ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವೆಸ್ಟ್‌ ಇಂಡೀಸಿನ ದೈತ್ಯ ಕ್ರಿಕೆಟಿಗ

Date:

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ 37 ವರ್ಷದ ರಸೆಲ್ ತಿಳಿಸಿದ್ದಾರೆ.

- Advertisement -

2026 ರ ಟಿ20 ವಿಶ್ವಕಪ್​ಗೂ ಮುನ್ನ ನಿವೃತ್ತಿ ನೀಡಲು ನಿರ್ಧರಿಸಿದ್ದು, ಅದರಂತೆ ಜಮೈಕಾದ ಸಬೀನಾ ಪಾರ್ಕ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರಸೆಲ್ ತಿಳಿಸಿದ್ದಾರೆ. ಸಬೀನಾ ಪಾರ್ಕ್ ರಸೆಲ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಈ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಲು ಅವರು ಬಯಸಿದ್ದಾರೆ. ವಿಂಡೀಸ್‌ ಕ್ರಿಕೆಟ್‌ ಸಂಸ್ಥೆ ಸ್ಟಾರ್‌ ಆಟಗಾರನಿಗೆ ಗೌರವ ಸೂಚಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಆ್ಯಂಡ್ರೆ ರಸೆಲ್ ತಮ್ಮ ನಿವೃತ್ತಿಯ ಬಗ್ಗೆ ಸಮಾಜಿಕ ತಾಣದಲ್ಲಿ ತಿಳಿಸಿದ್ದಾರೆ. ವೆಸ್ಟ್ ಇಂಡೀಸ್ ಪರ ಆಡುವುದು ನನಗೆ ದೊಡ್ಡ ವಿಷಯ. ಚಿಕ್ಕವನಿದ್ದಾಗ ಈ ಮಟ್ಟದ ಕ್ರಿಕೆಟ್‌ ಆಡಲು ಬಯಸಿದ್ದೆ. ಆದರೆ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ಕ್ರಿಕೆಟ್‌ ಆಟ ನನಗೆ ಸ್ಪೂರ್ತಿ ನೀಡಿದೆ. ವೆಸ್ಟ್‌ ಇಂಡೀಸ್‌ ತಂಡದ ಜೆರ್ಸಿ ತೊಟ್ಟು ಮೈದಾನಕ್ಕೆ ಇಳಿಯುವುದು ದೊಡ್ಡ ಸಾಧನೆ. ಮನೆಯಲ್ಲಿ ಕುಟುಂಬ ಮತ್ತು ಸ್ನೇಹಿತರ ಜೊತೆ ಕಾಲ ಕಳೆಯಲು ನಾನು ಇಷ್ಟಪಡುತ್ತೇನೆ. ನಾನು ಇಷ್ಟ ಪಡುವ ಕ್ರಿಕೆಟ್‌ ಆಟದ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಲು ಬಯಸುವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಜೃಂಭಣೆಯ ಹೊಸ್ತಿಲಲ್ಲಿ ಟೆಸ್ಟ್‌ ಕ್ರಿಕೆಟ್: ಮತ್ತೆ ಮರುಕಳಿಸಲಿರುವ ಇತಿಹಾಸ    

2011 ರಲ್ಲಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್​ ಪರ ಟಿ20 ವೃತ್ತಿ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ 84 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 73 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1078 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 61 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇನ್ನು 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ವೃತ್ತಿ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಆ್ಯಂಡ್ರೆ ರಸೆಲ್ ನಿರ್ಧರಿಸಿದ್ದಾರೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಟಿ20 ಲೀಗ್​ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ ಐಪಿಎಲ್. ಸಿಪಿಎಲ್, ಎಂಸಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್​ನಲ್ಲಿ ಆ್ಯಂಡ್ರೆ ರಸೆಲ್ ಅವರ ಟಿ20 ಆಟ ಮುಂದುವರೆಯಲಿದೆ.

Andre Russell
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ ‘ವಿವಾದಿತ ಆಟಗಾರ’ನ ಅಸಲಿ ಮುಖ

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ...