ಶ್ರೀಲಂಕಾ ಕ್ರಿಕೆಟ್ ಮಂಡಳಿ ಹಾಳಾಗಲು ಜಯ್ ಶಾ ಕಾರಣ: ಅರ್ಜುನ ರಣತುಂಗ ಸ್ಫೋಟಕ ಹೇಳಿಕೆ

Date:

Advertisements

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್‌ಸಿ) ಅನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಹಾಳುಗೆಡವುತ್ತಿದ್ದಾರೆ ಎಂದು ಶ್ರೀಲಂಕಾದ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಆರೋಪಿಸಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಜಯ್ ಶಾ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸುತ್ತಿದ್ದಾರೆ. ಅವರ ಒತ್ತಡದಿಂದಾಗಿ ಮಂಡಳಿ ಹಾಳಾಗುತ್ತಿದೆ. ಭಾರತದಲ್ಲಿನ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡುತ್ತಿದ್ದಾನೆ. ಭಾರತದ ಗೃಹ ಸಚಿವರಾಗಿರುವ ಅವರ ತಂದೆಯ ಕಾರಣದಿಂದಾಗಿ ಅವರು ಪ್ರಭಾವಿಗಳಾಗಿದ್ದಾರೆ” ಎಂದು ಅರ್ಜುನ ರಣತುಂಗ ತಿಳಿಸಿದ್ದಾರೆ.

“ಶ್ರೀಲಂಕಾ ಮಂಡಳಿಯ ಅಧಿಕಾರಿಗಳು ಜಯ್ ಶಾ ಅವರ ಪ್ರಭಾವಕ್ಕೆ ಒಳಗಾಗಿದ್ದು, ಮಂಡಳಿಯನ್ನು ಹಾಳು ಮಾಡಿ ನಿಯಂತ್ರಿಸಬಹುದು. ನಮ್ಮ ಮಂಡಳಿ ಏಕೆ ಹೀಗಾಯಿತು. ಇದಕ್ಕೆ ಕಾರಣರಾದ ಎಲ್ಲರನ್ನೂ ತನಿಖೆಯ ಮೂಲಕ ಬಹಿರಂಗಪಡಿಸಬೇಕಿದೆ. ವ್ಯಕ್ತಿಗತವಾಗಿ ದೇಶಕ್ಕೆ ದ್ರೋಹ ಮಾಡುವವರನ್ನು ಮಂಡಳಿಯ ಅಧ್ಯಕ್ಷರು ಸರಿಯಾದ ತನಿಖೆ ನಡೆಸುವ ಮೂಲಕ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮಂಡಳಿಯನ್ನು ಸ್ವಚ್ಛಗೊಳಿಸಲು ಸೂಕ್ತ ಸಮಯ ಇದಾಗಿದೆ” ಎಂದು ರಣತುಂಗ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ತನ್ನ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೀಲಂಕಾ ಮಂಡಳಿಯನ್ನು(ಎಸ್‌ಎಲ್‌ಸಿ) ಅಮಾನತುಗೊಳಿಸಿದ ಕೆಲವು ದಿನಗಳ ನಂತರ ರಣತುಂಗ ಹೇಳಿಕೆ ನೀಡಿದ್ದಾರೆ.

ಅರ್ಜುನ ರಣತುಂಗ 1996ರಲ್ಲಿ ಶ್ರೀಲಂಕಾ ವಿಶ್ವಕಪ್‌ ಮುಡಿಗೇರಿಸಿಕೊಂಡಾಗ ನಾಯಕರಾಗಿದ್ದರು. ಅವರ ಸಾರಥ್ಯದಲ್ಲಿ ತಂಡವು ಹಲವು ವರ್ಷಗಳ ಕಾಲ ಅತ್ಯಂತ ಬಲಿಷ್ಠವಾಗಿತ್ತು.

ಅದಕ್ಕೂ ಮೊದಲು, ಶ್ರೀಲಂಕಾ ಸಂಸತ್ತು ‘ಭ್ರಷ್ಟ ಎಸ್ಎಲ್ಸಿ ಆಡಳಿತ ಮಂಡಳಿಯನ್ನು ವಜಾಗೊಳಿಸಲು ಕರೆ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಐಸಿಸಿ ಇದನ್ನು ರಾಜಕೀಯ ಹಸ್ತಕ್ಷೇಪ ಎಂದು ಪರಿಗಣಿಸಿ ಮಂಡಳಿಯನ್ನು ಅಮಾನತುಗೊಳಿಸಿದೆ.

ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್‌ 21 ರಂದು ಐಸಿಸಿ ಮತ್ತೆ ಸಭೆ ಸೇರಲಿದೆ. ಸಭೆಯ ನಂತರ ಮುಂದಿನ ಕ್ರಮವು ಸ್ಪಷ್ಟವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಐಸಿಸಿ ಸಂಘಟಿಸುವ ಯಾವುದೇ ಟೂರ್ನಿಯಲ್ಲಿ ಶ್ರೀಲಂಕಾ ಭಾಗವಹಿಸಲು ಅವಕಾಶ ಇಲ್ಲ‌.

2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 4 ಅಂಕ ಪಡೆದುಕೊಂಡಿತ್ತು. ಬ್ಯಾಟಿಂಗ್‌ ಬೌಲಿಂಗ್‌ ಹಾಗೂ ಕಳಪೆ‌ ಫೀಲ್ಡಿಂಗ್‌ನಿಂದಾಗಿ ವಿಶ್ವಕಪ್‌ನಲ್ಲಿ ಸೋಲು ಅನುಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X