ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

Date:

ನವದೆಹಲಿಯಲ್ಲಿ ಧರಣಿನಿರತ ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ ನಂತರ ಏನಾಯಿತು ಎಂಬುದನ್ನು ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದನ್ನಾದರೂ ಪರಿಹರಿಸಬಹುದು. ಆದಷ್ಟು ಬೇಗ ಪರಿಹಾರವಾಗಲೆಂದು ಆಶಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ನಡುವೆ ತಾವು ಕೂಡ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟಿಗರ ಪೈಕಿ ಭಾರತ ತಂಡದ ಮಾಜಿ ನಾಯಕ ಕಪಿಲ್‌ ದೇವ್ ಹಾಗೂ ಇರ್ಫಾನ್ ಪಠಾಣ್ ಬೆಂಬಲ ವ್ಯಕ್ತಪಡಿಸಿದ ನಂತರ ಅನಿಲ್‌ ಕುಂಬ್ಳೆ ಸಹ ಕುಸ್ತಿಪಟುಗಳ ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಬಂಧಿಸುವಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಕ್ರೀಡಾಪಟುಗಳು ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲು ತೀರ ಪ್ರದೇಶಕ್ಕೆ ಮಂಗಳವಾರ ಸಂಜೆ ಆಗಮಿಸಿದ್ದರು. ಆದರೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದನ್ನು ರೈತ ನಾಯಕರು ತಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹರಿದ್ವಾರದಲ್ಲಿ ಚಾರಿತ್ರಿಕ ಪ್ರತಿಭಟನೆ; ಕುಸ್ತಿಪಟುಗಳು ಪದಕ ನದಿಗೆಸೆಯುವುದ ತಡೆದ ರೈತ ನಾಯಕ

ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯತ್, ನದಿಯಲ್ಲಿ ಬಿಡುವುದಕ್ಕಾಗಿ ಕುಸ್ತಿಪಟುಗಳು ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಸಮಸ್ಯೆ ಪರಿಹಾರಕ್ಕೆ ತಮಗೆ ʻಐದು ದಿನಗಳ ಸಮಯವನ್ನು ಕೊಡಿʼ ಎಂದು ಟಿಕಾಯತ್‌ ಕುಸ್ತಿಪಟುಗಳಲ್ಲಿ ಮನವಿ ಮಾಡಿದ್ದಾರೆ.

ಇನ್ನು ತಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸುವ ಬದಲು ಹಲ್ಲೆಯ ಮೂಲಕ, ಪ್ರತಿಭಟನೆಗೆ ಜಾಗ ನಿರಾಕರಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವುದಕ್ಕೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗಣ್ಯ ಅಥ್ಲೀಟ್‌ಗಳಲ್ಲಿ ಒಬ್ಬರಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್, “ನಾವು ಗೆದ್ದ ಪದಕಗಳನ್ನ ಗಂಗಾ ನದಿಗೆ ಎಸೆದು ಅಮರಣಾಂತ ಉಪವಾಸ ಕೂರುತ್ತೇವೆ” ಎಂದು ಪತ್ರ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...