ಚುಟುಕು ಮಾದರಿಯ ಕ್ರಿಕೆಟ್ ಪಂದ್ಯಾಟವಾಗಿರುವ ಟಿ20 ವಿಶ್ವಕಪ್ ಫೈನಲ್ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ ನಡುವೆ ನಡೆಯಲಿರುವ ಈ ಸೆಣಸಾಟವು ಕ್ರೀಡಾಭಿಮಾನಿಗಳಲ್ಲಿ ತೀವ್ರ ಕುತೂಹಲ ಉಂಟು ಮಾಡಿದೆ.
ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಇಂದು ಬಾರ್ಬಡೋಸ್‌ನ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಇನ್ನಿಲ್ಲದಂತೆ ಕಾಡಿದ್ದ ಮಳೆರಾಯ, ಇಂದು ನಡೆಯಲಿರುವ ಫೈನಲ್ ಪಂದ್ಯಕ್ಕೂ ಅಡ್ಡಿಪಡಿಸುವ ಸಾಧ್ಯತೆ ಇದೆ. ಹಮಾವಾನ ಇಲಾಖೆ ಮೂಲಗಳ ಪ್ರಕಾರ ಶನಿವಾರ ಬಾರ್ಬಡೋಸ್‌ನಲ್ಲಿ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಫೈನಲ್ ಪಂದ್ಯವು, ಒಂದು ವೇಳೆ ಮಳೆಯಿಂದಾಗಿ ರದ್ದಾದರೆ. ಮೀಸಲು ದಿನದಲ್ಲಿ ಆಟ ನಡೆಯಲಿದೆ.
The unstoppable forces meet 🇿🇦🇮🇳
Aiden Markram 🆚 Rohit Sharma – who will lift the #T20WorldCup trophy? 🤔 pic.twitter.com/Fa7eoGg8wz
— T20 World Cup (@T20WorldCup) June 28, 2024
ಇಡೀ ಟೂರ್ನಿಯಲ್ಲಿ ಒಂದೂ ಪಂದ್ಯ ಸೋಲದೇ ಅಜೇಯವಾಗಿ ಉಳಿದಿರುವ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಮತ್ತು ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡಗಳ ಪೈಕಿ ಯಾರು ಚಾಂಪಿಯನ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲೆಡೆ ಮನೆಮಾಡಿದೆ. ಕ್ರಿಕೆಟ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ತಂಡ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ತಲುಪಿದೆ.
ಈ ಬಾರಿ ಫೈನಲ್ ಗೆದ್ದು ತನ್ನ ಹಣೆಗೆ ಅಂಟಿಕೊಂಡಿರುವ ‘ಚೋಕರ್ಸ್’ ಹಣೆಪಟ್ಟಿಯನ್ನು ಅಳಿಸಿಹಾಕಲು ಏಡನ್ ಮಾರ್ಕರಮ್ ಪಡೆ ಉತ್ಸುಕವಾಗಿದ್ದು, ಐಸಿಸಿ ವಿಶ್ವಕಪ್ ನಲ್ಲಿ ಬರೋಬ್ಬರಿ 10 ವರ್ಷಗಳ ಬಳಿಕ ಫೈನಲ್ ತಲುಪಿರುವ ಭಾರತ ಕೂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಟೀಮ್ ಇಂಡಿಯಾ ಪ್ರಶಸ್ತಿ ಗೆದ್ದಲ್ಲಿ, ಎರಡನೇ ಬಾರಿಗೆ ಗೆದ್ದಂತಾಗಲಿದೆ. 2007ರಲ್ಲಿ ಪಾಕಿಸ್ತಾನವನ್ನು ಸೋಲಿಸಿ, ಟೀಮ್ ಇಂಡಿಯಾ ಪ್ರಶಸ್ತಿ ಗೆದ್ದಿತ್ತು.
ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ.ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.
𝐈𝐓 𝐂𝐀𝐍’𝐓 𝐆𝐄𝐓 𝐁𝐈𝐆𝐆𝐄𝐑 𝐓𝐇𝐀𝐍 𝐓𝐇𝐈𝐒!
Two unbeaten teams clash one final time to claim the BIGGEST prize in T20 cricket 🔥
As the nation awaits an ICC trophy after a decade, will 🇮🇳 celebrate this triumphant achievement in T20 cricket? 😍
Don’t miss the big… pic.twitter.com/z0010Vq8Iu
— Star Sports (@StarSportsIndia) June 29, 2024
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್ ಅಂತರದ ಸೋಲು ಕಂಡಿತ್ತು.
ಶೇ.70ರಷ್ಟು ಮಳೆ ಸಾಧ್ಯತೆ
ಇಂಗ್ಲೆಂಡ್ ಮತ್ತು ಭಾರತ ನಡುವಣ ಸೆಮಿ ಫೈನಲ್ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
The stage is set for the grand finale between South Africa and India at the #T20WorldCup 🤩
Who will win the battle of the bowlers? 🤔 pic.twitter.com/Esh0ScyBuK
— ICC (@ICC) June 29, 2024
ಫೈನಲ್ ಪಂದ್ಯಕ್ಕೆ ಮೀಸಲು ದಿನ
ಇನ್ನು ಹಾಲಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಐಸಿಸಿ ಮೀಸಲು ದಿನವನ್ನು ಇರಿಸಿದ್ದು, ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ.
ಸೂಪರ್ 8 ಹಂತದಲ್ಲಿ ಮತ್ತು ಸೆಮಿಫೈನಲ್ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.
ಜಂಟಿ ವಿಜೇತರ ಘೋಷಣೆ
ಒಂದು ವೇಳೆ ಫೈನಲ್ ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.
