ಅರಣ್ಯ ಇಲಾಖೆ ರಾಯಭಾರಿಯಾಗಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ

Date:

Advertisements

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರುವ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

Advertisements

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಇವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಗೆ ರಾಯಭಾರಿ ಆಗಲಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ. ಆದಷ್ಟು ಬೇಗ ಸಿಎಂ ಮತ್ತು ಡಿಸಿಎಂ ಸಮ್ಮುಖದಲ್ಲಿ ಎಂಒಯು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದೆ. ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆ ಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸಲಾಗಿದೆ. 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ವಿವರ ನೀಡಿದರು. ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ

ಬೆಂಗಳೂರಿನಲ್ಲಿ ಶ್ವಾಸತಾಣಗಳನ್ನು ಉಳಿಸಲು, ಬೆಳೆಸಲು ಸರ್ಕಾರ ನಿರ್ಧರಿಸಿದ್ದು, ಯಲಹಂಕ ಬಳಿಯ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಲಾಲ್ ಬಾಗ್ ಹೈದರಾಲಿಯ ಕಾಲದಲ್ಲಿ ನಿರ್ಮಾಣವಾಗಿತ್ತು, ಕಬ್ಬನ್ ಪಾರ್ಕ್ ಬ್ರಿಟಿಷರ ಕಾಲದಲ್ಲಿ ರೂಪುಗೊಂಡಿತು. ಶತಮಾನವೇ ಕಳೆದರೂ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ಆಗಲಿಲ್ಲ. ಹೀಗಾಗಿ ತಾವು ಅರಣ್ಯ ಸಚಿವನಾದ ತರುವಾಯ ನೀಲಗಿರಿ ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿದ್ದ 153 ಎಕರೆ ಜಮೀನನ್ನು ಜೂ.2ರಂದು ಮರಳಿ ಅರಣ್ಯ ಇಲಾಖೆಗೆ ಪಡೆದು ಅಲ್ಲಿ ಉದ್ಯಾನ ನಿರ್ಮಿಸಲಾಗುವುದು, 2 ತಿಂಗಳಲ್ಲಿ ಇದರ ಶಂಕುಸ್ಥಾಪನೆ ನೆರವೇರಲಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X