ಕ್ರಿಕೆಟ್‌ಗೆ ಅಮಿತ್‌ ಮಿಶ್ರಾ ವಿದಾಯ; ಐಪಿಎಲ್‌ನಲ್ಲಿ 3 ಬಾರಿ ಹ್ಯಾಟ್ರಿಕ್‌ ಪಡೆದ ಏಕೈಕ ಬೌಲರ್

Date:

ಸುಮಾರು ಎರಡು ದಶಕಗಳ ವೃತ್ತಿಜೀವನದ ನಂತರ ಭಾರತ ತಂಡದ ಅನುಭವಿ ಲೆಗ್‌ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಗುರುವಾರ ವಿದಾಯ ಘೋಷಿಸಿದರು.

- Advertisement -

2017ರಲ್ಲಿ ಕೊನೆಯ ಬಾರಿ ಮಿಶ್ರಾ ಅವರು ಭಾರತ ತಂಡದಲ್ಲಿ ಆಡಿದ್ದರು. 2024ರ ಐಪಿಎಲ್‌ನಲ್ಲಿ ಹರಿಯಾಣದ ಬೌಲರ್ ಲಖನೌ ಸೂಪರ್‌ ಜೈಂಟ್ಸ್ ಪರ ಆಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಗಾಗ ಗಾಯದ ಸಮಸ್ಯೆ ಕಾಡಿದ್ದರಿಂದ ಮತ್ತು ಯುವ ತಲೆಮಾರು ಬೆಳೆಯುವ ಅವಶ್ಯಕತೆಯಿರುವ ಕಾರಣ ನಿವೃತ್ತಿ ನಿರ್ಧಾರಕ್ಕೆ ಬಂದಿರುವುದಾಗಿ 42 ವರ್ಷ ವಯಸ್ಸಿನ ಬೌಲರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ತಂಡದ ಪರ ಅವರು 22 ಟೆಸ್ಟ್‌, 36 ಏಕದಿನ ಮತ್ತು 10 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. 2008ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದ ಅವರು ಈ ಮಾದರಿಯಲ್ಲಿ 76 ವಿಕೆಟ್‌ ಗಳಿಸಿದ್ದಾರೆ. ಐದು ವರ್ಷಗಳ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧ ಅವರು ಏಕದಿನ ತಂಡಕ್ಕೆ ನಾಂದಿ ಹಾಡಿದ್ದರು.

ಹರಭಜನ್ ಸಿಂಗ್ ಮತ್ತು ಅನಿಲ್‌ ಕುಂಬ್ಳೆ ನೆರಳಿನಲ್ಲಿ ಅವರು ಟೆಸ್ಟ್ ಪಂದ್ಯಕ್ಕೆ ಆಡಲು ಸಾಕಷ್ಟು ಕಾಯಬೇಕಾಯಿತು. ಮೊದಲ ಪಂದ್ಯದ ಮೊಲ ಇನಿಂಗ್ಸ್‌ನಲ್ಲೇ ಐದು ವಿಕೆಟ್‌ ಪಡೆದಿದ್ದರು. ಆದರೆ ನಂತರ ಸಾಂಪ್ರದಾಯಿಕ ಮಾದರಿಯಲ್ಲಿ ಐದು ವಿಕೆಟ್‌ಗಳ ಗೊಂಚಲ ಪಡೆಯಲಾಗಲಿಲ್ಲ.

‘25 ವರ್ಷಗಳ ಪ್ರಥಮ ದರ್ಜೆ ಕ್ರಿಕೆಟ್‌ ಜೀವನ (2000ರಲ್ಲಿ ಪದಾರ್ಪಣೆ) ನನಗೆ ಸ್ಮರಣಾರ್ಹ. ಬಿಸಿಸಿಐಗೆ, ಹರಿಯಾಣ ಕ್ರಿಕೆಟ್‌ ಸಂಸ್ಥೆ, ನೆರವು ಸಿಬ್ಬಂದಿಗೆ, ಸಹ ಆಟಗಾರರಿಗೆ ಮತ್ತು ಕುಟುಂಬ ಸದಸ್ಯರಿಗೆ ನಾನು ಕೃತಜ್ಞ’ ಎಂದಿದ್ದಾರೆ.

ಇದನ್ನು ಓದಿದ್ದೀರಾ? ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಸಾತ್ವಿಕ್‌–ಚಿರಾಗ್

ಅಶ್ವಿನ್ ಮತ್ತು ರವೀಂದ್ರ ಜಡೇಜ ಪ್ರವರ್ಧಮಾನಕ್ಕೆ ಬಂದ ನಂತರ ಅಮಿತ್ ಅಂತಾರಾಷ್ಟ್ರೀಯ ತಂಡದಲ್ಲಿ ಅವಕಾಶಗಳು ದೂರವಾದವು.

ಬೆಂಗಳೂರಿನಲ್ಲಿ ಕೊನೆಯ ಪಂದ್ಯ: ಅಮಿತ್‌ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು 2017ರಲ್ಲಿ (ಇಂಗ್ಲೆಂಡ್ ವಿರುದ್ಧ ಟಿ20 ಪಂದ್ಯ) ಬೆಂಗಳೂರಿನಲ್ಲಿ ಆಡಿದ್ದರು. ಆ ಪಂದ್ಯದಲ್ಲಿ 4 ಓವರುಗಳಲ್ಲಿ 23 ರನ್ನಿಗೆ 1 ವಿಕೆಟ್ ಪಡೆದಿದ್ದರು.

ಕೋಚಿಂಗ್ ಮತ್ತು ವೀಕ್ಷಕ ವಿವರಣೆ ಮೂಲಕ ಈ ಆಟದಲ್ಲಿ ತೊಡಗಿಕೊಳ್ಳುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅವರು 535 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನಲ್ಲಿ 23.98ರ ಸರಾಸರಿಯಲ್ಲಿ 166 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರು ಸನ್‌ರೈಸರ್ಸ್‌ ಹೈದರಾಬಾದ್‌, ಡೆಕ್ಕನ್ ಚಾರ್ಜರ್ಸ್, ಡೆಲ್ಲಿ ಕ್ಯಾಪಿಟರಲ್ಸ್‌, ಲಖನೌ ಪರ ಆಡಿದ್ದಾರೆ.

ಐಪಿಎಲ್‌ನಲ್ಲಿ ಮೂರು ಹ್ಯಾಟ್ರಿಕ್‌ಗಳನ್ನು ಪಡೆದ ಏಕೈಕ ಬೌಲರ್ ಎಂಬ ಗರಿಮೆ ಅವರದು.

ಅಮಿತ್ ಮಿಶ್ರಾ ಅವರು ಐಪಿಎಲ್‌ನಲ್ಲಿ ಮೂರು ಹ್ಯಾಟ್ರಿಕ್‌ಗಳನ್ನು ಸಾಧಿಸಿ ದಾಖಲೆ ಬರೆದಿದ್ದಾರೆ, ಮತ್ತು ಇದು ಐಪಿಎಲ್ ಇತಿಹಾಸದಲ್ಲಿ ಯಾವುದೇ ಬೌಲರ್ ಸಾಧಿಸಿರುವ ಅತ್ಯಧಿಕ ಸಂಖ್ಯೆಯಾಗಿದೆ. 2008ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಪರ ಡೆಕ್ಕನ್ ಚಾರ್ಜರ್ಸ್ ವಿರುದ್ಧ ದೆಹಲಿಯಲ್ಲಿ, 2011ರಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡದ ಪರ ಕಿಂಗ್ಸ್ ಪಂಜಾಬ್ ವಿರುದ್ಧ ಧರ್ಮಶಾಲಾದಲ್ಲಿ, 2013ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಪುಣೆ ವಾರಿಯರ್ಸ್ ವಿರುದ್ಧ ಪುಣೆಯಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...