂಳೀಪಟ ಮಾಡಿದರು. ಅಫ್ಘಾನ್ ಪರ ಇಬ್ರಾಹಿಂ ಜದ್ರಾನ್ (25 ರನ್) ಅವರದ್ದೇ ಗರಿಷ್ಠ ಗಳಿಕೆಯಾಗಿತ್ತು.

​ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡದ ವಿರುದ್ಧ ಅಫ್ಘಾನಿಸ್ತಾನ ಅನುಭವಿಸಿದ ಅತಿ ದೊಡ್ಡ ರನ್ ಅಂತರದ ಸೋಲು ಇದಾಗಿದೆ. ಬ್ಯಾಟಿಂಗ್‌ನಲ್ಲಿ ಸ್ಫೋಟಕ ಪ್ರದರ್ಶನ ನೀಡಿ ಪಂದ್ಯದ ಗತಿಯನ್ನೇ ಬದಲಿಸಿದ ಅಭಿಷೇಕ್ ಶರ್ಮಾ ಅವರನ್ನು ‘ಪಂದ್ಯಶ್ರೇಷ್ಠ’ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

​ಈ ದ್ವಿಪಕ್ಷೀಯ ಸರಣಿ ಮುಕ್ತಾಯದ ಬೆನ್ನಲ್ಲೇ, ಮುಂಬರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಎರಡೂ ತಂಡಗಳು ಜಪಾನ್‌ಗೆ ಪ್ರಯಾಣ ಬೆಳೆಸಲಿವೆ. ಸದ್ಯ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್‌ಗಳಿಬ್ಬರೂ ಅತ್ಯುತ್ತಮ ಫಾರ್ಮ್‌ನಲ್ಲಿರುವ ಕಾರಣ, ಯುವ ಆಟಗಾರ ವೈಭವ್ ಸೂರ್ಯವಂಶಿ ಅವರು ಮುಂಬರುವ ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಸ್ಥಾನ ಪಡೆಯದೆ ಬೆಂಚ್ ಕಾಯುವ ಸಾಧ್ಯತೆಗಳು ದಟ್ಟವಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...